ದೀಪಾವಳಿ ಸಂಭ್ರಮಕ್ಕೆ ಹೊಸ ಹ್ಯಾರಿಯರ್ ಮತ್ತು ಸಫಾರಿ ವಿತರಣೆ ಆರಂಭಿಸಿದ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿ ತನ್ನ ಹೊಸ ಹ್ಯಾರಿಯರ್ ಮತ್ತು ಸಫಾರಿ ಎಸ್ ಯುವಿ ಆವೃತ್ತಿಗಳ ಬಿಡುಗಡೆಯೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರುಗಳ ವಿತರಣೆಗೆ ಇದೀಗ ಅಧಿಕೃತವಾಗಿ ಚಾಲನೆ ನೀಡಲಾಗಿದೆ.

ದೀಪಾವಳಿ ಸಂಭ್ರಮಕ್ಕೆ ಹೊಸ ಹ್ಯಾರಿಯರ್ ಮತ್ತು ಸಫಾರಿ ವಿತರಣೆ ಆರಂಭಿಸಿದ ಟಾಟಾ ಮೋಟಾರ್ಸ್
Praveen Sannamani

Updated on: Nov 09, 2023 | 4:57 PM

ದೇಶದ ಜನಪ್ರಿಯ ಕಾರು ಉತ್ಪಾದನಾ ಕಂಪನಿಯಾಗಿರುವ ಟಾಟಾ ಮೋಟಾರ್ಸ್ (Tata Motors) ತನ್ನ ನವೀಕೃತ ಹ್ಯಾರಿಯರ್ (Harrier) ಮತ್ತು ಸಫಾರಿ (Safari) ಫೇಸ್‌ಲಿಫ್ಟ್ ಬಿಡುಗಡೆಯೊಂದಿಗೆ ಭಾರೀ ಪ್ರಮಾಣದ ಬುಕಿಂಗ್ ಪಡೆದುಕೊಂಡಿದ್ದು, ಇದೀಗ ದೀಪಾವಳಿ ಸಂಭ್ರಮಕ್ಕೂ ಮುನ್ನ ಹೊಸ ಕಾರುಗಳ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಿದೆ.

ಹ್ಯಾರಿಯರ್ ಕಾರು ಮಾದರಿಯು ಸ್ಮಾರ್ಟ್, ಪ್ಯೂರ್, ಅಡ್ವೆಂಚರ್ ಮತ್ತು ಫಿಯರ್ ಲೆಸ್ ವೆರಿಯೆಂಟ್ ಗಳೊಂದಿಗೆ ದೆಹಲಿ ಎಕ್ಸ್ ಶೋರೂಂ ಪ್ರಕಾರ ಇದು ಆರಂಭಿಕವಾಗಿ ರೂ. 15.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 24.49 ಲಕ್ಷ ಬೆಲೆ ಹೊಂದಿದೆ. ಹಾಗೆಯೇ ಸಫಾರಿ ಹೊಸ ಕಾರು ಮಾದರಿಯು ದೆಹಲಿ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 16.19 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 25.49 ಲಕ್ಷ ಬೆಲೆ ಹೊಂದಿದ್ದು, ಇದು ಫೀಚರ್ಸ್ ಗಳಿಗೆ ಅನುಗುಣವಾಗಿ ಸ್ಮಾರ್ಟ್, ಪ್ಯೂರ್, ಅಡ್ವೆಂಚರ್ ಮತ್ತು ಅಕಾಂಪ್ಲಿಶ್ಡ್ ಎನ್ನುವ ನಾಲ್ಕು ವೆರಿಯೆಂಟ್ ಗಳನ್ನು ಹೊಂದಿದೆ.

ಹೊಸ ಕಾರು ಮಾದರಿಗಳು ಬಲಿಷ್ಠ ವಿನ್ಯಾಸದೊಂದಿಗೆ ಮತ್ತಷ್ಟು ಸ್ಪೋರ್ಟಿಯಾಗಿ ಮಿಂಚುತ್ತಿದ್ದು, ಮರುವಿನ್ಯಾಸಗೊಳಿಸಲಾದ ಮುಂಭಾಗದ ಸ್ಪ್ಲಿಟ್ ಗ್ರೀಲ್, ಫ್ಲಕ್ಸ್ ಸ್ಕೀಡ್ ಪ್ಲೇಟ್, ಸಂಪೂರ್ಣ ಆಯತಾಕಾರದ ಎಲ್ಇಡಿ ಟೈಲ್ ಲೈಟ್ ಬಾರ್, ಮುಂಭಾಗ ಮತ್ತು ಹಿಂಬದಿಯಲ್ಲಿ ಮರುವಿನ್ಯಾಸಗೊಳಿಸಲಾದ ಬಂಪರ್, ಎಲ್ಇಡಿ ಟೈಲ್ ಲ್ಯಾಂಪ್ಸ್, ಹೊಸ ವಿನ್ಯಾಸದ 19 ಇಂಚಿನ ಅಲಾಯ್ ವ್ಹೀಲ್ ಗಳು ಸೇರಿದಂತೆ ಹಲವಾರು ಬದಲಾವಣೆಗಳನ್ನು ಪಡೆದುಕೊಂಡಿವೆ.

