Nissan Magnite facelift: ಸಖತ್ ಫೀಚರ್ಸ್ ಗಳೊಂದಿಗೆ ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ ಬಿಡುಗಡೆ

|

Updated on: Oct 04, 2024 | 10:10 PM

Nissan Magnite facelift: ನಿಸ್ಸಾನ್ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಮ್ಯಾಗ್ನೈಟ್ ಫೇಸ್‌ಲಿಫ್ಟ್ ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ಹಲವಾರು ಹೊಸ ಫೀಚರ್ಸ್ ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.

Nissan Magnite facelift: ಸಖತ್ ಫೀಚರ್ಸ್ ಗಳೊಂದಿಗೆ ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ ಬಿಡುಗಡೆ
ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್
Follow us on

ನಿಸ್ಸಾನ್ ಇಂಡಿಯಾ (Nissan India) ಕಂಪನಿ ತನ್ನ ಬಹುನೀರಿಕ್ಷಿತ ಮ್ಯಾಗ್ನೈಟ್ ಫೇಸ್‌ಲಿಫ್ಟ್ (Magnite facelift) ಬಿಡುಗಡೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.99 ಲಕ್ಷದಿಂದ ರೂ. 11.50 ಲಕ್ಷ ಬೆಲೆಯೊಂದಿಗೆ ಖರೀದಿಗೆ ಲಭ್ಯವಾಗಿದೆ. ಹೊಸ ಕಾರು ಈ ಬಾರಿ ವಿಸಿಯಾ, ವಿಸಿಯಾ ಪ್ಲಸ್, ಅಸೆಂಟಾ, ಎನ್-ಕನೆಕ್ಟಾ, ಟೆಕ್ನಾ ಮತ್ತು ಟೆಕ್ನಾ ಪ್ಲಸ್ ಎನ್ನುವ ಆರು ಹೊಸ ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಾಗಿದ್ದು, ಆಕರ್ಷಕ ಬೆಲೆಯೊಂದಿಗೆ ಅತಿ ಹೆಚ್ಚು ಫೀಚರ್ಸ್ ಹೊಂದಿರುವ ಸಿ ಸೆಗ್ಮೆಂಟ್ ಎಸ್ ಯುವಿ ಮಾದರಿಯಾಗಿ ಹೊರಹೊಮ್ಮಿದೆ.

ಹೊಸ ಮ್ಯಾಗ್ನೈಟ್ ಕಾರು ಬಿಡುಗಡೆಯೊಂದಿಗೆ ನಿಸ್ಸಾನ್ ಕಂಪನಿಯು ಮೊದಲ 10 ಸಾವಿರ ಯುನಿಟ್ ಗಳನ್ನು ಖರೀದಿಸುವ ಗ್ರಾಹಕರಿಗೆ ಮಾತ್ರ ರೂ. 5.99 ಲಕ್ಷದಿಂದ ರೂ. 11.50 ಲಕ್ಷ ಬೆಲೆ ನಿಗದಿಪಡಿಸಿದ್ದು, ತದನಂತರ ಕಾರು ಖರೀದಿಸುವ ಗ್ರಾಹಕರಿಗೆ ದರ ಹೆಚ್ಚಿಸುವುದಾಗಿ ಹೇಳಿಕೊಂಡಿದೆ. ಹೀಗಾಗಿ ದಸರಾ ಮತ್ತು ದೀಪಾವಳಿಯಲ್ಲಿ ಹೊಸ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ಇದೊಂದು ಉತ್ತಮ ಅವಕಾಶ ಎನ್ನಬಹುದಾಗಿದ್ದು, ಹೊಸ ಕಾರು ಹಲವಾರು ಬದಲಾವಣೆಗಳೊಂದಿಗೆ ಖರೀದಿಗೆ ಲಭ್ಯವಾಗಿದೆ.

ಮ್ಯಾಗ್ನೈಟ್ ಫೇಸ್‌ಲಿಫ್ಟ್ ನಲ್ಲಿ ಪ್ರಮುಖವಾಗಿ ಹೊರ ಮತ್ತು ಒಳವಿನ್ಯಾಸವು ಪ್ರಮುಖ ಆಕರ್ಷಣೆಯಾಗಿದ್ದು, ಎಂಜಿನ್ ಆಯ್ಕೆಯಲ್ಲಿ ಯಾವುದೇ ಬದಲಾವಣೆ ಮಾಡದೆ ಈ ಹಿಂದೆನಂತೆಯೇ ಮುಂದುವರಿಸಲಾಗಿದೆ. ಹೊಸ ಕಾರಿನ ಮುಂಭಾಗದಲ್ಲಿ ದೊಡ್ಡ ಗಾತ್ರದಲ್ಲಿರುವ ಆಕರ್ಷಕವಾದ ಗ್ರೀಲ್ ಜೊತೆ ಗ್ಲಾಸ್ ಬ್ಲ್ಯಾಕ್ ಒಳಗೊಂಡಿರುವ ಕ್ರೋಮ್ ನೀಡಲಾಗಿದೆ. ಹಾಗೆಯೇ ಎಲ್ ಇಡಿ ಹೆಡ್ ಲ್ಯಾಂಪ್ಸ್, ಎಲ್ಇಡಿ ಟೈಲ್ ಲ್ಯಾಂಪ್ಸ್, ಎಲ್ ಆಕಾರದ ಎಲ್ಇಡಿ ಡೇ ಟೈಮ್ ರನ್ನಿಂಗ್ ಲೈಟ್ಸ್ ಮತ್ತು ಫ್ಲಕ್ಸ್ ಸ್ಕೀಡ್ ಪ್ಲೇಟ್ ನೊಂದಿಗೆ ಸಂಯೋಜನೆಗೊಂಡಿರುವ ಫಾಗ್ ಲೈಟ್ಸ್ ನೀಡಲಾಗಿದೆ.

