AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಸ್ಸಾನ್ ಐಷಾರಾಮಿ ಎಸ್ ಯುವಿ ಎಕ್ಸ್-ಟ್ರಯಲ್ ಬಿಡುಗಡೆ- ಬೆಲೆ ರೂ. 49.92 ಲಕ್ಷ!

ನಿಸ್ಸಾನ್ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಎಕ್ಸ್-ಟ್ರಯಲ್ ಎಸ್ ಯುವಿಯನ್ನು ಬಿಡುಗಡೆ ಮಾಡಿದೆ.

ನಿಸ್ಸಾನ್ ಐಷಾರಾಮಿ ಎಸ್ ಯುವಿ ಎಕ್ಸ್-ಟ್ರಯಲ್ ಬಿಡುಗಡೆ- ಬೆಲೆ ರೂ. 49.92 ಲಕ್ಷ!
ನಿಸ್ಸಾನ್ ಎಕ್ಸ್-ಟ್ರಯಲ್
Praveen Sannamani
Praveen Sannamani|

Updated on:Aug 01, 2024 | 6:16 PM

Share

ಭಾರತದಲ್ಲಿ ಹೊಸ ಕಾರುಗಳ ಮೂಲಕ ಗಮನಸೆಳೆಯುತ್ತಿರುವ ನಿಸ್ಸಾನ್ (Nissan) ಕಂಪನಿಯು ತನ್ನ ಹೊಸ ಎಕ್ಸ್-ಟ್ರಯಲ್ ಎಸ್ ಯುವಿ ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ಎಕ್ಸ್ ಶೋರೂಂ ಪ್ರಕಾರ ರೂ. 49.92 ಲಕ್ಷ ಬೆಲೆ ಹೊಂದಿದೆ. ಹೊಸ ಎಕ್ಸ್-ಟ್ರಯಲ್ ಕಾರು ಮಾದರಿಯು ಒಂದೇ ವೆರಿಯೆಂಟ್ ನಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಕಾರು ಆರಂಭಿಕ ಐಷಾರಾಮಿ ಕಾರು ಮಾದರಿಯಾಗಿ ಮಾರಾಟಗೊಳ್ಳಲಿದೆ.

ಅತ್ಯಾಧುನಿಕ ತಂತ್ರಜ್ಞಾನ ಮತ್ತು ಆಕರ್ಷಕ ವಿನ್ಯಾಸ ಹೊಂದಿರುವ ಎಕ್ಸ್-ಟ್ರಯಲ್ ಕಾರು ನಾಲ್ಕನೇ ತಲೆಮಾರಿನ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ಇದು ಈಗಾಗಲೇ 150ಕ್ಕೂ ಹೆಚ್ಚು ಮಾರುಕಟ್ಟೆಗಳಲ್ಲಿ ಖರೀದಿಗೆ ಲಭ್ಯವಿದೆ. 2023ನೇ ವರ್ಷದಲ್ಲಿ ಜಾಗತಿಕವಾಗಿ ಮಾರಾಟವಾಗಿರುವ ಟಾಪ್ 5 ಎಸ್‌ಯುವಿಗಳಲ್ಲಿ ಇದೂ ಕೂಡಾ ಒಂದಾಗಿದ್ದು, ಇದೀಗ ನಿಸ್ಸಾನ್ ಕಂಪನಿ ತನ್ನ ಜಾಗತಿಕ ಉತ್ಪನ್ನಗಳನ್ನು ಮತ್ತು ತಂತ್ರಜ್ಞಾನವನ್ನು ಭಾರತದಲ್ಲೂ ಪರಿಚಯಿಸುವ ಉದ್ದೇಶದೊಂದಿಗೆ ಎಕ್ಸ್ ಟ್ರಯಲ್ ಬಿಡುಗಡೆ ಮಾಡಿದೆ.

