ಸ್ಟೈಲಿಶ್ ಡಿಸೈನ್ ಮತ್ತು ಸಖತ್ ಫೀಚರ್ಸ್ ಪಡೆದುಕೊಳ್ಳಲಿದೆ ಹೊಸ ಮಾರುತಿ ಸುಜುಕಿ ಸ್ವಿಫ್ಟ್

ಮಾರುತಿ ಸುಜುಕಿ ಕಂಪನಿ ತನ್ನ ಹೊಸ ಸ್ವಿಫ್ಟ್ ಹ್ಯಾಚ್ ಬ್ಯಾಕ್ ಬಿಡುಗಡೆಗಾಗಿ ಭರ್ಜರಿ ಸಿದ್ದತೆ ನಡೆಸುತ್ತಿದ್ದು, ಹೊಸ ಸ್ವಿಫ್ಟ್ ಈ ಬಾರಿ ಹಲವಾರು ಬದಲಾವಣೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡುತ್ತಿದೆ.

ಸ್ಟೈಲಿಶ್ ಡಿಸೈನ್ ಮತ್ತು ಸಖತ್ ಫೀಚರ್ಸ್ ಪಡೆದುಕೊಳ್ಳಲಿದೆ ಹೊಸ ಮಾರುತಿ ಸುಜುಕಿ ಸ್ವಿಫ್ಟ್
ಹೊಸ ಮಾರುತಿ ಸುಜುಕಿ ಸ್ವಿಫ್ಟ್
Praveen Sannamani

Updated on: Apr 14, 2024 | 3:55 PM

ದೇಶದ ಅಗ್ರ ಕಾರು ಉತ್ಪಾದನಾ ಕಂಪನಿಯಾಗಿರುವ ಮಾರುತಿ ಸುಜುಕಿ(Maruti Suzuki) ಶೀಘ್ರದಲ್ಲಿಯೇ ತನ್ನ ಹೊಸ ತಲೆಮಾರಿನ ವೈಶಿಷ್ಟ್ಯತೆಯ ಸ್ವಿಫ್ಟ್ ಹ್ಯಾಚ್ ಬ್ಯಾಕ್ (Swift Hatchback) ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿ ಸ್ವಿಫ್ಟ್ ಮಾದರಿಗಿಂತಲೂ ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡುತ್ತಿದೆ.

ಹೊಸ ತಲೆಮಾರಿನ ಸ್ವಿಫ್ಟ್ ಮಾದರಿಯನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಈಗಾಗಲೇ ಬಿಡುಗಡೆ ಮಾಡಿರುವ ಸುಜುಕಿ ಕಂಪನಿಯು ಪ್ರಮುಖ ಬದಲಾವಣೆಗಳೊಂದಿಗೆ ದೇಶಿಯ ಮಾರುಕಟ್ಟೆಗೂ ಪರಿಚಯಿಸುತ್ತಿದ್ದು, ಹೊಸ ಕಾರು ಈ ತಿಂಗಳಾಂತ್ಯಕ್ಕೆ ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಬಹುದಾಗಿದೆ.

ಸ್ವಿಫ್ಟ್ ಹೊಸ ಮಾದರಿಯು ಈ ಬಾರಿ ಪ್ರತಿಸ್ಪರ್ಧಿ ಮಾದರಿಗಳಿಗೆ ಪೈಪೋಟಿಯಾಗಿ ಹಲವಾರು ಬದಲಾವಣೆಗಳನ್ನು ಪಡೆದುಕೊಂಡಿದ್ದು, ಇದರಲ್ಲಿ ಐಷಾರಾಮಿ ಲುಕ್ ಹೊಂದಿರುವ ಹೊರ ಭಾಗದ ವಿನ್ಯಾಸದೊಂದಿಗೆ ಕಾರಿನ ಒಳಭಾಗದಲ್ಲೂ ಹಲವಾರು ಸುಧಾರಿತ ಫೀಚರ್ಸ್ ಗಳನ್ನು ನೀಡಲಾಗಿದೆ.

ಹೊಸ ಕಾರಿನಲ್ಲಿ ಈ ಬಾರಿ 16 ಇಂಚಿನ ಅಲಾಯ್ ವ್ಹೀಲ್ಸ್, ಎಲ್ಇಡಿ ಹೆಡ್ ಲೈಟ್ಸ್ ಮತ್ತು ಟೈಲ್ ಲೈಟ್ಸ್ ಜೊತೆ ಎಲ್ಇಡಿ ಡಿಆರ್ ಎಲ್ಎಸ್ ನೀಡಲಾಗಿದ್ದು, ಕಾರಿನ ಒಳಭಾಗದಲ್ಲಿ 9 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್ ಮೆಂಟ್ ಸಿಸ್ಟಂ, ವೈರ್ ಲೇಸ್ ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸೇರಿದಂತೆ ಹಲವಾರು ಫೀಚರ್ಸ್ ನೀಡಲಾಗಿದೆ.

ಇದನ್ನೂ ಓದಿ: ಕಡಿಮೆ ಬೆಲೆಗೆ 6 ಏರ್‌ಬ್ಯಾಗ್‌ ಗಳ ಸುರಕ್ಷತೆ ಹೊಂದಿರುವ ಕಾರುಗಳು!

ಹೊಸ ಸ್ವಿಫ್ಟ್ ನಲ್ಲಿ ಈ ಬಾರಿ ಜೆಡ್ ಸೀರಿಸ್ ನಲ್ಲಿರುವ ಜೆಡ್12ಇ 1.2 ಲೀಟರ್, ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಇದು ಪ್ಯೂರ್ ಪೆಟ್ರೋಲ್ ಮತ್ತು ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದೆ. ಇದು ಸಿವಿಟಿ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಪ್ಯೂರ್ ಪೆಟ್ರೋಲ್ ಮಾದರಿಯು 82 ಹಾರ್ಸ್ ಪವರ್ ಮತ್ತು 108 ಎನ್ಎಂ ಟಾರ್ಕ್ ಉತ್ಪಾದಿಸಿದರೆ ಮೈಲ್ಡ್ ಹೈಬ್ರಿಡ್ ಮಾದರಿಯು ಪ್ಯೂರ್ ಪೆಟ್ರೋಲ್ ಮಾದರಿಗಿಂತ ಹೆಚ್ಚುವರಿಯಾಗಿ 3 ಹಾರ್ಸ್ ಪವರ್ ಮತ್ತು 60 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಇದನ್ನೂ ಓದಿ: ಸೆಕೆಂಡ್ ಹ್ಯಾಂಡ್ ಕಾರು ಖರೀದಿಸುವಾಗ ಇರಲಿ ಈ ಬಗ್ಗೆ ಎಚ್ಚರ!

ಸ್ವಿಫ್ಟ್ ಹೊಸ ಮಾದರಿಯ ಸಾಮಾನ್ಯ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಪ್ರತಿ ಲೀಟರ್ ಗೆ 23.04 ಕಿ.ಮೀ ಮೈಲೇಜ್ ನೀಡಿದ್ದಲ್ಲಿ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ ಸ್ವಿಫ್ಟ್ ಮಾದರಿಯು ಪ್ರತಿ ಲೀಟರ್ ಗೆ 24.05 ಕಿ.ಮೀ ಮೈಲೇಜ್ ನೀಡಲಿದ್ದು, ಇದು ಸುರಕ್ಷತೆಯಲ್ಲೂ ಗಮನಸೆಳೆಯಲಿದೆ. ಹೊಸ ಕಾರಿನಲ್ಲಿ ಸುರಕ್ಷತೆಗಾಗಿ 6 ಏರ್ ಬ್ಯಾಗ್ ಗಳು, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಇಬಿಡಿ ಮತ್ತು ಬ್ರೇಕ್ ಅಸಿಸ್ಟ್, ಹಿಲ್ ಹೋಲ್ಡ್ ಕಂಟ್ರೋಲ್ ಸೇರಿದಂತೆ ಹಲವಾರು ಸೌಲಭ್ಯಗಳಿರಲಿವೆ. ಹೀಗಾಗಿ ಹೊಸ ಕಾರು ಸದ್ಯದ ಮಾರುಕಟ್ಟೆಯಲ್ಲಿನ ಮಾದರಿಗಿಂತಲೂ ತುಸು ದುಬಾರಿಯಾಗಿರಲಿದ್ದು, ಆರಂಭಿಕ ಮಾದರಿಯಲ್ಲೂ ಹಲವಾರು ಫೀಚರ್ಸ್ ನೋಡಬಹುದಾಗಿದೆ.

Praveen Sannamani

Praveen Sannamani is a enthusiast and passionate Journalist in Kannada Language. Automobile and Current affairs are the interested areas

Follow Us