Ola S1 X: ಅತಿ ಕಡಿಮೆ ಬೆಲೆಗೆ ಓಲಾ ಎಸ್1 ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್‌ ಬಿಡುಗಡೆ

ಓಲಾ ಎಲೆಕ್ಟ್ರಿಕ್ ಕಂಪನಿಯು ಹೊಚ್ಚ ಹೊಸ ಎಸ್1 ಎಕ್ಸ್ ಎಲೆಕ್ಟ್ರಿಕ್ ಸ್ಕೂಟರ್‌ ಮಾದರಿಯನ್ನು ಬಿಡುಗಡೆ ಮಾಡಿದೆ.

Follow us
Praveen Sannamani
|

Updated on: Aug 15, 2023 | 10:09 PM

ಓಲಾ ಎಲೆಕ್ಟ್ರಿಕ್(Ola Electric) ಹೊಸ ಇವಿ ಸ್ಕೂಟರ್ ಆವೃತ್ತಿಯು ಎಸ್1 ಎಕ್ಸ್(S1 X)  ಮತ್ತು ಎಸ್1 ಎಕ್ಸ್ ಪ್ಲಸ್(S1 X  Plus) ಎನ್ನುವ ಎರಡು ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 79,999 ರಿಂದ ರೂ. 99,999 ಬೆಲೆ ನಿಗದಿ ಮಾಡಲಾಗಿದೆ. ಹೊಸ ಇವಿ ಸ್ಕೂಟರ್ ಬೆಲೆಗಳು ಅಗಸ್ಟ್ 21ರ ಒಳಗಾಗಿ ಬುಕಿಂಗ್ ದಾಖಲಿಸುವ ಗ್ರಾಹಕರಿಗೆ ಮಾತ್ರ ಅನ್ವಯವಾಗಲಿದ್ದು, ನಿಗದಿತ ಅವಧಿ ನಂತರ ಬುಕಿಂಗ್ ದಾಖಲಿಸುವ ಗ್ರಾಹಕರಿಗೆ ರೂ. 10 ಸಾವಿರದಷ್ಟು ದುಬಾರಿಯಾಗಿರಲಿದೆ.

ವೆರಿಯೆಂಟ್ ಗಳು ಮತ್ತು ಬ್ಯಾಟರಿ ಪ್ಯಾಕ್ ಹೊಸ ಎಸ್1 ಎಕ್ಸ್ ವೆರಿಯೆಂಟ್ ನಲ್ಲಿ ಓಲಾ ಎಲೆಕ್ಟ್ರಿಕ್ ಕಂಪನಿಯು ಎರಡು ರೀತಿಯ ಬ್ಯಾಟರಿ ಪ್ಯಾಕ್ ಆಯ್ಕೆ ನೀಡಿದ್ದು, ಇದರಲ್ಲಿ 2kWh ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿರುವ ಎಸ್1 ಎಕ್ಸ್ ವೆರಿಯೆಂಟ್ ರೂ. 79,999 ದರ ಹೊಂದಿದ್ದರೆ 3kWh ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿರುವ ಎಸ್1 ಎಕ್ಸ್ ವೆರಿಯೆಂಟ್ ರೂ. 89,999 ಬೆಲೆ ಹೊಂದಿದೆ.

ಇದನ್ನೂ ಓದಿ: ನಮ್ಮ ಬೆಂಗಳೂರಿಗೆ ಲಗ್ಗೆಯಿಟ್ಟ ಸೂಪರ್ ಫೀಚರ್ಸ್ ಪ್ರೇರಿತ ಟಾರ್ಕ್ ಮೋಟಾರ್ಸ್ ಕ್ರೇಟಸ್-ಆರ್ ಇವಿ ಬೈಕ್

