Tata Harrier facelift: ಭರ್ಜರಿ ಫೀಚರ್ಸ್ ಮತ್ತು ಆಕರ್ಷಕ ಬೆಲೆಗೆ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್ ಬಿಡುಗಡೆ

|

Updated on: Oct 17, 2023 | 4:11 PM

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಹೊಸ ಹ್ಯಾರಿಯರ್ ಫೇಸ್‌ಲಿಫ್ಟ್ ಆವೃತ್ತಿಯನ್ನು ಬಿಡುಗಡೆ ಮಾಡಿದೆ.

Tata Harrier facelift: ಭರ್ಜರಿ ಫೀಚರ್ಸ್ ಮತ್ತು ಆಕರ್ಷಕ ಬೆಲೆಗೆ ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್ ಬಿಡುಗಡೆ
ಟಾಟಾ ಹ್ಯಾರಿಯರ್ ಫೇಸ್‌ಲಿಫ್ಟ್ ಬಿಡುಗಡೆ
Follow us on

ದೇಶದ ಜನಪ್ರಿಯ ಕಾರು ಉತ್ಪಾದನಾ ಕಂಪನಿಯಾಗಿರುವ ಟಾಟಾ ಮೋಟಾರ್ಸ್(Tata Motors) ತನ್ನ ಬಹುನೀರಿಕ್ಷಿತ ಹ್ಯಾರಿಯರ್ ಫೇಸ್‌ಲಿಫ್ಟ್ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 15.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 24.49 ಲಕ್ಷ ಬೆಲೆ ಹೊಂದಿದೆ.

ಹೊಸ ಹ್ಯಾರಿಯರ್ ಕಾರು ಮಾದರಿಯು ನೆಕ್ಸಾನ್ ಫೇಸ್‌ಲಿಫ್ಟ್ ಮಾದರಿಯಂತೆ ಸ್ಮಾರ್ಟ್, ಪ್ಯೂರ್, ಅಡ್ವೆಂಚರ್ ಮತ್ತು ಫಿಯರ್ ಲೆಸ್ ವೆರಿಯೆಂಟ್ ಗಳನ್ನು ಹೊಂದಿದ್ದು, ಹೊಸ ಕಾರಿನಲ್ಲಿ ಸದ್ಯಕ್ಕೆ ಮ್ಯಾನುವಲ್ ಮಾದರಿಗಳ ಬೆಲೆ ಮಾತ್ರ ಹಂಚಿಕೊಳ್ಳಲಾಗಿದೆ. ಶೀಘ್ರದಲ್ಲಿಯೇ ಹೊಸ ಕಾರಿನ ಆಟೋಮ್ಯಾಟಿಕ್ ಆವೃತ್ತಿಗಳ ಬೆಲೆ ಮಾಹಿತಿಯನ್ನು ಹಂಚಿಕೊಳ್ಳಲಿದ್ದು, ಸ್ಟ್ಯಾಂಡರ್ಡ್ ವರ್ಷನ್ ಜೊತೆಗೆ ಡಾರ್ಕ್ ಎಡಿಷನ್ ಕೂಡಾ ಖರೀದಿಗೆ ಲಭ್ಯವಿರಲಿದೆ.

ವಿನ್ಯಾಸ ಮತ್ತು ವೈಶಿಷ್ಟ್ಯತೆಗಳು

ಹೊಸ ಹ್ಯಾರಿಯರ್ ಫೇಸ್‌ಲಿಫ್ಟ್ ಕಾರು ಮಾದರಿಯು ಬಲಿಷ್ಠ ವಿನ್ಯಾಸದೊಂದಿಗೆ ಐಷಾರಾಮಿ ನೋಟವನ್ನು ಹೊಂದಿದ್ದು, ಮರುವಿನ್ಯಾಸಗೊಳಿಸಲಾದ ಮುಂಭಾಗದ ಗ್ರೀಲ್, ಎಲ್ಇಡಿ ಟೈಲ್ ಲೈಟ್ ಬಾರ್, ಮುಂಭಾಗ ಮತ್ತು ಹಿಂಬದಿಯ ಬಂಪರ್, ಪೂರ್ಣ ಪ್ರಮಾಣದಲ್ಲಿರುವ ಎಲ್ಇಡಿ ಟೈಲ್ ಲ್ಯಾಂಪ್ಸ್, ಹೊಸ ವಿನ್ಯಾಸದ 18 ಮತ್ತು 19 ಇಂಚಿನ ಅಲಾಯ್ ವ್ಹೀಲ್ ಗಳು, ಗ್ಲಾಸ್ ಬ್ಲ್ಯಾಕ್ ಫಿನಿಶ್ ಹೊಂದಿರುವ ಸ್ಕೀಡ್ ಪ್ಲೇಟ್ ಸೇರಿದಂತೆ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ.

