Tata Harrier, Safari facelift: ಭರ್ಜರಿ ಮೈಲೇಜ್ ನೀಡುತ್ತವೆ ಟಾಟಾ ಹ್ಯಾರಿಯರ್ ಮತ್ತು ಸಫಾರಿ ಫೇಸ್‌ಲಿಫ್ಟ್

ಟಾಟಾ ಹ್ಯಾರಿಯರ್ ಮತ್ತು ಸಫಾರಿ ಫೇಸ್‌ಲಿಫ್ಟ್ ಆವೃತ್ತಿಗಳನ್ನು ಅನಾವರಣಗೊಳಿಸಿದ್ದು, ಹೊಸ ಕಾರುಗಳ ಹಲವಾರು ಹೊಸ ಫೀಚರ್ಸ್ ಗಳೊಂದಿಗೆ ಭರ್ಜರಿ ಇಂಧನ ದಕ್ಷತೆ ಹೊಂದಿವೆ.

Tata Harrier, Safari facelift: ಭರ್ಜರಿ ಮೈಲೇಜ್ ನೀಡುತ್ತವೆ ಟಾಟಾ ಹ್ಯಾರಿಯರ್ ಮತ್ತು ಸಫಾರಿ ಫೇಸ್‌ಲಿಫ್ಟ್
ಟಾಟಾ ಹ್ಯಾರಿಯರ್ ಮತ್ತು ಸಫಾರಿ ಫೇಸ್‌ಲಿಫ್ಟ್
Follow us
Praveen Sannamani
|

Updated on: Oct 11, 2023 | 7:14 PM

ಟಾಟಾ ಮೋಟಾರ್ಸ್(Tata Motors) ಕಂಪನಿಯು ತನ್ನ ಬಹುನೀರಿಕ್ಷಿತ ಹ್ಯಾರಿಯರ್(Harrier) ಮತ್ತು ಸಫಾರಿ ಫೇಸ್‌ಲಿಫ್ಟ್(Safari facelift) ಆವೃತ್ತಿಗಳನ್ನು ಅನಾವರಣಗೊಳಿಸಿದ್ದು, ಅಧಿಕೃತ ಬುಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದೆ. ಹೊಸ ಕಾರುಗಳು ಪ್ರಸ್ತುತ ಮಾರುಕಟ್ಟೆಯಲ್ಲಿನ ಆವೃತ್ತಿಗಳಿಂತಲೂ ಭಾರೀ ಬದಲಾವ ಣೆಯೊಂದಿಗೆ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಕಾರುಗಳ ಇಂಧನ ದಕ್ಷತೆ ಮಾಹಿತಿಯನ್ನು ಹಂಚಿಕೊಂಡಿದೆ.

ಹೊಸ ಸಫಾರಿ ಮತ್ತು ಹ್ಯಾರಿಯರ್ ಕಾರುಗಳಲ್ಲಿ ಈ ಹಿಂದಿನಂತೆ 2.0 ಲೀಟರ್ ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಮುಂದುವರಿಸಲಾಗಿದ್ದು, ಇದು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ವಿವಿಧ ಡ್ರೈವ್ ಮೋಡ್ ಗಳ ಮೂಲಕ 168 ಹಾರ್ಸ್ ಪವರ್ ಮತ್ತು 350 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಈ ಮೂಲಕ ಹೊಸ ಹ್ಯಾರಿಯರ್ ಮ್ಯಾನುವಲ್ ಆವೃತ್ತಿಯು ಪ್ರತಿ ಲೀಟರ್ ಗೆ 16.80 ಕಿ.ಮೀ ಮೈಲೇಜ್ ನೀಡಿದರೆ ಆಟೋಮ್ಯಾಟಿಕ್ ಆವೃತ್ತಿಯು 14.60 ಕಿ.ಮೀ ಮೈಲೇಜ್ ನೀಡುತ್ತೆ. ಹಾಗೆಯೇ ಸಫಾರಿ ಮ್ಯಾನುವಲ್ ಆವೃತ್ತಿಯು ಪ್ರತಿ ಲೀಟರ್ ಗೆ 16.30 ಕಿ.ಮೀ ಮೈಲೇಜ್ ನೀಡಿದರೆ ಆಟೋಮ್ಯಾಟಿಕ್ ಆವೃತ್ತಿಯು 14.50 ಕಿ.ಮೀ ಮೈಲೇಜ್ ನೀಡಲಿದ್ದು, ಇವು ಪರ್ಫಾಮೆನ್ಸ್ ಜೊತೆಗೆ ಹೆಚ್ಚಿನ ಇಂಧನ ದಕ್ಷತೆಯನ್ನು ಖಾತ್ರಿಪಡಿಸುತ್ತವೆ.

