ಎಲೆಕ್ಟ್ರಿಕ್ ಕಾರುಗಳ ಮೇಲೆ ದಾಖಲೆಯ ಡಿಸ್ಕೌಂಟ್ ಘೋಷಿಸಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಎಲೆಕ್ಟ್ರಿಕ್ ಕಾರು ಮಾದರಿಗಳ ಮೇಲೆ ಸೆಪ್ಟೆಂಬರ್ ಅವಧಿಯ ಆಫರ್ ಗಳನ್ನು ಘೋಷಣೆ ಮಾಡಿದೆ.

ಎಲೆಕ್ಟ್ರಿಕ್ ಕಾರುಗಳ ಮೇಲೆ ದಾಖಲೆಯ ಡಿಸ್ಕೌಂಟ್ ಘೋಷಿಸಿದ ಟಾಟಾ ಮೋಟಾರ್ಸ್
ಟಾಟಾ ಎಲೆಕ್ಟ್ರಿಕ್ ಕಾರುಗಳ ಮೇಲೆ ಭರ್ಜರಿ ಆಫರ್
Follow us
|

Updated on: Sep 05, 2024 | 7:56 PM

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ (Tata Motors) ಕಂಪನಿಯು ತನ್ನ ಪ್ರಮುಖ ಇವಿ ಕಾರುಗಳ ಖರೀದಿ ಮೇಲೆ ಸೆಪ್ಟೆಂಬರ್ ಅವಧಿಯ ಆಫರ್ ಗಳನ್ನು ಘೋಷಣೆ ಮಾಡಲಾಗಿದೆ. ಹೊಸ ಆಫರ್ ಗಳು ನೆಕ್ಸಾನ್ ಇವಿ, ಟಿಯಾಗೋ ಇವಿ ಮತ್ತು ಪಂಚ್ ಇವಿ ಕಾರುಗಳ ಮೇಲೆ ಲಭ್ಯವಿದ್ದು, ಹೊಸ ಆಫರ್ ಗಳಲ್ಲಿ ಗ್ರಾಹಕರು ಕ್ಯಾಶ್ ಡಿಸ್ಕೌಂಟ್, ಎಕ್ಸ್ ಚೆಂಜ್ ಆಫರ್, ಕಾರ್ಪೊರೇಟ್ ಆಫರ್ ಗಳ ಜೊತೆ ಗ್ರೀನ್ ಬೋನಸ್ ಸಹ ಪಡೆಯಬಹುದಾಗಿದೆ.

ಭಾರತದಲ್ಲಿ ಸದ್ಯ ವಿವಿಧ ಎಲೆಕ್ಟ್ರಿಕ್ ಕಾರುಗಳೊಂದಿಗೆ ಹೊಸ ಸಂಚಲನಕ್ಕೆ ಕಾರಣವಾಗಿರುವ ಟಾಟಾ ಮೋಟಾರ್ಸ್ ಕಂಪನಿಯು ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇದೀಗ ಹೊಸ ಆಫರ್ ಗಳೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಹಾಗಾದ್ರೆ ಟಾಟಾ ಮೋಟಾರ್ಸ್ ಕಂಪನಿಯು ಯಾವೆಲ್ಲಾ ಕಾರುಗಳ ಮೇಲೆ ಏನೆಲ್ಲಾ ಆಫರ್ ನೀಡುತ್ತಿದೆ ಎನ್ನುವುದನ್ನು ಇಲ್ಲಿ ತಿಳಿಸಲಾಗಿದೆ.

ನೆಕ್ಸಾನ್ ಎಲೆಕ್ಟ್ರಿಕ್

ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಖರೀದಿ ಮೇಲೆ ಒಟ್ಟು ರೂ. 2.05 ಲಕ್ಷ ಮೌಲ್ಯದ ಆಫರ್ ನೀಡುತ್ತಿದ್ದು, ಇದರಲ್ಲಿ ಗ್ರಾಹಕರು ರೂ. 25 ಸಾವಿರ ತನಕ ಕ್ಯಾಶ್ ಡಿಸ್ಕೌಂಟ್ ಪಡೆಯಬಹುದಾಗಿದೆ. ನೆಕ್ಸಾನ್ ಕಾರಿನ ಎಂಪವರ್ಡ್ ಪ್ಲಸ್ ಎಲ್ಆರ್ ಮತ್ತು ಕ್ರಿಯೆಟಿವ್ ಪ್ಲಸ್ ಎಂಆರ್ ಆವೃತ್ತಿಗಳ ಮೇಲೆ ಸೀಮಿತ ಆಫರ್ ಗಳು ಲಭ್ಯವಿದ್ದು, ಇನ್ನುಳಿದ ಎಲ್ಲಾ ವೆರಿಯೆಂಟ್ ಗಳಿಗೂ ಗರಿಷ್ಠ ಪ್ರಮಾಣದ ಆಫರ್ ಅನ್ವಯಿಸಲಿದೆ. ನೆಕ್ಸಾನ್ ಕಾರು ಸದ್ಯ ಎಕ್ಸ್ ಶೋರೂಂ ಪ್ರಕಾರ ರೂ. 14.49 ಲಕ್ಷದಿಂದ ರೂ. 19.49 ಲಕ್ಷ ಬೆಲೆ ಹೊಂದಿದೆ. ಹೊಸ ಇವಿ ಕಾರಿನಲ್ಲಿ ಕಂಪನಿಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 30kWh ಮತ್ತು 40.5kWh ಬ್ಯಾಟರಿ ಆಯ್ಕೆಗಳನ್ನು ನೀಡಿದ್ದು, ಇವು ಪ್ರತಿ ಚಾರ್ಜ್ ಗೆ 325 ರಿಂದ 456 ಕಿ.ಮೀ ಮೈಲೇಜ್ ನೀಡುತ್ತವೆ.

