ಸಬ್ಸಿಡಿ ಕಡಿತ: ಓಲಾ ಎಸ್1 ಮತ್ತು ಎಸ್ 1 ಪ್ರೊ ಇವಿ ಸ್ಕೂಟರ್ ಬೆಲೆಯಲ್ಲಿ ಭಾರೀ ಏರಿಕೆ

ದೇಶಾದ್ಯಂತ ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಸಬ್ಸಿಡಿ ನೀಡುತ್ತಿದ್ದ ಕೇಂದ್ರ ಸರ್ಕಾರವು ಇದೀಗ ಸಬ್ಸಿಡಿ ಪ್ರಮಾಣವನ್ನು ಇಳಿಕೆ ಮಾಡಿದೆ.

ಸಬ್ಸಿಡಿ ಕಡಿತ: ಓಲಾ ಎಸ್1 ಮತ್ತು ಎಸ್ 1 ಪ್ರೊ ಇವಿ ಸ್ಕೂಟರ್ ಬೆಲೆಯಲ್ಲಿ ಭಾರೀ ಏರಿಕೆ
ಓಲಾ ಎಸ್1 ಮತ್ತು ಎಸ್ 1 ಪ್ರೊ ಇವಿ ಸ್ಕೂಟರ್ ಬೆಲೆಯಲ್ಲಿ ಭಾರೀ ಏರಿಕೆ
Follow us
Praveen Sannamani
|

Updated on: Jun 01, 2023 | 2:08 PM

ಎಲೆಕ್ಟ್ರಿಕ್ ವಾಹನಗಳ(Electric Vehicles) ವೇಗದ ಅಳವಡಿಕೆಗೆ ಅನುಕೂಲಕರವಾಗುವ ನಿಟ್ಟಿನಲ್ಲಿ ಫೇಮ್ 2(FAME 2) ಯೋಜನೆ ಅಡಿ ಇವಿ ಸಬ್ಸಿಡಿ ಪರಿಚಯಿಸಿರುವ ಕೇಂದ್ರ ಸರ್ಕಾರವು ಇದೀಗ ಸಬ್ಸಿಡಿ ಪ್ರಮಾಣದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದ್ದು, ಸಬ್ಸಿಡಿ ಪ್ರಮಾಣವನ್ನು ವಿವಿಧ ಇವಿ ವಾಹನಗಳ ಆವೃತ್ತಿಗಳಿಗೆ ಅನುಗುಣವಾಗಿ ಪ್ರತಿ ಕಿಲೋವ್ಯಾಟ್‌ಗೆ ರೂ. 10 ಸಾವಿರದಿಂದ ರೂ. 15 ಸಾವಿರ ತನಕ ಇಳಿಕೆ ಮಾಡಿದೆ.

ಫೇಮ್ 2 ಯೋಜನೆಯಡಿಯಲ್ಲಿ ಈ ಹಿಂದೆ ಎಕ್ಸ್ ಶೋರೂಂ ಬೆಲೆಯ ಮೇಲೆ ಗರಿಷ್ಠ ಶೇ. 40ರಷ್ಟು ಸಬ್ಸಿಡಿ ನಿಗದಿಪಡಿಸಿದ್ದ ಕೇಂದ್ರ ಸರ್ಕಾರವು ಇದೀಗ ಶೇ. 15ಕ್ಕೆ ಇಳಿಕೆ ಮಾಡಿದ್ದು, ಕೇಂದ್ರ ಸರ್ಕಾರದ ಕಠಿಣ ನಿರ್ಧಾರದಿಂದ ಇವಿ ವಾಹನಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಲಿದೆ. ಮಾಹಿತಿಗಳ ಪ್ರಕಾರ ಜೂನ್ 1ರಿಂದ ಖರೀದಿ ಮಾಡಲಾಗುವ ಎಲ್ಲಾ ಇವಿ ವಾಹನಗಳ ಬೆಲೆಯಲ್ಲೂ ಏರಿಕೆಯಾಗಲಿದ್ದು, ಓಲಾ ಇವಿ ಸ್ಕೂಟರ್ ಗಳ ಬೆಲೆಯಲ್ಲೂ ರೂ. 15 ಸಾವಿರದಷ್ಟು ಹೆಚ್ಚಳವಾಗಿದೆ.

