Vehicle Scrapping: ಗುಜರಿ ಪಾಲಿಸಿ ಅಡಿ ಹೊಸ ಕಾರು ಖರೀದಿದಾರರಿಗೆ ಭರ್ಜರಿ ಆಫರ್

ಹಳೆಯ ವಾಹನಗಳನ್ನು ರಸ್ತೆಯಿಂದ ಮುಕ್ತಗೊಳಿಸಲು ಪರಿಣಾಮಕಾರಿ ನೀತಿಗಳನ್ನು ಜಾರಿಗೆ ತಂದಿರುವ ಕೇಂದ್ರ ಸರ್ಕಾರವು ಇದೀಗ ಮತ್ತೊಂದು ಮಹತ್ವದ ಯೋಜನೆ ಪ್ರಕಟಿಸಿದೆ.

Vehicle Scrapping: ಗುಜರಿ ಪಾಲಿಸಿ ಅಡಿ ಹೊಸ ಕಾರು ಖರೀದಿದಾರರಿಗೆ ಭರ್ಜರಿ ಆಫರ್
ಗುಜರಿ ಪಾಲಿಸಿ ಅಡಿ ಹೊಸ ಕಾರು ಖರೀದಿದಾರರಿಗೆ ಭರ್ಜರಿ ಆಫರ್
Follow us
Praveen Sannamani
|

Updated on: Aug 28, 2024 | 10:47 PM

ಹಳೆಯ ವಾಹನಗಳಿಗೆ ರಸ್ತೆಯಿಂದ ಮುಕ್ತಿ ನೀಡುವ ಸಂಬಂಧ ಕೇಂದ್ರ ಸರ್ಕಾರವು ಸ್ವಯಂ ಪ್ರೇರಿತ ವಾಹನಗಳ ಗುಜುರಿ ನೀತಿಗೆ ಈಗಾಗಲೇ ಚಾಲನೆ ನೀಡಿದ್ದು, ಇದೀಗ ಹಳೆಯ ವಾಹನಗಳನ್ನು ಗುಜರಿಗೆ ಹಾಕಿ ಹೊಸ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ಹೆಚ್ಚಿನ ಮಟ್ಟದ ವಿನಾಯ್ತಿಗಳನ್ನು ನೀಡುವುದಾಗಿ ಘೋಷಣೆ ಮಾಡಲಾಗಿದೆ.

ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಚರರ್ಸ್ ಸಂಸ್ಥೆಯ ಸಭೆಯಲ್ಲಿ ಮಾತನಾಡಿರುವ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿಯವರು ಹಳೆಯ ವಾಹನಗಳನ್ನು ಗುಜರಿಗೆ ಹಾಕಿ ಹೊಸ ವಾಹನ ಖರೀದಿಸುವ ಗ್ರಾಹಕರಿಗೆ ಉತ್ತಮ ರಿಯಾಯ್ತಿ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಹಳೆಯ ವಾಹನಗಳನ್ನು ಗುಜರಿಗೆ ಹಾಕುವ ಮೂಲಕ ಹೊಸ ವಾಹನಗಳ ಖರೀದಿ ವೇಳೆ ಶೇಕಡಾ 1.5 ರಿಂದ ಶೇಕಡಾ 3.5 ರಿಯಾಯಿತಿ ನೀಡಲು ನಿರ್ಧರಿಸಿದ್ದು, ಕೇಂದ್ರ ಸರ್ಕಾರ ಹೊಸ ಯೋಜನೆಗೆ ಬಹುತೇಕ ವಾಹನ ಉತ್ಪಾದನಾ ಕಂಪನಿಗಳು ಒಪ್ಪಿಗೆ ಸೂಚಿಸಿವೆ. ಈ ಹಿಂದೆ ಶೇ. 5 ರಷ್ಟು ರಿಯಾಯ್ತಿ ಸೂಚಿಸಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿದ್ದ ವಾಹನ ಉತ್ಪಾದನಾ ಕಂಪನಿಗಳು ಇದೀಗ ವಿವಿಧ ವಾಹನಗಳು ಮತ್ತು ಅವುಗಳ ಸ್ಥಿತಿಗತಿಗಳ ಮೇಲೆ ಶೇ. 1.50 ರಿಂದ 3.5 ರ ತನಕ ರಿಯಾಯ್ತಿ ನೀಡುವುದಾಗಿ ಒಪ್ಪಿಗೆ ಸೂಚಿಸಿವೆ.

ಹೊಸ ರಿಯಾಯ್ತಿ ಯೋಜನೆಯಡಿ ಪ್ರಯೋಜನ ಪಡೆಯುವ ಗ್ರಾಹಕರು ತಮ್ಮ ಹಳೆಯ ವಾಹನಗಳನ್ನು ನೋಂದಾಯಿತ ಗುಜರಿ ಕೇಂದ್ರಗಳಲ್ಲಿ ಸ್ಕ್ರಾಪ್ ಮಾಡಿಸುವ ಮೂಲಕ ಪ್ರಮಾಣ ಪತ್ರ ಪಡೆದುಕೊಳ್ಳಬೇಕಿದ್ದು, ಆ ಪ್ರಮಾಣ ಪತ್ರವನ್ನು ಕಾರು ಡೀಲರ್ಸ್ ಸಲ್ಲಿಸುವ ಮೂಲಕ ನಿಮ್ಮ ಇಷ್ಟದ ವಾಹನಗಳ ಖರೀದಿ ಮೇಲೆ ನಿಗದಿತ ಆಫರ್ ಗಳನ್ನು ಪಡೆದುಕೊಳ್ಳಬಹುದಾಗಿದೆ.

ಇದರೊಂದಿಗೆ ಕೇಂದ್ರ ಸರ್ಕಾರವು 2025ರ ಮಾರ್ಚ್‌ ವೇಳೆಗೆ 90 ಸಾವಿರ ಹಳೆಯ ಸರ್ಕಾರಿ ವಾಹನಗಳನ್ನು ಕೂಡಾ ಗುಜರಿಗೆ ಹಾಕಲು ನಿರ್ಧರಿಸಿದ್ದು, ಹಂತ-ಹಂತವಾಗಿ ಹಳೆಯ ವಾಹನಗಳ ಬಳಕೆಗೆ ಗುಡ್ ಬೈ ಹೇಳುತ್ತಿರುವುದು ಗಮರ್ನಾಹ ಬೆಳವಣಿಗೆಯಾಗಿದೆ. ಈ ಮೂಲಕ ಹಳೆಯ ವಾಹನಗಳಿಂದ ಉತ್ಪತ್ತಿಯಾಗುತ್ತಿರುವ ಮಾಲಿನ್ಯ ತಗ್ಗಿಸುವುದರ ಜೊತೆಗೆ ಗುಜರಿಯಿಂದ ಸಂಗ್ರಹವಾಗುವ ಹಳೆಯ ವಾಹನಗಳ ಬಿಡಿಭಾಗಗಳು ಮರುಬಳಕೆಯು ಉತ್ಪಾದನಾ ವೆಚ್ಚವನ್ನು ಸಹ ತಗ್ಗಿಸಲಿದೆ.

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