Tata Harrier, Safari facelifts: ಹೊಸ ಅಲೆ ಸೃಷ್ಟಿಸಿದ ಟಾಟಾ ಹ್ಯಾರಿಯರ್ ಮತ್ತು ಸಫಾರಿ ಫೇಸ್‌ಲಿಫ್ಟ್..

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಬಹುನೀರಿಕ್ಷಿತ ಹ್ಯಾರಿಯರ್ ಮತ್ತು ಸಫಾರಿ ಫೇಸ್‌ಲಿಫ್ಟ್ ಆವೃತ್ತಿಗಳನ್ನು ಅನಾವರಣಗೊಳಿಸಿದೆ.

Tata Harrier, Safari facelifts: ಹೊಸ ಅಲೆ ಸೃಷ್ಟಿಸಿದ ಟಾಟಾ ಹ್ಯಾರಿಯರ್ ಮತ್ತು ಸಫಾರಿ ಫೇಸ್‌ಲಿಫ್ಟ್..
ಟಾಟಾ ಹ್ಯಾರಿಯರ್ ಮತ್ತು ಸಫಾರಿ ಫೇಸ್‌ಲಿಫ್ಟ್
Follow us
Praveen Sannamani
|

Updated on:Oct 08, 2023 | 7:22 PM

ದೇಶದ ಜನಪ್ರಿಯ ಕಾರು ಉತ್ಪಾದನಾ ಕಂಪನಿಯಾಗಿರುವ ಟಾಟಾ ಮೋಟಾರ್ಸ್(Tata Motors) ತನ್ನ ಬಹುನೀರಿಕ್ಷಿತ ಹ್ಯಾರಿಯರ್(Harrier) ಮತ್ತು ಸಫಾರಿ ಫೇಸ್‌ಲಿಫ್ಟ್(Safari facelift) ಆವೃತ್ತಿಗಳನ್ನು ಅನಾವರಣಗೊಳಿಸಿದ್ದು, ಅಧಿಕೃತ ಬುಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದೆ. ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿನ ಆವೃತ್ತಿಗಳಿಂತಲೂ ಭಾರೀ ಬದಲಾವ ಣೆಯೊಂದಿಗೆ ಬಿಡುಗಡೆಗೆ ಸಿದ್ದವಾಗಿದ್ದು, ಆಸಕ್ತ ಗ್ರಾಹಕರು ರೂ. 25 ಸಾವಿರ ಮುಂಗಡದೊಂದಿಗೆ ಬುಕಿಂಗ್ ದಾಖಲಿಸಬಹುದಾಗಿದೆ.

ಬುಕಿಂಗ್ ಮತ್ತು ಬಿಡುಗಡೆ

ಹ್ಯಾರಿಯರ್ ಮತ್ತು ಸಫಾರಿ ಫೇಸ್‌ಲಿಫ್ಟ್ ಮಾದರಿಗಳನ್ನು ಸದ್ಯ ಅನಾವರಣಗೊಳಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಅಧಿಕೃತ ಬುಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಹೊಸ ಕಾರುಗಳು ಮುಂಬರುವ ದೀಪಾವಳಿ ಹೊತ್ತಿಗೆ ಗ್ರಾಹಕರ ಕೈಸೇರಲಿವೆ. ಹೊಸ ಕಾರುಗಳು ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಯೆಂತೆ ಭಾರೀ ಬದಲಾವಣೆಗಳನ್ನು ಪಡೆದುಕೊಂಡಿದ್ದು, ಹಲವಾರು ಪ್ರೀಮಿಯಂ ಫೀಚರ್ಸ್ ಗಳೊಂದಿಗೆ ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಳ್ಳುವ ಸಾಧ್ಯತೆಗಳಿವೆ.

