ಓಲಾ ಎಲೆಕ್ಟ್ರಿಕ್ ಬೈಕ್ ಟೀಸರ್- ಸಖತ್ ಮೈಲೇಜ್ ನೀಡಲಿದೆ ಹೊಸ ಇವಿ ಬೈಕ್..

ಓಲಾ ಎಲೆಕ್ಟ್ರಿಕ್ ಕಂಪನಿಯು ಶೀಘ್ರದಲ್ಲಿಯೇ ತನ್ನ ಮೊದಲ ಎಲೆಕ್ಟ್ರಿಕ್ ಬೈಕ್ ಆವೃತ್ತಿಯನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, ಹೊಸ ಇವಿ ಬೈಕಿನ ಕುರಿತಾದ ಮೊದಲ ಟೀಸರ್ ವಿಡಿಯೋ ಹಂಚಿಕೊಂಡಿದೆ.

ಓಲಾ ಎಲೆಕ್ಟ್ರಿಕ್ ಬೈಕ್ ಟೀಸರ್- ಸಖತ್ ಮೈಲೇಜ್ ನೀಡಲಿದೆ ಹೊಸ ಇವಿ ಬೈಕ್..
ಓಲಾ ಎಲೆಕ್ಟ್ರಿಕ್ ಬೈಕ್
Follow us
Praveen Sannamani
|

Updated on: Jul 29, 2024 | 5:01 PM

ದೇಶದ ಅತಿದೊಡ್ಡ ಎಲೆಕ್ಟ್ರಿಕ್ ಸ್ಕೂಟರ್ (Electric Scooter) ಉತ್ಪಾದನಾ ಕಂಪನಿಯಾಗಿ ಗುರುತಿಸಿಕೊಂಡಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಇದೀಗ ತನ್ನ ಮೊದಲ ಇವಿ ಬೈಕ್ ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಇವಿ ಬೈಕ್ ಮಾದರಿಯೊಂದಿಗೆ ಭರ್ಜರಿಯಾಗಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಇದಕ್ಕಾಗಿ ಅಂತಿಮ ಹಂತದ ಸಿದ್ದತೆ ನಡೆಸುತ್ತಿದ್ದು, ಮುಂಬರುವ ದಸರಾ ಅಥವಾ ದೀಪಾವಳಿ ಹೊತ್ತಿಗೆ ಮಾರುಕಟ್ಟೆ ಪ್ರವೇಶಿಸುವ ಬಹುತೇಕ ಖಚಿತವಾಗಿದೆ.

ಹೊಸ ಕಮ್ಯೂಟ್ ಎಲೆಕ್ಟ್ರಿಕ್ ಬೈಕ್ ಕುರಿತಾಗಿ ಕಂಪನಿಯ ಸಿಇಓ ಭಾವೀಶ್ ಅಗರ್ವಾಲ್ ಟೀಸರ್ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಇದು ಹಲವಾರು ವಿಶೇಷತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ. ಹೊಸ ಇವಿ ಮಾದರಿಯನ್ನು ಕಂಪನಿಯು 150 ಸಿಸಿ ವಿಭಾಗದ ಬೈಕ್ ಮಾದರಿಗಳನ್ನು ಗುರಿಯಾಗಿಸಿ ಬಿಡುಗಡೆ ಮಾಡುತ್ತಿದ್ದು, ಇದು ಆಕರ್ಷಕ ಬೆಲೆ ಜೊತೆಗೆ ಮೈಲೇಜ್ ನಲ್ಲೂ ಗಮನಸೆಳೆಯಲಿದೆ.

ಹೊಸ ಇವಿ ಬೈಕಿನ ಟೀಸರ್ ಹೊರತಾಗಿ ಓಲಾ ಕಂಪನಿಯು ತಾಂತ್ರಿಕ ಅಂಶಗಳ ಮಾಹಿತಿಯನ್ನು ಬಿಟ್ಟುಕೊಟ್ಟಿವಾದರೂ ಪ್ರತಿಸ್ಪರ್ಧಿಗಳಿಂತಲೂ ವಿಶೇಷ ತಾಂತ್ರಿಕ ಅಂಶಗಳ ಜೋಡಣೆಯನ್ನು ಖಾತ್ರಿಪಡಿಸಿದೆ. ಹೊಸ ಇವಿ ಬೈಕ್ ಮಾದರಿಯು ಸ್ಪೋರ್ಟಿ ವಿನ್ಯಾಸದೊಂದಿಗೆ ಮುಂಭಾಗದಲ್ಲಿ ಟೆಲಿಸ್ಕೋಫಿಕ್ ಸಸ್ಷೆಂಷನ್ ಮತ್ತು ಹಿಂಬದಿಯಲ್ಲಿ ಮೊನೊ ಶಾಕ್ ಸಸ್ಷೆಂಷನ್ ನೀಡಲಾಗಿದೆ. ಹಾಗೆಯೇ ಹೊಸ ಬೈಕಿನಲ್ಲಿ ಡಿಜಿಟಲ್ ಇನ್ಸ್ಟುಮೆಂಟ್ ಕ್ಲಸ್ಟರ್, ಆಲ್ ಎಲ್ಇಡಿ ಲೈಟಿಂಗ್ಸ್ ಸೇರಿದಂತೆ ಹಲವಾರು ಫೀಚರ್ಸ್ ನೀಡಲಾಗಿದೆ.

ಇನ್ನು ಓಲಾ ಹೊಸ ಇವಿ ಬೈಕಿನಲ್ಲಿ ಎಸ್1 ಸರಣಿ ಸ್ಕೂಟರಿನಲ್ಲಿರುವಂತೆ 4 ಕೆವಿಹೆಚ್ ಅಥವಾ ಹೆಚ್ಚಿನ ಮೈಲೇಜ್ ಗಾಗಿ 6 ಕೆವಿಹೆಚ್ ಬ್ಯಾಟರಿ ಪ್ಯಾಕ್ ಗಳ ಆಯ್ಕೆ ನೀಡಬಹುದಾಗಿದ್ದು, ಇದು ಪ್ರತಿ ಚಾರ್ಜ್ ಗೆ 180 ಕಿ.ಮೀ ನಿಂದ ಟಾಪ್ ಎಂಡ್ ಮಾದರಿಯು 280 ಕಿ.ಮೀ ಮೈಲೇಜ್ ನೀಡಬಹುದಾಗಿದೆ. ಈ ಮೂಲಕ ಇದು ವಿವಿಧ ಗ್ರಾಹಕರಿಗಾಗಿ ಹಲವು ವೆರಿಯೆಂಟ್ ಗಳನ್ನು ಹೊಂದಿರಲಿದ್ದು, ಬೆಲೆಗೆ ಅನುಗುಣವಾಗಿ ಫೀಚರ್ಸ್ ಗಳು ಲಭ್ಯವಿರಲಿವೆ.

ಈ ಮೂಲಕ ಹೊಸ ಓಲಾ ಇವಿ ಬೈಕ್ ಮಾದರಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 1.60 ಲಕ್ಷದಿಂದ ರೂ. 2 ಲಕ್ಷ ಅಂತರದಲ್ಲಿ ಬಿಡುಗಡೆಯಾಗಬಹುದಾಗಿದ್ದು, ಇದು 150 ಸಿಸಿ ಮತ್ತು 160 ಸಿಸಿ ವಿಭಾಗದಲ್ಲಿನ ಬೈಕ್ ಖರೀದಿದಾರರನ್ನು ಸೆಳೆಯುವ ಯೋಜನೆಯಲ್ಲಿದೆ.

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