Tata Motors: ಭರ್ಜರಿ ಮೈಲೇಜ್ ನೀಡುವ ನಾಲ್ಕು ಹೊಸ ಇವಿ ಕಾರುಗಳ ಬಿಡುಗಡೆಗೆ ಸಿದ್ದವಾದ ಟಾಟಾ ಮೋಟಾರ್ಸ್

ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಇವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಸುಳಿವು ನೀಡಿದ್ದು, 2024ರ ವೇಳೆ ಹೊಸ ಇವಿ ಕಾರುಗಳು ಮಾರುಕಟ್ಟೆಗೆ ಲಗ್ಗೆಯಿಡಲಿವೆ.

Tata Motors: ಭರ್ಜರಿ ಮೈಲೇಜ್ ನೀಡುವ ನಾಲ್ಕು ಹೊಸ ಇವಿ ಕಾರುಗಳ ಬಿಡುಗಡೆಗೆ ಸಿದ್ದವಾದ ಟಾಟಾ ಮೋಟಾರ್ಸ್
ಹೊಸ ಇವಿ ಕಾರುಗಳ ಬಿಡುಗಡೆಗೆ ಸಿದ್ದವಾದ ಟಾಟಾ ಮೋಟಾರ್ಸ್
Follow us
Praveen Sannamani
|

Updated on: Aug 19, 2023 | 6:26 PM

ಎಲೆಕ್ಟ್ರಿಕ್ ಕಾರುಗಳ(Electric Cars) ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಟಾಟಾ ಮೋಟಾರ್ಸ್(Tata Motors) ಕಂಪನಿ ಶೀಘ್ರದಲ್ಲಿ ಮತ್ತಷ್ಟು ಹೊಸ ಇವಿ ಕಾರುಗಳ ಬಿಡುಗಡೆಗೆ ಸಿದ್ದವಾಗುತ್ತಿದೆ. ಹೊಸ ಇವಿ ಕಾರುಗಳು ವಿವಿಧ ಸೆಗ್ಮೆಂಟ್ ಗಳಲ್ಲಿ ಬಿಡುಗಡೆಯಾಗಲಿದ್ದು, ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ. ಹಾಗಾದ್ರೆ ಟಾಟಾ ಮೋಟಾರ್ಸ್ ಬಿಡುಗಡೆ ಮಾಡಲಿರುವ ಆ ಹೊಸ ಇವಿ ಕಾರುಗಳು ಯಾವುವು? ಅವುಗಳ ವಿಶೇಷತೆಗಳೇನು? ಈ ಎಲ್ಲಾ ಮಾಹಿತಿ ಇಲ್ಲಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಮೂಲಕ ಇವಿ ಕಾರು ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿರುವ ಟಾಟಾ ಮೋಟಾರ್ಸ್ ಕಂಪನಿ ಇದೀಗ ಗ್ರಾಹಕರ ಬೇಡಿಕೆಯೆಂತೆ ಮತ್ತಷ್ಟು ಹೊಸ ಇವಿ ಕಾರುಗಳ ಬಿಡುಗಡೆಗೆ ಸಿದ್ದವಾಗುತ್ತಿದೆ. ನೆಕ್ಸಾನ್ ಎಲೆಕ್ಟ್ರಿಕ್ ನಂತರ ಟಿಗೋರ್ ಇವಿ, ಟಿಯಾಗೋ ಇವಿ ಬಿಡುಗಡೆ ಮಾಡಿದ ಟಾಟಾ ಕಂಪನಿ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಇವಿ ಕಾರುಗಳ ಮೇಲೂ ಹೆಚ್ಚಿನ ನೀರಿಕ್ಷೆಯಿಟ್ಟುಕೊಂಡಿದೆ. ಹೊಸ ಇವಿ ಕಾರು ಮಾದರಿಗಳ ಬಿಡುಗಡೆಗಾಗಿ ಈಗಾಗಲೇ ಕೊನೆಯ ಹಂತದ ಸಿದ್ದತೆ ನಡೆಸುತ್ತಿದ್ದು, ಎರಡನೇ ತಲೆಮಾರಿನ ಇವಿ ತಂತ್ರಜ್ಞಾನದೊಂದಿಗೆ ಹೊಸ ಕಾರುಗಳು ಅಭಿವೃದ್ದಿಗೊಳ್ಳುತ್ತಿವೆ.

Tata EV Cars

ಇದನ್ನೂ ಓದಿ: ಭಾರತದಲ್ಲಿ ಖರೀದಿಗೆ ಲಭ್ಯವಿರುವ ಟಾಪ್ 5 ಅತ್ಯುತ್ತಮ ಹೈಬ್ರಿಡ್ ಕಾರುಗಳಿವು!

