Maruti Suzuki Swift: ಸಖತ್ ಫೀಚರ್ಸ್ ಗಳೊಂದಿಗೆ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಬಿಡುಗಡೆ

ಮಾರುತಿ ಸುಜುಕಿ ಕಂಪನಿ ತನ್ನ ಬಹುನೀರಿಕ್ಷಿತ ಹೊಸ ತಲೆಮಾರಿನ ಸ್ವಿಫ್ಟ್ ಬಿಡುಗಡೆ ಮಾಡಿದ್ದು, ಹೊಸ ಕಾರು ಹಲವಾರು ವಿಶೇಷತೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.

Maruti Suzuki Swift: ಸಖತ್ ಫೀಚರ್ಸ್ ಗಳೊಂದಿಗೆ ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಬಿಡುಗಡೆ
ಮಾರುತಿ ಸುಜುಕಿ ಸ್ವಿಫ್ಟ್
Praveen Sannamani

Updated on: May 09, 2024 | 6:02 PM

ದೇಶದ ಅಗ್ರ ಕಾರು ಉತ್ಪಾದನಾ ಕಂಪನಿಯಾಗಿರುವ ಮಾರುತಿ ಸುಜುಕಿ (Maruti Suzuki) ತನ್ನ ಹೊಸ ತಲೆಮಾರಿನ ಸ್ವಿಫ್ಟ್ (Swift) ಹ್ಯಾಚ್ ಬ್ಯಾಕ್ ಬಿಡುಗಡೆ ಮಾಡಿದ್ದು, ಹೊಸ ಕಾರು ವಿವಿಧ ವೆರಿಯೆಂಟ್ ಗಳೊಂದಿಗೆ ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 6.49 ಲಕ್ಷದಿಂದ ರೂ. 9.50 ಲಕ್ಷ ಬೆಲೆ ಹೊಂದಿದೆ. ಹೊಸ ಕಾರಿನಲ್ಲಿ ಈ ಹಿಂದಿನಂತೆ ಎಲ್ಎಕ್ಸ್ಐ, ವಿಎಕ್ಸ್ಐ, ವಿಎಕ್ಸ್ಐ(ಆಪ್ಷನ್), ಜೆಡ್ಎಕ್ಸ್ಐ ಮತ್ತು ಜೆಡ್ಎಕ್ಸ್ಐ ಪ್ಲಸ್ ವೆರಿಯೆಂಟ್ ಗಳನ್ನು ನೀಡಲಾಗುತ್ತಿದ್ದು, ಇದರಲ್ಲಿ ಆಸಕ್ತ ಗ್ರಾಹಕರು ರೂ. 15 ಸಾವಿರ ಹೆಚ್ಚುವರಿ ಮೊತ್ತದೊಂದಿಗೆ ಡ್ಯುಯಲ್ ಟೋನ್ ವೆರಿಯೆಂಟ್ ಗಳನ್ನು ಖರೀದಿಸಬಹುದಾಗಿದೆ.

ಹೊಸ ಸ್ವಿಫ್ಟ್ ಕಾರು ಮಾದರಿಯನ್ನು ಮಾರುತಿ ಸುಜುಕಿ ಕಂಪನಿಯು ಹೊಸ ಕಾರು ಉತ್ಪಾದನಾ ಮಾನದಂಡಗಳೊಂದಿಗೆ ನಿರ್ಮಾಣಗೊಳಿಸಿದ್ದು, ಇದು ಈ ಹಿಂದಿನ ಮಾದರಿಗಿಂತಲೂ ರೂ. 25 ಸಾವಿರದಿಂದ ರೂ. 37 ಸಾವಿರದಷ್ಟು ದುಬಾರಿಯಾಗಿದೆ. ಆದರೆ ಹೊಸ ಕಾರು ಈ ಬಾರಿ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ಗಳೊಂದಿಗೆ ಅಭಿವೃದ್ದಿಗೊಂಡಿದ್ದು, ಹ್ಯಾಚ್ ಬ್ಯಾಕ್ ವಿಭಾಗದಲ್ಲಿ ಇದು ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ವಿನ್ಯಾಸ ಮತ್ತು ವೈಶಿಷ್ಟ್ಯತೆಗಳು
ಹೊಸ ತಲೆಮಾರಿನ ಸ್ವಿಫ್ಟ್ ಕಾರು ಈ ಹಿಂದಿನ ಮಾದರಿಗಿಂತಲೂ ಸಾಕಷ್ಟು ಆಕರ್ಷಕ ವಿನ್ಯಾಸ ಹೊಂದಿದ್ದು, ಇದರಲ್ಲಿ ಮರುವಿನ್ಯಾಸಗೊಳಿಸಲಾದ ಫ್ರಂಟ್ ಬಂಪರ್, ರೆಡಿಯರ್ ಗ್ರಿಲ್, ಹೆಡ್ ಲೈಟ್ಸ್ ಮತ್ತು ಫಾಗ್ ಲೈಟ್ಸ್ ನೀಡಲಾಗಿದೆ. ಹಾಗೆಯೇ ಹೊಸ ಕಾರು ಈ ಹಿಂದಿನ ಮಾದರಿಗಿಂತಲೂ ಹೆಚ್ಚುವರಿಯಾಗಿ 15 ಎಂಎಂ ಉದ್ದ, 40 ಎಂಎಂ ಅಗಲ ಮತ್ತು 30 ಎಂಎಂ ಎತ್ತರವನ್ನು ಪಡೆದುಕೊಂಡಿದ್ದು, ಹಿಂಬದಿಯಲ್ಲಿ ಮರುವಿನ್ಯಾಸಗೊಳಿಸಲಾದ ಸಿ ಆಕಾರದ ಟೈಲ್ ಲ್ಯಾಂಪ್ಸ್ ಜೊತೆಗೆ ಆಕರ್ಷಕ ಅಲಾಯ್ ವ್ಹೀಲ್ ಗಳ ಜೋಡಣೆ ಹೊಂದಿದೆ.