Ola s1 pro (1)

ಇದನ್ನೂ ಓದಿ: ಭರ್ಜರಿ ಮೈಲೇಜ್ ನೀಡುವ ಸಿಂಪಲ್ ಒನ್ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ

ಸಬ್ಸಿಡಿ ಕಡಿತದ ನಂತರ ಎಸ್1 ಇವಿ ಸ್ಕೂಟರ್ ಬೆಲೆಯು ರೂ.15 ಸಾವಿರ ಏರಿಕೆಯೊಂದಿಗೆ ಎಕ್ಸ್ ಶೋರೂಂ ಪ್ರಕಾರ ರೂ. 1.30 ಲಕ್ಷ ಬೆಲೆ ಹೊಂದಿದ್ದರೆ, ಎಸ್1 ಪ್ರೊ ಇವಿ ಸ್ಕೂಟರ್ ಮಾದರಿಯು ಸಹ ರೂ. 15 ಸಾವಿರ ಹೆಚ್ಚಳದೊಂದಿಗೆ ಎಕ್ಸ್ ಶೋರೂಂ ಪ್ರಕಾರ ರೂ. 1.40 ಲಕ್ಷ ಬೆಲೆ ನಿಗದಿಪಡಿಸಲಾಗಿದೆ.

ಇದಲ್ಲದೇ ಓಲಾ ಎಲೆಕ್ಟ್ರಿಕ್ ಕಂಪನಿಯು ಕಡಿಮೆ ಬೆಲೆಯಲ್ಲಿ ಇವಿ ಸ್ಕೂಟರ್ ಖರೀದಿದಾರರನ್ನು ಗಮನದಲ್ಲಿದ್ದಟ್ಟುಕೊಂಡು ಎಸ್1 ಏರ್ ಎನ್ನುವ ಮತ್ತೊಂದು ಬಜೆಟ್ ಇವಿ  ಆವೃತ್ತಿಯನ್ನು ಸಹ ಮಾರಾಟ ಮಾಡುತ್ತಿದ್ದು, ಇದೀಗ ಈ ಆವೃತ್ತಿಯ ಬೆಲೆಯಲ್ಲೂ ಸಹ ಏರಿಕೆ ಮಾಡಲಾಗಿದೆ. ಎಸ್1 ಏರ್ ಮೂರು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ಹೊಸ ದರ ಪಟ್ಟಿಯಲ್ಲಿ ಇದು ರೂ. 1 ಲಕ್ಷದಿಂದ ರೂ. 1.15 ಲಕ್ಷ ಬೆಲೆ ಪಡೆದುಕೊಂಡಿದೆ.

ಇದನ್ನೂ ಓದಿ: ನಿಮ್ಮ ಹಳೆಯ ವಾಹನ ಯಾವಾಗ ಮಾರಬೇಕು? ಮೂರ್ನಾಲ್ಕು ಅಂಶಗಳು ಗಮನದಲ್ಲಿರಲಿ..

ಇನ್ನು ಓಲಾ ಎಲೆಕ್ಟ್ರಿಕ್ ಕಂಪನಿಯು ಹೊಸ ಸ್ಕೂಟರ್ ಗಳ ಬೆಲೆ ಹೆಚ್ಚಳ ಹೊರಲಾಗಿ ತಾಂತ್ರಿಕ ಸೌಲಭ್ಯಗಳಲ್ಲಿ ಯಾವುದೇ ಬದಲಾವಣೆಗಳನ್ನ ಪರಿಚಯಿಸಿಲ್ಲ. ಎಸ್1 ಮಾದರಿಯು 3kWh ಬ್ಯಾಟರಿ ಪ್ಯಾಕ್ ನೊಂದಿಗೆ ಪ್ರತಿ ಚಾರ್ಜ್ ಗೆ 141 ಕಿ.ಮೀ ಮೈಲೇಜ್ ನೀಡಿದಲ್ಲಿ ಎಸ್1 ಪ್ರೊ ಮಾದರಿಯು 4kWh ಬ್ಯಾಟರಿ ಪ್ಯಾಕ್ ಜೋಡಣೆಯೊಂದಿಗೆ 181 ಕಿ.ಮೀ ಮೈಲೇಜ್ ನೀಡಲಿದೆ. ಇವುಗಳ ಜೊತೆಗೆ ಬಜೆಟ್ ಬೆಲೆಯ ಎಸ್1 ಏರ್ ಇವಿ ಸ್ಕೂಟರ್ ಮಾದರಿಯು ಕಡಿಮೆ ಫೀಚರ್ಸ್ ಗಳೊಂದಿಗೆ 3kWh ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿದ್ದು, ಇವು ಪ್ರತಿ ಚಾರ್ಜ್ ಗೆ ಗರಿಷ್ಠ 125 ಕಿ.ಮೀ ಮೈಲೇಜ್ ನೀಡುತ್ತವೆ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್