ಹಾಗೆಯೇ ಒಳಭಾಗದಲ್ಲೂ ಸಾಕಷ್ಟು ಬದಲಾವಣೆ ತರಲಾಗಿದ್ದು, 5 ಸೀಟರ್ ಸೌಲಭ್ಯದೊಂದಿಗೆ ಖರೀದಿಗೆ ಲಭ್ಯವಿರಲಿದೆ. ಹೊಸ ಕಾರಿನಲ್ಲಿ ವಿಶೇಷವಾಗಿ ಡ್ಯುಯಲ್ ಜೋನ್ ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಪ್ಯಾಡಲ್ ಶಿಫ್ಟರ್ ಸೇರಿದಂತೆ ಹಲವಾರು ಫೀಚರ್ಸ್ ನೀಡಿದೆ. ಜೊತೆಗೆ ವಿವಿಧ ವೆರಿಯೆಂಟ್ ಗಳಿಗೆ ಅನುಗುಣವಾಗಿ ಫ್ಲಕ್ಸ್ ವುಡ್ ಡ್ಯಾಶ್ ಬೋರ್ಡ್ ನೊಂದಿಗೆ 10.25-ಇಂಚು ಇಲ್ಲವೇ 12.3-ಇಂಚಿನ ಸೆಂಟ್ರಲ್ ಟಚ್ ಸ್ಕ್ರೀನ್ ಇನ್ಪೋಟೈನ್ ಮೆಂಟ್ ಸಿಸ್ಟಂ ನೀಡಲಾಗಿದ್ದು, ಸ್ಪೋರ್ಟಿ ಡ್ರೈವ್ ಅನುಭವಕ್ಕಾಗಿ ಲೆದರ್ ಪ್ಯಾಡಿಂಗ್ ಜೊತೆಗೆ ಕಾಂಟ್ರಾಸ್ಟ್ ಸ್ವೀಚ್ ಮತ್ತು ಎಲ್ಇಡಿ ಆ್ಯಂಬಿಯೆಂಟ್ ಲೈಟಿಂಗ್ಸ್ ಮತ್ತು ಮೂರು ಡ್ರೈವ್ ಮೋಡ್ ಗಳನ್ನು(ಇಕೋ, ಸಿಟಿ ಮತ್ತು ಸ್ಪೋರ್ಟ್) ಹೊಂದಿದೆ.