ಸೆಪ್ಟೆಂಬರ್ ಹೊತ್ತಿಗೆ ನೆಕ್ಸಾನ್ ಇವಿ ಕಾರಿನ ಫೇಸ್ ಲಿಫ್ಟ್ ಆವೃತ್ತಿಯು ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ತದನಂತರ ಇನ್ನುಳಿದ ಮೂರು ಇವಿ ಕಾರುಗಳು ಹಂತ ಹಂತವಾಗಿ ಬಿಡುಗಡೆಯಾಗಲಿವೆ. ಫೇಸ್ ಲಿಫ್ಟ್ ನೆಕ್ಸಾನ್ ಇವಿ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಭಾರೀ ಬದಲಾವಣೆಯೊಂದಿಗೆ ಹೆಚ್ಚಿನ ಮಟ್ಟದ ಬ್ಯಾಟರಿ ಪ್ಯಾಕ್ ಪಡೆದುಕೊಳ್ಳುತ್ತಿದೆ. ಸದ್ಯ ಮಾರುಕಟ್ಟೆಯಲ್ಲಿ ಸ್ಟ್ಯಾಂಡರ್ಡ್ ಮತ್ತು ಮ್ಯಾಕ್ಸ್ ಎನ್ನುವ ಪ್ರಮುಖ ಎರಡು ಆವೃತ್ತಿಗಳಲ್ಲಿ ಮಾರಾಟಗೊಳ್ಳುತ್ತಿದ್ದು, ಇವು ಎಕ್ಸ್ ಶೋರೂಂ ಪ್ರಕಾರ ರೂ. 16.49 ಲಕ್ಷದಿಂದ ರೂ. 19.29 ಲಕ್ಷ ಬೆಲೆ ಹೊಂದಿವೆ. ಆದರೆ ನೆಕ್ಸಾನ್ ಇವಿ ಫೇಸ್ ಲಿಫ್ಟ್ ಆವೃತ್ತಿಯು ಪ್ರಸ್ತುತ ಮಾದರಿಗಳಿಂತಲೂ ತುಸು ದುಬಾರಿ ಬೆಲೆಯೊಂದಿಗೆ ಮಾರಾಟಗೊಳ್ಳಲಿದ್ದು, ಇದು ಪ್ರತಿ ಚಾರ್ಜ್ ಗೆ 500 ಕಿ.ಮೀ ಮೈಲೇಜ್ ನೀಡುವ ಬ್ಯಾಟರಿ ಪ್ಯಾಕ್ ಹೊಂದಿರುವ ಸಾಧ್ಯತೆಗಳಿವೆ.

Tata Harrier EV

ನೆಕ್ಸಾನ್ ಇವಿ ಫೇಸ್ ಲಿಫ್ಟ್ ಬಿಡುಗಡೆಯ ನಂತರ ಟಾಟಾ ಮೋಟಾರ್ಸ್ ಕಂಪನಿ ಈ ವರ್ಷಾಂತ್ಯಕ್ಕೆ ಇಲ್ಲವೇ ಜನವರಿ ಆರಂಭದಲ್ಲಿ ಹ್ಯಾರಿಯರ್ ಇವಿ ಪರಿಚಯಿಸಲಿದೆ. ಇದು ಎಲೆಕ್ಟ್ರಿಕ್ ವಾಹನಗಳ ಎರಡನೇ ತಲೆಮಾರಿನ ತಂತ್ರಜ್ಞಾನ ಪಡೆದುಕೊಳ್ಳುತ್ತಿದ್ದು, ಹಲವಾರು ಐಷಾರಾಮಿ ಫೀಚರ್ಸ್ ಹೊಂದಿರಲಿದೆ. ಟಾಟಾ ಮೋಟಾರ್ಸ್ ಕಂಪನಿ ಹೊಸ ಹ್ಯಾರಿಯರ್ ಇವಿ ಮಾದರಿಗಾಗಿ ಸುಧಾರಿತ ಬ್ಯಾಟರಿ ಪ್ಯಾಕ್ ಪರಿಚಯಿಸಬಹುದಾಗಿದ್ದು, ಇದು ಪ್ರತಿ ಚಾರ್ಜ್ ಗೆ 500 ಕಿ.ಮೀ ಗಿಂತಲೂ ಹೆಚ್ಚಿನ ಮೈಲೇಜ್ ನೊಂದಿಗೆ ಎಡಿಎಎಸ್ ಫೀಚರ್ಸ್ ಹೊಂದಿರಲಿದೆ. ಈ ಮೂಲಕ ಇದು ಮಧ್ಯಮ ಕ್ರಮಾಂಕದ ಎಲೆಕ್ಟ್ರಿಕ್ ಎಸ್ ಯುವಿ ಮಾದರಿಯಾಗಿ ಗುರುತಿಸಿಕೊಳ್ಳಲಿದ್ದು, ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 25 ಲಕ್ಷ ಬೆಲೆ ಹೊಂದಿರಬಹುದಾಗಿದೆ.

