ನೆಕ್ಸಾನ್ ಇವಿ, ಟಿಗೋರ್ ಇವಿ ಮತ್ತು ಟಿಯಾಗೋ ಇವಿ ಕಾರುಗಳ ಮೇಲೆ ಸಖತ್ ಆಫರ್

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಇವಿ, ಟಿಗೋರ್ ಇವಿ ಮತ್ತು ಟಿಯಾಗೋ ಇವಿ ಕಾರು ಖರೀದಿಯ ಮೇಲೆ ಆಕರ್ಷಕ ಇಯರ್ ಎಂಡ್ ಆಫರ್ ಘೋಷಣೆ ಮಾಡಿದೆ.

ನೆಕ್ಸಾನ್ ಇವಿ, ಟಿಗೋರ್ ಇವಿ ಮತ್ತು ಟಿಯಾಗೋ ಇವಿ ಕಾರುಗಳ ಮೇಲೆ ಸಖತ್ ಆಫರ್
ಟಾಟಾ ಎಲೆಕ್ಟ್ರಿಕ್ ಕಾರುಗಳು
Follow us
Praveen Sannamani
|

Updated on: Dec 14, 2023 | 9:46 PM

ವರ್ಷಾಂತ್ಯದಲ್ಲಿ ಹಲವು ಕಾರು ಕಂಪನಿಗಳು ಗ್ರಾಹಕರಿಗೆ ಅತ್ಯುತ್ತಮ ಆಫರ್ ಘೋಷಣೆ ಮಾಡಿದ್ದು, ಟಾಟಾ ಮೋಟಾರ್ಸ್ (Tata Motors) ಕಂಪನಿಯು ಸಹ ತನ್ನ ಜನಪ್ರಿಯ ಎಲೆಕ್ಟ್ರಿಕ್ ಕಾರುಗಳ ಖರೀದಿ ಮೇಲೂ ಆಫರ್ ನೀಡುತ್ತಿದೆ. ಟಾಟಾ ಕಂಪನಿಯ ಇಯರ್ ಎಂಡ್ ಆಫರ್ ಗಳಲ್ಲಿ ಗ್ರಾಹಕರಿಗೆ ಕ್ಯಾಶ್ ಡಿಸ್ಕೌಂಟ್, ಎಕ್ಸ್ ಚೆಂಜ್ ಮತ್ತು ಕಾರ್ಪೊರೇಟ್ ಡಿಸ್ಕೌಂಟ್ ನೀಡುತ್ತಿದೆ.

ಹೊಸ ಆಫರ್ ಗಳಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಟಿಯಾಗೋ ಇವಿ ಕಾರಿನ ಮೇಲೆ ಒಟ್ಟು ರೂ. 77 ಸಾವಿರ ಮೌಲ್ಯದ ಆಫರ್ ನೀಡುತ್ತಿದ್ದು, ಇದರಲ್ಲಿ ರೂ. 15 ಸಾವಿರ ಮೌಲ್ಯದ ಎಕ್ಸ್ ಚೆಂಜ್, ರೂ. 55 ಸಾವಿರ ಮೌಲ್ಯದ ಗ್ರೀನ್ ಬೋನಸ್ ಮತ್ತು ರೂ. 7 ಸಾವಿರ ಮೌಲ್ಯದ ಕಾರ್ಪೊರೇಟ್ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಟಿಯಾಗೋ ಇವಿ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 8.69 ಲಕ್ಷದಿಂದ ರೂ. 12.49 ಲಕ್ಷ ಬೆಲೆ ಹೊಂದಿದ್ದು, 26kWh ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಮೂಲಕ ಪ್ರತಿ ಚಾರ್ಜ್ ಗೆ ಗರಿಷ್ಠ 315 ಕಿ.ಮೀ ಮೈಲೇಜ್ ನೀಡುತ್ತದೆ.

ಟಾಟಾ ಮೋಟಾರ್ಸ್ ಕಂಪನಿಯು ಟಿಯಾಗೋ ನಂತರ ಟಿಗೋರ್ ಇವಿ ಕಾರಿನ ಮೇಲೆ ರೂ. 1.10 ಲಕ್ಷ ಮೌಲ್ಯದ ಆಫರ್ ನೀಡುತ್ತಿದೆ. ಇದರಲ್ಲಿ ಗ್ರಾಹಕರು ರೂ. 50 ಸಾವಿರ ತನಕ ಕ್ಯಾಶ್ ಡಿಸ್ಕೌಂಟ್, ರೂ. 50 ಸಾವಿರ ಮೌಲ್ಯದ ಎಕ್ಸ್ ಚೆಂಜ್ ಆಫರ್ ಮತ್ತು ರೂ. 10 ಸಾವಿರ ಮೌಲ್ಯದ ಕಾರ್ಪೊರೇಟ್ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದ್ದು, ಇದು ಎಕ್ಸ್ ಶೋರೂಂ ಪ್ರಕಾರ ರೂ. 12.49 ಲಕ್ಷದಿಂದ ರೂ. 13.75 ಲಕ್ಷ ಬೆಲೆ ಹೊಂದಿದೆ.

