AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಕ್ಸಾನ್ ನಲ್ಲಿ ಹೊಸ ಬಜೆಟ್ ವೆರಿಯೆಂಟ್ ಪರಿಚಯಿಸಿದ ಟಾಟಾ ಮೋಟಾರ್ಸ್

ಸಬ್ ಕಂಪ್ಯಾಕ್ಟ್ ಎಸ್ ಯುವಿ ವಿಭಾಗದಲ್ಲಿ ಸದ್ಯ ಮುಂಚೂಣಿಯಲ್ಲಿರುವ ಟಾಟಾ ನೆಕ್ಸಾನ್ ಮಾದರಿಯು ಫೇಸ್ ಲಿಫ್ಟ್ ಆವೃತ್ತಿಯೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಇದೀಗ ಹೊಸ ಕಾರಿನಲ್ಲಿ ಬಜೆಟ್ ಬೆಲೆಯ ಆಟೋಮ್ಯಾಟಿಕ್ ವೆರಿಯೆಂಟ್ ಗಳನ್ನು ಪರಿಚಯಿಸಲಾಗಿದೆ.

ನೆಕ್ಸಾನ್ ನಲ್ಲಿ ಹೊಸ ಬಜೆಟ್ ವೆರಿಯೆಂಟ್ ಪರಿಚಯಿಸಿದ ಟಾಟಾ ಮೋಟಾರ್ಸ್
ನೆಕ್ಸಾನ್ ನಲ್ಲಿ ಹೊಸ ಬಜೆಟ್ ವೆರಿಯೆಂಟ್ ಪರಿಚಯಿಸಿದ ಟಾಟಾ ಮೋಟಾರ್ಸ್
Praveen Sannamani
|

Updated on: Mar 31, 2024 | 10:25 PM

Share

ಹೊಸ ಕಾರುಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಟಾಟಾ ಮೋಟಾರ್ಸ್ (Tata Motors) ಕಂಪನಿ ನೆಕ್ಸಾನ್ ಫೇಸ್ ಲಿಫ್ಟ್ ಮಾದರಿಗಾಗಿ ಹೊಸ ವೆರಿಯೆಂಟ್ ಗಳನ್ನು ಪರಿಚಯಿಸಿದೆ. ಹೊಸ ವೆರಿಯೆಂಟ್ ಗಳು ಪೆಟ್ರೋಲ್ ಮತ್ತು ಡೀಸೆಲ್ ಎರಡು ಎಂಜಿನ್ ಆಯ್ಕೆಯಲ್ಲೂ ಲಭ್ಯವಿದ್ದು, ಹೊಸ ವೆರಿಯೆಂಟ್ ಗಳು ಎಕ್ಸ್ ಶೋರೂಂ ಪ್ರಕಾರ ರೂ. 10 ಲಕ್ಷದಿಂದ ರೂ. 12.30 ಲಕ್ಷ ಬೆಲೆ ಹೊಂದಿವೆ.

ನೆಕ್ಸಾನ್ ಫೇಸ್ ಲಿಫ್ಟ್ ಮಾದರಿಯಲ್ಲಿ ಹೊಸದಾಗಿ ಸ್ಮಾರ್ಟ್ ಪ್ಲಸ್, ಪ್ಯೂರ್ ಮತ್ತು ಪ್ಯೂರ್ ಪ್ಲಸ್ ಆಟೋಮ್ಯಾಟಿಕ್ ವೆರಿಯೆಂಟ್ ಗಳನ್ನು ಪರಿಚಯಿಸಲಾಗಿದ್ದು, ಇವು ಈ ಹಿಂದಿನ ಆಟೋಮ್ಯಾಟಿಕ್ ವೆರಿಯೆಂಟ್ ಗಳಿಂತಲೂ ಕಡಿಮೆ ಬೆಲೆಗೆ ಖರೀದಿಗೆ ಲಭ್ಯವಿವೆ. ಹೊಸ ವೆರಿಯೆಂಟ್ ನಲ್ಲಿ ಬೆಲೆ ಕಡಿತ ಮಾಡಲು ಕೆಲವು ಪ್ರೀಮಿಯಂ ಫೀಚರ್ಸ್ ತೆಗೆದುಹಾಕಲಾಗಿದ್ದು, ಹೀಗಾಗಿ ಹೊಸ ವೆರಿಯೆಂಟ್ ಗಳು ಅಗತ್ಯ ಫೀಚರ್ಸ್ ನೊಂದಿಗೆ ಆಟೋಮ್ಯಾಟಿಕ್ ವೆರಿಯೆಂಟ್ ಗಳನ್ನು ಖರೀದಿ ಬಯಸುವ ಗ್ರಾಹಕರಿಗೆ ಉತ್ತಮ ಆಯ್ಕೆಯಾಗಲಿವೆ.

