ಆಟೋಮ್ಯಾಟಿಕ್ ಪ್ರಿಯರಿಗೆ ನಿಸ್ಸಾನ್ ಮ್ಯಾಗ್ನೈಟ್ ಗೆಜಾ ಸಿವಿಟಿ ಸ್ಪೆಷಲ್ ಎಡಿಷನ್ ಬಿಡುಗಡೆ

ನಿಸ್ಸಾನ್ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಮ್ಯಾಗ್ನೈಟ್ ಮೈಕ್ರೊ ಎಸ್ ಯುವಿ ಕಾರಿನ ಗೆಜಾ ಎಡಿಷನ್ ನಲ್ಲಿ ಆಟೋಮ್ಯಾಟಿಕ್ ಆವೃತ್ತಿಯನ್ನು ಬಿಡುಗಡೆ ಮಾಡಿದೆ.

ಆಟೋಮ್ಯಾಟಿಕ್ ಪ್ರಿಯರಿಗೆ ನಿಸ್ಸಾನ್ ಮ್ಯಾಗ್ನೈಟ್ ಗೆಜಾ ಸಿವಿಟಿ ಸ್ಪೆಷಲ್ ಎಡಿಷನ್ ಬಿಡುಗಡೆ
ನಿಸ್ಸಾನ್ ಮ್ಯಾಗ್ನೈಟ್
Follow us
Praveen Sannamani
|

Updated on:May 23, 2024 | 6:35 PM

ಸಣ್ಣ ಕಾರುಗಳಲ್ಲಿ ಆಕರ್ಷಕ ಫೀಚರ್ಸ್ ಮೂಲಕ ಗ್ರಾಹಕರನ್ನು ಸೆಳೆಯುತ್ತಿರುವ ನಿಸ್ಸಾನ್ (Nissan) ಕಂಪನಿಯು ಮ್ಯಾಗ್ನೈಟ್ (Magnite) ಕಾರಿನ ಗೆಜಾ ಎಡಿಷನ್ ನಲ್ಲಿ ಹೊಸದಾಗಿ ಆಟೋಮ್ಯಾಟಿಕ್ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಹೊಸ ಆಟೋಮ್ಯಾಟಿಕ್ ಆವೃತ್ತಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 9.84 ಲಕ್ಷ ಬೆಲೆ ಹೊಂದಿದ್ದು, ಇದು 1.0 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ನಲ್ಲಿ ಮಾತ್ರ ಖರೀದಿಗೆ ಲಭ್ಯವಿರಲಿದೆ.

ಮ್ಯಾಗ್ನೈಟ್ ಕಾರಿನಲ್ಲಿ ಸದ್ಯ ನಿಸ್ಸಾನ್ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಸ್ಟ್ಯಾಂಡರ್ಡ್, ಟರ್ಬೊ ವೆರಿಯೆಂಟ್ ಗಳ ಜೊತೆಗೆ ಕುರೊ, ಗೆಜಾ ಸ್ಪೆಷಲ್ ಎಡಿಷನ್ ಗಳನ್ನು ಮಾರಾಟ ಮಾಡುತ್ತಿದ್ದು, ಗೆಜಾ ಎಡಿಷನ್ ನಲ್ಲಿ ಕೆಲ ತಿಂಗಳ ಹಿಂದಷ್ಟೆ ಮ್ಯಾನುವಲ್ ಆವೃತ್ತಿಯನ್ನು ಮಾತ್ರ ಮಾರಾಟ ಮಾಡಿತ್ತು. ಇದೀಗ ಆಟೋಮ್ಯಾಟಿಕ್ ಆವೃತ್ತಿಯನ್ನು ಪರಿಚಯಿಸಿದ್ದು, ಇದು ನಗರಪ್ರದೇಶಗಳಲ್ಲಿನ ಗ್ರಾಹಕರ ಆಯ್ಕೆಯನ್ನು ಹೆಚ್ಚಿಸಲಿದೆ.