Tata Safari facelift (1)

ವಿನ್ಯಾಸ ಮತ್ತು ವೈಶಿಷ್ಟ್ಯತೆಗಳು

ಹೊಸ ಹ್ಯಾರಿಯರ್ ಮತ್ತು ಸಫಾರಿ ಎಸ್ ಯುವಿ ಕಾರುಗಳು ಬಲಿಷ್ಠ ವಿನ್ಯಾಸದೊಂದಿಗೆ ಐಷಾರಾಮಿ ನೋಟವನ್ನು ಹೊಂದಿದ್ದು, ಮರುವಿನ್ಯಾಸಗೊಳಿಸಲಾದ ಮುಂಭಾಗದ ಗ್ರೀಲ್, ಎಲ್ಇಡಿ ಟೈಲ್ ಲೈಟ್ ಬಾರ್, ಮುಂಭಾಗ ಮತ್ತು ಹಿಂಬದಿಯ ಬಂಪರ್, ಪೂರ್ಣ ಪ್ರಮಾಣದಲ್ಲಿರುವ ಎಲ್ಇಡಿ ಟೈಲ್ ಲ್ಯಾಂಪ್ಸ್, ಹೊಸ ವಿನ್ಯಾಸದ 19 ಇಂಚಿನ ಅಲಾಯ್ ವ್ಹೀಲ್, ಗ್ಲಾಸ್ ಬ್ಲ್ಯಾಕ್ ಫಿನಿಶ್ ಹೊಂದಿರುವ ಸ್ಕೀಡ್ ಪ್ಲೇಟ್ ಸೇರಿದಂತೆ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ.

ಹಾಗೆಯೇ ಹೊಸ ಕಾರುಗಳ ಒಳಭಾಗದಲ್ಲೂ ಸಾಕಷ್ಟು ಬದಲಾವಣೆ ತರಲಾಗಿದ್ದು, ಸಫಾರಿ ಕಾರು 6 ಸೀಟರ್ ಮತ್ತು 7 ಸೀಟರ್ ಆಸನಗಳ ಆಯ್ಕೆ ಹೊಂದಿದ್ದರೆ ಹ್ಯಾರಿಯರ್ ಕಾರು 5 ಸೀಟರ್ ಸೌಲಭ್ಯದೊಂದಿಗೆ ಖರೀದಿಗೆ ಲಭ್ಯವಿರಲಿದೆ. ಹೊಸ ಕಾರುಗಳಲ್ಲಿ ಟಾಟಾ ಮೋಟಾರ್ಸ್ ಕಂಪನಿ ಈ ಹಿಂದೆ ಮಾದರಿಗಳಲ್ಲಿ ಇದುವರೆಗೆ ನೀಡದೆ ಇದ್ದ ಡ್ಯುಯಲ್ ಜೋನ್ ಆಟೋಮ್ಯಾಟಿಕ್ ಎಸಿ, ಪ್ಯಾಡಲ್ ಶಿಫ್ಟರ್ ಸೇರಿದಂತೆ ಹಲವಾರು ಫೀಚರ್ಸ್ ನೀಡಿದೆ. ಸಫಾರಿ ಎಸ್ ಯುವಿಯಲ್ಲಿ ಫ್ಲಕ್ಸ್ ವುಡ್ ಡ್ಯಾಶ್ ಬೋರ್ಡ್ ನೊಂದಿಗೆ ವಿವಿಧ ವೆರಿಯೆಂಟ್ ಗಳಿಗೆ ಅನುಗುಣವಾಗಿ 10.25-ಇಂಚು ಇಲ್ಲವೇ 12.3-ಇಂಚಿನ ಸೆಂಟ್ರಲ್ ಟಚ್ ಸ್ಕ್ರೀನ್ ಇನ್ಪೋಟೈನ್ ಮೆಂಟ್ ಸಿಸ್ಟಂ ನೀಡಲಾಗುತ್ತಿದೆ. ಹಾಗೆಯೇ ಹೊಸ ಕಾರುಗಳಲ್ಲಿ ಸ್ಪೋರ್ಟಿ ಡ್ರೈವ್ ಅನುಭವಕ್ಕಾಗಿ ಲೆದರ್ ಪ್ಯಾಡಿಂಗ್ ಜೊತೆಗೆ ಕಾಂಟ್ರಾಸ್ಟ್ ಸ್ವೀಚ್ ಮತ್ತು ಎಲ್ಇಡಿ ಆ್ಯಂಬಿಯೆಂಟ್ ಲೈಟಿಂಗ್ಸ್ ಸೌಲಭ್ಯ ನೀಡಲಾಗಿದೆ.

