ಸಖತ್ ಫೀಚರ್ಸ್ ಗಳೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್

|

Updated on: Sep 19, 2024 | 10:29 PM

Nissan Magnite Facelift: ನಿಸ್ಸಾನ್ ಇಂಡಿಯಾ ಕಂಪನಿಯು ತನ್ನ ನವೀಕೃತ ಮ್ಯಾಗ್ನೈಟ್ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಕಾರು ಈ ಬಾರಿ ಹಲವಾರು ಫೀಚರ್ಸ್ ಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಸಖತ್ ಫೀಚರ್ಸ್ ಗಳೊಂದಿಗೆ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್
ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್
Follow us on

ಮ್ಯಾಗ್ನೈಟ್ ಮೆಕ್ರೊ ಎಸ್ ಯುವಿ ಮೂಲಕ ಭಾರತದಲ್ಲಿ ಹೊಸ ತಿರುವು ಪಡೆದುಕೊಂಡಿರುವ ನಿಸ್ಸಾನ್ ಇಂಡಿಯಾ (Nissan India) ಕಂಪನಿಯು ಇದೀಗ ಫೇಸ್ ಲಿಫ್ಟ್ ಮೂಲಕ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಹೊಸ ಕಾರು ಮಾದರಿಯು ಮುಂದಿನ ತಿಂಗಳು ಅಕ್ಟೋಬರ್ 4ರಂದು ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಹೊಸ ಕಾರಿನ ಈ ಬಾರಿ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ಗಳನ್ನು ನೀರಿಕ್ಷಿಸಬಬಹುದಾಗಿದೆ.

ಮ್ಯಾಗ್ನೈಟ್ ಫೇಸ್‌ಲಿಫ್ಟ್‌ ಮಾದರಿಯಲ್ಲಿ ನವೀಕರಿಸಿದ ಹೊರಭಾಗದ ವಿನ್ಯಾಸದೊಂದಿಗೆ ಎಲ್ ಆಕಾರದ ಎಲ್ಇಡಿ ಡೇ ಟೈಮ್ ರನ್ನಿಂಗ್ ಲೈಟ್ಸ್, ಸ್ಪೋರ್ಟಿಯಾಗಿರುವ ಫ್ರಂಟ್ ಅಂಡ್ ರಿಯರ್ ಬಂಪರ್, 16 ಇಂಚಿನ ಅಲಾಯ್ ವ್ಹೀಲ್, ಪರಿಷ್ಕರಿಸಿದ ಹೆಡ್‌ಲ್ಯಾಂಪ್ ಕ್ಲಸ್ಟರ್ಸ್ ಮತ್ತು ಹೊಸ ವಿನ್ಯಾಸದ ಗ್ರೀಲ್ ನೀಡಲಾಗುತ್ತಿದೆ. ಹಾಗೆಯೇ ಹೊಸ ಕಾರಿನ ಒಳಭಾಗದಲ್ಲೂ ಸಾಕಷ್ಟು ಬದಲಾವಣೆಗಳನ್ನು ತರಲಾಗಿದ್ದು, ನವೀಕರಿಸಲಾದ ಕ್ಯಾಬಿನ್ ಮತ್ತು ಸಿಂಗಲ್ ಪೇನ್ ಸನ್ ರೂಫ್ ನೀರಿಕ್ಷೆ ಮಾಡಬಹುದಾಗಿದೆ.

ಹೊಸ ಕಾರಿನಲ್ಲಿ ಎಂಜಿನ್ ಆಯ್ಕೆ ಬದಲಾವಣೆ ಕುರಿತಾಗಿ ಯಾವುದೇ ಮಾಹಿತಿ ಇಲ್ಲವಾದರೂ ಈ ಹಿಂದಿನಂತೆಯೇ ಮುಂದುವರಿಸಬಹುದಾಗಿದ್ದು, 1.0 ಲೀಟರ್ ಎನ್ಎ ಪೆಟ್ರೋಲ್ ಮತ್ತು 1.0 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಬಹುದಾಗಿದೆ. ಇವು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿದ್ದು, ಪರ್ಫಾಮೆನ್ಸ್ ನಲ್ಲೂ ಗಮನಸೆಳೆಯಲಿದೆ.

ಇನ್ನು ಪ್ರಸ್ತುತ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ನಿಸ್ಸಾನ್ ಮ್ಯಾಗ್ನೈಟ್ ಕಾರು ಕಡಿಮೆ ಬೆಲೆಯೊಂದಿಗೆ ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳೊಂದಿಗೆ ಪ್ರತಿಸ್ಪರ್ಧಿ ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುತ್ತಿದೆ. ಎಂಟ್ರಿ ಲೆವಲ್ ಕಾರುಗಳಲ್ಲಿಯೇ ಅತಿ ಹೆಚ್ಚು ಫೀಚರ್ಸ್ ಹೊಂದಿರುವ ಮ್ಯಾಗ್ನೈಟ್ ಕಾರು ಇತ್ತೀಚೆಗೆ ಬರೋಬ್ಬರಿ 1 ಲಕ್ಷ ಯುನಿಟ್ ಮಾರಾಟ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

ಮ್ಯಾಗ್ನೈಟ್ ಮೈಕ್ರೊ ಎಸ್ ಯುವಿ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿ ಎಕ್ಸ್ಇ, ಎಕ್ಸ್ಎಲ್, ಎಕ್ಸ್ ವಿ ಮತ್ತು ಎಕ್ಸ್ ವಿ ಪ್ರೀಮಿಯಂ ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಇವು ತಾಂತ್ರಿಕ ಸೌಲಭ್ಯಗಳು ಮತ್ತು ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಎಕ್ಸ್ ಶೋರೂಂ ಪ್ರಕಾರ ರೂ. 6 ಲಕ್ಷದಿಂದ ರೂ. 11.11 ಲಕ್ಷ ಬೆಲೆ ಹೊಂದಿದೆ. ಇದೀಗ ಹೆಚ್ಚಿನ ಮಟ್ಟದ ಫೀಚರ್ಸ್ ಗಳೊಂದಿಗೆ ನವೀಕೃತ ಆವೃತ್ತಿಯಲ್ಲಿ ಬಿಡುಗಡೆಗಾಗಿ ಸಜ್ಜಾಗುತ್ತಿದ್ದು, ಬೆಲೆಯಲ್ಲೂ ತುಸು ದುಬಾರಿಯಾಗಿರಲಿದೆ.