ಟಾಟಾ ಮೋಟಾರ್ಸ್ ಕಂಪನಿ ಹ್ಯಾರಿಯರ್ ಇವಿ ನಂತರ ಕರ್ವ್ ಎಲೆಕ್ಟ್ರಿಕ್ ಬಿಡುಗಡೆ ಮಾಡುವ ಯೋಜನೆ ಹೊಂದಿದ್ದು, ಇದು 2024ರ ಮಧ್ಯಂತರದಲ್ಲಿ ಬಿಡುಗಡೆಯಾಗಬಹುದಾಗಿದೆ. ಇದು ಕೂಪೆ ಎಸ್ ಯುವಿ ವೈಶಿಷ್ಟ್ಯತೆಯೊಂದಿಗೆ ಗ್ರಾಹಕರನ್ನು ಆಕರ್ಷಿಸಲಿದ್ದು, ಇದು ತಂತ್ರಜ್ಞಾನ ಮತ್ತು ಫೀಚರ್ಸ್ ವಿಚಾರದಲ್ಲಿ ಗಮನಸೆಳೆಯಲಿದೆ. ಕರ್ವ್ ಇವಿ ಕಾರಿನಲ್ಲಿ ಟಾಟಾ ಮೋಟಾರ್ಸ್ ಕಂಪನಿ ನೆಕ್ಸಾನ್ ಇವಿ ಫೇಸ್ ಲಿಫ್ಟ್ ಮಾದರಿಯಲ್ಲಿರುವಂತೆ ಪವರ್ ಟ್ರೇನ್ ಮತ್ತು ಬ್ಯಾಟರಿ ಪ್ಯಾಕ್ ಬಳಕೆ ಮಾಡಬಹುದಾಗಿದ್ದು, ಹೊಸ ಕಾರಿನ ಬೆಲೆ ನೆಕ್ಸಾನ್ ಇವಿ ಫೇಸ್ ಲಿಫ್ಟ್ ಮಾದರಿಗಿಂತ ತುಸು ದುಬಾರಿ ಎನ್ನಿಸಲಿದೆ.

ಇದನ್ನೂ ಓದಿ: ಪನೊರಮಿಕ್ ಸನ್ ರೂಫ್ ಹೊಂದಿರುವ ಕಾರುಗಳಿವು!

Tata Curvv EV

ಇನ್ನು ಟಾಟಾ ಮೋಟಾರ್ಸ್ ಕಂಪನಿ 2024ರ ಕೊನೆಯಲ್ಲಿ ಪಂಚ್ ಇವಿ ವರ್ಷನ್ ಬಿಡುಗಡೆ ಮಾಡುವ ಯೋಜನೆ ಹೊಂದಿದೆ. ಇದು ಸಣ್ಣ ಗಾತ್ರದ ಇವಿ ಕಾರು ಮಾರಾಟ ಹೊಸ ಸಂಚಲನ ಮೂಡಿಸಲಿದ್ದು, ಇದು ಸದ್ಯ ಮಾರುಕಟ್ಟೆಯಲ್ಲಿರುವ ಟಿಯಾಗೋ ಇವಿ ಆವೃತ್ತಿಯಲ್ಲಿರುವಂತೆ ತಂತ್ರಜ್ಞಾನ ಮತ್ತು ಫೀಚರ್ಸ್ ಹೊಂದಿರಲಿದೆ. ಈ ಮೂಲಕ ಇದು ಪ್ರತಿ ಚಾರ್ಜ್ ಗೆ 380 ಕಿ.ಮೀ ಗಿಂತಲೂ ಹೆಚ್ಚಿನ ಮೈಲೇಜ್ ನೀಡಲಿದ್ದು, ಎಕ್ಸ್ ಶೋರೂಂ ಪ್ರಕಾರ ರೂ. 11 ಲಕ್ಷದಿಂದ ರೂ. 14 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳಬಹುದಾಗಿದೆ. ಹೀಗಾಗಿ ಇದು ಟಿಯಾಗೋ ಇವಿ ಗಿಂತಲೂ ಹೆಚ್ಚಿನ ಸ್ಥಾನ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಇದರೊಂದಿಗೆ ಟಾಟಾ ಮೋಟಾರ್ಸ್ ಕಂಪನಿ 2030ರ ವೇಳೆಗೆ ಶೇ.50 ರಷ್ಟು ಇವಿ ಕಾರುಗಳನ್ನು ಮಾರಾಟ ಮಾಡುವ ಗುರಿಹೊಂದಿದ್ದು, ಮಾಲಿನ್ಯ ನಿಯಂತ್ರಣದಲ್ಲಿ ಮಹತ್ವದ ಹೆಜ್ಜೆಯಿರಿಸುತ್ತಿದೆ.

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್