ಟಾಟಾ ನೆಕ್ಸಾನ್ ಇವಿ, ಟಿಯಾಗೋ ಇವಿ ಮತ್ತು ಪಂಚ್ ಇವಿ ಮೇಲೆ ಆಫರ್ ಘೋಷಣೆ

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಇವಿ ಕಾರುಗಳ ಖರೀದಿ ಮೇಲೆ ಏಪ್ರಿಲ್ ಅವಧಿಯ ಆಫರ್ ನೀಡುತ್ತಿದ್ದು, ಹೊಸ ಆಫರ್ ಗಳಲ್ಲಿ ಗ್ರಾಹಕರು ಕ್ಯಾಶ್ ಡಿಸ್ಕೌಂಟ್ ಸೇರಿದಂತೆ ವಿವಿಧ ಆಫರ್ ಪಡೆದುಕೊಳ್ಳಬಹುದಾಗಿದೆ.

ಟಾಟಾ ನೆಕ್ಸಾನ್ ಇವಿ, ಟಿಯಾಗೋ ಇವಿ ಮತ್ತು ಪಂಚ್ ಇವಿ ಮೇಲೆ ಆಫರ್ ಘೋಷಣೆ
ಟಾಟಾ ನೆಕ್ಸಾನ್ ಇವಿ, ಟಿಯಾಗೋ ಇವಿ ಮತ್ತು ಪಂಚ್ ಇವಿ ಮೇಲೆ ಆಫರ್ ಘೋಷಣೆ
Follow us
Praveen Sannamani
|

Updated on:Apr 12, 2024 | 5:02 PM

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಟಾಟಾ ಮೋಟಾರ್ಸ್ (Tata Motors) ಕಂಪನಿ ಗ್ರಾಹಕರಿಂದ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ. ಇವಿ ಕಾರುಗಳ ಮೂಲಕ ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಿರುವ ಟಾಟಾ ಮೋಟರ್ಸ್, ನೆಕ್ಸಾನ್ ಇವಿ, ಟಿಯಾಗೋ ಇವಿ ಮತ್ತು ಪಂಚ್ ಇವಿ ಮೂಲಕ ದಾಖಲೆಯ ಬೇಡಿಕೆ ಪಡೆದುಕೊಳ್ಳುತ್ತಿದೆ. ಹೀಗಾಗಿ ಹೊಸ ಇವಿ ಕಾರುಗಳ ಮಾರಾಟದಲ್ಲಿ ಮತ್ತಷ್ಟು ಹೆಚ್ಚಳದ ನೀರಿಕ್ಷೆಯಲ್ಲಿರುವ ಟಾಟಾ ಕಂಪನಿಯು ಇವಿ ಕಾರುಗಳ ಖರೀದಿ ಮೇಲೆ ಆಕರ್ಷಕ ಆಫರ್ ಗಳನ್ನು ನೀಡುತ್ತಿದೆ.

ಟಾಟಾ ಮೋಟಾರ್ಸ್ ಕಂಪನಿ ತನ್ನ ಜನಪ್ರಿಯ ಇವಿ ಕಾರುಗಳಾದ ನೆಕ್ಸಾನ್ ಇವಿ, ಟಿಯಾಗೋ ಇವಿ ಮತ್ತು ಪಂಚ್ ಇವಿ ಮೇಲೆ ಭರ್ಜರಿ ಆಫರ್ ನೀಡುತ್ತಿದೆ. ಗ್ರಾಹಕರು ಹೊಸ ಆಫರ್ ಗಳಲ್ಲಿ ಕ್ಯಾಶ್ ಡಿಸ್ಕೌಂಟ್, ಸೇರಿದಂತೆ ವಿವಿಧ ಆಫರ್ ಗಳನ್ನು ಪಡೆದುಕೊಳ್ಳಬಹುದಾಗಿದ್ದು, ಇವು ಈ ತಿಂಗಳಾಂತ್ಯದ ತನಕ ಲಭ್ಯವಿರಲಿವೆ.

ಹೊಸ ಆಫರ್ ಗಳಲ್ಲಿ ಗ್ರಾಹಕರು ನೆಕ್ಸಾನ್ ಇವಿ ಖರೀದಿಯ ಮೇಲೆ ರೂ. 50 ಸಾವಿರ ತನಕ ಮತ್ತು ಟಿಯಾಗೋ ಇವಿ ಖರೀದಿಯ ಮೇಲೆ ರೂ.65 ಸಾವಿರ ಆಫರ್ ಪಡೆದುಕೊಳ್ಳಬಹುದಾಗಿದೆ. ಹಾಗೆಯೇ ಪಂಚ್ ಇವಿ ಮೇಲೆ ರೂ. 50 ಸಾವಿರ ತನಕ ಆಫರ್ ಪಡೆದುಕೊಳ್ಳಬಹುದಾಗಿದ್ದು, ಕ್ಯಾಶ್ ಬ್ಯಾಕ್ ಜೊತೆಗೆ ಇನ್ನು ಹಲವು ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ: ಸೆಕೆಂಡ್ ಹ್ಯಾಂಡ್ ಕಾರು ಖರೀದಿಸುವಾಗ ಇರಲಿ ಈ ಬಗ್ಗೆ ಎಚ್ಚರ!

