Royal Enfield Bullet 350: ಹೊಸ ಫೀಚರ್ಸ್ ಗಳೊಂದಿಗೆ 2023ರ ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಬಿಡುಗಡೆ

ರಾಯಲ್ ಎನ್‌ಫೀಲ್ಡ್ ಕಂಪನಿಯು ತನ್ನ ಹೊಸ ಬುಲೆಟ್ 350 ಬಿಡುಗಡೆ ಮಾಡಿದ್ದು, ಹೊಸ ಆವೃತ್ತಿಯು ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.

Royal Enfield Bullet 350: ಹೊಸ ಫೀಚರ್ಸ್ ಗಳೊಂದಿಗೆ 2023ರ ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಬಿಡುಗಡೆ
2023ರ ರಾಯಲ್ ಎನ್‌ಫೀಲ್ಡ್ ಬುಲೆಟ್ 350 ಬಿಡುಗಡೆ
Follow us
Praveen Sannamani
|

Updated on:Sep 01, 2023 | 9:12 PM

ಪ್ರೀಮಿಯಂ ಮೋಟಾರ್ ಸೈಕಲ್ ಕಂಪನಿಯಾಗಿರುವ ರಾಯಲ್ ಎನ್‌ಫೀಲ್ಡ್(Royal Enfield) ತನ್ನ ಹೊಸ ಬುಲೆಟ್ 350(Bullet 350) ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಆವೃತ್ತಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 1.74 ಲಕ್ಷ ಬೆಲೆ ಹೊಂದಿದೆ.

ಹೊಸ ಬುಲೆಟ್ 350 ಬೈಕ್ ಮಾದರಿಯು ಪ್ರಮುಖ ಮೂರು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಇದರಲ್ಲಿ ಆರಂಭಿಕ ಮಾದರಿಯಾದ ಮಿಲಿಟರಿ ರೆಡ್ ಎಕ್ಸ್ ಶೋರೂಂ ಪ್ರಕಾರ ರೂ. 1.74 ಲಕ್ಷ ಬೆಲೆ ಹೊಂದಿದ್ದರೆ, ಮಿಲಿಟರಿ ಬ್ಲ್ಯಾಕ್ ಮಾದರಿಯು ರೂ. 1.97 ಲಕ್ಷ ಮತ್ತು ಬ್ಲ್ಯಾಕ್ ಗೋಲ್ಡ್ ಮಾದರಿಯು ರೂ. 2.16 ಲಕ್ಷ ಬೆಲೆ ಹೊಂದಿದೆ. ಇದರೊಂದಿಗೆ ಹೊಸ ಬೈಕ್ ಕ್ಲಾಸಿಕ್ 350 ಗಿಂತ ರೂ. 19 ಸಾವಿರದಷ್ಟು ಕಡಿಮೆ ಬೆಲೆ ಹೊಂದಿದ್ದರೆ ಹಂಟರ್ 350 ಬೈಕ್ ಮಾದರಿಗಿಂತ ರೂ. 24 ಸಾವಿರದಷ್ಟು ದುಬಾರಿಯಾಗಿರುತ್ತದೆ.

Royal Enfield Bullet 350 (1)

ರಾಯಲ್ ಎನ್‌ಫೀಲ್ಡ್ ಕಂಪನಿಯು ಹೊಸ ಬುಲೆಟ್ 350 ಮಾದರಿಯ ವಿನ್ಯಾಸದಲ್ಲಿ ಅಷ್ಟಾಗಿ ಬದಲಾವಣೆ ತಂದಿಲ್ಲವಾದರೂ ಕೆಲವು ಹೊಸ ತಾಂತ್ರಿಕ ವೈಶಿಷ್ಟ್ಯತೆಗಳನ್ನು ಹೊಂದಿದ್ದು, ಈ ಹಿಂದಿನಂತೆಯೇ 349 ಸಿಸಿ, ಏರ್-ಆಯಿಲ್ ಕೂಲ್ಡ್ ಎಂಜಿನ್ ಜೋಡಣೆಯನ್ನು ಮುಂದುವರಿಸಲಾಗಿದೆ. 5 ಸ್ಪೀಡ್ ಗೇರ್‌ಬಾಕ್ಸ್‌ಗೆ ಜೋಡಣೆಯೊಂದಿಗೆ ಇದು 20 ಹಾರ್ಸ್ ಪವರ್ ಮತ್ತು 27 ಎನ್ಎಂ ಟಾರ್ಕ್ ಉತ್ಪಾದನಾ ಸಾಮರ್ಥ್ಯ ಹೊಂದಿದ್ದು, ಜೆ-ಪ್ಲಾಟ್‌ಫಾರ್ಮ್ ಅಡಿ ನಿರ್ಮಾಣ ಮಾಡಲಾಗಿದೆ.