ಇದನ್ನೂ ಓದಿ: ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಟಾಪ್ 5 ಕಾರುಗಳಿವು!

ಹಾಗೆಯೇ ಹೊಸ ಕಾರಿನಲ್ಲಿ ಈ ಹಿಂದಿನಂತಯೇ 16 ಇಂಚಿನ ಅಲಾಯ್ ವ್ಹೀಲ್ಸ್, ಹಿಂಬದಿಯಲ್ಲಿ ಹೊಸ ವಿನ್ಯಾಸದ ಟೈಲ್ ಲ್ಯಾಂಪ್ಸ್ ಜೊತೆಗೆ ಎಲ್ಇಡಿ ಸಿಗ್ನೆಚರ್ಸ್ ನೀಡಲಾಗಿದ್ದು, ಹೊಸ ಕಾರಿನ ಒಳಭಾಗವು ಈ ಬಾರಿ ಸಾಕಷ್ಟು ಪ್ರೀಮಿಯಂ ಆಗಿ ಸಿದ್ದಗೊಂಡಿದೆ. ಹೊಸ ಕಾರಿನಲ್ಲಿ ಆಲ್ ಬ್ಲ್ಯಾಕ್ ಥೀಮ್ ನೊಂದಿಗೆ ಬ್ಲ್ಯಾಕ್ ಅಂಡ್ ಕಾಪರ್ ಡ್ಯುಯಲ್ ಟೋನ್ ಡ್ಯಾಶ್ ಬೋರ್ಡ್, ಡ್ಯುಯಲ್ ಟೋನ್ ಆಸನಗಳು, 8 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್ ಮೆಂಟ್ ಸಿಸ್ಟಂ, 7 ಇಂಚಿನ ಡಿಜಿಟಲ್ ಇನ್ ಸ್ಟ್ರುಮೆಂಟ್ ಕ್ಲಸ್ಟರ್, ವೈರ್ ಲೆಸ್ ಚಾರ್ಜರ್, ಆಟೋ ಕ್ಲೈಮೆಟ್ ಕಂಟ್ರೋಲ್, ಆಟೋ ಡಿಮ್ನಿಂಗ್ ರಿಯಲ್ ವ್ಯೂ ಮಿರರ್, ನಾಲ್ಕು ವಿವಿಧ ಬಣ್ಣಗಳ ಆ್ಯಂಬಿಯೆಂಟ್ ಲೈಟಿಂಗ್ಸ್, ಕೀ ಫಾಗ್ ಮತ್ತು ರಿಮೋಟ್ ಸ್ಟಾರ್ಟ್ ನೀಡಲಾಗಿದೆ.

ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ಗಳೊಂದಿಗೆ 360 ಡಿಗ್ರಿ ಕ್ಯಾಮೆರಾ, 6 ಏರ್ ಬ್ಯಾಗ್ ಗಳು, ಇಎಸ್ ಸಿ, ತ್ರಿ ಪಾಯಿಂಟ್ ಸೀಟ್ ಬೆಲ್ಟ್ಸ್, ಸೀಟ್ ಬೆಲ್ಟ್ ರಿಮೆಂಡರ್, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್, ಫ್ರಂಟ್ ಅಂಡ್ ರಿಯರ್ ಪಾರ್ಕಿಂಗ್ ಸೆನ್ಸಾರ್‌ಗಳನ್ನು ಪಡೆದುಕೊಂಡಿದೆ.

ಇದನ್ನೂ ಓದಿ: ಬಜೆಟ್ ಬೆಲೆಗೆ ಭರ್ಜರಿ ಮೈಲೇಜ್ ನೀಡುವ ಟಾಪ್ 5 ಸಿಎನ್‌ಜಿ ಕಾರುಗಳಿವು!

ಇನ್ನು ಹೊಸ ಕಾರಿನಲ್ಲಿ ಆ ಹಿಂದಿನಂತೆಯೇ 1.0 ಲೀಟರ್ ನ್ಯಾಚುರಲಿ ಆಸ್ಪಿರೆಟೆಡ್ ಪೆಟ್ರೋಲ್ ಎಂಜಿನ್ ಮತ್ತು 1.0 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಇವು 5-ಸ್ಪೀಡ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಆಯ್ಕೆಗಳೊಂದಿಗೆ ಪ್ರತಿ ಲೀಟರ್ ಪೆಟ್ರೋಲ್ ಗೆ 17.4 ರಿಂದ 20 ಕಿ.ಮೀ ಇಂಧನ ದಕ್ಷತೆ ಖಾತ್ರಿಪಡಿಸುತ್ತವೆ. ಈ ಮೂಲಕ ಮ್ಯಾಗ್ನೈಟ್ ಫೇಸ್‌ಲಿಫ್ಟ್ ಮಾದರಿಯು ರೆನಾಲ್ಟ್ ಕೈಗರ್, ಟಾಟಾ ಪಂಚ್, ಹ್ಯುಂಡೈ ಎಕ್ಸ್ಟರ್, ಮಾರುತಿ ಫ್ರಾಂಕ್ಸ್ ಸೇರಿದಂತೆ ಪ್ರಮುಖ ಮೈಕ್ರೊ ಎಸ್ ಯುವಿ ಕಾರುಗಳಿಗೆ ಪ್ರಬಲ ಪೈಪೋಟಿಯಾಗಲಿದೆ.

Published On - 10:02 pm, Fri, 4 October 24