ಆಕರ್ಷಕ ಆಕ್ಸೆಸರಿಸ್ ನಲ್ಲಿ ಮಿಂಚಿದ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಎಪಿಕ್ ಎಡಿಷನ್

ಮಾರುತಿ ಸುಜುಕಿ ಹೊಸ ಸ್ವಿಫ್ಟ್ ಆವೃತ್ತಿಯು ಬಿಡುಗಡೆಯಾಗಿದ್ದು, ಹೊಸ ಕಾರಿನಲ್ಲಿ ಸ್ಪೋರ್ಟಿ ಲುಕ್ ನೀಡುವುದಕ್ಕಾಗಿ ಆಕರ್ಷಕ ಆಕ್ಸೆಸರಿಸ್ ಪ್ಯಾಕೇಜ್ ಗಳನ್ನು ಸಹ ಪರಿಚಯಿಸಲಾಗಿದೆ.

ಆಕರ್ಷಕ ಆಕ್ಸೆಸರಿಸ್ ನಲ್ಲಿ ಮಿಂಚಿದ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಎಪಿಕ್ ಎಡಿಷನ್
ಮಾರುತಿ ಸುಜುಕಿ ಸ್ವಿಫ್ಟ್
Follow us
Praveen Sannamani
|

Updated on: May 24, 2024 | 7:42 PM

ಹೊಸ ತಲೆಮಾರಿನ ವಿವಿಧ ಕಾರುಗಳ ಮೂಲಕ ಗ್ರಾಹಕರ ಆಯ್ಕೆಯಲ್ಲಿ ಈ ಹಿಂದೆಂದಿಗಿಂತಲೂ ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿರುವ ಮಾರುತಿ ಸುಜುಕಿ (Maruti Suzuki) ಕಂಪನಿಯು 2024ರ ಸ್ವಿಫ್ಟ್ (Swift) ಮೂಲಕ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ. ಈ ತಿಂಗಳ ಆರಂಭದಲ್ಲಿ ಬಿಡುಗಡೆಯಾಗಿದ್ದ ಹೊಸ ಸ್ವಿಫ್ಟ್ ಹ್ಯಾಚ್ ಬ್ಯಾಕ್ ಕಾರು ವಿನೂತನ ಫೀಚರ್ಸ್ ಗಳೊಂದಿಗೆ ಬಿಡುಗಡೆಗೊಂಡಿದ್ದು, ಇದರಲ್ಲಿ ಎಪಿಕ್ ಎಡಿಷನ್ ನಲ್ಲಿರುವ ಆಕ್ಸೆಸರಿಸ್ ಗಳು ಪರ್ಫಾಮೆನ್ಸ್ ಪ್ರಿಯರನ್ನು ಸೆಳೆಯುತ್ತಿದೆ.

ಸ್ವಿಫ್ಟ್ ಹೊಸ ಕಾರಿನ ಎಲ್ಎಕ್ಸ್ಐ ವೆರಿಯೆಂಟ್ ಗಳಿಗೂ ಅನ್ವಯಿಸುವಂತೆ ಎಪಿಕ್ ಎಡಿಷನ್ ಆಕ್ಸೆಸರಿಸ್ ಪ್ಯಾಕೇಜ್ ನೀಡಲಾಗುತ್ತಿದ್ದು, ಈ ಆಕ್ಸೆಸರಿಸ್ ಪ್ಯಾಕೇಜ್ ನಲ್ಲಿ ರೇಸಿಂಗ್ ಸ್ಟ್ರೀಪ್ ಪ್ರಮುಖ ಆಕರ್ಷಣೆಯಾಗಿದೆ. ರೇಸಿಂಗ್ ಸ್ಟ್ರೀಪ್ ಹೊಸ ಕಾರಿನ ಬಾನೆಟ್ ನಿಂದ ಹಿಡಿದು ರೂಫ್ ತನಕ ನೀಡಲಾಗಿದ್ದು, ಗ್ಲಾಸ್ ಬ್ಲ್ಯಾಕ್ ಹೊಂದಿರುವ ರೇಸಿಂಗ್ ಸ್ಟ್ರೀಪ್ ಫ್ರಂಟ್ ಪ್ಲಕ್ಸ್ ಸ್ಕೀಡ್ ಪ್ಲೇಟ್ ಜೊತೆಗೆ ರಿಯರ್ ವ್ಯೂ ಮಿರರ್ ಮೇಲೂ ನೀಡಲಾಗಿದೆ. ಜೊತೆಗೆ ಕ್ರೋಮ್ ಆಕ್ಸೆಂಟ್ ಹೊಂದಿರುವ ಫಾಗ್ ಲ್ಯಾಂಪ್, ಡೋರ್ ಹ್ಯಾಂಡಲ್, ಬ್ಲ್ಯಾಕ್ ಔಟ್ ಹೊಂದಿರುವ 14 ಇಂಚಿನ ಸ್ಟೀಲ್ ಅಲಾಯ್ ವ್ಹೀಲ್ಸ್, ಡೋರ್ ವೀಸರ್ ನಲ್ಲಿ ಕ್ರೋಮ್ ಗಾರ್ನಿಶ್ ನೀಡಲಾಗಿದೆ.

