Tata Harrier EV: ಹ್ಯಾರಿಯರ್ ಇವಿ ಬಿಡುಗಡೆಗೆ ಮುಹೂರ್ತ ಫಿಕ್ಸ್ ಮಾಡಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಬಹುನೀರಿಕ್ಷಿತ ಹ್ಯಾರಿಯರ್ ಎಲೆಕ್ಟ್ರಿಕ್ ಕಾರು ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದ್ದು, ಹೊಸ ಕಾರಿನ ಬಿಡುಗಡೆಯ ಕುರಿತಾಗಿ ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದೆ.

Tata Harrier EV: ಹ್ಯಾರಿಯರ್ ಇವಿ ಬಿಡುಗಡೆಗೆ  ಮುಹೂರ್ತ ಫಿಕ್ಸ್ ಮಾಡಿದ ಟಾಟಾ ಮೋಟಾರ್ಸ್
ಟಾಟಾ ಹ್ಯಾರಿಯರ್ ಇವಿ
Follow us
|

Updated on: Jun 12, 2024 | 6:42 PM

ಎಲೆಕ್ಟ್ರಿಕ್ ಕಾರು ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿರುವ ಟಾಟಾ ಮೋಟಾರ್ಸ್ (Tata Motors) ಕಂಪನಿಯು ತನ್ನ ಬಹುನೀರಿಕ್ಷಿತ ಹ್ಯಾರಿಯರ್ ಎಲೆಕ್ಟ್ರಿಕ್ ಆವೃತ್ತಿ ಬಿಡುಗಡೆ ಮಾಡುತ್ತಿದ್ದು, ಹೊಸ ಆವೃತ್ತಿಯು 2025ರ ಮಾರ್ಚ್ ವೇಳೆಗೆ ಮಾರುಕಟ್ಟೆ ಪ್ರವೇಶಿಸುವುದು ಬಹುತೇಕ ಖಚಿತವಾಗಿದೆ. ಟಾಟಾ ಮೋಟಾರ್ಸ್ ಕಂಪನಿಯು ಇತ್ತೀಚೆಗೆ ಹೂಡಿಕೆದಾರರ ಸಭೆಯಲ್ಲಿ ಹೊಸ ಇವಿ ಕಾರುಗಳ ಬಿಡುಗಡೆ ಕುರಿತಾಗಿ ಮಹತ್ವದ ವಿಚಾರಗಳನ್ನು ಚರ್ಚಿಸಿದ್ದು, ಮುಂಬರುವ ನಾಲ್ಕು ವರ್ಷಗಳಲ್ಲಿ ಒಟ್ಟು 3 ಹೊಸ ಇವಿ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆ ರೂಪಿಸಿದೆ.

ಟಾಟಾ ಮೋಟಾರ್ಸ್ ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಕಾರುಗಳಲ್ಲಿ ಕರ್ವ್ ಇವಿ, ಹ್ಯಾರಿಯರ್ ಇವಿ ಮತ್ತು ಸಿಯೆರಾ ಪ್ರಮುಖವಾಗಿದ್ದು, ಇವುಗಳಲ್ಲಿ ಈ ವರ್ಷಾಂತ್ಯಕ್ಕೆ ಕರ್ವ್ ಇವಿ ಬಿಡುಗಡೆಯಾಗಲಿದ್ದರೆ 2025ರ ಮಾರ್ಚ್ ವೇಳೆಗೆ ಹ್ಯಾರಿಯರ್ ಇವಿ ಬಿಡುಗಡೆಯಾಗಲಿದೆ ಎನ್ನಲಾಗಿದೆ.

ಎಲೆಕ್ಟ್ರಿಕ್ ಉತ್ಪಾದನೆಯಲ್ಲಿ ಮತ್ತೊಂದು ಹಂತದ ಬದಲಾವಣೆಗಾಗಿ ಸಿದ್ದವಾಗಿರುವ ಟಾಟಾ ಮೋಟಾರ್ಸ್ ಕಂಪನಿಯು ಎರಡನೇ ತಲೆಮಾರಿನ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಪ್ಲ್ಯಾಟ್ ಫಾರ್ಮ್ ಅನ್ನು ಅಧಿಕೃತವಾಗಿ ಪರಿಚಯಿಸಿದೆ. ಹೊಸ ಇವಿ ಕಾರು ಉತ್ಪಾದನಾ ಪ್ಲ್ಯಾಟ್ ಫಾರ್ಮ್ ಅನ್ನು ಆಕ್ಟಿ.ಇವಿ ಎಂದು ನಾಮಕರಣಗೊಳಿಸಲಾಗಿದ್ದು, ಇದೇ ಪ್ಲ್ಯಾಟ್ ಫಾರ್ಮ್ ಅಡಿಯಲ್ಲಿ ಈಗಾಗಲೇ ಪಂಚ್ ಇವಿಯನ್ನು ಬಿಡುಗಡೆ ಮಾಡಲಾಗಿದೆ. ಪಂಚ್ ಇವಿ ನಂತರ ಹ್ಯಾರಿಯರ್ ಎಲೆಕ್ಟ್ರಿಕ್ ಕಾರು ಕೂಡಾ ಇದೇ ಪ್ಲ್ಯಾಟ್ ಫಾರ್ಮ್ ಆಧರಿಸಿದ್ದು, ಹಲವಾರು ಹೊಸ ಫೀಚರ್ಸ್ ಹೊಂದಿರಲಿದೆ.

