AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tata Motors: ಟಾಟಾ ಹ್ಯಾರಿಯರ್ ಮತ್ತು ಸಫಾರಿ ಫೇಸ್‌ಲಿಫ್ಟ್ ಬಿಡುಗಡೆಗೆ ದಿನಾಂಕ ನಿಗದಿ

ಟಾಟಾ ಮೋಟಾರ್ಸ್ ಕಂಪನಿಯು ಬಹುನೀರಿಕ್ಷಿತ ಹ್ಯಾರಿಯರ್ ಮತ್ತು ಸಫಾರಿ ಫೇಸ್‌ಲಿಫ್ಟ್ ಅನಾವರಣಗೊಳಿಸಿದ್ದು, ಹೊಸ ಕಾರುಗಳು ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ.

Tata Motors: ಟಾಟಾ ಹ್ಯಾರಿಯರ್ ಮತ್ತು ಸಫಾರಿ ಫೇಸ್‌ಲಿಫ್ಟ್ ಬಿಡುಗಡೆಗೆ ದಿನಾಂಕ ನಿಗದಿ
ಟಾಟಾ ಹ್ಯಾರಿಯರ್ ಮತ್ತು ಸಫಾರಿ ಫೇಸ್‌ಲಿಫ್ಟ್ ಬಿಡುಗಡೆಗೆ ದಿನಾಂಕ ನಿಗದಿ
Praveen Sannamani
|

Updated on: Oct 13, 2023 | 4:37 PM

Share

ಟಾಟಾ ಮೋಟಾರ್ಸ್(Tata Motors) ಕಂಪನಿಯು ಹ್ಯಾರಿಯರ್ ಫೇಸ್‌ಲಿಫ್ಟ್(Harrier facelift) ಮತ್ತು ಸಫಾರಿ ಫೇಸ್‌ಲಿಫ್ಟ್(Safari facelift) ಆವೃತ್ತಿಗಳನ್ನು ಅನಾವರಣಗೊಳಿಸಿದ್ದು, ಅಧಿಕೃತ ಬುಕಿಂಗ್ ಪ್ರಕ್ರಿಯೆಗೂ ಚಾಲನೆ ನೀಡಿದೆ. ಹೊಸ ಕಾರುಗಳ ಖರೀದಿಗಾಗಿ ರೂ. 25 ಸಾವಿರ ಮುಂಗಡ ನಿಗದಿ ಮಾಡಿದ್ದು, ಇದೇ ತಿಂಗಳು 18ರಂದು ಹೊಸ ಕಾರುಗಳ ಅಧಿಕೃತ ಬೆಲೆ ಮಾಹಿತಿ ಬಹಿರಂಗವಾಗಲಿದೆ.

ಹೊಸ ಹ್ಯಾರಿಯರ್ ಮತ್ತು ಸಫಾರಿ ಕಾರುಗಳು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಭಾರೀ ಬದಲಾವಣೆಗಳನ್ನು ಪಡೆದುಕೊಂಡಿದ್ದು, ಹಲವಾರು ಪ್ರೀಮಿಯಂ ಫೀಚರ್ಸ್ ನೀಡಲಾಗಿದೆ. ಹೊಸ ಕಾರುಗಳು ಮರುವಿನ್ಯಾಸಗೊಳಿಸಲಾದ ಮುಂಭಾಗದ ಗ್ರೀಲ್, ಎಲ್ಇಡಿ ಟೈಲ್ ಲೈಟ್ ಬಾರ್, ಮುಂಭಾಗ ಮತ್ತು ಹಿಂಬದಿಯ ಬಂಪರ್, ಪೂರ್ಣ ಪ್ರಮಾಣದಲ್ಲಿರುವ ಎಲ್ಇಡಿ ಟೈಲ್ ಲ್ಯಾಂಪ್ಸ್, ಹೊಸ ವಿನ್ಯಾಸದ 19 ಇಂಚಿನ ಅಲಾಯ್ ವ್ಹೀಲ್, ಗ್ಲಾಸ್ ಬ್ಲ್ಯಾಕ್ ಫಿನಿಶ್ ಹೊಂದಿರುವ ಸ್ಕೀಡ್ ಪ್ಲೇಟ್ ಸೇರಿದಂತೆ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ.

