Bharat NCAP: ಭಾರತ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಟಾಟಾ ಹ್ಯಾರಿಯರ್, ಸಫಾರಿ ಅದ್ಬುತ ಪ್ರದರ್ಶನ
ಭಾರತ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಟಾಟಾ ನಿರ್ಮಾಣದ ಹೊಸ ಹ್ಯಾರಿಯರ್ ಮತ್ತು ಸಫಾರಿ ಎಸ್ ಯುವಿ ಕಾರುಗಳು ಅದ್ಭುತ ಪ್ರದರ್ಶನ ತೋರುವ ಮೂಲಕ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆಯನ್ನು ಖಾತ್ರಿಪಡಿಸಿವೆ.
ಕೇಂದ್ರ ಸರ್ಕಾರವು ಭಾರತ್ ನ್ಯೂ ಕಾರ್ ಅಸೆಸ್‌ಮೆಂಟ್ ಪ್ರೋಗ್ರಾಂ (Bharat New Car Assessment Program) ಮೂಲಕ ಭಾರತದಲ್ಲಿ ಉತ್ಪಾದನೆಯಾಗುವ ಕಾರುಗಳ ಸುರಕ್ಷತೆಯನ್ನು ಸುಧಾರಿಸುವ ಮಹತ್ವದ ಯೋಜನೆಗೆ ಚಾಲನೆ ನೀಡಲಾಗಿದ್ದು, ಭಾರತ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ಗೆ ಒಳಪಟ್ಟಿದ್ದ ಟಾಟಾ ಹ್ಯಾರಿಯರ್ ಮತ್ತು ಸಫಾರಿ ಎಸ್ ಯುವಿ ಕಾರುಗಳು ಗರಿಷ್ಠ ರೇಟಿಂಗ್ಸ್ ಪಡೆದುಕೊಂಡಿವೆ.
ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ಮಾನದಂಡಗಳನ್ನು ಸಮರ್ಥವಾಗಿ ಪೂರೈಸಿರುವ ಹೊಸ ಹ್ಯಾರಿಯರ್ ಮತ್ತು ಸಫಾರಿ ಕಾರುಗಳು 5 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡಿದ್ದು, ಅಪಘಾತದ ವೇಳೆ ವಯಸ್ಕ ಪ್ರಯಾಣಿಕರಿಗೆ ಮತ್ತು ಮಕ್ಕಳಿಗೆ ಗರಿಷ್ಠ ಸುರಕ್ಷತೆಯನ್ನು ಖಾತ್ರಿಪಡಿಸಿವೆ. ವಯಸ್ಕ ಪ್ರಯಾಣಿಕರ ಸುರಕ್ಷತೆಗಾಗಿ ನೀಡುವಾಗುವ 32 ಅಂಕಗಳಲ್ಲಿ 30.08 ಅಂಕಗಳನ್ನು ಮತ್ತು ಮಕ್ಕಳ ಸುರಕ್ಷತೆಗಾಗಿ ನೀಡಲಾಗುವ 49 ಅಂಕಗಳಿಗೆ 44.54 ಅಂಕಗಳನ್ನು ಪಡೆದುಕೊಂಡಿದ್ದು, ಸುರಕ್ಷತೆಯಲ್ಲಿ ಅತ್ಯುತ್ತಮ ಕಾರುಗಳಾಗಿ ಹೊರಹೊಮ್ಮಿವೆ.
ಜಾಗತಿಕವಾಗಿ ಉತ್ಪಾದನೆಗೊಳ್ಳುವ ಹೊಸ ಕಾರುಗಳ ಗುಣಮಟ್ಟ ಪರೀಕ್ಷಿಸಲು ಈ ಹಿಂದೆ ಗ್ಲೋಬಲ್ ನ್ಯೂ ಕಾರ್ ಅಸೆಸ್‌ಮೆಂಟ್ ಪ್ರೋಗ್ರಾಂ ಮಾನದಂಡಗಳನ್ನು ಅನುಸರಿಸುತ್ತಿದ್ದ ಕಾರು ಕಂಪನಿಗಳು ಇದೀಗ ಕೇಂದ್ರ ಸಾರಿಗೆ ಇಲಾಖೆ ಜಾರಿ ತಂದಿರುವ ಭಾರತ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್ ಎದುರಿಸಬೇಕಿದ್ದು, ಮೊದಲ ಹಂತದಲ್ಲಿಯೇ ಟಾಟಾದ ಪ್ರಮುಖ ಕಾರುಗಳು ಸ್ವಯಂ ಪ್ರೇರಿತವಾಗಿ ಪರೀಕ್ಷೆಗೆ ಒಳಪಡುತ್ತಿವೆ. ಹೀಗಾಗಿ ಶೀಘ್ರದಲ್ಲಿಯೇ ಇನ್ನುಳಿದ ಟಾಟಾ ಕಾರುಗಳ ಸೇಫ್ಟಿ ರೇಟಿಂಗ್ಸ್ ಬಹಿರಂಗವಾಗಲಿದ್ದು, ಪ್ರತಿ ಕಾರು ಮಾದರಿಯಲ್ಲೂ ಗರಿಷ್ಠ ರೇಟಿಂಗ್ಸ್ ಪಡೆದುಕೊಳ್ಳುವ ಬಗ್ಗೆ ಟಾಟಾ ಮೋಟಾರ್ಸ್ ಕಂಪನಿ ಉತ್ಸುಕವಾಗಿದೆ.