Tata Safari facelift

ಇದನ್ನೂ ಓದಿ: ಎಂಜಿ ಜೆಡ್ಎಸ್ ಇವಿ ಮೇಲೆ ಭರ್ಜರಿ ಆಫರ್- ರೂ. 2.30 ಲಕ್ಷ ಬೆಲೆ ಇಳಿಕೆ..

ಹೊಸ ಕಾರುಗಳಲ್ಲಿ ಕನೆಕ್ಟಿವಿಟಿ ಸೌಲಭ್ಯಕ್ಕಾಗಿ ಆಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಬೆಂಬಲಿಸುವ 10.25 ಇಂಚಿನ ಡಿಜಿಟಲ್ ಇನ್ಟ್ರುಮೆಂಟ್ ಕ್ಲಸ್ಟರ್ ನೀಡಲಾಗಿದ್ದು, ಇದರಲ್ಲಿ ನ್ಯಾವಿಗೇಷನ್ ಜೊತೆಗೆ ಹಲವಾರು ಮಾಹಿತಿಗಳನ್ನು ಪಡೆದುಕೊಳ್ಳಬಹುದಾಗಿದೆ. ಇದರಲ್ಲಿ ಮತ್ತೊಂದು ಆಕರ್ಷಕ ತಾಂತ್ರಿಕ ಅಂಶವೆಂದರೆ ಆಟೋ ಆವೃತ್ತಿಗಳು ಏರ್ ಕ್ರಾಫ್ಟ್ ಸ್ಟೈಲ್ ಹೊಂದಿರುವ ಗೇರ್ ಲೀವರ್ ನೀಡಲಾಗಿದ್ದು, ಇನ್ನುಳಿದಂತೆ ಹೊಸ ಕಾರುಗಳಲ್ಲಿ 10-ಸ್ಪೀಕರ್ಸ್ ಜೆಬಿಎಲ್ ಸೌಂಡ್ ಸಿಸ್ಟಂ, ಮುಂಭಾಗದಲ್ಲಿ ಮೆಮೊರಿ ಫಂಕ್ಷನ್ ಮತ್ತು ವೆಂಟಿಲೆಷನ್ ಹೊಂದಿರುವ ಆಸನಗಳು, ಪನೊರಮಿಕ್ ಸನ್ ರೂಫ್, ವೈರ್ ಲೇಸ್ ಚಾರ್ಜರ್ ಸೇರಿದಂತೆ ಹಲವು ಫೀಚರ್ಸ್ ಗಳಿವೆ.

Tata Harrier, Safari facelift (1)

ಎಂಜಿನ್ ಮತ್ತು ಪರ್ಫಾಮೆನ್ಸ್

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಸಫಾರಿ ಮತ್ತು ಹ್ಯಾರಿಯರ್ ಕಾರುಗಳಲ್ಲಿ ಈ ಹಿಂದಿನ 2.0 ಲೀಟರ್ ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಮುಂದುವರಿಸಲಿದ್ದು, ಇದು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ವಿವಿಧ ಡ್ರೈವ್ ಮೋಡ್ ಗಳ ಮೂಲಕ 168 ಹಾರ್ಸ್ ಪವರ್ ಮತ್ತು 350 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಹಾಗೆಯೇ ಹೊಸ ಕಾರಿನಲ್ಲಿ ಈ ಬಾರಿ 1.5 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಪರಿಚಯಿಸುವ ಸಾಧ್ಯತೆಗಳಿದ್ದು, ಇದು 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಮತ್ತು 7-ಸ್ಪೀಡ್ ಡ್ಯುಯಲ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಗರಿಷ್ಠ 168 ಹಾರ್ಸ್ ಪವರ್ ಮತ್ತು 280 ಎನ್ಎಂ ಟಾರ್ಕ್ ಉತ್ಪಾದಿಸಬಹುದಾಗಿದೆ.