Tata Safari facelift (1)

ಸಫಾರಿ ಕಾರು 6 ಸೀಟರ್ ಮತ್ತು 7 ಸೀಟರ್ ಆಸನಗಳ ಆಯ್ಕೆ ಹೊಂದಿದ್ದರೆ ಹ್ಯಾರಿಯರ್ ಕಾರು 5 ಸೀಟರ್ ಸೌಲಭ್ಯದೊಂದಿಗೆ ಖರೀದಿಗೆ ಲಭ್ಯವಿರಲಿದ್ದು, ಈ ಹಿಂದಿನ ಮಾದರಿಗಳಲ್ಲಿ ಇದುವರೆಗೆ ನೀಡದೆ ಇದ್ದ ಡ್ಯುಯಲ್ ಜೋನ್ ಆಟೋಮ್ಯಾಟಿಕ್ ಎಸಿ, ಪ್ಯಾಡಲ್ ಶಿಫ್ಟರ್ ಸೇರಿದಂತೆ ಹಲವಾರು ಫೀಚರ್ಸ್ ನೀಡಲಾಗಿದೆ. ಸಫಾರಿ ಎಸ್ ಯುವಿಯಲ್ಲಿ ಫ್ಲಕ್ಸ್ ವುಡ್ ಡ್ಯಾಶ್ ಬೋರ್ಡ್ ನೊಂದಿಗೆ ವಿವಿಧ ವೆರಿಯೆಂಟ್ ಗಳಿಗೆ ಅನುಗುಣವಾಗಿ 10.25-ಇಂಚು ಇಲ್ಲವೇ 12.3-ಇಂಚಿನ ಸೆಂಟ್ರಲ್ ಟಚ್ ಸ್ಕ್ರೀನ್ ಇನ್ಪೋಟೈನ್ ಮೆಂಟ್ ಸಿಸ್ಟಂ ನೀಡಲಾಗುತ್ತಿದೆ. ಹಾಗೆಯೇ ಹೊಸ ಕಾರುಗಳಲ್ಲಿ ಸ್ಪೋರ್ಟಿ ಡ್ರೈವ್ ಅನುಭವಕ್ಕಾಗಿ ಲೆದರ್ ಪ್ಯಾಡಿಂಗ್ ಜೊತೆಗೆ ಕಾಂಟ್ರಾಸ್ಟ್ ಸ್ವೀಚ್ ಮತ್ತು ಎಲ್ಇಡಿ ಆ್ಯಂಬಿಯೆಂಟ್ ಲೈಟಿಂಗ್ಸ್ ಸೌಲಭ್ಯ ನೀಡಲಾಗಿದೆ.

ಇದನ್ನೂ ಓದಿ: ರಾಜ್ಯ ಸಚಿವ ಸಂಪುಟ ಸಚಿವರಿಗೆ ಐಷಾರಾಮಿ ಕಾರು ಭಾಗ್ಯ- ಖುಷಿ ಹಂಚಿಕೊಂಡ ಸಚಿವ ಎನ್ ಎಸ್ ಬೋಸರಾಜು!

ಹೊಸ ಕಾರುಗಳಲ್ಲಿ ಕನೆಕ್ಟಿವಿಟಿ ಸೌಲಭ್ಯಕ್ಕಾಗಿ ಆಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಬೆಂಬಲಿಸುವ 10.25 ಇಂಚಿನ ಡಿಜಿಟಲ್ ಇನ್ಟ್ರುಮೆಂಟ್ ಕ್ಲಸ್ಟರ್ ನೀಡಲಾಗಿದ್ದು, ಇದರಲ್ಲಿ ನ್ಯಾವಿಗೇಷನ್ ಜೊತೆಗೆ ಹಲವಾರು ಮಾಹಿತಿಗಳನ್ನು ಪಡೆದುಕೊಳ್ಳಬಹುದಾಗಿದೆ. ಇದರಲ್ಲಿ ಮತ್ತೊಂದು ಆಕರ್ಷಕ ತಾಂತ್ರಿಕ ಅಂಶವೆಂದರೆ ಆಟೋ ಆವೃತ್ತಿಗಳು ಏರ್ ಕ್ರಾಫ್ಟ್ ಸ್ಟೈಲ್ ಹೊಂದಿರುವ ಗೇರ್ ಲೀವರ್ ನೀಡಲಾಗಿದ್ದು, ಇನ್ನುಳಿದಂತೆ ಹೊಸ ಕಾರುಗಳಲ್ಲಿ 10-ಸ್ಪೀಕರ್ಸ್ ಜೆಬಿಎಲ್ ಸೌಂಡ್ ಸಿಸ್ಟಂ, ಮುಂಭಾಗದಲ್ಲಿ ಮೆಮೊರಿ ಫಂಕ್ಷನ್ ಮತ್ತು ವೆಂಟಿಲೆಷನ್ ಹೊಂದಿರುವ ಆಸನಗಳು, ಪನೊರಮಿಕ್ ಸನ್ ರೂಫ್, ವೈರ್ ಲೇಸ್ ಚಾರ್ಜರ್ ಸೇರಿದಂತೆ ಹಲವು ಫೀಚರ್ಸ್ ಗಳಿವೆ.

