ಭರ್ಜರಿ ಮೈಲೇಜ್ ನೀಡುವ ಇವಿ ಕಾರು ಬಿಡುಗಡೆ ಮಾಡಲಿದೆ ಓಲಾ ಎಲೆಕ್ಟ್ರಿಕ್

ಭರ್ಜರಿ ಮೈಲೇಜ್ ನೀಡುವ ಇವಿ ಕಾರು ಬಿಡುಗಡೆ ಮಾಡಲಿದೆ ಓಲಾ ಎಲೆಕ್ಟ್ರಿಕ್

Praveen Sannamani
|

Updated on: Oct 27, 2022 | 12:24 PM

ಓಲಾ ಎಲೆಕ್ಟ್ರಿಕ್ ಕಂಪನಿಯು ಇವಿ ಸ್ಕೂಟರ್ ಗಳ ಬಿಡುಗಡೆಯ ನಂತರ ಮತ್ತೊಂದು ಬೃಹತ್ ಯೋಜನೆಯತ್ತ ಗಮನಹರಿಸುತ್ತಿದೆ. ಇವಿ ದ್ವಿಚಕ್ರ ವಾಹನಗಳ ಜೊತೆಗೆ ಇವಿ ಕಾರು ಮಾರುಕಟ್ಟೆಗೂ ಲಗ್ಗೆಯಿಡುತ್ತಿದ್ದು, ಕಾರಿನ ಇಂಟಿರಿಯರ್ ಡಿಸೈನ್ ಮಾಹಿತಿ ಹಂಚಿಕೊಳ್ಳಲಾಗಿದೆ.

ಹೊಸ ಎಲೆಕ್ಟ್ರಿಕ್ ಕಾರು ಬಿಡುಗಡೆಯ ಕುರಿತಾಗಿ ಈಗಾಗಲೇ ಅಧಿಕೃತ ಮಾಹಿತಿ ಹಂಚಿಕೊಂಡಿರುವ ಓಲಾ ಎಲೆಕ್ಟ್ರಿಕ್ ಕಂಪನಿಯು ಇದೀಗ ಹೊಸ ಕಾರಿನ ಮತ್ತೊಂದು ಟೀಸರ್ ಚಿತ್ರವನ್ನು ಹಂಚಿಕೊಂಡಿದೆ. ಈ ಬಾರಿ ಹೊಸ ಕಾರಿನ ಹೆಡ್ ಲೈಟ್, ಡಿಆರ್ ಎಲ್ಎಸ್ ಮತ್ತು ಇಂಟಿರಿಯರ್ ಚಿತ್ರವನ್ನು ಹಂಚಿಕೊಂಡಿದ್ದು, ಹೊಸ ಕಾರನ್ನು 2024 ರ ವೇಳೆ ಬಿಡುಗಡೆ ಮಾಡುವ ಸುಳಿವು ನೀಡಿದೆ. ಹೊಸ ಕಾರಿನಲ್ಲಿರುವ ಬ್ಯಾಟರಿ ಪ್ಯಾಕ್ ಪ್ರತಿ ಚಾರ್ಜ್ ಗೆ 500 ಕಿ.ಮೀ ಗಿಂತಲೂ ಹೆಚ್ಚಿನ ಮೈಲೇಜ್ ನೀಡಲಿದ್ದು, ಗ್ರಾಹಕರ ಬೇಡಿಕೆಯೆಂತೆ ವಿವಿಧ ಬ್ಯಾಟರಿ ಆಯ್ಕೆಗಳನ್ನು ನೀಡಬಹುದಾಗಿದೆ.