ಇದನ್ನೂ ಓದಿ: ಬಿಡುಗಡೆಗೆ ಸಿದ್ದವಾಗಿದೆ ಭರ್ಜರಿ ಮೈಲೇಜ್ ನೀಡುವ ಟಾಟಾ ನೆಕ್ಸಾನ್ ಸಿಎನ್​ಜಿ ವರ್ಷನ್

ಹೊಸ ವೆರಿಯೆಂಟ್ ಗಳೊಂದಿಗೆ ನೆಕ್ಸಾನ್ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ 50ಕ್ಕೂ ಹೆಚ್ಚು ವೆರಿಯೆಂಟ್ ಗಳನ್ನು ಹೊಂದಿದಂತಾಗಿದೆ. ಇವು ವಿವಿಧ ಎಂಜಿನ್ ಆಯ್ಕೆ, ಫೀಚರ್ಸ್ ಗಳಿಗೆ ಅನುಗುಣವಾಗಿ ಎಕ್ಸ್ ಶೋರೂಂ ಪ್ರಕಾರ ರೂ. 8.10 ಲಕ್ಷದಿಂದ ರೂ.15.80 ಲಕ್ಷ ಬೆಲೆ ಹೊಂದಿದ್ದು, ಈ ಮೂಲಕ ಸುಧಾರಿತ ತಂತ್ರಜ್ಞಾನ ಪ್ರೇರಿತ ವೈಶಿಷ್ಟ್ಯತೆಗಳೊಂದಿಗೆ ಹಲವಾರು ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿದೆ.

ನೆಕ್ಸಾನ್ ಫೇಸ್ ಲಿಫ್ಟ್ ಕಾರು ಸದ್ಯ ವಿವಿಧ ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಿದೆ. ಇದರಲ್ಲಿ 1.2 ಲೀಟರ್ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಮಾಡಬಹುದಾಗಿದ್ದು, ಹೊಸ ಕಾರಿನಲ್ಲಿ ಟರ್ಬೊ ಪೆಟ್ರೋಲ್ ಆವೃತ್ತಿಯು ಸಹ ಪ್ರಮುಖ ಆಕರ್ಷಣೆಯಾಗಿದೆ. 1.2 ಲೀಟರ್ ಸಾಮಾನ್ಯ ಪೆಟ್ರೋಲ್ ಮಾದರಿಯು ಫೈವ್ ಸ್ಪೀಡ್ ಮ್ಯಾನುವಲ್ ಮತ್ತು ಸಿಕ್ಸ್ ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿದ್ದರೆ, 1.2 ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು 7 ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿದೆ.

ಇದನ್ನೂ ಓದಿ: ಕಡಿಮೆ ಬೆಲೆಗೆ 6 ಏರ್‌ಬ್ಯಾಗ್‌ ಗಳ ಸುರಕ್ಷತೆ ಹೊಂದಿರುವ ಕಾರುಗಳು!

ಇನ್ನು ಹೊಸ ನೆಕ್ಸಾನ್ ಫೇಸ್ ಲಿಫ್ಟ್ ಕಾರು ಸುರಕ್ಷತೆಯಲ್ಲೂ ಗಮನಸೆಳೆಯುತ್ತಿದೆ. ಇದು ಈ ಹಿಂದಿನ ಮಾದರಿಗಿಂತಲೂ ಹೆಚ್ಚಿನ ಸಂಖ್ಯೆಯ ಏರ್ ಬ್ಯಾಗ್ ಗಳನ್ನು ಪಡೆದುಕೊಂಡಿದ್ದು, ಅಪಘಾತಗಳ ಸಂದರ್ಭದಲ್ಲಿ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ಒದಗಿಸಲಿದೆ. ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಈಗಾಗಲೇ ಫೈವ್ ಸ್ಟಾರ್ ಸೇಫ್ಟಿ ರೇಟಿಂಗ್ಸ್ ಹೊಂದಿರುವ ನೆಕ್ಸಾನ್ ಕಾರು ಇದೀಗ ಮತ್ತಷ್ಟು ಬಲಿಷ್ಠವಾಗಿದ್ದು, ಇದರಲ್ಲಿ 6 ಏರ್ ಬ್ಯಾಗ್ ಗಳು , ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ಸೇರಿದಂತೆ ಹಲವಾರು ಫೀಚರ್ಸ್ ಗಳಿರಲಿವೆ.

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