Tata Safari facelift

ಎಂಜಿನ್ ಮತ್ತು ಪರ್ಫಾಮೆನ್ಸ್

ಟಾಟಾ ಮೋಟಾರ್ಸ್ ಕಂಪನಿ ಈ ಹಿಂದಿನ ಮಾದರಿಗಳಲ್ಲಿನ 2.0 ಲೀಟರ್ ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಮುಂದುವರಿಸಲಿದ್ದು, ಇದು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ವಿವಿಧ ಡ್ರೈವ್ ಮೋಡ್ ಗಳ ಮೂಲಕ 168 ಹಾರ್ಸ್ ಪವರ್ ಮತ್ತು 350 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಹಾಗೆಯೇ ಹೊಸ ಕಾರಿನಲ್ಲಿ ಈ ಬಾರಿ 1.5 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಪರಿಚಯಿಸುವ ಸಾಧ್ಯತೆಗಳಿದ್ದು, ಇದು 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 7-ಸ್ಪೀಡ್ ಡ್ಯುಯಲ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಗರಿಷ್ಠ 168 ಹಾರ್ಸ್ ಪವರ್ ಮತ್ತು 280 ಎನ್ಎಂ ಟಾರ್ಕ್ ಉತ್ಪಾದಿಸಬಹುದಾಗಿದೆ.

ಇದನ್ನೂ ಓದಿ: ಸೆಪ್ಟೆಂಬರ್ ನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 10 ಕಾರುಗಳಿವು!

ಹೊಸ ಹ್ಯಾರಿಯರ್ ಮತ್ತು ಸಫಾರಿ ಫೇಸ್‌ಲಿಫ್ಟ್ ಮಾದರಿಗಳಲ್ಲಿ ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಜೋಡಣೆ ಮಾಡಿದ್ದು, ಹೊಸ ಕಾರುಗಳ ಟಾಪ್ ಎಂಡ್ ಮಾದರಿಗಳಲ್ಲಿ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೌಲಭ್ಯವನ್ನು ಮುಂದುವರಿಸಲಾಗಿದೆ. ಜೊತೆಗೆ ಹೊಸ ಕಾರುಗಳ ಎಲ್ಲಾ ವೆರಿಯೆಂಟ್ ಗಳಿಗೂ ಅನ್ವಯಿಸುವಂತೆ 7 ಏರ್ ಬ್ಯಾಗ್ ಗಳು, ಎಬಿಎಸ್ ಜೊತೆ ಇಬಿಡಿ, ಹಿಲ್ ಹೋಲ್ಡ್ ಅಸಿಸ್ಟ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, 360 ಡಿಗ್ರಿ ವ್ಯೂ ಕ್ಯಾಮೆರಾ ಸೇರಿದಂತೆ ಹಲವಾರು ಫೀಚರ್ಸ್ ಗಳಿರಲಿವೆ. ಹೀಗಾಗಿ ಹೊಸ ಕಾರುಗಳ ಬೆಲೆಯಲ್ಲಿ ತುಸು ಹೆಚ್ಚಳವಾಗುವ ಸಾಧ್ಯತೆಗಳಿದ್ದು, ಈ ಹಿಂದಿನ ಮಾದರಿಗಿಂತಲೂ ರೂ. 70 ಸಾವಿರದಿಂದ ರೂ. 1.50 ಲಕ್ಷದಷ್ಟು ದುಬಾರಿಯಾಗಿರಲಿವೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