ಹಾಗೆಯೇ ಎಸ್1 ಎಕ್ಸ್ ಪ್ಲಸ್ ವೆರಿಯೆಂಟ್ ನಲ್ಲಿ ಪ್ರೀಮಿಯಂ ಫೀಚರ್ಸ್ ಜೊತೆ 3kWh ಬ್ಯಾಟರಿ ಪ್ಯಾಕ್ ಜೋಡಣೆ ಮಾಡಲಾಗಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 99,999 ಬೆಲೆ ಹೊಂದಿದೆ. ಇದರಲ್ಲಿ ಸ್ಟ್ಯಾಂಡರ್ಡ್ ಆಗಿ 3kWh ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದ್ದು, ಪ್ರತಿ ಗಂಟೆಗೆ 90 ಕಿ.ಮೀ ಟಾಪ್ ಸ್ಪೀಡ್ ನೊಂದಿಗೆ ಪ್ರಮುಖ ಮೂರು ರೈಡ್ ಮೋಡ್ ಗಳನ್ನು ಹೊಂದಿದೆ.

ಈ ಮೂಲಕ 2kWh ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿರುವ ಎಸ್1 ಎಕ್ಸ್ ವೆರಿಯೆಂಟ್ ಪ್ರತಿ ಚಾರ್ಜ್ ಗೆ 85 ಕಿ.ಮೀ ಮೈಲೇಜ್ ನೀಡಲಿದ್ದರೆ 3kWh ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿರುವ ಎಸ್1 ಎಕ್ಸ್ ಹೈ ಎಂಡ್ ವೆರಿಯೆಂಟ್ ಮತ್ತು ಎಸ್1 ಎಕ್ಸ್ ಪ್ಲಸ್ ವೆರಿಯೆಂಟ್ ಗಳು ಪ್ರತಿ ಚಾರ್ಜ್ ಗೆ 151 ಕಿ.ಮೀ ಮೈಲೇಜ್ ಹಿಂದಿರುಗಿಸಲಿವೆ.

ಇದನ್ನೂ ಓದಿ: ಸಖತ್ ಸ್ಟೈಲಿಶ್ ಆಗಿರುವ ಹೋಂಡಾ ಎಸ್‌ಪಿ160 ಬೈಕ್ ಬಿಡುಗಡೆ

ಎಸ್1 ಎಕ್ಸ್ ಮತ್ತು ಎಸ್1 ಎಕ್ಸ್ ಫೀಚರ್ಸ್ ಹೊಸ ಎಸ್1 ಎಕ್ಸ್ ಮತ್ತು ಎಸ್1 ಎಕ್ಸ್ ಸ್ಕೂಟರ್ ಗಳಲ್ಲಿ ಓಲಾ ಕಂಪನಿಯು ಹಲವಾರು ಸ್ಟ್ಯಾಂಡರ್ಡ್ ಫೀಚರ್ಸ್ ನೀಡಿದ್ದು, ಇದರಲ್ಲಿ ಎಸ್1 ಏರ್ ನಲ್ಲಿರುಂತೆ ಎಲ್ ಸಿಡಿ ಡಿಸ್ಪ್ಲೇ ಸೇರಿದಂತೆ ಹಲವಾರು ಫೀಚರ್ಸ್ ನೀಡಲಾಗಿದೆ. ಹಾಗೆಯೇ ಟ್ಯುಬುಲರ್ ಫ್ರೆಮ್ ನೊಂದಿಗೆ ಸಸ್ಷೆಂಷನ್ ಸೌಲಭ್ಯಕ್ಕಾಗಿ ಹೊಸ ಸ್ಕೂಟರಿನ ಮುಂಭಾಗದಲ್ಲಿ ಟ್ವಿನ್ ಟೆಲಿಸ್ಕೊಪಿಕ್ ಮತ್ತು ಹಿಂಬದಿಯಲ್ಲಿ ಡ್ಯುಯಲ್ ಶಾಕ್ ಅಬ್ಸಾರ್ವರ್ ನೀಡಲಾಗಿದ್ದು, ಎರಡು ಬದಿಯಲ್ಲಿ ಡ್ರಮ್ ಬ್ರೇಕ್ ಜೊತೆಗೆ ಸಿಬಿಎಸ್, ಸ್ಟೀಲ್ ವ್ಹೀಲ್ ನೀಡಲಾಗಿದೆ.

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್