ಇದನ್ನೂ ಓದಿ: ಯುವಕರ ಹಾಟ್ ಫೇವರಿಟ್ ಹೀರೋ ಕರಿಜ್ಮಾ ಎಕ್ಸ್ಎಂಆರ್ ಬಿಡುಗಡೆ

ಜೆ-ಪ್ಲಾಟ್‌ಫಾರ್ಮ್ ಅಡಿಯಲ್ಲಿ ಹಂಟರ್ 350, ಕ್ಲಾಸಿಕ್ 350, ಮಿಟಿಯೊರ್ 350 ನಿರ್ಮಾಣ ಮಾಡಲಾಗುತ್ತಿದ್ದು, ಈ ನಾಲ್ಕು ಬೈಕ್ ಮಾದರಿಗಳಲ್ಲೂ ಒಂದೇ ಮಾದರಿಯ ಎಂಜಿನ್ ಮತ್ತು ವಿವಿಧ ತಾಂತ್ರಿಕ ಸೌಲಭ್ಯಗಳನ್ನು ಬಳಕೆ ಮಾಡಲಾಗಿದೆ. ಹೊಸ ಬುಲೆಟ್ 350 ಮಾದರಿಯು ಸದ್ಯ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಹಲವಾರು ಹೊಸ ತಾಂತ್ರಿಕ ಅಂಶಗಳನ್ನು ಪಡೆದುಕೊಂಡಿದ್ದು, ಇದರ ಮುಂಭಾಗದಲ್ಲಿ ಟೆಲಿಸ್ಕೋಪಿಕ್ ಫೋರ್ಕ್‌ಗಳು ಮತ್ತು ಹಿಂಬದಿಯಲ್ಲಿ ಟ್ವಿನ್ ಚಾರ್ಜ್ಡ್ ಶಾಕ್ ಅಬ್ಸಾರ್ಬರ್ಸ್ ನೀಡಲಾಗಿದೆ.

ಹೊಸ ಬುಲೆಟ್ 350 ಬೈಕ್ ಸಾಂಪ್ರದಾಯಿಕ ವಿನ್ಯಾಸದಲ್ಲಿ ಮುಂದುವರೆದಿದ್ದರೂ ಹೊಸ ಬಣ್ಣಗಳ ಆಯ್ಕೆ ಪ್ರಮುಖ ಆಕರ್ಷಣೆಯಾಗಿದ್ದು, ಒಟ್ಟು ಐದು ಬಣ್ಣಗಳ ಆಯ್ಕೆಯೊಂದಿಗೆ ಸಿಂಗಲ್ ಪೀಸ್ ಸೀಟ್, ರೌಂಡ್ ಹ್ಯಾಲೊಜೆನ್ ಹೆಡ್‌ಲ್ಯಾಂಪ್‌, 13 ಲೀಟರ್ ಸಾಮರ್ಥ್ಯ ಫ್ಯೂಲ್ ಟ್ಯಾಂಕ್ ಮತ್ತು ಆಕರ್ಷಕ ಬ್ರಾಂಡ್ ಲೊಗೊ ಹೊಂದಿದೆ. ಹಾಗೆಯೇ ಹೊಸ ಬೈಕಿನಲ್ಲಿ ಸುಧಾರಿತ ಇನ್ಸ್ಟ್ರುಮೆಂಟ್ ಕ್ಲಸ್ಟರ್ ನೀಡಲಾಗಿದ್ದು, ಇದರಲ್ಲಿ ಬೈಕ್ ಸವಾರರು ಸರ್ವಿಸ್ ಅಲರ್ಟ್, ಓಡೋಮೀಟರ್, ಇಕೋ ಇಂಡಿಕೇಟರ್ ಮತ್ತು ಫ್ಯೂಲ್ ಗೇಜ್ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ: ಟಿವಿಎಸ್ ಎಕ್ಸ್ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಇನ್ನು 170 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಮತ್ತು 805 ಎಂಎಂ ಸೀಟ್ ಹೈಟ್ ಹೊಂದಿರುವ ಹೊಸ ಬುಲೆಟ್ 350 ಬೈಕ್ ಮಾದರಿಯಲ್ಲಿ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, 300 ಎಂಎಂ ಫ್ರಂಟ್ ಡಿಸ್ಕ್ ಬ್ರೇಕ್ ಜೊತೆ 270 ಎಂಎಂ ರಿಯರ್ ಡಿಸ್ಕ್ ಬ್ರೇಕ್ ಸೌಲಭ್ಯ ಹೊಂದಿದೆ. ಈ ಮೂಲಕ ಹೊಸ ಬೈಕ್ ಕ್ಲಾಸಿಕ್ ಬೈಕ್ ಪ್ರಿಯರನ್ನು ಮತ್ತೊಮ್ಮೆ ರಂಜಿಸುವ ನೀರಿಕ್ಷೆಯಲ್ಲಿದ್ದು, ಹೊಸ ಬೈಕಿನಲ್ಲಿ ಮತ್ತಷ್ಟು ಸ್ಪೋರ್ಟಿ ಫೀಚರ್ಸ್ ಬಯಸುವ ಗ್ರಾಹಕರು ಎಂಐವೈ(MiY) ಕಾನ್ಪೀಗಟರ್ ವಿವಿಧ ತಾಂತ್ರಿಕ ಅಂಶಗಳನ್ನು ಹೆಚ್ಚುವರಿ ಮೊತ್ತಕ್ಕೆ ಖರೀದಿಸಬಹುದಾಗಿದೆ.

Published On - 9:09 pm, Fri, 1 September 23

ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್