Nissan X Trail

ಎಕ್ಸ್-ಟ್ರಯಲ್ ಕಾರನ್ನು ಭಾರತದಲ್ಲಿ ಸದ್ಯಕ್ಕೆ ಸಂಪೂರ್ಣವಾಗಿ ಆಮದು (ಸಿಬಿಯು) ಮಾಡಲಾದ ಮಾದರಿಯಾಗಿ ಮಾರಾಟಗೊಳ್ಳಲಿದ್ದು, ಇದು ವಾರ್ಷಿಕವಾಗಿ ಸೀಮಿತ ಸಂಖ್ಯೆಯಲ್ಲಿ ಮಾತ್ರ ಖರೀದಿಗೆ ಲಭ್ಯವಿರುತ್ತದೆ. ಸಿಬಿಯು ಆಮದು ನೀತಿ ಅಡಿಯಲ್ಲಿ ಸದ್ಯ ಭಾರತದಲ್ಲಿರುವ ವಿದೇಶಿ ಕಾರು ಉತ್ಪಾದನಾ ಕಂಪನಿಗಳು ಯಾವುದೇ ಹೆಚ್ಚುವರಿ ತೆರಿಗೆಗಳಲ್ಲಿದೆ ವಾರ್ಷಿಕವಾಗಿ 2500 ಕಾರುಗಳನ್ನು ಆಮದು ಮಾಡಿಕೊಳ್ಳುವ ಅವಕಾಶ ನೀಡಲಾಗಿದೆ. ಹೀಗಾಗಿ ನಿಸ್ಸಾನ್ ಕಂಪನಿಯು ಎಕ್ಸ್-ಟ್ರಯಲ್ ಮಾದರಿಯನ್ನು ಸೀಮಿತ ಸಂಖ್ಯೆಯಲ್ಲಿ ಮಾತ್ರ ಮಾರಾಟ ಮಾಡಲಿದ್ದು, ರೂ. 1 ಲಕ್ಷ ಮುಂಗಡದೊಂದಿಗೆ ಬುಕಿಂಗ್ ಮಾಡಬಹುದಾಗಿದೆ.

ಇದನ್ನೂ ಓದಿ: ಭಾರತದಲ್ಲಿ ಹೊಸ ಟ್ರೆಂಡ್ ಸೃಷ್ಠಿಸಲಿದೆ ಎಂಜಿ ಕ್ಲೌಡ್ ಎಲೆಕ್ಟ್ರಿಕ್ ಎಂಪಿವಿ

ಎಕ್ಸ್-ಟ್ರಯಲ್ ಕಾರು ವಿಶ್ವದ ಮೊಟ್ಟ ಮೊದಲ ಪ್ರೊಡಕ್ಷನ್ ವೇರಿಯೇಬಲ್ ಕಂಪ್ರೆಷನ್ ಟರ್ಬೊ ಎಂಜಿನ್‌ ಅನ್ನು ಹೊಂದಿದ್ದು, ಇದರ ಅತ್ಯಾಧುನಿಕ ಡಿಎನ್ಎ ಪ್ರೇರಿತ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನವನ್ನು ಪಡೆದುಕೊಂಡಿದೆ. ಇದರೊಂದಿಗೆ ಟಾರ್ಕ್ ಅಸಿಸ್ಟ್, ಹೆಚ್ಚುವರಿ ಐಡಲ್-ಸ್ಟಾಪ್, ಕ್ವಿಕ್ ರೀಸ್ಟಾರ್ಟ್ ಮತ್ತು ಸುಧಾರಿತ ಇಂಧನ ದಕ್ಷತೆ ಇತ್ಯಾದಿ ಸೌಕರ್ಯಗಳು ದೊರೆಯಲಿವೆ.

