ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಭರ್ಜರಿ ರೇಟಿಂಗ್ಸ್ ಪಡೆದುಕೊಂಡ ಹೊಸ ಮಾರುತಿ ಸುಜುಕಿ ಸ್ವಿಫ್ಟ್

ಹೊಸ ತಲೆಮಾರಿನ ಮಾರುತಿ ಸುಜುಕಿ ಸ್ವಿಫ್ಟ್ ಭಾರತದಲ್ಲಿ ಇದೇ ತಿಂಗಳಾಂತ್ಯಕ್ಕೆ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಕಾರು ಹಲವಾರು ಸುರಕ್ಷಾ ಸೌಲಭ್ಯಗಳೊಂದಿಗೆ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಗಮನಸೆಳೆಯುತ್ತಿದೆ.

ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಭರ್ಜರಿ ರೇಟಿಂಗ್ಸ್ ಪಡೆದುಕೊಂಡ ಹೊಸ ಮಾರುತಿ ಸುಜುಕಿ ಸ್ವಿಫ್ಟ್
ಹೊಸ ಮಾರುತಿ ಸುಜುಕಿ ಸ್ವಿಫ್ಟ್
Follow us
Praveen Sannamani
|

Updated on:Apr 20, 2024 | 6:27 PM

ಭಾರತದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳಲ್ಲಿ ಮಾರುತಿ ಸುಜುಕಿ (Maruti Suzuki) ಹೊಸ ತಲೆಮಾರಿನ ಸ್ವಿಫ್ಟ್ (Swift) ಭಾರೀ ನೀರಿಕ್ಷೆ ಹುಟ್ಟುಹಾಕಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನವೇ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಗಮನಸೆಳೆಯುತ್ತಿದೆ. ಹೊಸ ಸ್ವಿಫ್ಟ್ ಮಾದರಿಯು ಈಗಾಗಲೇ ಜಪಾನ್ ನಲ್ಲಿ ಬಿಡುಗಡೆಗೊಂಡಿದ್ದು, ಇದೀಗ ಭಾರತದಲ್ಲೂ ಕೂಡಾ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಈ ನಡುವೆ ಹೊಸ ಸ್ವಿಫ್ಟ್ ಕಾರು ಜಪಾನ್ ಎನ್ ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ 4 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿದ್ದು, ಅಪಘಾತದ ವೇಳೆ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ಒದಗಿಸಲಿದೆ.

ಜಪಾನ್ ಎನ್ ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಒಳಪಡಿಸಲಾದ ಸ್ವಿಫ್ಟ್ ಕಾರಿನಲ್ಲಿ ಹಲವಾರು ಸುರಕ್ಷಾ ಫೀಚರ್ಸ್ ಗಳನ್ನು ಅಳವಡಿಸಲಾಗಿದ್ದು, ಇದರಲ್ಲಿ ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಲೇನ್ ಕೀಪಿಂಗ್ ಅಸಿಸ್ಟ್, ರಿಯರ್ ಕೂಲಿಷನ್ ಅಲರ್ಟ್ ಸೇರಿದಂತೆ ಹಲವಾರು ಫೀಚರ್ಸ್ ಗಳಿವೆ. ಹೀಗಾಗಿ ಭಾರತದಲ್ಲೂ ಬಿಡುಗಡೆಯಾಗಲಿರುವ ಸ್ವಿಫ್ಟ್ ಕಾರು ಕೂಡಾ ಹಲವಾರು ಹೊಸ ಸುರಕ್ಷಾ ಫೀಚರ್ಸ್ ಗಳೊಂದಿಗೆ ಸುರಕ್ಷತೆಯಲ್ಲಿ ಗಮನಸೆಳೆಯಲಿದ್ದು, ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ಕ್ರ್ಯಾಶ್ ಟೆಸ್ಟಿಂಗ್ ರೇಟಿಂಗ್ಸ್ ಪಡೆದುಕೊಳ್ಳಬಹುದಾಗಿದೆ.

ಇದರೊಂದಿಗೆ ಸ್ವಿಫ್ಟ್ ಹೊಸ ಮಾದರಿಯು ಈ ಬಾರಿ ಪ್ರತಿಸ್ಪರ್ಧಿ ಮಾದರಿಗಳಿಗೆ ಪೈಪೋಟಿಯಾಗಿ ಹಲವಾರು ಬದಲಾವಣೆಗಳನ್ನು ಪಡೆದುಕೊಂಡಿದ್ದು, ಇದರಲ್ಲಿ ಐಷಾರಾಮಿ ಲುಕ್ ಹೊಂದಿರುವ ಹೊರ ಭಾಗದ ವಿನ್ಯಾಸದೊಂದಿಗೆ ಕಾರಿನ ಒಳಭಾಗದಲ್ಲೂ ಹಲವಾರು ಸುಧಾರಿತ ಫೀಚರ್ಸ್ ಗಳನ್ನು ನೀಡಲಾಗಿದೆ. ಹೊಸ ಕಾರಿನಲ್ಲಿ ಸುರಕ್ಷತೆಗಾಗಿ 6 ಏರ್ ಬ್ಯಾಗ್ ಗಳು, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಇಬಿಡಿ ಮತ್ತು ಬ್ರೇಕ್ ಅಸಿಸ್ಟ್, ಹಿಲ್ ಹೋಲ್ಡ್ ಕಂಟ್ರೋಲ್ ಸೇರಿದಂತೆ ಹಲವಾರು ಸೌಲಭ್ಯಗಳಿರಲಿವೆ. ಹೀಗಾಗಿ ಹೊಸ ಕಾರು ಸದ್ಯದ ಮಾರುಕಟ್ಟೆಯಲ್ಲಿನ ಮಾದರಿಗಿಂತಲೂ ತುಸು ದುಬಾರಿಯಾಗಿರಲಿದ್ದು, ಆರಂಭಿಕ ಮಾದರಿಯಲ್ಲೂ ಹಲವಾರು ಫೀಚರ್ಸ್ ನೋಡಬಹುದಾಗಿದೆ.

