Tata Cars: ಟಾಟಾ ಕಾರುಗಳ ಖರೀದಿ ಮೇಲೆ ಜೂನ್ ಅವಧಿಗೆ ಭರ್ಜರಿ ಡಿಸ್ಕೌಂಟ್ ಘೋಷಣೆ

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಕಾರುಗಳ ಖರೀದಿ ಮೇಲೆ ಜೂನ್ ಅವಧಿಯ ಡಿಸ್ಕೌಂಟ್ ಘೋಷಣೆ ಮಾಡಿದ್ದು, ಹೊಸ ಆಫರ್ ಗಳು ಈ ತಿಂಗಳಾಂತ್ಯದ ತನಕ ಲಭ್ಯವಿರಲಿವೆ.

Tata Cars: ಟಾಟಾ ಕಾರುಗಳ ಖರೀದಿ ಮೇಲೆ ಜೂನ್ ಅವಧಿಗೆ ಭರ್ಜರಿ ಡಿಸ್ಕೌಂಟ್ ಘೋಷಣೆ
ಟಾಟಾ ಕಾರುಗಳು
Follow us
Praveen Sannamani
|

Updated on:Jun 06, 2024 | 4:27 PM

ಜನಪ್ರಿಯ ಕಾರು ಉತ್ಪಾದನಾ ಕಂಪನಿಯಾಗಿರುವ ಟಾಟಾ ಮೋಟಾರ್ಸ್(Tata Motors) ತನ್ನ ಪ್ರಮುಖ ಕಾರು ಮಾದರಿಗಳ ಖರೀದಿ ಮೇಲೆ ಜೂನ್ ಅವಧಿಗಾಗಿ ಆಕರ್ಷಕ ಆಫರ್ ಘೋಷಣೆ ಮಾಡಿದ್ದು, ಹೊಸ ಆಫರ್ ಗಳನ್ನು ಈ ತಿಂಗಳಾಂತ್ಯದ ತನಕ ಪಡೆದುಕೊಳ್ಳಬಹುದಾಗಿದೆ. ಟಾಟಾ ಹೊಸ ಆಫರ್ ಗಳಲ್ಲಿ ಗ್ರಾಹಕರು ಕ್ಯಾಶ್ ಡಿಸ್ಕೌಂಟ್, ಎಕ್ಸ್ ಚೆಂಜ್ ಆಫರ್ ಮತ್ತು ಕಾರ್ಪೊರೇಟ್ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದ್ದು, ಟಿಯಾಗೋ, ಟಿಗೋರ್, ಆಲ್ಟ್ರೊಜ್, ನೆಕ್ಸಾನ್, ಹ್ಯಾರಿಯರ್ ಮತ್ತು ಸಫಾರಿ ಕಾರುಗಳ ಮೇಲೆ ಆಕರ್ಷಕ ಆಫರ್ ಗಳು ಲಭ್ಯವಿವೆ.

ಟಾಟಾ ಮೋಟಾರ್ಸ್ ಹೊಸ ಆಫರ್ ಗಳು 2023ರ ಸಫಾರಿ, ಹ್ಯಾರಿಯರ್ ಮತ್ತು ಟಿಯಾಗೋ, ಟಿಗೋರ್, ಆಲ್ಟ್ರೊಜ್, ನೆಕ್ಸಾನ್ ಕಾರು ಮಾದರಿಗಳ ಮೇಲೆ ಆಫರ್ ಲಭ್ಯವಿದ್ದು, ವಿವಿಧ ಮಾದರಿಗಳಿಗೆ ಅನುಗುಣವಾಗಿ ರೂ. 60 ಸಾವಿರದಿಂದ ರೂ. 1.25 ಲಕ್ಷದ ತನಕ ಆಫರ್ ಪಡೆಯಬಹುದಾಗಿದೆ.

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಆಫರ್ ಗಳಲ್ಲಿ ಟಿಯಾಗೋ ಹ್ಯಾಚ್ ಬ್ಯಾಕ್ ಮತ್ತು ಟಿಗೋರ್ ಕಂಪ್ಯಾಕ್ಟ್ ಸೆಡಾನ್ ಖರೀದಿಸುವ ಗ್ರಾಹಕರಿಗೆ ರೂ. 80 ಸಾವಿರದಿಂದ ರೂ. 85 ಸಾವಿರ ತನಕ ಆಫರ್ ನೀಡುತ್ತಿದ್ದು, ಇದರಲ್ಲಿ ಕ್ಯಾಶ್ ಬ್ಯಾಕ್, ಎಕ್ಸ್ ಚೆಂಜ್ ಮತ್ತು ಕಾರ್ಪೊರೇಟ್ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದೆ. ಹಾಗೆಯೇ ಟಿಯಾಗೋ ಮತ್ತು ಟಿಗೋರ್ ಕಾರುಗಳ ಸಿಎನ್ ಜಿ ಆವೃತ್ತಿಗಳ ಖರೀದಿಯ ಮೇಲೂ ಆಫರ್ ನೀಡಲಾಗುತ್ತಿದ್ದು, ಆಕರ್ಷಕ ಕ್ಯಾಶ್ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ: ಭಾರತದಲ್ಲಿ ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಕಾರುಗಳಿವು!

ಹೊಸ ಆಫರ್ ಗಳಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಆಲ್ಟ್ರೊಜ್ ಪ್ರೀಮಿಯಂ ಹ್ಯಾಚ್ ಬ್ಯಾಕ್ ಕಾರು ಖರೀದಿಯ ಮೇಲೆ ರೂ. 65 ಸಾವಿರ ಮೌಲ್ಯದ ಆಫರ್ ಗಳನ್ನು ಘೋಷಿಸಿದೆ. ಇದು ಸದ್ಯ ಮಾರುಕಟ್ಟೆಯಲ್ಲಿ ಮೂರು ಎಂಜಿನ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದ್ದು, 1.2 ಲೀಟರ್ ಎನ್ಎ ಪೆಟ್ರೋಲ್, 1.5 ಲೀಟರ್ ಡೀಸೆಲ್ ಮತ್ತು 1.2 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ.

ಟಾಟಾ ಮೋಟಾರ್ಸ್ ಹೊಸ ಆಫರ್ ಗಳಲ್ಲಿ ಹ್ಯಾರಿಯರ್ ಮತ್ತು ಸಫಾರಿ ಫೇಸ್ ಲಿಫ್ಟ್ ಮಾದರಿಗಳ ಜೊತೆಗೆ 2023ರ ಮಾದರಿಗಳ ಮೇಲೂ ಆಫರ್ ನೀಡುತ್ತಿದೆ. ಸಫಾರಿ ಮತ್ತು ಹ್ಯಾರಿಯರ್ ಕಾರು ಖರೀದಿಸುವ ಗ್ರಾಹಕರಿಗೆ ರೂ. 80 ಸಾವಿರದಿಂದ ರೂ. 1.25 ಲಕ್ಷದ ತನಕ ಉಳಿತಾಯ ಮಾಡಬಹುದಾಗಿದೆ. ಇದರಲ್ಲಿ ಕ್ಯಾಶ್ ಡಿಸ್ಕೌಂಟ್, ಎಕ್ಸ್ ಚೆಂಜ್ ಆಫರ್ ಮತ್ತು ಕಾರ್ಪೊರೇಟ್ ಡಿಸ್ಕೌಂಟ್ ಒಳಗೊಂಡಿದ್ದು, ಇವು 2.0 ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿವೆ.

ಇದನ್ನೂ ಓದಿ: ಎಡಿಎಎಸ್ ಸೌಲಭ್ಯ ಹೊಂದಿರುವ ಭಾರತದ ಬಜೆಟ್ ಕಾರುಗಳಿವು!

ಇನ್ನು ಹೊಸ ಆಫರ್ ಗಳಲ್ಲಿ ನೆಕ್ಸಾನ್ ಕೂಡಾ ಭಾರೀ ಪ್ರಮಾಣದ ಡಿಸ್ಕೌಂಟ್ ನಲ್ಲಿ ಖರೀದಿಗೆ ಲಭ್ಯವಿದೆ. 2024ರ ನೆಕ್ಸಾನ್ ಕಾರು ಖರೀದಿಯ ಮೇಲೆ ಒಟ್ಟು ರೂ. 60 ಸಾವಿರ ಡಿಸ್ಕೌಂಟ್ ನೀಡುತ್ತಿದೆ. ನೆಕ್ಸಾನ್ ಕಾರಿನ ಪೆಟ್ರೋಲ್ ಮ್ಯಾನುವಲ್ ಆವೃತ್ತಿಗಳ ಮೇಲೆ ರೂ. 40 ಸಾವಿರ ತನಕ ಕ್ಯಾಶ್ ಡಿಸ್ಕೌಂಟ್ ಮತ್ತು ಪೆಟ್ರೋಲ್ ಎಎಂಟಿ ಆವೃತ್ತಿಗಳ ಮೇಲೆ ರೂ. 20 ಸಾವಿರ ಕ್ಯಾಶ್ ಡಿಸ್ಕೌಂಟ್ ನೀಡಲಾಗುತ್ತಿದೆ.

Published On - 2:50 pm, Thu, 6 June 24

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್