Toyota Innova Hycross: ಮಾರುತಿ ಸುಜುಕಿ ರೀಬ್ಯಾಡ್ಜ್ ಆವೃತ್ತಿಯಲ್ಲೂ ಬಿಡುಗಡೆಯಾಗಲಿದೆ ಟೊಯೊಟಾ ಇನೋವಾ ಹೈಕ್ರಾಸ್

ಹೊಸ ಕಾರುಗಳ ಉತ್ಪಾದನೆಗಾಗಿ ಸಹಭಾಗಿತ್ವ ಯೋಜನೆ ಅಡಿ ಬೃಹತ್ ಯೋಜನೆ ರೂಪಿಸಿರುವ ಮಾರುತಿ ಸುಜುಕಿ ಮತ್ತು ಟೊಯೊಟಾ ಕಂಪನಿಗಳು ಶೀಘ್ರದಲ್ಲಿಯೇ ಮತ್ತಷ್ಟು ರೀಬ್ಯಾಡ್ಜ್ ಕಾರುಗಳನ್ನು ಬಿಡುಗಡೆ ಮಾಡಲಿದ್ದು, ಹೊಸ ಕಾರುಗಳಲ್ಲಿ ಇನೋವಾ ಹೈಕ್ರಾಸ್ ಎಂಪಿವಿ ಕಾರು ಕೂಡಾ ಒಂದಾಗಿದೆ.

Toyota Innova Hycross: ಮಾರುತಿ ಸುಜುಕಿ ರೀಬ್ಯಾಡ್ಜ್ ಆವೃತ್ತಿಯಲ್ಲೂ ಬಿಡುಗಡೆಯಾಗಲಿದೆ ಟೊಯೊಟಾ ಇನೋವಾ ಹೈಕ್ರಾಸ್
ಮಾರುತಿ ಸುಜುಕಿ ರೀಬ್ಯಾಡ್ಜ್ ಆವೃತ್ತಿಯಲ್ಲೂ ಬಿಡುಗಡೆಯಾಗಲಿದೆ ಟೊಯೊಟಾ ಇನೋವಾ ಹೈಕ್ರಾಸ್
Follow us
Praveen Sannamani
|

Updated on:Oct 22, 2022 | 12:45 PM

ಮಾರುತಿ ಸುಜುಕಿ ಮತ್ತು ಟೊಯೊಟಾ ಕಂಪನಿಗಳು ಸಹಭಾಗಿತ್ವ ಯೋಜನೆ ಅಡಿಯಲ್ಲಿ ಹೊಸ ಕಾರನ್ನು ಪೆಟ್ರೋಲ್ ಮತ್ತು ಹೈಬ್ರಿಡ್ ಎಂಜಿನ್ ಆಯ್ಕೆಯಲ್ಲಿ ಬಿಡುಗಡೆ ಮಾಡುತ್ತಿದ್ದು, ಹೈರೈಡರ್ ಮತ್ತು ಗ್ರ್ಯಾಂಡ್ ವಿಟಾರಾ ಪರಿಚಯಿಸಿದ ನಂತರ ಇದೀಗ ಬಿಡುಗಡೆಯಾಗಲಿರುವ ಇನೋವಾ ಹೈಕ್ರಾಸ್ ಎಂಪಿವಿಯನ್ನು ಸಹ ಮಾರುತಿ ಸುಜುಕಿ ರೀಬ್ಯಾಡ್ಜ್ ಆವೃತ್ತಿಯಲ್ಲೂ ಬಿಡುಗಡೆಯ ಸುಳಿವು ನೀಡಿದೆ. ಸಿ ಸೆಗ್ಮೆಂಟ್ ಎಂಪಿವಿ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಇನೋವಾ ಕ್ರಿಸ್ಟಾ ಕಾರನ್ನು ಟೊಯೊಟಾ ಕಂಪನಿಯು 2022ರ ಮಧ್ಯಂತರದಲ್ಲಿ ಹೊಸ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆ ಮಾಡಲಿದ್ದು, ಹೊಸ ಕಾರು ಈ ಬಾರಿ ಇನೋವಾ ಹೈಕ್ರಾಸ್ ಹೆಸರಿನಲ್ಲಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ.