ಇದನ್ನೂ ಓದಿ: ಸೆಕೆಂಡ್ ಹ್ಯಾಂಡ್ ಕಾರು ಖರೀದಿಸುವಾಗ ಇರಲಿ ಈ ಬಗ್ಗೆ ಎಚ್ಚರ!

ಇನ್ನು ಹೊಸ ಕಾರಿನಲ್ಲಿ ಈ ಬಾರಿ 16 ಇಂಚಿನ ಅಲಾಯ್ ವ್ಹೀಲ್ಸ್, ಎಲ್ಇಡಿ ಹೆಡ್ ಲೈಟ್ಸ್ ಮತ್ತು ಟೈಲ್ ಲೈಟ್ಸ್ ಜೊತೆ ಎಲ್ಇಡಿ ಡಿಆರ್ ಎಲ್ಎಸ್ ನೀಡಲಾಗಿದ್ದು, ಕಾರಿನ ಒಳಭಾಗದಲ್ಲಿ 9 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್ ಮೆಂಟ್ ಸಿಸ್ಟಂ, ವೈರ್ ಲೇಸ್ ಆ್ಯಪಲ್ ಕಾರ್ ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸೇರಿದಂತೆ ಹಲವಾರು ಫೀಚರ್ಸ್ ನೀಡಲಾಗಿದೆ. ಹಾಗೆಯೇ ಹೊಸ ಕಾರಿನಲ್ಲಿ ಸುಧಾರಿತ ಎಂಜಿನ್ ಆಯ್ಕೆ ನೀಡಲಾಗಿದ್ದು, ಇದು ಹೆಚ್ಚಿನ ಮಟ್ಟದ ಇಂಧನ ದಕ್ಷತೆ ಖಾತ್ರಿಪಡಿಸಲಿದೆ.

ಹೊಸ ಸ್ವಿಫ್ಟ್ ನಲ್ಲಿ ಈ ಬಾರಿ ಜೆಡ್ ಸೀರಿಸ್ ನಲ್ಲಿರುವ ಜೆಡ್12ಇ 1.2 ಲೀಟರ್, ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದ್ದು, ಇದು ಪ್ಯೂರ್ ಪೆಟ್ರೋಲ್ ಮತ್ತು ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದೆ. ಇದು ಸಿವಿಟಿ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಪ್ಯೂರ್ ಪೆಟ್ರೋಲ್ ಮಾದರಿಯು 82 ಹಾರ್ಸ್ ಪವರ್ ಮತ್ತು 108 ಎನ್ಎಂ ಟಾರ್ಕ್ ಉತ್ಪಾದಿಸಿದರೆ ಮೈಲ್ಡ್ ಹೈಬ್ರಿಡ್ ಮಾದರಿಯು ಪ್ಯೂರ್ ಪೆಟ್ರೋಲ್ ಮಾದರಿಗಿಂತ ಹೆಚ್ಚುವರಿಯಾಗಿ 3 ಹಾರ್ಸ್ ಪವರ್ ಮತ್ತು 60 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಇದನ್ನೂ ಓದಿ: ಸಖತ್ ಕ್ಯೂಟ್ ಆಗಿರೋ ಇವಿ ಕಾರು ಖರೀದಿಸಿದ ನಟಿ ನಮ್ರತಾ ಗೌಡ

ಸ್ವಿಫ್ಟ್ ಹೊಸ ಮಾದರಿಯ ಸಾಮಾನ್ಯ ಪೆಟ್ರೋಲ್ ಎಂಜಿನ್ ಆಯ್ಕೆಯೊಂದಿಗೆ ಪ್ರತಿ ಲೀಟರ್ ಗೆ 23.04 ಕಿ.ಮೀ ಮೈಲೇಜ್ ನೀಡಿದ್ದಲ್ಲಿ ಹೈಬ್ರಿಡ್ ತಂತ್ರಜ್ಞಾನ ಪ್ರೇರಿತ ಸ್ವಿಫ್ಟ್ ಮಾದರಿಯು ಪ್ರತಿ ಲೀಟರ್ ಗೆ 24.05 ಕಿ.ಮೀ ಮೈಲೇಜ್ ನೀಡಲಿದ್ದು, ಇದು ಸುರಕ್ಷತೆಯಲ್ಲೂ ಗಮನಸೆಳೆಯಲಿದೆ.

Published On - 5:59 pm, Sat, 20 April 24

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