Tata EV Cars: ಟಾಟಾ ಎಲೆಕ್ಟ್ರಿಕ್ ಕಾರುಗಳ ಮೇಲೆ ಸಖತ್ ಡಿಸ್ಕೌಂಟ್

|

Updated on: May 07, 2024 | 10:17 PM

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಎಲೆಕ್ಟ್ರಿಕ್ ಕಾರುಗಳ ಮೇಲೆ ಮೇ ಅವಧಿಯ ಆಫರ್ ಗಳನ್ನು ನೀಡುತ್ತಿದೆ.

Tata EV Cars: ಟಾಟಾ ಎಲೆಕ್ಟ್ರಿಕ್ ಕಾರುಗಳ ಮೇಲೆ ಸಖತ್ ಡಿಸ್ಕೌಂಟ್
ಟಾಟಾ ಎಲೆಕ್ಟ್ರಿಕ್ ಕಾರುಗಳು
Follow us on

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುವ ಟಾಟಾ ಮೋಟಾರ್ಸ್ (Tata Motors) ಕಂಪನಿಯು ತನ್ನ ಪ್ರಮುಖ ಇವಿ ಕಾರುಗಳ ಖರೀದಿ ಮೇಲೆ ಮೇ ಅವಧಿಯ ಆಫರ್ ಗಳನ್ನು ನೀಡುತ್ತಿದ್ದು, ಹೊಸ ಆಫರ್ ಗಳು ನೆಕ್ಸಾನ್ ಇವಿ, ಟಿಗೋರ್ ಇವಿ ಮತ್ತು ಟಿಯಾಗೋ ಇವಿ ಮೇಲೆ ಲಭ್ಯವಿವೆ. ಹೊಸ ಆಫರ್ ಗಳಲ್ಲಿ ಗ್ರಾಹಕರು ಕ್ಯಾಶ್ ಡಿಸ್ಕೌಂಟ್, ಎಕ್ಸ್ ಚೆಂಜ್ ಆಫರ್, ಕಾರ್ಪೊರೇಟ್ ಆಫರ್ ಜೊತೆ ಹೊಸದಾಗಿ ಪರಿಚಯಿಸಲಾಗಿರುವ ಗ್ರೀನ್ ಬೋನಸ್ ಸಹ ಪಡೆಯಬಹುದಾಗಿದೆ.

ಹೊಸ ಆಫರ್ ಗಳಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ ಮೇಲೆ ಒಟ್ಟು ರೂ. 75 ಸಾವಿರ ತನಕ ಆಫರ್ ನೀಡುತ್ತಿದ್ದು, ಇದರಲ್ಲಿ ಗ್ರಾಹಕರು ರೂ. 50 ಸಾವಿರ ತನಕ ಕ್ಯಾಶ್ ಡಿಸ್ಕೌಂಟ್ ಜೊತೆಗೆ ರೂ. 20 ಸಾವಿರ ತನಕ ಎಕ್ಸ್ ಚೆಂಜ್ ಆಫರ್ ಮತ್ತು ರೂ. 5 ಸಾವಿರ ತನಕ ಕಾರ್ಪೊರೇಟ್ ಡಿಸ್ಕೌಂಟ್ ಲಭ್ಯವಿದೆ. ಹೊಸ ಆಫರ್ ಅನ್ನು ಸದ್ಯ 2023ರ ನೆಕ್ಸಾನ್ ಇವಿ ಮೇಲೆ ಮಾತ್ರ ನೀಡಲಾಗುತ್ತಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 14.49 ಲಕ್ಷದಿಂದ ರೂ. 19.49 ಲಕ್ಷ ಬೆಲೆ ಹೊಂದಿದೆ. ಹೊಸ ಇವಿ ಕಾರಿನಲ್ಲಿ 30kWh ಮತ್ತು 40.5kWh ಬ್ಯಾಟರಿ ಆಯ್ಕೆಗಳಿದ್ದು, ಇವು ಪ್ರತಿ ಚಾರ್ಜ್ ಗೆ 325 ರಿಂದ 456 ಕಿ.ಮೀ ಮೈಲೇಜ್ ನೀಡುತ್ತವೆ.

ನೆಕ್ಸಾನ್ ಇವಿ ನಂತರ ಟಾಟಾ ಕಂಪನಿಯು ಟಿಗೋರ್ ಇವಿ ಮತ್ತು ಟಿಯಾಗೋ ಇವಿ ಮೇಲೂ ಅತ್ಯುತ್ತಮ ಆಫರ್ ನೀಡುತ್ತಿದೆ. ಟಿಗೋರ್ ಇವಿ ಮತ್ತು ಟಿಯಾಗೋ ಇವಿ ಮೇಲೆ ರೂ. 72 ಸಾವಿರ ತನಕ ಆಫರ್ ನೀಡಲಾಗುತ್ತಿದ್ದು, ಇದರಲ್ಲಿ ಗ್ರಾಹಕರು ರೂ. 50 ಸಾವಿರ ತನಕ ಗ್ರೀನ್ ಬೋನಸ್ ಪಡೆಯಬಹುದಾಗಿದೆ. ಜೊತೆಗೆ ರೂ. 15 ಸಾವಿರ ತನಕ ಎಕ್ಸ್ ಚೆಂಜ್ ಮತ್ತು ರೂ. 7 ಸಾವಿರ ತನಕ ಕಾರ್ಪೊರೇಟ್ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದೆ. ಹಾಗೆಯೇ ಹೊಸ ಆಫರ್ ಗಳು 2024ರ ಮಾದರಿಯ ಮೇಲೂ ಅನ್ವಯಿಸಲಿದ್ದು, ರೂ. 52 ಸಾವಿರ ತನಕ ಆಫರ್ ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ: ಐಷಾರಾಮಿ ಫೀಚರ್ಸ್ ಗಳೊಂದಿಗೆ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಬಿಡುಗಡೆ

ಸದ್ಯ ಮಾರುಕಟ್ಟೆಯಲ್ಲಿ ಟಿಗೋರ್ ಇವಿ ಕಾರು ಮಾದರಿಯು ವಿವಿಧ ವೆರಿಯೆಂಟ್ ಗಳೊಂದಿಗೆ ಮಾರಾಟಗೊಳ್ಳುತ್ತಿದ್ದು, ಇದು 19.2kWh ಮತ್ತು 24kWh ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಇದು ಎಕ್ಸ್ ಶೋರೂಂ ಪ್ರಕಾರ ರೂ. 7.99 ಲಕ್ಷದಿಂದ ರೂ. 11.39 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುತ್ತಿದ್ದು, ಇದು ಪ್ರಮುಖ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.