ಸಿಎನ್ ಜಿ ವರ್ಷನ್ ನಲ್ಲಿ ಬಿಡುಗಡೆಗೆ ಸಿದ್ದವಾದ ಹೊಸ ಮಾರುತಿ ಸುಜುಕಿ ಸ್ವಿಫ್ಟ್

|

Updated on: May 20, 2024 | 5:41 PM

ಮಾರುತಿ ಸುಜುಕಿ ಕಂಪನಿಯು ತನ್ನ ಹೊಸ ತಲೆಮಾರಿನ ಸ್ವಿಫ್ಟ್ ಮಾದರಿಯನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ್ದು, ಹೊಸ ಕಾರು ಶೀಘ್ರದಲ್ಲಿಯೇ ಸಿಎನ್ ಜಿ ಮಾದರಿಯಲ್ಲೂ ಬಿಡುಗಡೆಗೆ ಸಿದ್ದವಾಗುತ್ತಿದೆ.

ಸಿಎನ್ ಜಿ ವರ್ಷನ್ ನಲ್ಲಿ ಬಿಡುಗಡೆಗೆ ಸಿದ್ದವಾದ ಹೊಸ ಮಾರುತಿ ಸುಜುಕಿ ಸ್ವಿಫ್ಟ್
ಹೊಸ ಮಾರುತಿ ಸುಜುಕಿ ಸ್ವಿಫ್ಟ್
Follow us on

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಉತ್ಪಾದನೆ ಮತ್ತು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಮಾರುತಿ ಸುಜುಕಿ (Maruti Suzuki) ಕಂಪನಿಯು ಶೀಘ್ರದಲ್ಲಿಯೇ ಸ್ವಿಫ್ಟ್ (Swift) ಸಿಎನ್ ಜಿ ಆವೃತ್ತಿ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಆವೃತ್ತಿಯು ಹೆಚ್ಚಿನ ಮಟ್ಟದ ಮೈಲೇಜ್ ಜೊತೆಗೆ ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ.

ಹೊಸ ಮಾಲಿನ್ಯ ನಿಯಂತ್ರಣ ಮಾನದಂಡಗಳ ಜಾರಿ ನಂತರ ಡೀಸೆಲ್ ಕಾರುಗಳ ಮಾರಾಟವನ್ನು ಸಂಪೂರ್ಣವಾಗಿ ಕೈಬಿಟ್ಟಿರುವ ಮಾರುತಿ ಸುಜುಕಿ ಕಂಪನಿಯು ಸದ್ಯಕ್ಕೆ ಪೆಟ್ರೋಲ್ ಮತ್ತು ಸಿಎನ್ ಜಿ ಕಾರುಗಳ ಮೇಲೆ ಮಾತ್ರ ಗಮನಹರಿಸುತ್ತಿದೆ. ಡೀಸೆಲ್ ಕಾರುಗಳ ಸ್ಥಗಿತ ನಂತರ ಪೆಟ್ರೋಲ್ ಜೊತೆಗೆ ಸಿಎನ್ ಜಿ ಕಾರುಗಳ ಮಾರಾಟವು ಕೂಡಾ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ವಿವಿಧ ಕಾರುಗಳಲ್ಲಿ ಸಿಎನ್ ಜಿ ವೆರಿಯೆಂಟ್ ಗಳ ಮೂಲಕ ಮಾರುತಿ ಸುಜುಕಿ ಕಂಪನಿಯು ಇದೀಗ ಅತಿ ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿದೆ. ಹೀಗಾಗಿ ಶೀಘ್ರದಲ್ಲಿಯೇ ಹೊಸ ತಲೆಮಾರಿನ ಸ್ವಿಫ್ಟ್ ಮಾದರಿಯಲ್ಲೂ ಸಿಎನ್ ಜಿ ಆವೃತ್ತಿ ಬಿಡುಗಡೆ ಮಾಡುತ್ತಿದೆ.

ಇದನ್ನೂ ಓದಿ: ಎಡಿಎಎಸ್ ಸೌಲಭ್ಯ ಹೊಂದಿರುವ ಭಾರತದ ಬಜೆಟ್ ಕಾರುಗಳಿವು!

ಹೊಸ ತಲೆಮಾರಿನ ಸ್ವಿಫ್ಟ್ ಇತ್ತೀಚೆಗಷ್ಟೇ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಗೊಂಡಿದ್ದು, ಇದರಲ್ಲಿ ಜೆಡ್ ಸೀರಿಸ್ 1.2 ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದೆ. ಇದೇ ಪೆಟ್ರೋಲ್ ಮಾದರಿಯಲ್ಲಿ ಇದೀದ ಜೊತೆಗೆ ಫ್ಯಾಕ್ಟರಿ ಜೋಡಣೆಯ ಎಸ್ ಸಿಎನ್ ಜಿ ತಂತ್ರಜ್ಞಾನ ನೀಡಲಾಗುತ್ತಿದ್ದು, ಇದು ಪ್ರತಿ ಕೆಜಿ ಸಿಎನ್ ಜಿಗೆ 32 ಕಿ.ಮೀ ಮೈಲೇಜ್ ನೀಡಬಹುದಾಗಿದೆ. ಸ್ವಿಫ್ಟ್ ಹೊಸ ಕಾರಿನ ಪೆಟ್ರೋಲ್ ಆವೃತ್ತಿಯಲ್ಲಿ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಆವೃತ್ತಿಗಳು ಖರೀದಿಗೆ ಲಭ್ಯವಿದ್ದರೆ ಸಿಎನ್ ಜಿ ಮಾದರಿಯಲ್ಲಿ ಮ್ಯಾನುವಲ್ ಆವೃತ್ತಿ ಮಾತ್ರ ಖರೀದಿಗೆ ಲಭ್ಯವಾಗಬಹುದಾಗಿದೆ.

ಇನ್ನು ಸ್ವಿಫ್ಟ್ ಹೊಸ ಮಾದರಿಯು ಸದ್ಯ ಪೆಟ್ರೋಲ್ ಆವೃತ್ತಿಯಲ್ಲಿ ಎಲ್ಎಕ್ಸ್ಐ, ವಿಎಕ್ಸ್ಐ, ವಿಎಕ್ಸ್ಐ(ಆಪ್ಷನ್), ಜೆಡ್ಎಕ್ಸ್ಐ ಮತ್ತು ಜೆಡ್ಎಕ್ಸ್ಐ ಪ್ಲಸ್ ವೆರಿಯೆಂಟ್ ಗಳನ್ನು ಹೊಂದಿದ್ದು, ಇದು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 6.49 ಲಕ್ಷದಿಂದ ರೂ. 9.50 ಲಕ್ಷ ಬೆಲೆ ಹೊಂದಿದೆ. ಇದರಲ್ಲಿ ಸಿಎನ್ ಜಿ ಮಾದರಿಯು ವಿಎಕ್ಸ್ಐ ಆವೃತ್ತಿ ಆಧರಿಸಿ ಬಿಡುಗಡೆಯಾಗಬಹುದಾಗಿದ್ದು, ಇದು ಪೆಟ್ರೋಲ್ ಮಾದರಿಗಿಂತಲೂ ರೂ. 70 ಸಾವಿರದಿಂದ ರೂ. 90 ಸಾವಿರದಷ್ಟು ಹೆಚ್ಚುವರಿ ಬೆಲೆ ಹೊಂದಿರಲಿದೆ.

ಇದನ್ನೂ ಓದಿ: ಚಿತ್ರದುರ್ಗದಿಂದ ದಾವಣಗೆರೆ ನಡುವಿನ 72 ಕಿ.ಮೀ ಉದ್ದದ ಷಟ್ಪಥ ಹೆದ್ದಾರಿ ವಿಶೇಷತೆಗಳೇನು?

ಇದರೊಂದಿಗೆ ಹೊಸ ಸ್ವಿಫ್ಟ್ ಕಾರನ್ನು ಮಾರುತಿ ಸುಜುಕಿ ಕಂಪನಿ ಈ ಬಾರಿ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ಗಳೊಂದಿಗೆ ಅಭಿವೃದ್ದಿಪಡಿಸಿದ್ದು, ಇದು ಈ ಹಿಂದಿನ ಮಾದರಿಗಿಂತಲೂ ಹೆಚ್ಚುವರಿಯಾಗಿ 15 ಎಂಎಂ ಉದ್ದ, 40 ಎಂಎಂ ಅಗಲ ಮತ್ತು 30 ಎಂಎಂ ಎತ್ತರವನ್ನು ಪಡೆದುಕೊಂಡಿದೆ. ಜೊತೆಗೆ ಹೊಸ ಕಾರು ಈ ಹಿಂದಿನ ಮಾದರಿಗಿಂತಲೂ ಸಾಕಷ್ಟು ಬದಲಾವಣೆಗೊಳಿಸಲಾದ ಆಕರ್ಷಕ ವಿನ್ಯಾಸ ಹೊಂದಿದ್ದು, ಒಳಭಾಗದಲ್ಲೂ ಕೂಡಾ ಹಲವು ಬದಲಾವಣೆಗಳನ್ನು ಪಡೆದುಕೊಂಡಿದೆ. ಹೊಸ ಕಾರಿನಲ್ಲಿ ಮರುವಿನ್ಯಾಸಗೊಳಿಸಲಾದ ಫ್ರಂಟ್ ಬಂಪರ್ ಸೇರಿದಂತೆ ಎಲ್ಇಡಿ ಹೆಡ್ ಲೈಟ್ಸ್, 9 ಇಂಚಿನ ಫ್ಲೋಟರಿಂಗ್ ಟಚ್ ಸ್ಕ್ರೀನ್ ಇನ್ಪೋಟೈನ್ ಮೆಂಟ್ ಸಿಸ್ಟಂ, ಪ್ರೀಮಿಯಂ ಆಗಿರುವ ಫ್ರಾಬ್ರಿಕ್ ಆಸನಗಳು, ವೈರ್ ಲೆಸ್ ಚಾರ್ಜಿಂಗ್, ಆಟೋ ಕ್ಲೈಮೆಟ್ ಕಂಟ್ರೋಲ್ ಸೇರಿದಂತೆ ವಿವಿಧ ಸೌಲಭ್ಯಗಳು ಗಮನಸೆಳೆಯುತ್ತಿವೆ.

Published On - 5:38 pm, Mon, 20 May 24