ಹೊಸ ಹ್ಯಾರಿಯರ್ ಕಾರಿನಲ್ಲಿ ಕನೆಕ್ಟಿವಿಟಿ ಸೌಲಭ್ಯಕ್ಕಾಗಿ ಆಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಬೆಂಬಲಿಸುವ 10.25 ಇಂಚಿನ ಡಿಜಿಟಲ್ ಇನ್ಟ್ರುಮೆಂಟ್ ಕ್ಲಸ್ಟರ್ ನೀಡಲಾಗಿದ್ದು, ಇದರಲ್ಲಿ ನ್ಯಾವಿಗೇಷನ್ ಜೊತೆಗೆ ಹಲವಾರು ಮಾಹಿತಿಗಳನ್ನು ಪಡೆದುಕೊಳ್ಳಬಹುದಾಗಿದೆ. ಇದರಲ್ಲಿ ಮತ್ತೊಂದು ಆಕರ್ಷಕ ತಾಂತ್ರಿಕ ಅಂಶವೆಂದರೆ ಆಟೋ ಆವೃತ್ತಿಗಳು ಏರ್ ಕ್ರಾಫ್ಟ್ ಸ್ಟೈಲ್ ಹೊಂದಿರುವ ಗೇರ್ ಲೀವರ್ ನೀಡಲಾಗಿದ್ದು, ಇನ್ನುಳಿದಂತೆ ಹೊಸ ಕಾರುಗಳಲ್ಲಿ 10-ಸ್ಪೀಕರ್ಸ್ ಜೆಬಿಎಲ್ ಸೌಂಡ್ ಸಿಸ್ಟಂ, ಮುಂಭಾಗದಲ್ಲಿ ಮೆಮೊರಿ ಫಂಕ್ಷನ್ ಮತ್ತು ವೆಂಟಿಲೆಷನ್ ಹೊಂದಿರುವ ಆಸನಗಳು, ಪನೊರಮಿಕ್ ಸನ್ ರೂಫ್, ವೈರ್ ಲೇಸ್ ಚಾರ್ಜರ್ ಸೇರಿದಂತೆ ಹಲವು ಫೀಚರ್ಸ್ ಗಳಿವೆ.

ಇದನ್ನೂ ಓದಿ: ಸೆಪ್ಟೆಂಬರ್ ನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 10 ಕಾರುಗಳಿವು!

ಎಂಜಿನ್ ಮತ್ತು ಪರ್ಫಾಮೆನ್ಸ್

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಹ್ಯಾರಿಯರ್ ನಲ್ಲಿ ಈ ಹಿಂದಿನ 2.0 ಲೀಟರ್ ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಮುಂದುವರಿಸಲಿದ್ದು, ಇದು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ವಿವಿಧ ಡ್ರೈವ್ ಮೋಡ್ ಗಳ ಮೂಲಕ 170 ಹಾರ್ಸ್ ಪವರ್ ಮತ್ತು 350 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಮೂಲಕ ಹೊಸ ಕಾರು ಈ ಬಾರಿ ನವೀಕರಿಸಲಾದ ಸಸ್ಷೆಂಷನ್ ಸೆಟಪ್ ಪಡೆದುಕೊಂಡಿದ್ದು, ಆಫ್ ರೋಡ್ ಗಳಲ್ಲಿ ಉತ್ತಮ ಡ್ರೈವಿಂಗ್ ಅನುಭವ ನೀಡಲಿದೆ.

ಇದನ್ನೂ ಓದಿ: ಅಚ್ಚರಿ ಬೆಲೆಗೆ ಬಿಡುಗಡೆಗೊಂಡಿದೆ ಸಿಟ್ರನ್ ಸಿ3 ಏರ್‌ಕ್ರಾಸ್ ಎಸ್‌ಯುವಿ

ಸುರಕ್ಷಾ ಸೌಲಭ್ಯಗಳು

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಹ್ಯಾರಿಯರ್ ಫೇಸ್‌ಲಿಫ್ಟ್ ಮಾದರಿಯಲ್ಲಿ ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಜೋಡಣೆ ಮಾಡಿದ್ದು, ಟಾಪ್ ಎಂಡ್ ಮಾದರಿಗೆ ಅನ್ವಯಿಸುವಂತೆ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೌಲಭ್ಯವನ್ನು ಮುಂದುವರಿಸಿದೆ. ಜೊತೆಗೆ ಸ್ಟ್ಯಾಂಡರ್ಡ್ ಆಗಿ 6 ಏರ್ ಬ್ಯಾಗ್ ಗಳು, ಎಬಿಎಸ್ ಜೊತೆ ಇಬಿಡಿ, ತ್ರಿ ಪಾಯಿಂಟ್ ಸೀಟ್ ಬೆಲ್ಟ್, ಹಿಲ್ ಹೋಲ್ಡ್ ಅಸಿಸ್ಟ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, 360 ಡಿಗ್ರಿ ವ್ಯೂ ಕ್ಯಾಮೆರಾ ಸೇರಿದಂತೆ ಹಲವಾರು ಫೀಚರ್ಸ್ ಗಳಿವೆ.

Published On - 4:09 pm, Tue, 17 October 23