AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಟಾ ನೆಕ್ಸಾನ್ ಗೆ ಭರ್ಜರಿ ಪೈಪೋಟಿ ನೀಡಲಿದೆ ಸ್ಕೋಡಾ ಹೊಸ ಸಬ್ ಕಂಪ್ಯಾಕ್ಟ್ ಎಸ್​ಯುವಿ

ಸ್ಕೋಡಾ ಇಂಡಿಯಾ ಕಂಪನಿಯು ತನ್ನ ಯೋಜನೆಗಳ ಮೂಲಕ ಮತ್ತಷ್ಟ ಹೊಸ ಕಾರುಗಳ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಕಾರುಗಳಲ್ಲಿ ಸಬ್ ಕಂಪ್ಯಾಕ್ಟ್ ಎಸ್​ಯುವಿ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಟಾಟಾ ನೆಕ್ಸಾನ್ ಗೆ ಭರ್ಜರಿ ಪೈಪೋಟಿ ನೀಡಲಿದೆ ಸ್ಕೋಡಾ ಹೊಸ ಸಬ್ ಕಂಪ್ಯಾಕ್ಟ್ ಎಸ್​ಯುವಿ
ಸ್ಕೋಡಾ ಹೊಸ ಸಬ್ ಕಂಪ್ಯಾಕ್ಟ್ ಎಸ್​ಯುವಿ
Praveen Sannamani
|

Updated on: Jul 03, 2024 | 9:55 PM

Share

ದೇಶಿಯ ಮಾರುಕಟ್ಟೆಯಲ್ಲಿ ಸದ್ಯ ಮಧ್ಯಮ ಕ್ರಮಾಂಕದ ಸಬ್ ಫೋರ್ ಮೀಟರ್ ಉದ್ದಳತೆಯ ಕಂಪ್ಯಾಕ್ಟ್ ಎಸ್ ಯುವಿ ಕಾರುಗಳಿಗೆ ಉತ್ತಮ ಬೇಡಿಕೆಯಿದ್ದು, ಸ್ಕೋಡಾ (Skoda) ಕಂಪನಿಯು ಸಹ ಈ ವಿಭಾಗದಲ್ಲಿ ಹೊಚ್ಚ ಹೊಸ ಸಬ್ ಕಂಪ್ಯಾಕ್ಟ್ ಎಸ್ ಯುವಿ ಮಾದರಿಯೊಂದನ್ನು ಬಿಡುಗಡೆ ಮಾಡುವ ಸುಳಿವು ನೀಡಿದೆ. ಸ್ಕೋಡಾ ಹೊಸ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಕುಶಾಕ್ ಎಸ್ ಯುವಿಗಿಂತಲೂ ಬಜೆಟ್ ಬೆಲೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದ್ದು, ಇದು ಹೆಚ್ಚಿನ ಮಟ್ಟದಲ್ಲಿ ಸ್ಥಳೀಯವಾಗಿ ಉತ್ಪಾದನೆಗೊಂಡ ಬಿಡಿಭಾಗಗಳನ್ನು ಹೊಂದಿರಲಿದೆ.

ಹೊಸ ಸಬ್ ಕಂಪ್ಯಾಕ್ಟ್ ಎಸ್​ಯುವಿಯನ್ನು ಪ್ರತಿಸ್ಪರ್ಧಿ ಕಾರುಗಳಿಂತಲೂ ಸ್ಪರ್ಧಾತ್ಮಕ ಬೆಲೆಯಲ್ಲಿ ಮಾರಾಟ ಮಾಡುವ ನೀರಿಕ್ಷೆಯಿಟ್ಟುಕೊಳ್ಳಲಾಗಿದ್ದು, ಇದು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಟಾಟಾ ನೆಕ್ಸಾನ್, ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್ ಯುವಿ 3ಎಕ್ಸ್ಒ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದೆ.