ಇದನ್ನೂ ಓದಿ: ಎಡಿಎಎಸ್ ಸೌಲಭ್ಯ ಹೊಂದಿರುವ ಭಾರತದ ಬಜೆಟ್ ಕಾರುಗಳಿವು!

ಸ್ವಿಫ್ಟ್ ಹೊಸ ಕಾರಿನ ಒಳಭಾಗದಲ್ಲೂ ಹಲವು ಬದಲಾವಣೆಗಳನ್ನು ಪರಿಚಯಿಸಿರುವ ಮಾರುತಿ ಸುಜುಕಿ ಕಂಪನಿಯು ಬಲೆನೊ ಮತ್ತು ಫ್ರಾಂಕ್ಸ್ ಕಾರಿನಲ್ಲಿರುವಂತೆ ವಿವಿಧ ಫೀಚರ್ಸ್ ಗಳನ್ನು ನೀಡುತ್ತಿದೆ. ಹೀಗಾಗಿ ಹೊಸ ಕಾರು ಆಕರ್ಷಕವಾದ ಕ್ಯಾಬಿನ್ ನೊಂದಿಗೆ 9 ಇಂಚಿನ ಫ್ಲೋಟರಿಂಗ್ ಟಚ್ ಸ್ಕ್ರೀನ್ ಇನ್ಪೋಟೈನ್ ಮೆಂಟ್, ಪ್ರೀಮಿಯಂ ಆಗಿರುವ ಫ್ರಾಬ್ರಿಕ್ ಆಸನಗಳು, 4.2 ಇಂಚಿನ ಡಿಜಿಟಲ್ ಮಲ್ಟಿ ಇನ್ಫಾರ್ಮೆಷನ್ ಡಿಸ್ ಪ್ಲೇ, ವೈರ್ ಲೆಸ್ ಚಾರ್ಜಿಂಗ್, ರಿಯರ್ ಎಸಿ ವೆಂಟ್ಸ್, ಆಟೋ ಕ್ಲೈಮೆಟ್ ಕಂಟ್ರೋಲ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್, ವೈರ್ ಲೆಸ್ ಅಂಡ್ರಾಯಿಡ್ ಹಾಗೂ ಮತ್ತು ಆಟೋಕಾರ್ ಪ್ಲೇ ಮತ್ತು ಮರುವಿನ್ಯಾಸಗೊಳಿಸಲಾದ ಸೆಂಟ್ರಲ್ ಏರ್ ಕಾನ್ ವೆಂಟ್ಸ್ ಪಡೆದುಕೊಂಡಿದೆ.

ಎಂಜಿನ್ ಮತ್ತು ಪರ್ಫಾಮೆನ್ಸ್
ಮಾರುತಿ ಸುಜುಕಿ ಹೊಸ ಸ್ವಿಫ್ಟ್ ಕಾರಿನಲ್ಲಿ ಮೂರು ಸಿಲಿಂಡರ್ ವೈಶಿಷ್ಟತೆಯ 1.2 ಲೀಟರ್ ಜೆಡ್12ಇ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಇದರಲ್ಲಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕಗಳಿವೆ. ಈ ಮೂಲಕ ಇದು 82 ಹಾರ್ಸ್ ಪವರ್ ಮತ್ತು 112 ಎನ್ಎಂ ಟಾರ್ಕ್ ಉತ್ಪಾದನಾ ಸಾಮರ್ಥ್ಯ ಹೊಂದಿದ್ದು, ಇದರಲ್ಲಿ ಮ್ಯಾನುವಲ್ ಮಾದರಿಯು ಪ್ರತಿ ಲೀಟರ್ ಗೆ 24.8 ಕಿ.ಮೀ ಮೈಲೇಜ್ ನೀಡಿದರೆ ಆಟೋಮ್ಯಾಟಿಕ್ ಮಾದರಿಯು 25.75 ಕಿ.ಮೀ ಮೈಲೇಜ್ ನೀಡುತ್ತದೆ.

ಇದನ್ನೂ ಓದಿ: ಐಷಾರಾಮಿ ಫೀಚರ್ಸ್ ಗಳೊಂದಿಗೆ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಬಿಡುಗಡೆ

ಸುರಕ್ಷಾ ಸೌಲಭ್ಯಗಳು
ಸ್ವಿಫ್ಟ್ ಹೊಸ ಕಾರಿನಲ್ಲಿ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಇದರಲ್ಲಿ ಈ ಬಾರಿ ಆರಂಭಿಕ ಮಾದರಿಗೂ ಅನ್ವಯಿಸುವಂತೆ ಆರು ಏರ್ ಬ್ಯಾಗ್ ಗಳು, ಐಸೋಫಿಕ್ಸ್ ಆ್ಯಂಕರ್ಸ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಎಬಿಎಸ್ ಜೊತೆ ಇಬಿಡಿ, ಹಿಲ್ ಸ್ಟಾರ್ಟ್ ಅಸಿಸ್ಟ್ ಸೇರಿದಂತೆ ಹಲವು ಫೀಚರ್ಸ್ ನೀಡಲಾಗಿದೆ. ಇದರೊಂದಿಗೆ ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಈ ಹೊಸ ಕಾರಿನ ವಿತರಣೆ ಶೀಘ್ರದಲ್ಲಿ ಆರಂಭವಾಗಲಿದೆ.

Loading...
Unable to load recommendations.
Follow Us