ಇನ್ನು ಪ್ರಸ್ತುತ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ನಿಸ್ಸಾನ್ ಮ್ಯಾಗ್ನೈಟ್ ಕಾರು ಕಡಿಮೆ ಬೆಲೆಯೊಂದಿಗೆ ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳೊಂದಿಗೆ ಪ್ರತಿಸ್ಪರ್ಧಿ ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುತ್ತಿದೆ. ಎಂಟ್ರಿ ಲೆವಲ್ ಕಾರುಗಳಲ್ಲಿಯೇ ಅತಿ ಹೆಚ್ಚು ಫೀಚರ್ಸ್ ಹೊಂದಿರುವ ಮ್ಯಾಗ್ನೈಟ್ ಕಾರು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಬರೋಬ್ಬರಿ 1 ಲಕ್ಷ ಯುನಿಟ್ ಮಾರಾಟ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

ಇದನ್ನೂ ಓದಿ: ಶೀಘ್ರದಲ್ಲಿಯೇ ಬಿಡುಗಡೆಗೆ ಸಿದ್ದವಾಗಿರುವ ಟಾಟಾ ಮೋಟಾರ್ಸ್ 3 ಹೊಸ ಕಾರುಗಳಿವು!

ಮ್ಯಾಗ್ನೈಟ್ ಮೈಕ್ರೊ ಎಸ್ ಯುವಿ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿ ಎಕ್ಸ್ಇ, ಎಕ್ಸ್ಎಲ್, ಎಕ್ಸ್ ವಿ ಮತ್ತು ಎಕ್ಸ್ ವಿ ಪ್ರೀಮಿಯಂ ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಇವು ತಾಂತ್ರಿಕ ಸೌಲಭ್ಯಗಳು ಮತ್ತು ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಎಕ್ಸ್ ಶೋರೂಂ ಪ್ರಕಾರ ರೂ. 6 ಲಕ್ಷದಿಂದ ರೂ. 11.11 ಲಕ್ಷ ಬೆಲೆ ಹೊಂದಿದೆ. ಇದು ಎಲ್ಲಾ ವೆರಿಯೆಂಟ್ ಗಳಲ್ಲೂ ಇದೀಗ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಆವೃತ್ತಿಗಳೊಂದಿಗೆ ಮಾರಾಟವಾಗುತ್ತಿದ್ದು, ಹಲವಾರು ಫೀಚರ್ಸ್ ಗಳೊಂದಿಗೆ ಅತ್ಯುತ್ತಮ ವಿನ್ಯಾಸ ಹೊಂದಿದೆ.

ಇದನ್ನೂ ಓದಿ: ಎಡಿಎಎಸ್ ಸೌಲಭ್ಯ ಹೊಂದಿರುವ ಭಾರತದ ಬಜೆಟ್ ಕಾರುಗಳಿವು!

ಶೀಘ್ರದಲ್ಲಿಯೇ ನಿಸ್ಸಾನ್ ಕಂಪನಿಯು ಮ್ಯಾಗ್ನೈಟ್ ಕಾರಿನಲ್ಲಿ ಫೇಸ್ ಲಿಫ್ಟ್ ಆವೃತ್ತಿಯನ್ನು ಸಹ ಬಿಡುಗಡೆ ಮಾಡಲು ಸಜ್ಜಾಗುತ್ತಿದ್ದು, ಫೇಸ್ ಲಿಫ್ಟ್ ಮಾದರಿಯನ್ನು ಪ್ರಸ್ತುತ ಮಾರುಕಟ್ಟೆಯಲ್ಲಿನ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಗಳೊಂದಿಗೆ ಬಿಡುಗಡೆಗಾಗಿ ಸಜ್ಜಾಗುತ್ತಿದೆ. ಇದು ಮುಂದಿನ ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಬಿಡುಗಡೆಯಾಗಲಿದ್ದು, ಬೆಲೆಯಲ್ಲೂ ತುಸು ದುಬಾರಿಯಾಗಿರಲಿದೆ.

Published On - 6:29 pm, Thu, 23 May 24

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