AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tata EVs: ಟಾಟಾ ಎಲೆಕ್ಟ್ರಿಕ್ ಕಾರುಗಳ ಮೇಲೆ ದಾಖಲೆಯ ಡಿಸ್ಕೌಂಟ್ ಘೋಷಣೆ

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಎಲೆಕ್ಟ್ರಿಕ್ ಕಾರುಗಳ ಮೇಲೆ ಅಗಸ್ಟ್ ಅವಧಿಯ ಆಫರ್ ಗಳನ್ನು ಘೋಷಣೆ ಮಾಡಿದೆ.

Tata EVs: ಟಾಟಾ ಎಲೆಕ್ಟ್ರಿಕ್ ಕಾರುಗಳ ಮೇಲೆ ದಾಖಲೆಯ ಡಿಸ್ಕೌಂಟ್ ಘೋಷಣೆ
ಟಾಟಾ ಎಲೆಕ್ಟ್ರಿಕ್ ಕಾರುಗಳು
Praveen Sannamani
Praveen Sannamani|

Updated on: Aug 08, 2024 | 10:19 PM

Share

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಸದ್ಯ ಅಗ್ರಸ್ಥಾನದಲ್ಲಿರುವ ಟಾಟಾ ಮೋಟಾರ್ಸ್ (Tata Motors) ಕಂಪನಿಯು ತನ್ನ ಪ್ರಮುಖ ಇವಿ ಕಾರುಗಳ ಖರೀದಿ ಮೇಲೆ ಅಗಸ್ಟ್ ಅವಧಿಯ ಆಫರ್ ಗಳನ್ನು ಘೋಷಣೆ ಮಾಡಿದೆ. ಹೊಸ ಆಫರ್ ಗಳು ನೆಕ್ಸಾನ್ ಇವಿ, ಟಿಯಾಗೋ ಇವಿ ಮತ್ತು ಪಂಚ್ ಇವಿ ಕಾರುಗಳ ಮೇಲೆ ಲಭ್ಯವಿದ್ದು, ಹೊಸ ಆಫರ್ ಗಳಲ್ಲಿ ಗ್ರಾಹಕರು ಕ್ಯಾಶ್ ಡಿಸ್ಕೌಂಟ್, ಎಕ್ಸ್ ಚೆಂಜ್ ಆಫರ್, ಕಾರ್ಪೊರೇಟ್ ಆಫರ್ ಗಳನ್ನು ಪಡೆಯಬಹುದಾಗಿದೆ.

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಆಫರ್ ಗಳಲ್ಲಿ ನೆಕ್ಸಾನ್ ಇವಿ ಖರೀದಿಯ ಮೇಲೆ ಒಟ್ಟು ರೂ. 2.05 ಲಕ್ಷದ ತನಕ ಗ್ರೀನ್ ಬೋನಸ್ ಆಫರ್ ನೀಡುತ್ತಿದ್ದು, ಇದರಲ್ಲಿ ಗ್ರಾಹಕರು ರೂ. 50 ಸಾವಿರ ತನಕ ಕ್ಯಾಶ್ ಡಿಸ್ಕೌಂಟ್ ಪಡೆಯಬಹುದಾಗಿದೆ. ನೆಕ್ಸಾನ್ ಕಾರಿನ ಎಂಪವರ್ಡ್ ಪ್ಲಸ್ ಎಲ್ಆರ್ ಮತ್ತು ಎಂಪವರ್ಡ್ ಎನ್ಆರ್ ಡಾರ್ಕ್ ಆವೃತ್ತಿಗಳ ಮೇಲೆ ಹೆಚ್ಚಿನ ಆಫರ್ ಗಳು ಲಭ್ಯವಿದ್ದು, ನೆಕ್ಸಾನ್ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 14.49 ಲಕ್ಷದಿಂದ ರೂ. 19.49 ಲಕ್ಷ ಬೆಲೆ ಹೊಂದಿದೆ. ಹೊಸ ಇವಿ ಕಾರಿನಲ್ಲಿ 30kWh ಮತ್ತು 40.5kWh ಬ್ಯಾಟರಿ ಆಯ್ಕೆಗಳಿದ್ದು, ಇವು ಪ್ರತಿ ಚಾರ್ಜ್ ಗೆ 325 ರಿಂದ 456 ಕಿ.ಮೀ ಮೈಲೇಜ್ ನೀಡುತ್ತವೆ.

