Maruti Suzuki Swift: ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಖರೀದಿಗೆ ಬುಕಿಂಗ್ ಶುರು

ಮಾರುತಿ ಸುಜುಕಿ ಕಂಪನಿ ತನ್ನ ಹೊಸ ತಲೆಮಾರಿನ ಸ್ವಿಫ್ಟ್ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದ್ದು, ಇದೀಗ ಹೊಸ ಕಾರು ಖರೀದಿಗಾಗಿ ಇದೀಗ ಅಧಿಕೃತ ಬುಕಿಂಗ್ ಆರಂಭಿಸಲಾಗಿದೆ.

Maruti Suzuki Swift: ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಖರೀದಿಗೆ ಬುಕಿಂಗ್ ಶುರು
ಮಾರುತಿ ಸುಜುಕಿ ಸ್ವಿಫ್ಟ್

Updated on: May 01, 2024 | 6:25 PM

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಲ್ಲಿ ಮಾರುತಿ ಸುಜುಕಿ (Maruti Suzuki) ನಿರ್ಮಾಣದ ಹೊಸ ಸ್ವಿಫ್ಟ್ (New Swift) ಭಾರೀ ನೀರಿಕ್ಷೆ ಹುಟ್ಟುಹಾಕಿದ್ದು, ಹೊಸ ಕಾರು ಮಾದರಿಯು ಇದೇ ತಿಂಗಳು 9ಕ್ಕೆ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಹೊಸ ಕಾರು ಖರೀದಿಗಾಗಿ ಇದೀಗ ರೂ. 11 ಸಾವಿರ ಮುಂಗಡದೊಂದಿಗೆ ಬುಕಿಂಗ್ ಆರಂಭವಾಗಿದ್ದು, ಹೊಸ ಕಾರು ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ.

ಹೊಸ ತಲೆಮಾರಿನ ಸ್ವಿಫ್ಟ್ ಮಾದರಿಯನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಈಗಾಗಲೇ ಬಿಡುಗಡೆ ಮಾಡಿರುವ ಸುಜುಕಿ ಕಂಪನಿಯು ಇದೀಗ ಕೆಲವು ಹೊಸ ಬದಲಾವಣೆಗಳೊಂದಿಗೆ ದೇಶಿಯ ಮಾರುಕಟ್ಟೆಗೂ ಪರಿಚಯಿಸುತ್ತಿದ್ದು, ಇದು ಈ ಬಾರಿ ಪ್ರತಿಸ್ಪರ್ಧಿ ಮಾದರಿಗಳಿಗೆ ಪೈಪೋಟಿಯಾಗಿ ಹಲವಾರು ಬದಲಾವಣೆಗಳೊಂದಿಗೆ ಸುಧಾರಿತ ಫೀಚರ್ಸ್ ಗಳನ್ನು ಪಡೆದುಕೊಂಡಿದೆ.

ಇದನ್ನೂ ಓದಿ: ಸಖತ್ ಕ್ಯೂಟ್ ಆಗಿರೋ ಇವಿ ಕಾರು ಖರೀದಿಸಿದ ನಟಿ ನಮ್ರತಾ ಗೌಡ

ಸ್ವಿಫ್ಟ್ ಹೊಸ ಕಾರಿನಲ್ಲಿ ಈ ಬಾರಿ 16 ಇಂಚಿನ ಅಲಾಯ್ ವ್ಹೀಲ್ಸ್, ಎಲ್ಇಡಿ ಹೆಡ್ ಲೈಟ್ಸ್ ಮತ್ತು ಟೈಲ್ ಲೈಟ್ಸ್ ಜೊತೆ ಎಲ್ಇಡಿ ಡಿಆರ್ ಎಲ್ಎಸ್ ನೀಡಲಾಗಿದ್ದು, ಕಾರಿನ ಒಳಭಾಗದಲ್ಲಿ 9 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್ ಮೆಂಟ್ ಸಿಸ್ಟಂ, ವೈರ್ ಲೇಸ್ ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸೇರಿದಂತೆ ಹಲವಾರು ಫೀಚರ್ಸ್ ನೀಡಲಾಗಿದೆ.

