ಬೆಲೆ ಇಳಿಕೆ ಮೂಲಕ ಇವಿ ಕಾರು ಖರೀದಿದಾರಿಗೆ ಬಂಪರ್ ಆಫರ್ ನೀಡಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಎಲೆಕ್ಟ್ರಿಕ್ ಕಾರು ಮಾದರಿಗಳ ಬೆಲೆ ಇಳಿಕೆ ಮಾಡುವ ಮೂಲಕ ಹೊಸ ಸಂಚಲನ ಮೂಡಿಸಿದೆ.

ಬೆಲೆ ಇಳಿಕೆ ಮೂಲಕ ಇವಿ ಕಾರು ಖರೀದಿದಾರಿಗೆ ಬಂಪರ್ ಆಫರ್ ನೀಡಿದ ಟಾಟಾ ಮೋಟಾರ್ಸ್
ಟಾಟಾ ಮೋಟಾರ್ಸ್ ಎಲೆಕ್ಟ್ರಿಕ್ ಕಾರುಗಳು
Follow us
|

Updated on:Sep 10, 2024 | 8:44 PM

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಟಾಟಾ ಮೋಟಾರ್ಸ್ (Tata Motors) ಕಂಪನಿಯು ಮುಂಬರುವ ಹಬ್ಬದ ಋತುವಿನಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ತನ್ನ ಪ್ರಮುಖ ಕಾರು ಮಾದರಿಗಳ ಬೆಲೆಯಲ್ಲಿ ಇಳಿಕೆ ಮಾಡಿದೆ. ಹೊಸ ಆಫರ್ ನಲ್ಲಿ ಟಿಯಾಗೋ ಇವಿ, ನೆಕ್ಸಾನ್ ಇವಿ ಮತ್ತು ಪಂಚ್ ಇವಿ ಬೆಲೆಯಲ್ಲಿ ಇಳಿಕೆ ಮಾಡಿದ್ದು, ಹೊಸ ದರಗಳು ಅಕ್ಟೋಬರ್ 31ರ ತನಕ ಮಾತ್ರ ಅನ್ವಯಿಸಲಿವೆ.

ಹೊಸ ಆಫರ್ ನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಬೆಲೆಯಲ್ಲಿ ರೂ. 3 ಲಕ್ಷದ ತನಕ ಇಳಿಕೆ ಮಾಡಿದ್ದರೆ ಪಂಚ್ ಇವಿ ಕಾರಿನ ಬೆಲೆಯಲ್ಲಿ ರೂ. 1.20 ಲಕ್ಷ ಮತ್ತು ಟಿಯಾಗೋ ಕಾರಿನ ಬೆಲೆಯಲ್ಲಿ ರೂ. 40 ಸಾವಿರದಷ್ಟು ಬೆಲೆ ಇಳಿಕೆ ಮಾಡಿದೆ.

ಬೆಲೆ ಇಳಿಕೆಯ ನಂತರ ನೆಕ್ಸಾನ್ ಎಲೆಕ್ಟ್ರಿಕ್ ಕಾರಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ. 12.49 ಲಕ್ಷದಿಂದ ರೂ. 16.29 ಲಕ್ಷ ನಿಗದಿಪಡಿಸಲಾಗಿದ್ದು, ಆರಂಭಿಕ ಮಾದರಿಯ ಬೆಲೆಯಲ್ಲಿ ರೂ. 2 ಲಕ್ಷದಷ್ಟು ಮತ್ತು ಟಾಪ್ ಎಂಡ್ ಮಾದರಿಯಲ್ಲಿ ರೂ. 3 ಲಕ್ಷದಷ್ಟು ಬೆಲೆ ಇಳಿಕೆಯಾಗಿದೆ.

ಪಂಚ್ ಇವಿ ಬೆಲೆಯಲ್ಲಿ ಇಳಿಕೆಯ ನಂತರ ಎಕ್ಸ್ ಶೋರೂಂ ಪ್ರಕಾರ ರೂ. 9.99 ಲಕ್ಷದಿಂದ ರೂ. 13.79 ಲಕ್ಷ ಬೆಲೆ ನಿಗದಿ ಮಾಡಲಾಗಿದ್ದು, ಆರಂಭಿಕ ಮಾದರಿಯ ಬೆಲೆಯಲ್ಲಿ ರೂ. 1 ಲಕ್ಷದಷ್ಟು ಮತ್ತು ಟಾಪ್ ಎಂಡ್ ಮಾದರಿಯಲ್ಲಿ ರೂ. 1.20 ಲಕ್ಷದಷ್ಟು ಬೆಲೆ ಇಳಿಕೆ ಮಾಡಿದೆ.

ಇದನ್ನೂ ಓದಿ: ಅಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಟಾಪ್ 5 ಕಾರುಗಳಿವು!

ಹಾಗೆಯೇ ಟಿಯಾಗೋ ಎಲೆಕ್ಟ್ರಿಕ್ ಕಾರು ಬೆಲೆ ಇಳಿಕೆಯ ನಂತರ ರೂ. 7.99 ಲಕ್ಷದಿಂದ ರೂ. 10.99 ಲಕ್ಷ ಬೆಲೆ ಹೊಂದಿದ್ದು, ಇದರಲ್ಲಿ ಆರಂಭಿಕ ಮಾದರಿಯಲ್ಲಿ ಯಾವುದೇ ಬೆಲೆ ಬದಲಾವಣೆ ಮಾಡದೆ ಟಾಪ್ ಎಂಡ್ ಮಾದರಿಯಲ್ಲಿ ರೂ. 40 ಸಾವಿರದಷ್ಟು ಇಳಿಕೆ ಮಾಡಲಾಗಿದೆ.

ಬೆಲೆ ಇಳಿಕೆಯೊಂದಿಗೆ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಮತ್ತೊಂದು ಆಕರ್ಷಕ ಆಫರ್ ನೀಡುತ್ತಿದೆ. ನಿಗದಿತ ಅವಧಿಯಲ್ಲಿ ಇವಿ ಕಾರು ಖರೀದಿದಾರರಿಗೆ ದೇಶಾದ್ಯಂತ ಕಾರ್ಯಾಚರಣೆ ತನ್ನ ಟಾಟಾ ಪವರ್ ಇವಿ ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳಲ್ಲಿ 6 ತಿಂಗಳು ಕಾಲ ಉಚಿತವಾಗಿ ಚಾರ್ಜ್ ಮಾಡಲು ಅವಕಾಶ ನೀಡುತ್ತಿದೆ.

Published On - 8:43 pm, Tue, 10 September 24

ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