Tata Harrier, Safari facelifts: ಸುರಕ್ಷತೆಯಲ್ಲಿ 5 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡ ಟಾಟಾ ಹ್ಯಾರಿಯರ್ ಮತ್ತು ಸಫಾರಿ ಫೇಸ್‌ಲಿಫ್ಟ್..

|

Updated on: Oct 18, 2023 | 8:14 PM

ಟಾಟಾ ಹ್ಯಾರಿಯರ್ ಮತ್ತು ಸಫಾರಿ ಫೇಸ್‌ಲಿಫ್ಟ್ ಆವೃತ್ತಿಗಳು ಗ್ಲೋಬಲ್ ಎನ್ ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಗರಿಷ್ಠ ರೇಟಿಂಗ್ಸ್ ಪಡೆದುಕೊಂಡಿವೆ.

Tata Harrier, Safari facelifts: ಸುರಕ್ಷತೆಯಲ್ಲಿ 5 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡ ಟಾಟಾ ಹ್ಯಾರಿಯರ್ ಮತ್ತು ಸಫಾರಿ ಫೇಸ್‌ಲಿಫ್ಟ್..
ಟಾಟಾ ಹ್ಯಾರಿಯರ್ ಮತ್ತು ಸಫಾರಿ ಫೇಸ್‌ಲಿಫ್ಟ್
Follow us on

ದೇಶದ ಜನಪ್ರಿಯ ಕಾರು ಉತ್ಪಾದನಾ ಕಂಪನಿಯಾಗಿರುವ ಟಾಟಾ ಮೋಟಾರ್ಸ್(Tata Motors) ಇತ್ತೀಚೆಗೆ ಹ್ಯಾರಿಯರ್ ಮತ್ತು ಸಫಾರಿ ಫೇಸ್‌ಲಿಫ್ಟ್ ಆವೃತ್ತಿಗಳನ್ನು ಬಿಡುಗಡೆ ಮಾಡಿದ್ದು, ಫೇಸ್‌ಲಿಫ್ಟ್ ಆವೃತ್ತಿಗಳು ಇದೀಗ ಪ್ರಯಾಣಿಕರ ಸುರಕ್ಷತೆಯ ಪರೀಕ್ಷೆಯಲ್ಲಿ ಗರಿಷ್ಠ ರೇಟಿಂಗ್ಸ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿವೆ. ಗ್ಲೋಬಲ್ ನ್ಯೂ ಕಾರ್ ಅಸೆಸ್‌ಮೆಂಟ್ ಪ್ರೋಗ್ರಾಂ(Global-NCAP) ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಹ್ಯಾರಿಯರ್ ಮತ್ತು ಸಫಾರಿ ಫೇಸ್‌ಲಿಫ್ಟ್ ಆವೃತ್ತಿಗಳು 5 ಸ್ಟಾರ್ ರೇಟಿಂಗ್ಸ್ ಪಡೆದುಕೊಂಡಿದ್ದು, ಅಪಘಾತದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆಯನ್ನು ಖಾತ್ರಿಪಡಿಸಿವೆ.

ಹೊಸ ಕಾರು ವಯಸ್ಕ ಪ್ರಯಾಣಿಕರ ಸುರಕ್ಷತೆಗಾಗಿ ನೀಡಲಾಗುವ ಒಟ್ಟಾರೆ 34 ಅಂಕಗಳಿಗೆ 33.05 ಅಂಕಗಳನ್ನು ಗಳಿಸಿದರೆ ಮಕ್ಕಳ ಸುರಕ್ಷತೆಗಾಗಿ ನೀಡಲಾಗುವ 49 ಅಂಕಗಳಲ್ಲಿ 45 ಅಂಕಗಳನ್ನು ಗಳಿಸಿದ್ದು, ಸೈಡ್ ಇಂಪ್ಯಾಕ್ಟ್ ಟೆಸ್ಟ್ ನಲ್ಲೂ ಎರಡು ಎಸ್ ಯುವಿ ಕಾರುಗಳು ಉತ್ತಮ ಪ್ರದರ್ಶನ ತೋರಿವೆ.