ಇದರೊಂದಿಗೆ ಹೊಸ ಸ್ವಿಫ್ಟ್ ನಲ್ಲಿರುವ ಆಕ್ಸೆಸರಿಸ್ ಪ್ಯಾಕೇಜ್ ನಲ್ಲಿ ಗ್ಲಾಸ್ ಬ್ಲ್ಯಾಕ್ ರೂಫ್ ಮೌಂಟೆಡ್, ಕ್ರೋಮ್ ಆಕ್ಸೆಂಟ್ ಹೊಂದಿರುವ ರಿಯರ್ ಬಂಪರ್ ಮತ್ತು ಸ್ಮೋಕ್ಡ್ ಎಲ್ಇಡಿ ಟೈಲ್ ಲ್ಯಾಂಪ್ಸ್ ಹೊಂದಿದ್ದು, ಇನ್ನುಳಿದಂತೆ ಹಲವಾರು ತಾಂತ್ರಿಕ ಸೌಲಭ್ಯಗಳು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಇನ್ನು ಹೊಸ ಕಾರಿನಲ್ಲಿ ಎಲ್ಎಕ್ಸ್ಐ, ವಿಎಕ್ಸ್ಐ, ವಿಎಕ್ಸ್ಐ(ಆಪ್ಷನ್), ಜೆಡ್ಎಕ್ಸ್ಐ ಮತ್ತು ಜೆಡ್ಎಕ್ಸ್ಐ ಪ್ಲಸ್ ವೆರಿಯೆಂಟ್ ಗಳು ಖರೀದಿಗೆ ಲಭ್ಯವಿದ್ದು, ಇವು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 6.49 ಲಕ್ಷದಿಂದ ರೂ. 9.50 ಲಕ್ಷ ಬೆಲೆ ಹೊಂದಿವೆ. ಇದರಲ್ಲಿ ಆಕ್ಸೆಸರಿಸ್ ಪ್ಯಾಕೇಜ್ ಗಾಗಿ ಹೆಚ್ಚುವರಿ ಹಣ ಪಾವತಿಸಬೇಕಿದ್ದು, ಆಕ್ಸೆಸರಿಸ್ ಪ್ಯಾಕೇಜ್ ನಲ್ಲಿ ಫೀಚರ್ಸ್ ಆಧರಿಸಿ ದರ ನಿಗದಿಯಾಗುತ್ತದೆ.

ಇನ್ನುಳಿದಂತೆ ಹೊಸ ಕಾರಿನಲ್ಲಿ ಈ ಬಾರಿ ಮೂರು ಸಿಲಿಂಡರ್ ವೈಶಿಷ್ಟತೆಯ 1.2 ಲೀಟರ್ ಜೆಡ್12ಇ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಇದು 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿದೆ. ಈ ಮೂಲಕ ಇದು 82 ಹಾರ್ಸ್ ಪವರ್ ಮತ್ತು 112 ಎನ್ಎಂ ಟಾರ್ಕ್ ಉತ್ಪಾದನಾ ಸಾಮರ್ಥ್ಯ ಹೊಂದಿದ್ದು, ಇದರಲ್ಲಿ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್ ಗೆ 24.8 ಕಿ.ಮೀ ಮೈಲೇಜ್ ನೀಡಿದರೆ ಆಟೋಮ್ಯಾಟಿಕ್ ಮಾದರಿಯು 25.75 ಕಿ.ಮೀ ಮೈಲೇಜ್ ನೀಡುತ್ತದೆ.

ಹಾಗೆಯೇ ಹೊಸ ಕಾರಿನಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಆರಂಭಿಕ ಮಾದರಿಗೂ ಅನ್ವಯಿಸುವಂತೆ ಆರು ಏರ್ ಬ್ಯಾಗ್ ಗಳು, ಐಸೋಫಿಕ್ಸ್ ಆ್ಯಂಕರ್ಸ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಬಿಎಸ್ ಜೊತೆ ಇಬಿಡಿ, ಹಿಲ್ ಸ್ಟಾರ್ಟ್ ಅಸಿಸ್ಟ್ ಸೇರಿದಂತೆ ಹಲವು ಫೀಚರ್ಸ್ ನೀಡಲಾಗಿದೆ.

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