ಮಾರುತಿ ಸುಜುಕಿ ಕಂಪನಿ ಹೊಸ ಸ್ವಿಫ್ಟ್ ನಲ್ಲಿ ಈ ಬಾರಿ ಜೆಡ್ ಸೀರಿಸ್ ನಲ್ಲಿರುವ ಜೆಡ್12ಇ 1.2 ಲೀಟರ್, ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಇದು ಪ್ಯೂರ್ ಪೆಟ್ರೋಲ್ ಮತ್ತು ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದೆ. ಇದು ಸಿವಿಟಿ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಪ್ಯೂರ್ ಪೆಟ್ರೋಲ್ ಮಾದರಿಯು 82 ಹಾರ್ಸ್ ಪವರ್ ಮತ್ತು 108 ಎನ್ಎಂ ಟಾರ್ಕ್ ಉತ್ಪಾದಿಸಿದರೆ ಮೈಲ್ಡ್ ಹೈಬ್ರಿಡ್ ಮಾದರಿಯು ಪ್ಯೂರ್ ಪೆಟ್ರೋಲ್ ಮಾದರಿಗಿಂತ ಹೆಚ್ಚುವರಿಯಾಗಿ 3 ಹಾರ್ಸ್ ಪವರ್ ಮತ್ತು 60 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಇದನ್ನೂ ಓದಿ: ಸುರಕ್ಷತೆಯಲ್ಲಿ ಹೊಸ ಮೈಲಿಗಲ್ಲು- ಸ್ಕೋಡಾ ಕಾರುಗಳು ಇನ್ಮುಂದೆ ಮತ್ತಷ್ಟು ಸೇಫ್‌!

ಸ್ವಿಫ್ಟ್ ಹೊಸ ಮಾದರಿಯ ಸಾಮಾನ್ಯ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಪ್ರತಿ ಲೀಟರ್ ಗೆ 23.04 ಕಿ.ಮೀ ಮೈಲೇಜ್ ನೀಡಿದ್ದಲ್ಲಿ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ ಸ್ವಿಫ್ಟ್ ಮಾದರಿಯು ಪ್ರತಿ ಲೀಟರ್ ಗೆ 24.05 ಕಿ.ಮೀ ಮೈಲೇಜ್ ನೀಡಲಿದ್ದು, ಇದು ಸುರಕ್ಷತೆಯಲ್ಲೂ ಗಮನಸೆಳೆಯಲಿದೆ. ಹೊಸ ಕಾರಿನಲ್ಲಿ ಸುರಕ್ಷತೆಗಾಗಿ 6 ಏರ್ ಬ್ಯಾಗ್ ಗಳು, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಇಬಿಡಿ ಮತ್ತು ಬ್ರೇಕ್ ಅಸಿಸ್ಟ್, ಹಿಲ್ ಹೋಲ್ಡ್ ಕಂಟ್ರೋಲ್ ಸೇರಿದಂತೆ ಹಲವಾರು ಸೌಲಭ್ಯಗಳಿರಲಿವೆ. ಹೀಗಾಗಿ ಹೊಸ ಕಾರು ಸದ್ಯದ ಮಾರುಕಟ್ಟೆಯಲ್ಲಿನ ಮಾದರಿಗಿಂತಲೂ ತುಸು ದುಬಾರಿಯಾಗಿರಲಿದ್ದು, ಆರಂಭಿಕ ಮಾದರಿಯಲ್ಲೂ ಹಲವಾರು ಫೀಚರ್ಸ್ ನೋಡಬಹುದಾಗಿದೆ.

Praveen Sannamani

Praveen Sannamani is a enthusiast and passionate Journalist in Kannada Language. Automobile and Current affairs are the interested areas

Read More
Follow Us