ಹೊಸ ತಲೆಮಾರಿನ ಇನೋವಾ ಹೈಕ್ರಾಸ್ ಎಂಪಿವಿಯು ಈ ಬಾರಿ ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿದ್ದು, ಹೊಸ ಕಾರಿನಲ್ಲಿ ಟೊಯೊಟಾ ಕಂಪನಿಯು ಡೀಸೆಲ್ ಎಂಜಿನ್ ಆಯ್ಕೆ ಕೈಬಿಡಲಿದೆ ಎನ್ನಲಾಗಿದೆ. ಡೀಸೆಲ್ ಮಾದರಿಯ ಬದಲಾಗಿ ಪೆಟ್ರೋಲ್ ಮತ್ತು ಪೆಟ್ರೋಲ್ ಹೈಬ್ರಿಡ್ ಮಾದರಿಯನ್ನು ಪರಿಚಯಿಸುತ್ತಿದ್ದು, ಹೊಸ ಕಾರು ಸಹಭಾಗಿತ್ವ ಯೋಜನೆಯ ಭಾಗವಾಗಿ ಮಾರುತಿ ಸುಜುಕಿ ಬ್ಯಾಡ್ಜ್ ನಲ್ಲೂ ಬಿಡುಗಡೆಯಾಗಲಿದೆ.

ಒಂದೇ ಪ್ಲ್ಯಾಟ್ ಫಾರ್ಮ್, ಒಂದೇ ರೀತಿಯ ಎಂಜಿನ್ ಆಯ್ಕೆ ಹೊಂದಿರುವ ಹೈರೈಡರ್, ಗ್ರ್ಯಾಂಡ್ ವಿಟಾರಾ ಎಸ್ ಯುವಿಯೆಂತೆ ಇನೋವಾ ಹೈಕ್ರಾಸ್ ಕೂಡಾ ಮಾರುತಿ ಸುಜುಕಿ ಬ್ಯಾಡ್ಜ್ ಅಡಿಯಲ್ಲಿ ಹೊಸ ಹೆಸರಿನೊಂದಿಗೆ ರಸ್ತೆಗಿಳಿಯಲಿದೆ. ಹೈಬ್ರಿಡ್ ಪವರ್ ಟ್ರೈನ್ ಹೊಂದಿರುವ ಹೊಸ ಕಾರುಗಳಿಗಾಗಿ ಟೊಯೊಟಾ ಕಂಪನಿಯು ಟಿಎನ್ಜಿಎ-ಸಿ ಪ್ಲ್ಯಾಟ್ ಫಾರ್ಮ್ ಬಳಕೆ ಮಾಡುತ್ತಿದ್ದು, ಮೊನೊಕ್ಯೂ ಚಾರ್ಸಿಸ್ ಲ್ಯಾಡರ್ ಫ್ರೇಮ್ ಸೌಲಭ್ಯವು ಕಾರಿನ ಉದ್ದಳತೆಯನ್ನು ಹೆಚ್ಚಿಸಲು ಸಹಕಾರಿಯಾಗಿದೆ.

New toyota Innova Hycross

New toyota Innova Hycross

ಇದನ್ನು ಓದಿ: ಈ ದೀಪಾವಳಿಯಲ್ಲಿ ನೀವು ಹೊಸ ಕಾರು ಖರೀದಿಯ ಯೋಜನೆಯಲ್ಲಿದ್ದರೆ ನಿಮಗೆ ಈ ಸುದ್ದಿ ನಿರಾಶೆ ಉಂಟುಮಾಡುತ್ತೆ!

ಮೊದಲ ಹಂತದಲ್ಲಿ ಹೈಬ್ರಿಡ್ ಎಂಜಿನ್ ಹೊಂದಿರುವ ಟೊಯೊಟಾ ಇನೋವಾ ಹೈಕ್ರಾಸ್ ಬಿಡುಗಡೆಯ ನಂತರ ಅದೇ ಕಾರನ್ನು ಕೆಲವು ಬದಲಾವಣೆಗಳೊಂದಿಗೆ ಮಾರುತಿ ಸುಜುಕಿ ಬ್ಯಾಡ್ಜ್ ಅಡಿಯಲ್ಲೂ ಮಾರಾಟಗೊಳ್ಳಲಿದ್ದು, ಡೀಸೆಲ್ ಎಂಜಿನ್ ಸ್ಥಗಿತದ ಸ್ಥಾನ ತುಂಬಲು ಹೈಬ್ರಿಡ್ ಮಾದರಿಯು ಸಹಕಾರಿಯಾಗುತ್ತದೆ. ಸದ್ಯ ಮಾರುಕಟ್ಟೆಯಲ್ಲಿ ಜಿ, ಜಿ ಪ್ಲಸ್, ಜಿಎಕ್ಸ್, ವಿಎಕ್ಸ್ ಮತ್ತು ಜೆಡ್ಎಕ್ಸ್ ಎಂಬ ಐದು ವೆರಿಯೆಂಟ್‌ಗಳನ್ನು ಹೊಂದಿರುವ ಇನೋವಾ ಕ್ರಿಸ್ಟಾ ಕಾರು ಮಾದರಿಯು 2.7-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಿದ್ದು, 2023ರಿಂದ ಜಾರಿಗೆ ಜಾರಿಗೆ ಬರುತ್ತಿರುವ ಹೊಸ ಎಮಿಷನ್ ನಿಯಮ ಹಿನ್ನಲೆಯಲ್ಲಿ ಡೀಸೆಲ್ ವೆರಿಯೆಂಟ್ ಗಳ ಮಾರಾಟವನ್ನು ಸ್ಥಗಿತಗೊಳಿಸಲಾಗುತ್ತಿದೆ.