Tata Harrier, Safari facelift

ಇದರೊಂದಿಗೆ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಹ್ಯಾರಿಯರ್ ಮತ್ತು ಸಫಾರಿ ಕಾರುಗಳಲ್ಲಿ ಈ ಬಾರಿ 1.5 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಪರಿಚಯಿಸುವ ಸಾಧ್ಯತೆಗಳಿದ್ದು, ಇದು 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 7-ಸ್ಪೀಡ್ ಡ್ಯುಯಲ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಗರಿಷ್ಠ 168 ಹಾರ್ಸ್ ಪವರ್ ಮತ್ತು 280 ಎನ್ಎಂ ಟಾರ್ಕ್ ಉತ್ಪಾದಿಸಬಹುದಾಗಿದೆ. ಆದರೆ ಈ ಕುರಿತಾಗಿ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲವಾದರೂ ಹೊಸ ಕಾರಿನ ಬೆಲೆ ಮಾಹಿತಿ ಬಹಿರಂಗದ ವೇಳೆ ಈ ಕುರಿತು ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ.

ಇದನ್ನೂ ಓದಿ: ಸೆಪ್ಟೆಂಬರ್ ನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 10 ಕಾರುಗಳಿವು!

ಇನ್ನು ಹೊಸ ಕಾರುಗಳು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಭಾರೀ ಬದಲಾವಣೆಗಳನ್ನು ಪಡೆದುಕೊಂಡಿದ್ದು, ಮರುವಿನ್ಯಾಸಗೊಳಿಸಲಾದ ಮುಂಭಾಗದ ಗ್ರೀಲ್, ಎಲ್ಇಡಿ ಟೈಲ್ ಲೈಟ್ ಬಾರ್, ಮುಂಭಾಗ ಮತ್ತು ಹಿಂಬದಿಯ ಬಂಪರ್, ಪೂರ್ಣ ಪ್ರಮಾಣದಲ್ಲಿರುವ ಎಲ್ಇಡಿ ಟೈಲ್ ಲ್ಯಾಂಪ್ಸ್, ಹೊಸ ವಿನ್ಯಾಸದ 19 ಇಂಚಿನ ಅಲಾಯ್ ವ್ಹೀಲ್, ಗ್ಲಾಸ್ ಬ್ಲ್ಯಾಕ್ ಫಿನಿಶ್ ಹೊಂದಿರುವ ಸ್ಕೀಡ್ ಪ್ಲೇಟ್ ಸೇರಿದಂತೆ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ.

Tata Harrier, Safari facelift (1)

ಹೊಸ ಕಾರುಗಳ ಒಳಭಾಗದಲ್ಲೂ ಸಾಕಷ್ಟು ಬದಲಾವಣೆ ತರಲಾಗಿದ್ದು, ಸಫಾರಿ ಕಾರು 6 ಸೀಟರ್ ಮತ್ತು 7 ಸೀಟರ್ ಆಸನಗಳ ಆಯ್ಕೆ ಹೊಂದಿದ್ದರೆ ಹ್ಯಾರಿಯರ್ ಕಾರು 5 ಸೀಟರ್ ಸೌಲಭ್ಯದೊಂದಿಗೆ ಖರೀದಿಗೆ ಲಭ್ಯವಿರಲಿದೆ. ಹೊಸ ಕಾರುಗಳಲ್ಲಿ ಟಾಟಾ ಮೋಟಾರ್ಸ್ ಕಂಪನಿ ಈ ಹಿಂದೆ ಮಾದರಿಗಳಲ್ಲಿ ಇದುವರೆಗೆ ನೀಡದೆ ಇದ್ದ ಡ್ಯುಯಲ್ ಜೋನ್ ಆಟೋಮ್ಯಾಟಿಕ್ ಎಸಿ, ಪ್ಯಾಡಲ್ ಶಿಫ್ಟರ್ ಸೇರಿದಂತೆ ಹಲವಾರು ಫೀಚರ್ಸ್ ನೀಡಿದೆ. ಸಫಾರಿ ಎಸ್ ಯುವಿಯಲ್ಲಿ ಫ್ಲಕ್ಸ್ ವುಡ್ ಡ್ಯಾಶ್ ಬೋರ್ಡ್ ನೊಂದಿಗೆ ವಿವಿಧ ವೆರಿಯೆಂಟ್ ಗಳಿಗೆ ಅನುಗುಣವಾಗಿ 10.25-ಇಂಚು ಇಲ್ಲವೇ 12.3-ಇಂಚಿನ ಸೆಂಟ್ರಲ್ ಟಚ್ ಸ್ಕ್ರೀನ್ ಇನ್ಪೋಟೈನ್ ಮೆಂಟ್ ಸಿಸ್ಟಂ ನೀಡಲಾಗುತ್ತಿದೆ. ಹಾಗೆಯೇ ಹೊಸ ಕಾರುಗಳಲ್ಲಿ ಸ್ಪೋರ್ಟಿ ಡ್ರೈವ್ ಅನುಭವಕ್ಕಾಗಿ ಲೆದರ್ ಪ್ಯಾಡಿಂಗ್ ಜೊತೆಗೆ ಕಾಂಟ್ರಾಸ್ಟ್ ಸ್ವೀಚ್ ಮತ್ತು ಎಲ್ಇಡಿ ಆ್ಯಂಬಿಯೆಂಟ್ ಲೈಟಿಂಗ್ಸ್ ಸೌಲಭ್ಯ ನೀಡಲಾಗಿದೆ.