ಇದನ್ನೂ ಓದಿ: ದುಬಾರಿ ಬೆಲೆಯ ಬಿಎಂಡಬ್ಲ್ಯು ಎಕ್ಸ್ಎಂ ಕಾರು ಖರೀದಿಸಿದ ಎಂಟಿಬಿ ನಾಗರಾಜ್
ಇನ್ನು ಇತ್ತೀಚೆಗೆ ಬಿಡುಗಡೆಯಾಗಿರುವ ಹೊಸ ಹ್ಯಾರಿಯರ್ ಕಾರು ಮಾದರಿಯು ಸ್ಮಾರ್ಟ್, ಪ್ಯೂರ್, ಅಡ್ವೆಂಚರ್ ಮತ್ತು ಫಿಯರ್ ಲೆಸ್ ವೆರಿಯೆಂಟ್ ಗಳೊಂದಿಗೆ ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 15.49 ಲಕ್ಷದಿಂದ ರೂ. 24.49 ಲಕ್ಷ ಬೆಲೆ ಹೊಂದಿದೆ. ಹಾಗೆಯೇ ಸಫಾರಿ ಹೊಸ ಕಾರು ಮಾದರಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 16.19 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 25.49 ಲಕ್ಷ ಬೆಲೆ ಹೊಂದಿದ್ದು, ಇದು ಫೀಚರ್ಸ್ ಗಳಿಗೆ ಅನುಗುಣವಾಗಿ ಸ್ಮಾರ್ಟ್, ಪ್ಯೂರ್, ಅಡ್ವೆಂಚರ್ ಮತ್ತು ಅಕಾಂಪ್ಲಿಶ್ಡ್ ಎನ್ನುವ ನಾಲ್ಕು ವೆರಿಯೆಂಟ್ ಗಳನ್ನು ಹೊಂದಿದೆ.
ಹೊಸ ಕಾರುಗಳಲ್ಲಿ ಸ್ಪೋರ್ಟಿ ಡಿಸೈನ್ ಮತ್ತು ಹಲವಾರು ಪ್ರೀಮಿಯಂ ಫೀಚರ್ಸ್ ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಹೊಸ ಕಾರುಗಳಲ್ಲಿ ವಿವಿಧ ವೆರಿಯೆಂಟ್ ಗಳಿಗೆ ಅನ್ವಯಿಸುವಂತೆ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೇರಿದಂತೆ 6 ಏರ್ ಬ್ಯಾಗ್ ಗಳನ್ನು ಮತ್ತು ಟಾಪ್ ಎಂಡ್ ಮಾದರಿಯಲ್ಲಿ 7 ಏರ್ ಬ್ಯಾಗ್ ಗಳ ಜೊತೆಗೆ ಎಬಿಎಸ್, ಇಬಿಡಿ, ತ್ರಿ ಪಾಯಿಂಟ್ ಸೀಟ್ ಬೆಲ್ಟ್, ಹಿಲ್ ಹೋಲ್ಡ್ ಅಸಿಸ್ಟ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, 360 ಡಿಗ್ರಿ ವ್ಯೂ ಕ್ಯಾಮೆರಾ ಸೇರಿದಂತೆ ಹಲವಾರು ಫೀಚರ್ಸ್ ಗಳನ್ನು ನೀಡಲಾಗಿದೆ.
ಇದನ್ನೂ ಓದಿ: ಪೆಟ್ರೋಲ್ ಕಾರುಗಳು Vs ಪೆಟ್ರೋಲ್ ಸಿಎನ್‌ಜಿ ಕಾರುಗಳು.. ಖರೀದಿಗೆ ಯಾವುದು ಬೆಸ್ಟ್?
ಇದರೊಂದಿಗೆ ಹೊಸ ಹ್ಯಾರಿಯರ್ ಮತ್ತು ಸಫಾರಿಯಲ್ಲಿ ಈ ಹಿಂದಿನ 2.0 ಲೀಟರ್ ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಮುಂದುವರಿಸಿದ್ದು, ಇದು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ವಿವಿಧ ಡ್ರೈವ್ ಮೋಡ್ ಗಳ ಮೂಲಕ 170 ಹಾರ್ಸ್ ಪವರ್ ಮತ್ತು 350 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.
Published On - 10:34 pm, Wed, 20 December 23