AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Royal Enfield: ನವೆಂಬರ್ 8ರಂದು ಅನಾವರಣಗೊಳ್ಳಲಿದೆ ರಾಯಲ್ ಎನ್‌ಫೀಲ್ಡ್ ಸೂಪರ್ ಮಿಟಿಯೊರ್ 650

ರಾಯಲ್ ಎನ್‌ಫೀಲ್ಡ್ ಕಂಪನಿಯು ತನ್ನ ಬಹುನೀರಿಕ್ಷಿತ ಸೂಪರ್ ಮಿಟಿಯೊರ್ 650 ಕ್ರೂಸರ್ ಮೋಟಾರ್ ಸೈಕಲ್ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಬೈಕ್ ಮಾದರಿಯು ಇದೇ ತಿಂಗಳು 8ರಂದು ಅಧಿಕೃತವಾಗಿ ಅನಾವರಣಗೊಳ್ಳಲಿದೆ.

Royal Enfield: ನವೆಂಬರ್ 8ರಂದು ಅನಾವರಣಗೊಳ್ಳಲಿದೆ ರಾಯಲ್ ಎನ್‌ಫೀಲ್ಡ್ ಸೂಪರ್ ಮಿಟಿಯೊರ್ 650
ನವೆಂಬರ್ 8ರಂದು ಅನಾವರಣಗೊಳ್ಳಲಿದೆ ರಾಯಲ್ ಎನ್‌ಫೀಲ್ಡ್ ಸೂಪರ್ ಮಿಟಿಯೊರ್ 650
Praveen Sannamani
| Edited By: |

Updated on:Nov 04, 2022 | 12:35 PM

Share

ಕ್ಲಾಸಿಕ್ ಬೈಕ್ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ರಾಯಲ್ ಎನ್‌ಫೀಲ್ಡ್(Royal Enfield) ಕಂಪನಿಯು ತನ್ನ ಸರಣಿ ಬೈಕ್ ಮಾದರಿಗಳನ್ನು ಹೆಚ್ಚಿಸಲು ಸಿದ್ದವಾಗುತ್ತಿದ್ದು, ಹೊಸ ಸೂಪರ್ ಮಿಟಿಯೊರ್ 650(Super Meteor 650) ಮಾದರಿಯನ್ನು ಇದೇ ತಿಂಗಳು 8ರಂದು ಇಟಲಿಯಲ್ಲಿ ನಡೆಯಲಿರುವ 2022ರ EICMA(ಅಂತಾರಾಷ್ಟ್ರೀಯ ಮೋಟಾರ್ ಸೈಕಲ್ ಮತ್ತು ಆಕ್ಸೆಸರಿಸ್ ಎಕ್ಸಿಬಿಷನ್) ನಲ್ಲಿ  ಅಧಿಕೃತವಾಗಿ ಅನಾವರಣಗೊಳಿಸಲಿದೆ. ಇಐಸಿಎಂಎ ನಲ್ಲಿ ಅನಾವರಣಗೊಂಡ ನಂತರ ಹೊಸ ಬೈಕ್ ಮಾದರಿಯು ಭಾರತದಲ್ಲಿ ಇದೇ ತಿಂಗಳು 18ರಿಂದ 20ರ ತನಕ ನಡೆಯಲಿರುವ 2022ರ ರೈಡರ್ ಮೆನಿಯಾದಲ್ಲಿ ಪ್ರದರ್ಶನಗೊಳ್ಳಲಿದೆ.

ಸ್ಟ್ಯಾಂಡರ್ಡ್ ಮಿಟಿಯೊರ್ 650 ಆಧರಿಸಿರುವ ಸೂಪರ್ ಮಿಟಿಯೊರ್ 650 ಬೈಕ್ ಮಾದರಿಯು ಹೊಸ ವಿನ್ಯಾಸ ಪ್ರೇರಣೆ ಹೊಂದಿದ್ದು, ಪ್ರಮುಖ ತಾಂತ್ರಿಕ ಅಂಶಗಳನ್ನು ಮಿಟಿಯೊರ್ 350 ಮಾದರಿಯಿಂದ ಮತ್ತು ಕಾಂಟಿನೆಂಟಲ್ ಜಿಟಿ 650 ಮಾದರಿಯ ಎಂಜಿನ್ ಬಳಕೆ ಮಾಡಲಾಗಿದೆ.

Royal Enfield Super Meteor 650

Royal Enfield Super Meteor 650

ಎಂಜಿನ್ ಮತ್ತು ಪರ್ಫಾಮೆನ್ಸ್

ಹೊಸ ಸೂಪರ್ ಮಿಟಿಯೊರ್ 650 ಬೈಕ್ ಮಾದರಿಯು ಕಾಂಟಿನೆಂಟಲ್ ಜಿಟಿಯಲ್ಲಿರುವ 650 ಸಿಸಿ ಪ್ಯಾರಾಲೆಲ್-ಟ್ವಿನ್ ಎಂಜಿನ್ ಹೊಂದಿರಲಿದ್ದು, ಇದು 6 ಸ್ಪೀಡ್ ಗೇರ್ ಬಾಕ್ಸ್ ಮೂಲಕ 47 ಬಿಎಚ್ ಪಿ ಮತ್ತು 52 ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದೆ. ಎಂಜಿನ್ ಆಯ್ಕೆಯಲ್ಲಿ ಯಾವುದೇ ಬದಲಾವಣೆ ಇಲ್ಲವಾದರೂ ಸುರಕ್ಷತೆಗಾಗಿ ಗರಿಷ್ಠ ಫೀಚರ್ಸ್ ನೀಡಲಾಗಿದ್ದು, ಟೆಲಿಸ್ಕೊಫಿಕ್ ಫೋರ್ಕ್ಸ್ ಬ್ರೇಕ್ಸ್, ಟ್ವಿನ್ ಗ್ಯಾಸ್ ಚಾರ್ಜ್ಡ್ ಶಾಕ್ ಅಬ್ಸಾರ್ವರ್ ನೀಡಲಾಗಿದೆ.