ಹೀಗಾಗಿ ಇನೋವಾ ಕ್ರಿಸ್ಟಾ ಸದ್ಯಕ್ಕೆ ಪೆಟ್ರೋಲ್ ಮಾದರಿಯಲ್ಲಿ ಮಾತ್ರ ಖರೀದಿಗೆ ಲಭ್ಯವಿದ್ದು, ಹೊಸ ತಲೆಮಾರಿನ ಇನೋವಾ ಹೈಕ್ರಾಸ್ ಕಾರು ಮಾದರಿಯು ಪೆಟ್ರೋಲ್ ಮತ್ತು ಪೆಟ್ರೋಲ್ ಹೈಬ್ರಿಡ್ ಆಯ್ಕೆಗಳಲ್ಲಿ ಖರೀದಿಸಬಹುದಾಗಿದೆ. ಹೊಸ ಇನೋವಾ ಹೈಕ್ರಾಸ್ ಕಾರಿನಲ್ಲಿ ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ 2.7 ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಕ್ಯಾಮ್ರಿ ಸೆಡಾನ್ ಮಾದರಿಯಲ್ಲಿರುವ 2.5 ಲೀಟರ್ ಆಟ್ಕಿನ್ಸ್ ಸೈಕಲ್ ಪೆಟ್ರೋಲ್ ಹೈಬ್ರಿಡ್ ಎಂಜಿನ್ ಅನ್ನು ಕೆಲವು ಬದಲಾವಣೆಯೊಂದಿಗೆ ಪರಿಚಯಿಸಬಹುದಾಗಿದೆ.

ಇದನ್ನು ಓದಿ: ಭಾರತದಲ್ಲಿ ಸದ್ಯ ಖರೀದಿಸಬಹುದಾದ ಅತಿಹೆಚ್ಚು ಸುರಕ್ಷಿತ ಮಧ್ಯಮ ಕ್ರಮಾಂಕದ ಕಾರುಗಳಿವು!

ಹೊಸ ಹೈಬ್ರಿಡ್ ಮಾದರಿಯು ಸೆಲ್ಪ್ ಡ್ರೈವ್ ಚಾರ್ಜಿಂಗ್ ವೈಶಿಷ್ಟ್ಯತೆಯೊಂದಿಗೆ ಪ್ರತಿ ಲೀಟರ್ ಪೆಟ್ರೋಲ್ ಗೆ 17 ರಿಂದ 19 ಕಿ.ಮೀ ಮೈಲೇಜ್ ಖಾತ್ರಿಪಡಿಸಲಿದ್ದು, ಜೊತೆಗೆ ಹೊಸ ಇನೋವಾ ಹೈಕ್ರಾಸ್ ಕಾರಿನಲ್ಲಿ ಗರಿಷ್ಠ ಸೇಫ್ಟಿ ಫೀಚರ್ಸ್ ಹೊಂದಿರುವ ಎಡಿಎಎಸ್(ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ) ಸೌಲಭ್ಯವನ್ನು ಜೋಡಣೆ ಮಾಡಲಾಗುತ್ತಿದೆ. ಹಾಗೆಯೇ ಹೊಸ ಕಾರಿನಲ್ಲಿ ಮೊದಲ ಬಾರಿಗೆ ಎಲೆಕ್ಟ್ರಿಕ್ ಸನ್ ರೂಫ್, ಸುಧಾರಿತ ಇನ್ಪೋಟೈನ್ ಮೆಂಟ್ ಸಿಸ್ಟಂ ಮತ್ತು ಹಲವು ಕಾರ್ ಕನೆಕ್ಟ್ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ.

Published On - 12:40 pm, Sat, 22 October 22

ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್