ಇದನ್ನೂ ಓದಿ: ಕಡಿಮೆ ಬೆಲೆಗೆ ಖರೀದಿಗೆ ಲಭ್ಯವಿರುವ ಅತ್ಯುತ್ತಮ ಟಾಪ್ 5 ಸಿಎನ್ ಜಿ ಕಾರುಗಳಿವು!

ಹೊಸ ಕಾರಿನ ಒಳಭಾಗದಲ್ಲೂ ಸಾಕಷ್ಟು ಬದಲಾವಣೆ ತರಲಾಗಿದ್ದು, ಹ್ಯಾರಿಯರ್ ಕಾರು 5 ಸೀಟರ್ ಹೊಂದಿದ್ದರೆ ಸಫಾರಿ ಕಾರು 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಖರೀದಿಗೆ ಲಭ್ಯವಿದೆ. ಹೊಸ ಕಾರುಗಳಲ್ಲಿ ಆಕರ್ಷಕವಾದ ಡ್ಯಾಶ್ ಬೋರ್ಡ್ ನೊಂದಿಗೆ ಡ್ಯುಯಲ್ ಜೋನ್ ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಪ್ಯಾಡಲ್ ಶಿಫ್ಟರ್ ಸೇರಿದಂತೆ ಹಲವಾರು ಹೊಸ ಫೀಚರ್ಸ್ ನೀಡಿದೆ. ಜೊತೆಗೆ ವಿವಿಧ ವೆರಿಯೆಂಟ್ ಗಳಿಗೆ ಅನುಗುಣವಾಗಿ ಫ್ಲಕ್ಸ್ ವುಡ್ ಡ್ಯಾಶ್ ಬೋರ್ಡ್ ನೊಂದಿಗೆ 10.25-ಇಂಚು ಇಲ್ಲವೇ 12.3-ಇಂಚಿನ ಸೆಂಟ್ರಲ್ ಟಚ್ ಸ್ಕ್ರೀನ್ ಇನ್ಪೋಟೈನ್ ಮೆಂಟ್ ಸಿಸ್ಟಂ ನೀಡಲಾಗಿದ್ದು, ಸ್ಪೋರ್ಟಿ ಡ್ರೈವ್ ಅನುಭವಕ್ಕಾಗಿ ಲೆದರ್ ಪ್ಯಾಡಿಂಗ್ ಜೊತೆಗೆ ಕಾಂಟ್ರಾಸ್ಟ್ ಸ್ವೀಚ್ ಮತ್ತು ಎಲ್ಇಡಿ ಆ್ಯಂಬಿಯೆಂಟ್ ಲೈಟಿಂಗ್ಸ್ ಮತ್ತು ಮೂರು ಡ್ರೈವ್ ಮೋಡ್ ಗಳನ್ನು ಹೊಂದಿವೆ.