ಇದನ್ನೂ ಓದಿ: ಹಬ್ಬದ ಋತುವಿನಲ್ಲಿ ಭರ್ಜರಿ ಬೇಡಿಕೆಯೊಂದಿಗೆ ನಂ.1 ಸ್ಥಾನ ಕಾಯ್ದುಕೊಂಡ ಹೀರೋ ಮೋಟೊಕಾರ್ಪ್

ಜೊತೆಗೆ ಹೊಸ ಬೈಕ್ ಮಾದರಿಯಲ್ಲಿ ಕಂಪನಿಯು 20 ಲೀಟರ್ ಸಾಮರ್ಥ್ಯದ ಫ್ಯೂಲ್ ಟ್ಯಾಂಕ್ ನೀಡಲಾಗಿದ್ದು, ಇದು ಇತರೆ ರಾಯಲ್ ಎನ್‌ಫೀಲ್ಡ್ ಬೈಕ್ ಗಳಿಂತಲೂ ದೊಡ್ಡ ಗಾತ್ರ ಹೊಂದಿದೆ. ಜೊತೆಗೆ ಹಾಲೋಜೆನ್ ಹೆಡ್ ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್, ಎಲ್ಇಡಿ ಟರ್ನ್ ಇಂಡಿಕೇಟರ್, ಸ್ಲಿಪ್ ಅಂಡ್ ಅಸಿಸ್ಟ್ ಕ್ಲಚ್, ಡ್ಯುಯಲ್ ಚಾನೆಲ್ ಎಬಿಎಸ್ ಸೇರಿದಂತೆ ಹಲವು ಸೌಲಭ್ಯಗಳಿವೆ.

ನೀರಿಕ್ಷಿತ ಬೆಲೆ(ಎಕ್ಸ್ ಶೋರೂಂ)

ಹಾರ್ಲೆ ಡೇವಿಡ್ಸನ್ ಆರಂಭಿಕ ಬೈಕ್ ಮಾದರಿಗಳಿಗೆ ಪೈಪೋಟಿಯಾಗಿ ಪವರ್ ಫುಲ್ ಕ್ರೂಸರ್ ಬೈಕ್ ಬಿಡುಗಡೆ ಮಾಡುತ್ತಿರುವ ರಾಯಲ್ ಎನ್‌ಫೀಲ್ಡ್ ಕಂಪನಿಯು ಸೂಪರ್ ಮಿಟಿಯೊರ್ 650 ಆವೃತ್ತಿಯನ್ನು ಆಕರ್ಷಕ ಬೆಲೆಯಲ್ಲಿ ಬಿಡುಗಡೆ ಮಾಡುವ ಸುಳಿವು ನೀಡಿದೆ. ಹೊಸ ಬೈಕ್ ಮಾದರಿಯು ಮಾರುಕಟ್ಟೆಯಲ್ಲಿ ಇತರೆ ರಾಯಲ್ ಎನ್‌ಫೀಲ್ಡ್ ಇತರೆ ಬೈಕ್ ಮಾದರಿಗಳಿಂತಲೂ ತುಸು ದುಬಾರಿ ಎನ್ನಿಸಲಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 3.40 ಲಕ್ಷದಿಂದ ರೂ. 3.60 ಲಕ್ಷ ಬೆಲೆ ಹೊಂದಿರಲಿದೆ.

Published On - 12:08 pm, Fri, 4 November 22

ಪ್ರಯಾಗರಾಜ್ ಮಾಘ ಮೇಳದ ಶಿಬಿರದಲ್ಲಿ ಬೆಂಕಿ ಅವಘಡ; 15 ಡೇರೆಗಳು ಸುಟ್ಟು ಭಸ್ಮ
ಪ್ರಯಾಗರಾಜ್ ಮಾಘ ಮೇಳದ ಶಿಬಿರದಲ್ಲಿ ಬೆಂಕಿ ಅವಘಡ; 15 ಡೇರೆಗಳು ಸುಟ್ಟು ಭಸ್ಮ
ಪುದುಚೆರಿಯ ಕಾಲೇಜುಗಳಲ್ಲಿ ಇಂದೇ ಸಂಕ್ರಾಂತಿ ಸಂಭ್ರಮ
ಪುದುಚೆರಿಯ ಕಾಲೇಜುಗಳಲ್ಲಿ ಇಂದೇ ಸಂಕ್ರಾಂತಿ ಸಂಭ್ರಮ
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಯಶ್ ಹುಟ್ಟುಹಬ್ಬಕ್ಕೆ ಮನೆ ಮುಂದೆ ಬ್ಯಾನರ್ ಹಾಕಿದ್ದಕ್ಕೆ ಎಫ್​ಐಆರ್ ದಾಖಲು
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಬಿಗ್​​ಬಾಸ್ ಕನ್ನಡ: ಗಿಲ್ಲಿ ಪರವಾಗಿ ಮತ ಕೇಳಿದ ಮಳವಳ್ಳಿ ಶಾಸಕ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?