ಇದನ್ನೂ ಓದಿ: ಇವಿಎಕ್ಸ್ ಎಲೆಕ್ಟ್ರಿಕ್ ಬಿಡುಗಡೆ ಮಾಹಿತಿ ಹಂಚಿಕೊಂಡ ಮಾರುತಿ ಸುಜುಕಿ

ಟಿಗೋರ್, ಟಿಯಾಗೋ ನಂತರ ನೆಕ್ಸಾನ್ ಇವಿ ಕಾರಿನ ಮೇಲೆ ಟಾಟಾ ಮೋಟಾರ್ಸ್ ಕಂಪನಿಯು ರೂ. 2.60 ಲಕ್ಷದ ಆಫರ್ ನೀಡುತ್ತಿದೆ. ನೆಕ್ಸಾನ್ ಇವಿ ಕಾರಿನ ಮ್ಯಾಕ್ಸ್ ವೆರಿಯೆಂಟ್ ಮೇಲೆ ಈ ಆಫರ್ ಲಭ್ಯವಿದ್ದು, ಇವು 2023ರ ಮಾದರಿಯಾಗಿವೆ. ಇತ್ತೀಚೆಗೆ ಬಿಡುಗಡೆಯಾದ ನೆಕ್ಸಾನ್ ಇವಿ ಮೇಲೆ ಯಾವುದೇ ರೀತಿಯ ಆಫರ್ ಘೋಷಣೆ ಮಾಡಿಲ್ಲವಾದರೂ ಹಳೆಯ ನೆಕ್ಸಾನ್ ಇವಿ ಕಾರಿನ ಮ್ಯಾಕ್ಸ್ ಮತ್ತು ಫ್ರೈಮ್ ಎರಡು ವೆರಿಯೆಂಟ್ ಗಳ ಮೇಲೂ ಅತ್ಯುತ್ತಮ ಆಫರ್ ಪಡೆಯಬಹುದಾಗಿದೆ.

ನೆಕ್ಸಾನ್ ಇವಿ ಕಾರಿನ ಹೊಸ ಆಫರ್ ಗಳಲ್ಲಿ ಗ್ರಾಹಕರು ಮ್ಯಾಕ್ಸ್ ವೆರಿಯೆಂಟ್ ಗಳ ಮೇಲೆ ರೂ. 2.10 ಲಕ್ಷ ಕ್ಯಾಶ್ ಡಿಸ್ಕೌಂಟ್ ಮತ್ತು ರೂ. 50 ಸಾವಿರ ಎಕ್ಸ್ ಚೆಂಜ್ ಆಫರ್ ಪಡೆದುಕೊಳ್ಳಬಹುದಾಗಿದ್ದರೆ ಫ್ರೈಮ್ ವೆರಿಯೆಂಟ್ ಗಳ ಖರೀದಿ ಮೇಲೆ ರೂ. 1.40 ಲಕ್ಷ ಕ್ಯಾಶ್ ಡಿಸ್ಕೌಂಟ್ ಮತ್ತು ರೂ. 50 ಸಾವಿರ ಎಕ್ಸ್ ಚೆಂಜ್ ಆಫರ್ ಲಭ್ಯವಿದೆ. ಜೊತೆಗೆ ಹೊಸ ನೆಕ್ಸಾನ್ ಇವಿ ಫೇಸ್ ಲಿಫ್ಟ್ ಕಾರಿನ ಖರೀದಿ ಮೇಲೂ ಕೆಲವು ಆಫರ್ ನೀಡಲಾಗಿದ್ದು, ಹೊಸ ಕಾರಿನ ಫಿಯರ್ ಲೆಸ್, ಫಿಯರ್ ಲೆಸ್ ಪ್ಲಸ್ ಎಸ್ ವೆರಿಯೆಂಟ್ ಗಳ ಖರೀದಿಯಲ್ಲಿ ಮಾತ್ರ ರೂ. 35 ಸಾವಿರ ಮೌಲ್ಯ ವಿವಿಧ ಕೊಡುಗೆಗಗಳನ್ನು ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ: ಭಾರತದ ಜನಪ್ರಿಯ ಎಸ್ ಯುವಿ ಕಾರು ಖರೀದಿಸಿದ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗನ ಪುತ್ರಿ

ಇನ್ನು ಪ್ರಸ್ತುತ ಮಾರುಕಟ್ಟೆಯಲ್ಲಿನ ಇವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿರುವ ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲಿಯೇ ಮತ್ತಷ್ಟು ಇವಿ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಇವಿ ಕಾರುಗಳು ಸುಧಾರಿತ ತಂತ್ರಜ್ಞಾನ, ಆಕರ್ಷಕ ಬೆಲೆಗಳು ಮತ್ತು ಭರ್ಜರಿ ಮೈಲೇಜ್ ಮೂಲಕ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಮೂಡಿಸಲಿವೆ.

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