ಕನೆಕ್ಟಿವಿಟಿ ಸೌಲಭ್ಯಕ್ಕಾಗಿ ಆಂಡ್ರಾಯಿಡ್ ಆಟೋ ಮತ್ತು ಆ್ಯಪಲ್ ಕಾರ್ ಪ್ಲೇ ಬೆಂಬಲಿಸುವ 10.25 ಇಂಚಿನ ಡಿಜಿಟಲ್ ಇನ್ಟ್ರುಮೆಂಟ್ ಕ್ಲಸ್ಟರ್ ನೀಡಲಾಗಿದ್ದು, ಇದರಲ್ಲಿ ನ್ಯಾವಿಗೇಷನ್ ಜೊತೆಗೆ ಹಲವಾರು ಮಾಹಿತಿಗಳನ್ನು ಪಡೆದುಕೊಳ್ಳಬಹುದಾಗಿದೆ. ಇದರಲ್ಲಿ ಮತ್ತೊಂದು ಆಕರ್ಷಕ ತಾಂತ್ರಿಕ ಅಂಶವೆಂದರೆ ಆಟೋಮ್ಯಾಟಿಕ್ ಆವೃತ್ತಿಗಳಲ್ಲಿ ಏರ್ ಕ್ರಾಫ್ಟ್ ಸ್ಟೈಲ್ ಹೊಂದಿರುವ ಗೇರ್ ಲೀವರ್ ನೀಡಲಾಗಿದ್ದು, ಇನ್ನುಳಿದಂತೆ ಲೊಗೊ ಬ್ಲ್ಯಾಕ್ ಲಿಟ್ ಹೊಂದಿರುವ ಫೋರ್ ಸ್ಪೋಕ್ ಸ್ಟೀರಿಂಗ್ ವ್ಹೀಲ್, 10-ಸ್ಪೀಕರ್ಸ್ ಜೆಬಿಎಲ್ ಸೌಂಡ್ ಸಿಸ್ಟಂ, ಮುಂಭಾಗದಲ್ಲಿ ಮೆಮೊರಿ ಫಂಕ್ಷನ್ ಮತ್ತು ವೆಂಟಿಲೆಷನ್ ಹೊಂದಿರುವ ಒಂದನೇ ಮತ್ತು ಎರಡನೇ ಸಾಲಿನ ಆಸನಗಳು, ಪನೊರಮಿಕ್ ಸನ್ ರೂಫ್, ವೈರ್ ಲೇಸ್ ಚಾರ್ಜರ್ ಸೇರಿದಂತೆ ಹಲವು ಫೀಚರ್ಸ್ ಗಳಿವೆ.

ಟಾಟಾ ಮೋಟಾರ್ಸ್ ಕಂಪನಿ ಹೊಸ ಹ್ಯಾರಿಯರ್ ಮತ್ತು ಸಫಾರಿಯಲ್ಲಿ ಈ ಹಿಂದಿನ 2.0 ಲೀಟರ್ ಫೋರ್ ಸಿಲಿಂಡರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಮುಂದುವರಿಸಿದ್ದು, ಇದು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಮತ್ತು 6-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ವಿವಿಧ ಡ್ರೈವ್ ಮೋಡ್ ಗಳ ಮೂಲಕ 170 ಹಾರ್ಸ್ ಪವರ್ ಮತ್ತು 350 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಇದನ್ನೂ ಓದಿ: ನಿಮ್ಮ ಕಾರು ಪ್ರಯಾಣವನ್ನು ಮತ್ತಷ್ಟು ಸುಖಕರವಾಗಿಸುವ ಆಕ್ಸೆಸರಿಸ್ ಗಳಿವು!

ಇನ್ನು ಹೊಸ ಕಾರುಗಳಲ್ಲಿ ಹಲವಾರು ಸ್ಟ್ಯಾಂಡರ್ಡ್ ಸೇಫ್ಟಿ ಫೀಚರ್ಸ್ ಜೋಡಣೆ ಮಾಡಿದ್ದು, ಟಾಪ್ ಎಂಡ್ ಮಾದರಿಗೆ ಅನ್ವಯಿಸುವಂತೆ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೇರಿದಂತೆ 6 ಏರ್ ಬ್ಯಾಗ್ ಗಳನ್ನು ಮತ್ತು ಟಾಪ್ ಎಂಡ್ ಮಾದರಿಯಲ್ಲಿ 7 ಏರ್ ಬ್ಯಾಗ್ ಗಳ ಜೊತೆಗೆ ಎಬಿಎಸ್, ಇಬಿಡಿ, ತ್ರಿ ಪಾಯಿಂಟ್ ಸೀಟ್ ಬೆಲ್ಟ್, ಹಿಲ್ ಹೋಲ್ಡ್ ಅಸಿಸ್ಟ್, ಎಲೆಕ್ಟ್ರಾನಿಕ್ ಸ್ಟ್ಯಾಬಿಲಿಟಿ ಕಂಟ್ರೋಲ್, 360 ಡಿಗ್ರಿ ವ್ಯೂ ಕ್ಯಾಮೆರಾ ಸೇರಿದಂತೆ ಹಲವಾರು ಫೀಚರ್ಸ್ ಗಳನ್ನು ನೀಡಲಾಗಿದೆ.

Published On - 4:56 pm, Thu, 9 November 23

Praveen Sannamani

Praveen Sannamani is a enthusiast and passionate Journalist in Kannada Language. Automobile and Current affairs are the interested areas

Follow Us