Tata Harrier facelift (3)

ಸುರಕ್ಷಾ ಸೌಲಭ್ಯಗಳು

ಹೊಸ ಕಾರುಗಳ ಸುರಕ್ಷತೆಯಲ್ಲಿ ಸದ್ಯ ಟ್ರೆಂಡ್ ಸೃಷ್ಠಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಹ್ಯಾರಿಯರ್ ಮತ್ತು ಸಫಾರಿ ಫೇಸ್‌ಲಿಫ್ಟ್ ಮಾದರಿಗಳಲ್ಲೂ ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಜೋಡಣೆ ಮಾಡಿದ್ದು, ಹೊಸ ಕಾರುಗಳ ಟಾಪ್ ಎಂಡ್ ಮಾದರಿಗಳಲ್ಲಿ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೌಲಭ್ಯವನ್ನು ಮುಂದುವರಿಸಲಾಗಿದೆ. ಜೊತೆಗೆ ಹೊಸ ಕಾರುಗಳ ಎಲ್ಲಾ ವೆರಿಯೆಂಟ್ ಗಳಿಗೂ ಅನ್ವಯಿಸುವಂತೆ 7 ಏರ್ ಬ್ಯಾಗ್ ಗಳು, ಎಬಿಎಸ್ ಜೊತೆ ಇಬಿಡಿ, ಹಿಲ್ ಹೋಲ್ಡ್ ಅಸಿಸ್ಟ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, 360 ಡಿಗ್ರಿ ವ್ಯೂ ಕ್ಯಾಮೆರಾ ಸೇರಿದಂತೆ ಹಲವಾರು ಫೀಚರ್ಸ್ ಗಳಿರಲಿವೆ.

Tata Harrier, Safari facelift (2)

ಇದನ್ನೂ ಓದಿ: ಹಳೆಯ ವಾಹನಗಳಿಗೆ ಗುಡ್ ಬೈ ಹೇಳಲು ಬೆಂಗಳೂರಿನಲ್ಲಿ ವೆಹಿಕಲ್ ಸ್ಕ್ರ್ಯಾಪಿಂಗ್ ಕೇಂದ್ರ ಆರಂಭ

ವೆರಿಯೆಂಟ್ ಗಳು ಮತ್ತು ಅಂದಾಜು ಬೆಲೆ

ನೆಕ್ಸಾನ್ ಫೇಸ್‌ಲಿಫ್ಟ್ ನಲ್ಲಿರುವಂತೆ ಹ್ಯಾರಿಯರ್ ಫೇಸ್‌ಲಿಫ್ಟ್ ಕೂಡಾ ಸ್ಮಾರ್ಟ್, ಪ್ಯೂರ್, ಅಡ್ವೆಂಚರ್ ಮತ್ತು ಫಿಯರ್ ಲೆಸ್ ವೆರಿಯೆಂಟ್ ಗಳನ್ನು ಹೊಂದಿರಲಿದ್ದರೆ ಸಫಾರಿ ಫೇಸ್‌ಲಿಫ್ಟ್ ಮಾದರಿಯು ಸ್ಮಾರ್ಟ್, ಪ್ಯೂರ್, ಅಡ್ವೆಂಚರ್ ಮತ್ತು ಅಕಾಂಪ್ಲಿಶ್ಡ್ ವೆರಿಯೆಂಟ್ ಗಳನ್ನು ಹೊಂದಿರಲಿವೆ. ಇದರೊಂದಿಗೆ ಹೊಸ ಕಾರುಗಳು ಭಾರೀ ಬದಲಾವಣೆಯೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಎಕ್ಸ್ ಶೋರೂಂ ದರದಲ್ಲಿ ಈ ಹಿಂದಿನ ಮಾದರಿಗಿಂತ ರೂ. 70 ಸಾವಿರದಿಂದ ರೂ. 1.50 ಲಕ್ಷದಷ್ಟು ದುಬಾರಿಯಾಗಿರಲಿವೆ.

Published On - 5:29 pm, Sat, 7 October 23