ಇದರೊಂದಿಗೆ ಹೊಸ ಆಫರ್ ಗಳನ್ನು ಟಾಟಾ ಮೋಟಾರ್ಸ್ ಕಂಪನಿಯು 2023 ಮತ್ತು 2024ರ ಆವೃತ್ತಿಗಳ ಮೇಲೆ ಪ್ರತ್ಯೇಕವಾಗಿ ಘೋಷಣೆ ಮಾಡಿದ್ದು, 2023ರ ಆವೃತ್ತಿಗಳ ಮೇಲೆ ಹೆಚ್ಚಿನ ಆಫರ್ ಪಡೆದುಕೊಳ್ಳಬಹುದಾಗಿದೆ. ಈ ಮೂಲಕ ಹೊಸ ಇವಿ ಕಾರು ಖರೀದಿದಾರರಿಗೆ ಭರ್ಜರಿ ಆಫರ್ ನೀಡಿರುವ ಟಾಟಾ ಕಂಪನಿ ಮಾರಾಟದಲ್ಲಿ ಮತ್ತಷ್ಟು ಹೆಚ್ಚಳ ಮಾಡುವ ನೀರಿಕ್ಷೆಯಲ್ಲಿದ್ದು, ಪಂಚ್ ಇವಿ ಮೇಲೆ ಮೊದಲ ಬಾರಿಗೆ ಡಿಸ್ಕೌಂಟ್ ನೀಡಿರುವುದು ಮತ್ತೊಂದು ವಿಶೇಷವಾಗಿದೆ.

ಇತ್ತೀಚೆಗೆ ಬಿಡುಗಡೆಯಾಗಿರುವ ಪಂಚ್ ಇವಿ ಹಲವಾರು ವಿಶೇಷತೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಆಕರ್ಷಕ ಬೆಲೆಯೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ. ಪಂಚ್ ಇವಿ ಕಾರು ವಿವಿಧ ವೆರಿಯೆಂಟ್ ಗಳಿಗೆ ಅನುಗುಣವಾಗಿ ಎಕ್ಸ್ ಶೋರೂಂ ಪ್ರಕಾರ ರೂ. 10.99 ಲಕ್ಷದಿಂದ ರೂ. 15.49 ಲಕ್ಷ ಬೆಲೆ ಹೊಂದಿದ್ದು, ಇದು ಸ್ಯಾಂಡರ್ಡ್ ಮತ್ತು ಲಾಂಗ್ ರೇಂಜ್ ವೆರಿಯೆಂಟ್ ಗಳನ್ನು ಹೊಂದಿದೆ.

ಇದನ್ನೂ ಓದಿ: ಹೊಸ ಕಾರುಗಳಲ್ಲಿ ಮತ್ತೊಂದು ಕಡ್ಡಾಯ ಸೇಫ್ಟಿ ಫೀಚರ್ಸ್ ಜಾರಿಗೆ ಮುಂದಾದ ಕೇಂದ್ರ ಸರ್ಕಾರ

ಇದು 25kWh ಮತ್ತು 35kWh ಬ್ಯಾಟರಿ ಪ್ಯಾಕ್ ಆಯ್ಕೆ ಹೊಂದಿದ್ದು, ಇವು ಪ್ರತಿ ಚಾರ್ಜ್ ಗೆ 319ರಿಂದ 421 ಕಿ.ಮೀ ಮೈಲೇಜ್ ನೀಡುತ್ತವೆ. ಇದರೊಂದಿಗೆ ನೆಕ್ಸಾನ್ ಇವಿ ಮತ್ತು ಟಿಯಾಗೋ ಇವಿ ಕಾರುಗಳು ಕೂಡಾ ಅತ್ಯುತ್ತಮ ಫೀಚರ್ಸ್ ಹೊಂದಿದ್ದು, ಇವು ಆಕರ್ಷಕ ಬೆಲೆಯೊಂದಿಗೆ ಖರೀದಿಗೆ ಲಭ್ಯವಿವೆ.

Published On - 4:56 pm, Fri, 12 April 24