ಇದನ್ನೂ ಓದಿ: ಭಾರತದಲ್ಲಿ ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಕಾರುಗಳಿವು!

ಹ್ಯಾರಿಯರ್ ಇವಿ ಕಾರು ನೆಕ್ಸಾನ್ ಇವಿಗಿಂತಲೂ ಹೆಚ್ಚಿನ ಮಟ್ಟದ ಐಷಾರಾಮಿ ಫೀಚರ್ಸ್ ಹೊಂದಿರಲಿದ್ದು, ಇದರಲ್ಲಿ ಸುಧಾರಿತ ತಂತ್ರಜ್ಞಾನ ಪ್ರೇರಿತ ವಿವಿಧ ಬ್ಯಾಟರಿ ಪ್ಯಾಕ್ ಗಳ ಆಯ್ಕೆ ನೀಡಲಾಗುತ್ತಿದ್ದು, ಪ್ರತಿ ಚಾರ್ಜ್ ಗೆ ಇವು 450 ರಿಂದ 550 ಕಿ.ಮೀ ಮೈಲೇಜ್ ಹೊಂದಿರಲಿದೆ. ಈ ಮೂಲಕ ಇದು ಮಧ್ಯಮ ಕ್ರಮಾಂಕದ ಬಲಿಷ್ಠ ಎಲೆಕ್ಟ್ರಿಕ್ ಎಸ್ ಯುವಿ ಮಾದರಿಯಾಗಿ ಗುರುತಿಸಿಕೊಳ್ಳಲಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 25 ಲಕ್ಷದಿಂದ ರೂ. 30 ಲಕ್ಷ ಬೆಲೆ ಹೊಂದಿರಬಹುದಾಗಿದೆ.

ಇದನ್ನೂ ಓದಿ: ಎಡಿಎಎಸ್ ಸೌಲಭ್ಯ ಹೊಂದಿರುವ ಭಾರತದ ಬಜೆಟ್ ಕಾರುಗಳಿವು!

ಪ್ರಸ್ತುತ ಮಾರುಕಟ್ಟೆಯಲ್ಲಿ ಟಿಗೋರ್, ಟಿಯಾಗೋ, ನೆಕ್ಸಾನ್ ಮತ್ತು ಪಂಚ್ ಕಾರುಗಳಲ್ಲಿ ಇವಿ ಆವೃತ್ತಿಗಳನ್ನು ಮಾರಾಟ ಮಾಡುತ್ತಿರುವ ಟಾಟಾ ಮೋಟಾರ್ಸ್ ಹ್ಯಾರಿಯರ್ ಇವಿ ಮೇಲೂ ಭಾರೀ ನೀರಿಕ್ಷೆಯಿಟ್ಟಿಕೊಂಡಿದೆ. ಇದು ಮಧ್ಯಮ ಗಾತ್ರದ ಎಸ್ ಯುವಿ ಕಾರುಗಳನ್ನು ಬಯಸುವ ಗ್ರಾಹಕರಿಗೆ ಉತ್ತಮ ಆಯ್ಕೆಯಾಗಲಿದ್ದು, ತಂತ್ರಜ್ಞಾನ ವಿಚಾರದಲ್ಲಿ ಗ್ರಾಹಕರ ಗಮನಸೆಳೆಯಲಿದೆ. ಸಾಮಾನ್ಯ ಹ್ಯಾರಿಯರ್ ನಲ್ಲಿರುವಂತೆ ಹಲವಾರು ಸುರಕ್ಷಾ ಫೀಚರ್ಸ್ ಹೊಂದಿರಲಿದ್ದು, ಇದು ಹ್ಯುಂಡೈ ಕೊನಾ ಇವಿ ಮತ್ತು ಎಂಜಿ ಜೆಡ್ಎಸ್ ಇವಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ತಾಜಾ ಸುದ್ದಿ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕರೆ ರಾಜಣ್ಣ ಮಂತ್ರಿ ಸ್ಥಾನ ತ್ಯಜಿಸುತ್ತಾರೆ?
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಆ ಶ್ರೀ ಸ್ಥಾನ ಬಿಟ್ಟುಕೊಡ್ತಾರಾ? ಕೇಳಿ ನಾನೇ ಸ್ವಾಮೀಜಿ ಆಗ್ತೇನೆ: ರಾಜಣ್ಣ
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