ಇದನ್ನೂ ಓದಿ: ಸೆಕೆಂಡ್ ಹ್ಯಾಂಡ್ ಕಾರು ಖರೀದಿಸುವಾಗ ಹೇಗೆಲ್ಲಾ ಮೋಸ ಮಾಡ್ತಾರೆ ನೋಡಿ..

ಟಿಯಾಗೋ ಎಲೆಕ್ಟ್ರಿಕ್

ಟಾಟಾ ಕಂಪನಿಯು ನೆಕ್ಸಾನ್ ಇವಿ ನಂತರ ಟಿಯಾಗೋ ಇವಿ ಹ್ಯಾಚ್ ಬ್ಯಾಕ್ ಕಾರಿನ ಮೇಲೂ ಅತ್ಯುತ್ತಮ ಆಫರ್ ನೀಡುತ್ತಿದೆ. ಟಿಯಾಗೋ ಇವಿ ಖರೀದಿಯ ಒಟ್ಟು ರೂ. 65 ಸಾವಿರ ತನಕ ಆಫರ್ ನೀಡಲಾಗುತ್ತಿದ್ದು, ಇದರಲ್ಲಿ ಗ್ರಾಹಕರು ಗ್ರೀನ್ ಬೋನಸ್ ಸಹ ಪಡೆಯಬಹುದಾಗಿದೆ. ಹಾಗೆಯೇ ಟಾಪ್ ಎಂಡ್ ಮಾದರಿಗಳ ಮೇಲೆ ಹೆಚ್ಚಿನ ಆಫರ್ ನೀಡಲಾಗುತ್ತಿದ್ದು, ಇದು ಆಕರ್ಷಕ ಫೀಚರ್ಸ್ ಗಳೊಂದಿಗೆ ಉತ್ತಮ ಬೇಡಿಕೆ ಹೊಂದಿದೆ.

ಟಿಯಾಗೋ ಇವಿ ಕಾರು ಸದ್ಯ ಎಕ್ಸ್ ಶೋರೂಂ ಪ್ರಕಾರ ಸದ್ಯ ರೂ. 7.99 ಲಕ್ಷದಿಂದ ರೂ. 11.89 ಲಕ್ಷ ಬೆಲೆಯೊಂದಿಗೆ ಮಾರಾಟವಾಗುತ್ತಿದ್ದು, 19.2 kWh ಮತ್ತು 24kWh ಬ್ಯಾಟರಿ ಪ್ಯಾಕ್ ನೊಂದಿಗೆ ಪ್ರತಿ ಚಾರ್ಜ್ ಗೆ ಗರಿಷ್ಠ 315 ಕಿ.ಮೀ ಮೈಲೇಜ್ ನೀಡುತ್ತದೆ.

ಪಂಚ್ ಎಲೆಕ್ಟ್ರಿಕ್

ಬಹುಬೇಡಿಕೆಯ ಪಂಚ್ ಎಲೆಕ್ಟ್ರಿಕ್ ಕಾರು ಖರೀದಿ ಮೇಲೆ ಟಾಟಾ ಕಂಪನಿ ರೂ. 10 ಸಾವಿರದಿಂದ ರೂ. 30 ಸಾವಿರದಷ್ಟು ಆಫರ್ ನೀಡುತ್ತಿದೆ. ಪಂಚ್ ಇವಿ ಕಾರು ವಿವಿಧ ವೆರಿಯೆಂಟ್ ಗಳೊಂದಿಗೆ ಲಭ್ಯವಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 10.99 ಲಕ್ಷದಿಂದ ರೂ. 15.49 ಲಕ್ಷ ಬೆಲೆ ಹೊಂದಿದೆ. ಇದರಲ್ಲಿ 35kWh ಮತ್ತು 25kWh ಬ್ಯಾಟರಿ ಆಯ್ಕೆಗಳಿದ್ದು, ಇವು ಪ್ರತಿ ಚಾರ್ಜ್ ಗೆ ಗರಿಷ್ಠ 421 ಕಿ.ಮೀ ಮೈಲೇಜ್ ನೀಡುತ್ತದೆ.

ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?