Skoda

ಸ್ಕೋಡಾ ಕಂಪನಿಯು ಹೊಸ ಕಾರುಗಳ ಬೆಲೆ ಇಳಿಕೆಗಾಗಿ ಪೋಕ್ಸ್ ವ್ಯಾಗನ್ ಕಂಪನಿ ಜೊತೆಗೂಡಿ ಇಂಡಿಯಾ 2.0 ಯೋಜನೆ ಆರಂಭಿಸಿದ್ದು, ಈ ಹೊಸ ಯೋಜನೆ ಅಡಿ ಶೇ.90 ರಷ್ಟು ಸ್ಥಳೀಯ ಬಿಡಿಭಾಗಗಳನ್ನು ಉಪಯೋಗಿಸುವ ಗುರಿಹೊಂದಿತ್ತು. ಆದರೆ ಕಾರಣಾಂತರಗಳಿಂದ ಸ್ಥಳೀಯ ಬಿಡಿಭಾಗಗಳ ಬಳಕೆ ಪ್ರಮಾಣವನ್ನು ಹೆಚ್ಚಳ ಮಾಡುವ ಗುರಿಸಾಧಿಸಲು ಸಾಧ್ಯವಾಗುತ್ತಿಲ್ಲ. ಇದು ನೇರವಾಗಿ ಕಾರುಗಳ ಬೆಲೆಯಲ್ಲಿ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತಿದ್ದು, ಈ ಬಾರಿ ಹೊಸ ಕಾರು ಬಿಡುಗಡೆಯ ವೇಳೆಗೆ ಈ ಹಿಂದಿನ ತಪ್ಪು ಮರಕಳಿಸದಂತೆ ಸ್ಕೋಡಾ ಕಂಪನಿಯು ಎಚ್ಚರಿಕೆ ವಹಿಸುತ್ತಿದೆ.

ಹೊಸ ಸಬ್ ಕಂಪ್ಯಾಕ್ಟ್ ಎಸ್​ಯುವಿ ಬಿಡುಗಡೆಯ ವೇಳೆಗೆ ಸ್ಕೋಡಾ ಕಂಪನಿಯು ಈ ಬಾರಿ ಶೇ. 75ರಿಂದ ಶೇ.76 ರಷ್ಟು ಸ್ಥಳೀಯ ಬಿಡಿಭಾಗಗಳನ್ನು ಬಳಕೆ ಮಾಡುವ ಗುರಿ ಹೊಂದಿದ್ದು, ಈ ಮೂಲಕ ಆಕರ್ಷಕ ಬೆಲೆಯಲ್ಲಿ ಹೊಸ ಕಾರನ್ನು ರಸ್ತೆಗಿಳಿಸುವ ಯೋಜನೆ ರೂಪಿಸಿದೆ. ಜೊತೆಗೆ ಹೊಸ ಕಾರು ಕುಶಾಕ್ ಕಾರಿನಲ್ಲಿರುವಂತೆ ಎಂಜಿನ್ ಆಯ್ಕೆ ಜೊತೆಗೆ ಹಲವಾರು ಫೀಚರ್ಸ್ ಹೊಂದಿರಲಿದ್ದು, ಇದು ಪ್ರೀಮಿಯಂ ಫೀಚರ್ಸ್ ಹೊಂದಿರುವ ಕಾರುಗಳನ್ನು ಬಜೆಟ್ ಬಜೆಟ್ ಬೆಲೆಯಲ್ಲಿ ಖರೀದಿಸುವ ಗ್ರಾಹಕರಿಗೆ ಸಹಕಾರಿಯಾಗಲಿದೆ.

ಇದನ್ನೂ ಓದಿ: ಭಾರತದಲ್ಲಿ ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಕಾರುಗಳಿವು!

ಸ್ಕೋಡಾ ಕಂಪನಿಯು ಹೊಸ ಕಾರನ್ನು ಬಜೆಟ್ ಬೆಲೆಯಲ್ಲಿ ಬಿಡುಗಡೆಯೊಂದಿಗೆ ಸುರಕ್ಷತೆಯಲ್ಲೂ ಗಮನಸೆಳೆಯಲಿದ್ದು, ಕುಶಾಕ್ ಕಾರಿನಂತೆಯೇ 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಸುರಕ್ಷತೆಗೆ ಅನುಗುಣವಾಗಿ ಗುಣಮಟ್ಟ ಹೊಂದಿರಲಿದೆ. ಮಾಹಿತಿಗಳ ಪ್ರಕಾರ ಸ್ಕೋಡಾ ಹೊಸ ಕಾರು 1.0 ಲೀಟರ್, 3-ಸಿಲಿಂಡರ್ ಪ್ರೇರಿತ ಟರ್ಬೊ ಪೆಟ್ರೋಲ್ ಎಂಜಿನ್‌ ನೀಡುವ ಸಾಧ್ಯತೆಗಳಿದ್ದು, ಇದು ಮ್ಯಾನುವಲ್ ಮತ್ತು ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿರಲಿದೆ. ಈ ಮೂಲಕ ಇದು ಉತ್ತಮ ಇಂಧನ ದಕ್ಷತೆ ಮತ್ತು ಪರ್ಫಾಮೆನ್ಸ್ ನಲ್ಲಿ ಗಮನಸೆಳೆಯಲಿದ್ದು, ಇದು 2025ರ ಮೊದಲ ತ್ರೈಮಾಸಿಕ ವೇಳೆಗೆ ರೂ. 8 ಲಕ್ಷದಿಂದ ರೂ. 13 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿವೆ.