Tata Motors: ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಹೊಸ ದಾಖಲೆ ನಿರ್ಮಿಸಿದ್ದು, ಈ ವರ್ಷದ ಮೊದಲ ತಿಂಗಳಿನಲ್ಲಿಯೇ ಭಾರೀ ಪ್ರಮಾಣದಲ್ಲಿ ಹೊಸ ಕಾರುಗಳನ್ನು ಮಾರಾಟ ಮಾಡಿದೆ.

Tata Motors: ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ
ಟಾಟಾ ಮೋಟಾರ್ಸ್ ಹೊಸ ದಾಖಲೆ
Follow us
Praveen Sannamani
|

Updated on: Feb 04, 2024 | 9:54 PM

ಹೊಸ ಕಾರುಗಳ ಮೂಲಕ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ (Tata Motors) ಕಂಪನಿ ಹೊಸ ದಾಖಲೆ ನಿರ್ಮಿಸಿದೆ. ಹೊಸ ಎಸ್‌ಯುವಿಗಳ ಮೂಲಕ ಜನಮನ್ನಣೆ ಗಳಿಸುವಲ್ಲಿಯೂ ಯಶಸ್ವಿಯಾಗಿರುವ ಟಾಟಾ ಮೋಟಾರ್ಸ್ ಕಂಪನಿ ಜನವರಿ ಅವಧಿಯಲ್ಲಿ ಒಟ್ಟು 54,033 ಯುನಿಟ್ ವಾಹನಗಳನ್ನು ಮಾರಾಟ ಮಾಡಿದೆ. ಇದು ಟಾಟಾ ಮೋಟಾರ್ಸ್ ಕಂಪನಿಯ ಇದುವರೆಗಿನ ಅತಿ ಹೆಚ್ಚು ಮಾರಾಟವಾಗಿದ್ದು, ವಿದೇಶಿ ಕಾರು ಕಂಪನಿಗಳಿಗೂ ಭರ್ಜರಿ ಪೈಪೋಟಿ ನೀಡುತ್ತಿದೆ.

ಹೊಸ ಕಾರುಗಳ ಮೂಲಕ ಟಾಟಾ ಕಂಪನಿಯು ತಿಂಗಳಿನಿಂದ ತಿಂಗಳಿಗೆ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿದೆ. ಕಳೆದ ತಿಂಗಳ ಜನವರಿ ಅವಧಿಯಲ್ಲಿ ಕಾರು ಮಾರಾಟದಲ್ಲಿ ಒಟ್ಟು ಶೇ. 12 ರಷ್ಟು ಬೆಳವಣಿಗೆ ಸಾಧಿಸಿದೆ. ಇದರೊಂದಿಗೆ ಟಾಟಾ ಕಂಪನಿಯು ಸಾಗರೋತ್ತರ ಕಾರು ಮಾರಾಟದಲ್ಲೂ ಹಿಂದೆ ಬಿದ್ದಿಲ್ಲ. ಶೇ.32 ರಷ್ಟು ಬೆಳವಣಿಗೆಯೊಂದಿಗೆ 400 ಯುನಿಟ್ ಕಾರುಗಳನ್ನು ರಫ್ತುಗೊಳಿಸಿದೆ.

ಇದನ್ನೂ ಓದಿ: ಹೆದ್ದಾರಿಯಲ್ಲಿ ಕಡ್ಡಾಯವಾಗಿರುವ ಫಾಸ್ಟ್‌ಟ್ಯಾಗ್ ಕೆವೈಸಿ ಮಾಡುವುದು ಹೇಗೆ?

ಎಸ್ ಯುವಿ ಕಾರುಗಳ ಜೊತೆ ಟಾಟಾ ಮೋಟಾರ್ಸ್ ಕಂಪನಿ ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲೂ ಮುಂಚೂಣಿ ಸಾಧಿಸುತ್ತಿದೆ. ಸದ್ಯ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದು, ಇದು ಕಳೆದ ತಿಂಗಳು ಒಟ್ಟು 6,979 ಯುನಿಟ್ ಇವಿ ಕಾರುಗಳನ್ನು ಮಾರಾಟ ಮಾಡಿದೆ. ಈ ಮೂಲಕ ಟಾಟಾ ಕಂಪನಿಯು ಪೆಟ್ರೋಲ್, ಡೀಸೆಲ್, ಸಿಎನ್ ಜಿ ಮತ್ತು ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಗಮನಸೆಳೆಯುತ್ತಿದ್ದು, ಷೇರು ಬೆಲೆಗಳು ಕೂಡಾ ಜಿಗಿತವಾಗಿವೆ.

ಟಾಟಾ ಮೋಟಾರ್ಸ್ ಕಂಪನಿಯು ಐಷಾರಾಮಿ ಕಾರುಗಳ ತಯಾರಿಕೆಯಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಲಾಭ ಗಳಿಸಿದೆ. ವಾಹನ ತಯಾರಿಕಾ ವಲಯದ ಪ್ರಮುಖ ಸಂಸ್ಥೆಯಾಗಿರುವ ಜಾಗ್ವಾರ್ ಲ್ಯಾಂಡ್ ರೋವರ್ ನ ಹಣದ ಹರಿವು ನಿರೀಕ್ಷೆಗಿಂತ ಹೆಚ್ಚಿದೆ. ಹೀಗಾಗಿ ಟಾಟಾ ಮೋಟಾರ್ಸ್ ಲಾಭಾಂಶಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇತ್ತೀಚೆಗೆ ಬಿಡುಗಡೆಯಾದ ಪ್ರಮುಖ ಕಾರುಗಳು ಉತ್ತಮ ಕೊಡುಗೆ ನೀಡಿವೆ.

ಇದನ್ನೂ ಓದಿ: ಚಲಿಸುತ್ತಿರುವಾಗಲೇ ಹೊತ್ತಿ ಉರಿದ ವೊಲ್ವೊ ಐಷಾರಾಮಿ ಎಲೆಕ್ಟ್ರಿಕ್ ಕಾರು

ಇನ್ನು ಟಾಟಾ ಕಂಪನಿ ಪ್ರತಿಸ್ಪರ್ಧಿಗಳಿಂದ ತೀವ್ರ ಸ್ಪರ್ಧೆಯ ಹೊರತಾಗಿಯೂ ಪ್ರಯಾಣಿಕರ ಕಾರು ವಿಭಾಗದಲ್ಲಿ ಉತ್ತಮ ಮಾರುಕಟ್ಟೆ ಪಾಲು ಹೊಂದಿದೆ. ನೆಕ್ಸಾನ್, ಪಂಚ್ ಮತ್ತು ಟಿಯಾಗೋ ಕಾರು ಮಾದರಿಗಳು ಅತ್ಯುತ್ತಮ ಮಾರಾಟ ದಾಖಲಿಸಿವೆ. ಜೊತೆಗೆ ಹ್ಯಾರಿಯರ್ ಮತ್ತು ಸಫಾರಿ ಕಾರುಗಳು ಐಷಾರಾಮಿ ಫೀಚರ್ಸ್ ನೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿವೆ. ಹೀಗಾಗಿ ಕಂಪನಿಯು ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಕಾರುಗಳ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಕಾರುಗಳಲ್ಲಿ ಕರ್ವ್ ಮತ್ತು ಹ್ಯಾರಿಯರ್ ಇವಿ ಭಾರೀ ನೀರಿಕ್ಷೆ ಹುಟ್ಟುಹಾಕಿವೆ.

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