ನೆಕ್ಸಾನ್ ಇವಿ ನಂತರ ಟಾಟಾ ಕಂಪನಿಯು ಟಿಯಾಗೋ ಇವಿ ಕಾರಿನ ಮೇಲೂ ಅತ್ಯುತ್ತಮ ಆಫರ್ ನೀಡುತ್ತಿದೆ. ಟಿಯಾಗೋ ಇವಿ ಖರೀದಿಯ ಮೇಲೆ ರೂ. 10 ಸಾವಿರದಿಂದ ರೂ. 65 ಸಾವಿರ ತನಕ ಆಫರ್ ನೀಡುತ್ತಿದೆ. ಇದರಲ್ಲಿ ಗ್ರಾಹಕರು ಗ್ರೀನ್ ಬೋನಸ್ ಸಹ ಪಡೆಯಬಹುದಾಗಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 7.99 ಲಕ್ಷದಿಂದ ರೂ. 11.89 ಲಕ್ಷ ಬೆಲೆಯೊಂದಿಗೆ ಪ್ರತಿ ಚಾರ್ಜ್ ಗೆ 315 ಕಿ.ಮೀ ಮೈಲೇಜ್ ನೀಡುತ್ತದೆ.

ಇದನ್ನೂ ಓದಿ: ಆಕರ್ಷಕ ಬೆಲೆಗೆ ಭರ್ಜರಿ ಮೈಲೇಜ್ ನೀಡುವ ಟಾಟಾ ಕರ್ವ್ ಎಲೆಕ್ಟ್ರಿಕ್ ಕಾರು ಬಿಡುಗಡೆ

ಸದ್ಯ ಮಾರುಕಟ್ಟೆಯಲ್ಲಿ ಟಿಯಾಗೋ ಕಾರು 19.2kWh ಮತ್ತು 24kWh ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದ್ದು, ಇದರಲ್ಲಿನ ಬೇಸ್ ಆವೃತ್ತಿಗಳಿಗೆ ಕಡಿಮೆ ಆಫರ್ ನೀಡಲಾಗಿದೆ. ಹಾಗೆಯೇ ಟಾಪ್ ಎಂಡ್ ಮಾದರಿಗಳ ಮೇಲೆ ಹೆಚ್ಚಿನ ಆಫರ್ ನೀಡಲಾಗುತ್ತಿದ್ದು, ಇದು ಆಕರ್ಷಕ ಫೀಚರ್ಸ್ ಗಳೊಂದಿಗೆ ಉತ್ತಮ ಬೇಡಿಕೆ ಹೊಂದಿದೆ.

ಇನ್ನು ಟಾಟಾ ಮೋಟಾರ್ಸ್ ಕಂಪನಿಯು ಪಂಚ್ ಎಲೆಕ್ಟ್ರಿಕ್ ಕಾರು ಖರೀದಿ ಮೇಲೂ ರೂ. 10 ಸಾವಿರದಿಂದ ರೂ. 30 ಸಾವಿರದಷ್ಟು ಆಫರ್ ನೀಡುತ್ತಿದೆ. ಪಂಚ್ ಇವಿ ಕಾರು ವಿವಿಧ ವೆರಿಯೆಂಟ್ ಗಳೊಂದಿಗೆ ಲಭ್ಯವಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 10.99 ಲಕ್ಷದಿಂದ ರೂ. 15.49 ಲಕ್ಷ ಬೆಲೆಯೊಂದಿಗೆ ಪ್ರತಿ ಚಾರ್ಜ್ ಗೆ ಗರಿಷ್ಠ 421 ಕಿ.ಮೀ ಮೈಲೇಜ್ ನೀಡುತ್ತದೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು