AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀಮಿಯಂ ಫೀಚರ್ಸ್ ಗಳೊಂದಿಗೆ ಬಿಡುಗಡೆಯಾಗುವ ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ ಟೀಸರ್ ರೀಲಿಸ್

Nissan Magnite Facelift: ನಿಸ್ಸಾನ್ ಇಂಡಿಯಾ ಕಂಪನಿ ತನ್ನ ಹೊಸ ಮ್ಯಾಗ್ನೈಟ್ ಹ್ಯಾಚ್ ಬ್ಯಾಕ್ ಮಾದರಿಯ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಕಾರು ಈ ಬಾರಿ ಹಲವಾರು ಫೀಚರ್ಸ್ ಗಳೊಂದಿಗೆ ಮಾರುಕಟ್ಟೆಗೆ ಪ್ರವೇಶಿಸುತ್ತಿದೆ.

ಪ್ರೀಮಿಯಂ ಫೀಚರ್ಸ್ ಗಳೊಂದಿಗೆ ಬಿಡುಗಡೆಯಾಗುವ ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್ ಟೀಸರ್ ರೀಲಿಸ್
ನಿಸ್ಸಾನ್ ಮ್ಯಾಗ್ನೈಟ್ ಫೇಸ್‌ಲಿಫ್ಟ್
Praveen Sannamani
Praveen Sannamani|

Updated on: Sep 27, 2024 | 10:36 PM

Share

ನಿಸ್ಸಾನ್ ಇಂಡಿಯಾ (Nissan India) ಕಂಪನಿಯು ಅಕ್ಟೋಬರ್ 4ರಂದು ತನ್ನ ಬಹುನೀರಿಕ್ಷಿತ ಮ್ಯಾಗ್ನೈಟ್ ಫೇಸ್‌ಲಿಫ್ಟ್ ಬಿಡುಗಡೆ ಮಾಡುತ್ತಿದ್ದು, ಇದೀಗ ಹೊಸ ಕಾರಿನ ಫೀಚರ್ಸ್ ಗಳ ಕುರಿತಾದ ಟೀಸರ್ ಚಿತ್ರಗಳನ್ನು ಹಂಚಿಕೊಂಡಿದೆ. ಹೊಸ ಕಾರಿನಲ್ಲಿ ಈ ಬಾರಿ ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ಗಳನ್ನು ನೀಡಲಾಗಿದ್ದು, ಇದು ಮಾರುತಿ ಸುಜುಕಿ ಪ್ರಮುಖ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಮ್ಯಾಗ್ನೈಟ್ ಫೇಸ್‌ಲಿಫ್ಟ್‌ ಮಾದರಿಯಲ್ಲಿ ನವೀಕರಿಸಿದ ಹೊರಭಾಗದ ವಿನ್ಯಾಸದೊಂದಿಗೆ ಎಲ್ ಆಕಾರದ ಎಲ್ಇಡಿ ಡೇ ಟೈಮ್ ರನ್ನಿಂಗ್ ಲೈಟ್ಸ್, ಸ್ಪೋರ್ಟಿಯಾಗಿರುವ ಫ್ರಂಟ್ ಅಂಡ್ ರಿಯರ್ ಬಂಪರ್, 16 ಇಂಚಿನ ಅಲಾಯ್ ವ್ಹೀಲ್, ಪರಿಷ್ಕರಿಸಿದ ಹೆಡ್‌ಲ್ಯಾಂಪ್ ಕ್ಲಸ್ಟರ್ಸ್ ಮತ್ತು ಹೊಸ ವಿನ್ಯಾಸದ ಗ್ರೀಲ್ ನೀಡಲಾಗುತ್ತಿದೆ. ಹಾಗೆಯೇ ಹೊಸ ಕಾರಿನ ಒಳಭಾಗದಲ್ಲೂ ಸಾಕಷ್ಟು ಬದಲಾವಣೆಗಳನ್ನು ತರಲಾಗಿದ್ದು, ನವೀಕರಿಸಲಾದ ಕ್ಯಾಬಿನ್ ಮತ್ತು ಸಿಂಗಲ್ ಪೇನ್ ಸನ್ ರೂಫ್ ನೀರಿಕ್ಷೆ ಮಾಡಬಹುದಾಗಿದೆ.

ಇನ್ನು ಹೊಸ ಕಾರಿನಲ್ಲಿ ಎಂಜಿನ್ ಆಯ್ಕೆ ಬದಲಾವಣೆ ಕುರಿತಾಗಿ ಯಾವುದೇ ಮಾಹಿತಿ ಇಲ್ಲವಾದರೂ ಈ ಹಿಂದಿನಂತೆಯೇ ಮುಂದುವರಿಸಬಹುದಾಗಿದ್ದು, 1.0 ಲೀಟರ್ ಎನ್ಎ ಪೆಟ್ರೋಲ್ ಮತ್ತು 1.0 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಬಹುದಾಗಿದೆ. ಇವು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿದ್ದು, ಪರ್ಫಾಮೆನ್ಸ್ ನಲ್ಲೂ ಗಮನಸೆಳೆಯಲಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ನಿಸ್ಸಾನ್ ಮ್ಯಾಗ್ನೈಟ್ ಕಾರು ಕಡಿಮೆ ಬೆಲೆಯೊಂದಿಗೆ ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳೊಂದಿಗೆ ಪ್ರತಿಸ್ಪರ್ಧಿ ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುತ್ತಿದೆ. ಎಂಟ್ರಿ ಲೆವಲ್ ಕಾರುಗಳಲ್ಲಿಯೇ ಅತಿ ಹೆಚ್ಚು ಫೀಚರ್ಸ್ ಹೊಂದಿರುವ ಮ್ಯಾಗ್ನೈಟ್ ಕಾರು ಇತ್ತೀಚೆಗೆ ಬರೋಬ್ಬರಿ 1 ಲಕ್ಷ ಯುನಿಟ್ ಮಾರಾಟ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

ಮ್ಯಾಗ್ನೈಟ್ ಮೈಕ್ರೊ ಎಸ್ ಯುವಿ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿ ಎಕ್ಸ್ಇ, ಎಕ್ಸ್ಎಲ್, ಎಕ್ಸ್ ವಿ ಮತ್ತು ಎಕ್ಸ್ ವಿ ಪ್ರೀಮಿಯಂ ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಇವು ತಾಂತ್ರಿಕ ಸೌಲಭ್ಯಗಳು ಮತ್ತು ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಎಕ್ಸ್ ಶೋರೂಂ ಪ್ರಕಾರ ರೂ. 6 ಲಕ್ಷದಿಂದ ರೂ. 11.11 ಲಕ್ಷ ಬೆಲೆ ಹೊಂದಿದೆ. ಇದೀಗ ಹೆಚ್ಚಿನ ಮಟ್ಟದ ಫೀಚರ್ಸ್ ಗಳೊಂದಿಗೆ ನವೀಕೃತ ಆವೃತ್ತಿಯಲ್ಲಿ ಬಿಡುಗಡೆಗಾಗಿ ಸಜ್ಜಾಗುತ್ತಿದ್ದು, ಬೆಲೆಯಲ್ಲೂ ತುಸು ದುಬಾರಿಯಾಗಿರಲಿದೆ.

Follow Us
Praveen Sannamani
Praveen Sannamani

Praveen Sannamani is a enthusiast and passionate Journalist in Kannada Language. Automobile and Current affairs are the interested areas

ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಇಂದು ಮಹಾಲಯ ಅಮವಾಸ್ಯೆ; ನಿಮ್ಮ ಪೂರ್ವಜರನ್ನು ಸ್ಮರಿಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