ಇದನ್ನೂ ಓದಿ: ಹಳೆಯ ವಾಹನಗಳಿಗೆ ಗುಡ್ ಬೈ ಹೇಳಲು ಬೆಂಗಳೂರಿನಲ್ಲಿ ವೆಹಿಕಲ್ ಸ್ಕ್ರ್ಯಾಪಿಂಗ್ ಕೇಂದ್ರ ಆರಂಭ

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಸಫಾರಿ ಮತ್ತು ಹ್ಯಾರಿಯರ್ ಫೇಸ್‌ಲಿಫ್ಟ್ ಮಾದರಿಗಳಲ್ಲಿ ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಜೋಡಣೆ ಮಾಡಿದ್ದು, ಟಾಪ್ ಎಂಡ್ ಮಾದರಿಗೆ ಅನ್ವಯಿಸುವಂತೆ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಜೋಡಣೆ ಮಾಡಿದೆ. ಜೊತೆಗೆ ಸ್ಟ್ಯಾಂಡರ್ಡ್ ಆಗಿ 6 ಏರ್ ಬ್ಯಾಗ್ ಗಳನ್ನು ಮತ್ತು ಟಾಪ್ ಎಂಡ್ ಮಾದರಿಗಳಿಗೆ ಅನ್ವಯಿಸುವಂತೆ 7 ಏರ್ ಬ್ಯಾಗ್ ಗಳನ್ನು ಜೋಡಿಸಿದ್ದು, ಇದರೊಂದಿಗೆ ಎಬಿಎಸ್, ಇಬಿಡಿ, ತ್ರಿ ಪಾಯಿಂಟ್ ಸೀಟ್ ಬೆಲ್ಟ್, ಹಿಲ್ ಹೋಲ್ಡ್ ಅಸಿಸ್ಟ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, 360 ಡಿಗ್ರಿ ವ್ಯೂ ಕ್ಯಾಮೆರಾ ಸೇರಿದಂತೆ ಹಲವಾರು ಫೀಚರ್ಸ್ ಗಳಿವೆ.

ಇನ್ನು ಹೊಸ ಸಫಾರಿ ಮತ್ತು ಹ್ಯಾರಿಯರ್ ನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಈ ಹಿಂದಿನ 2.0 ಲೀಟರ್ ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಮುಂದುವರಿಸಿದ್ದು, ಇದು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ವಿವಿಧ ಡ್ರೈವ್ ಮೋಡ್ ಗಳ ಮೂಲಕ 170 ಹಾರ್ಸ್ ಪವರ್ ಮತ್ತು 350 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಇದರೊಂದಿಗೆ ಹೊಸ ಕಾರುಗಳ ಕಾರಿನ ಇಂಧನ ದಕ್ಷತೆ ಕೂಡಾ ಸಾಕಷ್ಟು ಸುಧಾರಿಸಿದ್ದು, ಮ್ಯಾನುವಲ್ ಆವೃತ್ತಿಗಳು ಪ್ರತಿ ಲೀಟರ್ ಗೆ 16.30 ಕಿ.ಮೀ ಮೈಲೇಜ್ ನೀಡಿದರೆ ಆಟೋಮ್ಯಾಟಿಕ್ ಆವೃತ್ತಿಗಳು 14.50 ಕಿ.ಮೀ ಮೈಲೇಜ್ ನೀಡುತ್ತವೆ.

ಇದನ್ನೂ ಓದಿ: ಸೆಪ್ಟೆಂಬರ್ ನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್ 10 ಕಾರುಗಳಿವು!

ಬೆಲೆ ಮತ್ತು ವೆರಿಯೆಂಟ್ ಗಳು
ಸಫಾರಿ ಹೊಸ ಕಾರು ಮಾದರಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 16.19 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 25.49 ಲಕ್ಷ ಬೆಲೆ ಹೊಂದಿದ್ದು, ಫೀಚರ್ಸ್ ಗಳಿಗೆ ಅನುಗುಣವಾಗಿ ಸ್ಮಾರ್ಟ್, ಪ್ಯೂರ್, ಅಡ್ವೆಂಚರ್ ಮತ್ತು ಅಕಾಂಪ್ಲಿಶ್ಡ್ ಎನ್ನುವ ನಾಲ್ಕು ವೆರಿಯೆಂಟ್ ಗಳನ್ನು ಹೊಂದಿದೆ. ಹಾಗೆಯೇ ಹ್ಯಾರಿಯರ್ ಕಾರು ಸ್ಮಾರ್ಟ್, ಪ್ಯೂರ್, ಅಡ್ವೆಂಚರ್ ಮತ್ತು ಫಿಯರ್ ಲೆಸ್ ವೆರಿಯೆಂಟ್ ಗಳನ್ನು ಹೊಂದಿದ್ದು, ದೆಹಲಿ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 15.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 24.49 ಲಕ್ಷ ಬೆಲೆ ಹೊಂದಿದೆ.