ಇದನ್ನೂ ಓದಿ: ಎಂಜಿ ಜೆಡ್ಎಸ್ ಇವಿ ಮೇಲೆ ಭರ್ಜರಿ ಆಫರ್- ರೂ. 2.30 ಲಕ್ಷ ಬೆಲೆ ಇಳಿಕೆ..

ಕನೆಕ್ಟಿವಿಟಿ ಸೌಲಭ್ಯಕ್ಕಾಗಿ ಹೊಸ ಕಾರುಗಳಲ್ಲಿ ಆಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಬೆಂಬಲಿಸುವ 10.25 ಇಂಚಿನ ಡಿಜಿಟಲ್ ಇನ್ಟ್ರುಮೆಂಟ್ ಕ್ಲಸ್ಟರ್ ನೀಡಲಾಗಿದ್ದು, ಇದರಲ್ಲಿ ನ್ಯಾವಿಗೇಷನ್ ಜೊತೆಗೆ ಹಲವಾರು ಮಾಹಿತಿಗಳನ್ನು ಪಡೆದುಕೊಳ್ಳಬಹುದಾಗಿದೆ. ಇದರಲ್ಲಿ ಮತ್ತೊಂದು ಆಕರ್ಷಕ ತಾಂತ್ರಿಕ ಅಂಶವೆಂದರೆ ಆಟೋ ಆವೃತ್ತಿಗಳು ಏರ್ ಕ್ರಾಫ್ಟ್ ಸ್ಟೈಲ್ ಹೊಂದಿರುವ ಗೇರ್ ಲೀವರ್ ನೀಡಲಾಗಿದ್ದು, ಇನ್ನುಳಿದಂತೆ ಹೊಸ ಕಾರುಗಳಲ್ಲಿ 10-ಸ್ಪೀಕರ್ಸ್ ಜೆಬಿಎಲ್ ಸೌಂಡ್ ಸಿಸ್ಟಂ, ಮುಂಭಾಗದಲ್ಲಿ ಮೆಮೊರಿ ಫಂಕ್ಷನ್ ಮತ್ತು ವೆಂಟಿಲೆಷನ್ ಹೊಂದಿರುವ ಆಸನಗಳು, ಪನೊರಮಿಕ್ ಸನ್ ರೂಫ್, ವೈರ್ ಲೇಸ್ ಚಾರ್ಜರ್ ಸೇರಿದಂತೆ ಹಲವು ಫೀಚರ್ಸ್ ಗಳಿವೆ.

Tata Harrier, Safari facelift (2)

ಇನ್ನು ಟಾಟಾ ಮೋಟಾರ್ಸ್ ಕಂಪನಿಯು ಹ್ಯಾರಿಯರ್ ಮತ್ತು ಸಫಾರಿ ಫೇಸ್‌ಲಿಫ್ಟ್ ಮಾದರಿಗಳಲ್ಲೂ ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಜೋಡಣೆ ಮಾಡಿದ್ದು, ಹೊಸ ಕಾರುಗಳ ಟಾಪ್ ಎಂಡ್ ಮಾದರಿಗಳಲ್ಲಿ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೌಲಭ್ಯವನ್ನು ಮುಂದುವರಿಸಲಾಗಿದೆ. ಜೊತೆಗೆ ಹೊಸ ಕಾರುಗಳ ಎಲ್ಲಾ ವೆರಿಯೆಂಟ್ ಗಳಿಗೂ ಅನ್ವಯಿಸುವಂತೆ 7 ಏರ್ ಬ್ಯಾಗ್ ಗಳು, ಎಬಿಎಸ್ ಜೊತೆ ಇಬಿಡಿ, ಹಿಲ್ ಹೋಲ್ಡ್ ಅಸಿಸ್ಟ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, 360 ಡಿಗ್ರಿ ವ್ಯೂ ಕ್ಯಾಮೆರಾ ಸೇರಿದಂತೆ ಹಲವಾರು ಫೀಚರ್ಸ್ ಗಳಿರಲಿವೆ. ಹೀಗಾಗಿ ಹೊಸ ಕಾರುಗಳು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ರೂ. 1 ಲಕ್ಷದಿಂದ ರೂ. 1.50 ಲಕ್ಷದಷ್ಟು ದುಬಾರಿಯಾಗಿರುವ ಸಾಧ್ಯತೆಗಳಿದ್ದು, ಪ್ರತಿಸ್ಪರ್ಧಿ ಮಾದರಿಗಳಿಗೆ ಮತ್ತಷ್ಟು ಪೈಪೋಟಿ ನೀಡಲಿವೆ.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