ಹೊಸ ಕಾರಿನಲ್ಲಿರುವ 1.5 ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 12ವಿ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನದೊಂದಿಗೆ ಪ್ಯಾಡಲ್ ಶಿಫ್ಟರ್ ಜೊತೆಗೆ ಶಿಫ್ಟ್ ಬೈ ವೈರ್ ಪ್ರೇರಿತ 8-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಗಳ ಆಯ್ಕೆ ಹೊಂದಿದೆ. ಇದು ಗರಿಷ್ಠ 163 ಹಾರ್ಸ್ ಪವರ್ ಮತ್ತು 300 ಎನ್ಎಂ ಟಾರ್ಕ್ ಉತ್ಪಾದನಾ ಶಕ್ತಿ ಹೊಂದಿದೆ. ಇದರೊಂದಿಗೆ ಹೊಸ ಕಾರು ಟು ವ್ಹೀಲ್ ಡ್ರೈವ್ ತಂತ್ರಜ್ಞಾನ ಆಯ್ಕೆಯೊಂದಿಗೆ ಐಶಾರಾಮಿ ಕಾರು ಚಾಲನಾ ಅನುಭವ ನೀಡಲಿದೆ. ಇದು 7 ಸೀಟರ್ ಆಯ್ಕೆಗಳೊಂದಿಗೆ ಹಲವಾರು ಹೊಸ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರಲಿದ್ದು, ಹೊಸ ಕಾರಿನ ಒಳ ಮತ್ತು ಹೊರ ವಿನ್ಯಾಸಗಳು ಗಮನಸೆಳೆಯುತ್ತಿವೆ.

Nissan X-Trail (4)

ಜೊತೆಗೆ ಹೊಸ ನಿಸ್ಸಾನ್ ಎಕ್ಸ್-ಟ್ರಯಲ್ ಕಾರು ತನ್ನ ಬಲಿಷ್ಠ ವಿನ್ಯಾಸದೊಂದಿಗೆ ಡ್ಯುಯಲ್ ಪೇನ್ ಸನ್ ರೂಫ್, ಡ್ಯುಯಲ್ ಜೋನ್ ಕ್ಲೈಮೆಟ್ ಕಂಟ್ರೋಲ್, 12.3 ಇಂಚಿನ ಡಿಜಿಟಲ್ ಡ್ರೈವರ್ ಡಿಸ್ ಪ್ಲೇ, 8 ಇಂಚಿನ ಇನ್ಪೋಟೈನ್ ಮೆಂಟ್ ಸಿಸ್ಟಂ, 15 ವೊಲ್ಟ್ ಸಾಮಾರ್ಥ್ಯದ ವೈರ್ ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್ ಪಾಡ್, ಕೀ ಲೆಸ್ ಎಂಟ್ರಿ ಫುಶ್ ಬಟನ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಕ್ರೂಸ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, 7 ಏರ್ ಬ್ಯಾಗ್ ಗಳು, ಎಬಿಡಿ ಜೊತೆಗೆ ಎಬಿಎಸ್, ಫ್ರಂಟ್ ಅಂಡ್ ರೇರ್ ಪಾರ್ಕಿಂಗ್ ಸೆನ್ಸಾರ್ ಗಳು, ಆಲ್ ವ್ಹೀಲ್ ಡಿಸ್ಕ್ ಬ್ರೇಕ್ ಗಳು, ಆಟೋ ವೈಪ್ಸ್, ಟ್ರಾಕ್ಷನ್ ಕಂಟ್ರೋಲ್ ಸೇರಿದಂತೆ ಹಲವಾರು ಸುರಕ್ಷಾ ಸೌಲಭ್ಯಗಳಿವೆ.

ಇದನ್ನೂ ಓದಿ: ಆಕರ್ಷಕ ಬೆಲೆಯಲ್ಲಿರುವ ಪವರ್ ಫುಲ್ 7 ಸೀಟರ್ ಎಸ್‌ಯುವಿ ಕಾರುಗಳಿವು!

ಈ ಮೂಲಕ ಹೊಸ ಕಾರು ಸ್ಕೋಡಾ ಕೊಡಿಯಾಕ್, ಎಂಜಿ ಗೊಸ್ಟರ್ ಮತ್ತು ದುಬಾರಿ ಬೆಲೆಯ ಟೊಯೊಟಾ ಫಾರ್ಚೂನರ್ ಕಾರಿಗೆ ಇದು ಉತ್ತಮ ಪೈಪೋಟಿ ನೀಡಲಿದ್ದು, ಹೊಸ ತಂತ್ರಜ್ಞಾನದೊಂದಿಗೆ ಇದು ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಲಿದೆ.

Published On - 6:04 pm, Thu, 1 August 24

Follow Us
Praveen Sannamani
Praveen Sannamani

Praveen Sannamani is a enthusiast and passionate Journalist in Kannada Language. Automobile and Current affairs are the interested areas

ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