Tata Motors: ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ
ಹೊಸ ಕಾರುಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿರುವ ಟಾಟಾ ಮೋಟಾರ್ಸ್ ಕಂಪನಿ ಇವಿ ಕಾರುಗಳ ಮಾರಾಟದಲ್ಲೂ ಹೊಸ ದಾಖಲೆ ನಿರ್ಮಿಸಿದೆ.
ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಸೆಗ್ಮೆಂಟ್ ಗಳಲ್ಲಿ ಎಲೆಕ್ಟ್ರಿಕ್ ಕಾರುಗಳನ್ನ(Electric Cars) ಮಾರಾಟಗಳನ್ನ ಮಾರಾಟ ಮಾಡುತ್ತಿರುವ ಟಾಟಾ ಮೋಟಾರ್ಸ್(Tata Motors) ಕಂಪನಿ ಕಳೆದ ತಿಂಗಳ ಇವಿ ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಹೊಸ ಕಾರು ಮಾದರಿಗಳೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿ ಇದೀಗ ಮತ್ತೊಂದು ದಾಖಲೆ ನಿರ್ಮಿಸಿದ್ದು, ನ್ಯೂ ಜನರೇಷನ್ ಕಾರು ಮಾದರಿಗಳೊಂದಿಗೆ ಪ್ರತಿಸ್ಪರ್ಧಿ ಕಂಪನಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.
ಹೊಸ ಕಾರು ಮಾದರಿಗಳೊಂದಿಗೆ ಪ್ರತಿಸ್ಪರ್ಧಿ ಹ್ಯುಂಡೈ ಕಂಪನಿಗೆ ಭರ್ಜರಿ ಪೈಪೋಟಿ ನೀಡುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಇವಿ ಕಾರು ಮಾರಾಟದಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಕಳೆದ ತಿಂಗಳ ಮಾರ್ಚ್ ಅವಧಿಯಲ್ಲಿನ ಕಾರು ಮಾರಾಟ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿರುವ ಟಾಟಾ ಮೋಟಾರ್ಸ್ ಒಟ್ಟು 44,047 ಕಾರುಗಳನ್ನ ಮಾರಾಟ ಮಾಡಿದೆ. ಇದರಲ್ಲಿ ಕಂಪನಿಯು ಈ ಹಿಂದಿಗಿಂತಲೂ ಹೆಚ್ಚಿನ ಮಟ್ಟದ ಎಲೆಕ್ಟ್ರಿಕ್ ಕಾರುಗಳನ್ನ ಮಾರಾಟ ಮಾಡಿದ್ದು, ಕಳೆದ ತಿಂಗಳು ಒಟ್ಟು 6,509 ಎಲೆಕ್ಟ್ರಿಕ್ ಕಾರುಗಳನ್ನ ಮಾರಾಟಗೊಳಿಸಿದೆ.
ಇದನ್ನೂ ಓದಿ: ರೂ.10 ಲಕ್ಷಕ್ಕೆ ಖರೀದಿಗೆ ಲಭ್ಯವಿರುವ ಬೆಸ್ಟ್ ಕಂಪ್ಯಾಕ್ಟ್ ಎಸ್ ಯುವಿ ಕಾರುಗಳಿವು!
ದೇಶಾದ್ಯಂತ ಹೆಚ್ಚುತ್ತಿರುವ ಇಂಧನಗಳ ದರ ಏರಿಕೆ ಪರಿಣಾಮ ಹೊಸ ಕಾರು ಖರೀದಿದಾರರು ಇವಿ ವಾಹನಗಳತ್ತ ಆಕರ್ಷಿತರಾಗುತ್ತಿದ್ದು, ವಿವಿಧ ಇವಿ ಕಾರುಗಳೊಂದಿಗೆ ಟಾಟಾ ಕಂಪನಿಯು ಸದ್ಯ ಅಗ್ರಸ್ಥಾನ ಕಾಯ್ದುಕೊಂಡಿದೆ. ಕಳೆದ ಕೆಲವು ತಿಂಗಳ ಹಿಂದಷ್ಟೇ ಪ್ರತಿ ತಿಂಗಳು 400 ರಿಂದ 500 ಯುನಿಟ್ ಇವಿ ಕಾರುಗಳನ್ನ ಮಾರಾಟ ಮಾಡುತ್ತಿದ್ದ ಟಾಟಾ ಕಂಪನಿಯು ಇದೀಗ ಎಲ್ಲಾ ಹಳೆಯ ದಾಖಲೆಗಳು ಅಳಿಸಿ ಹೊಸ ಗುರಿ ಸಾಧನೆ ಮಾಡಿದೆ. ಕೇವಲ ಒಂದು ತಿಂಗಳ ಅವಧಿಯಲ್ಲಿ ಬರೋಬ್ಬರಿ 6,509 ಯುನಿಟ್ ಇವಿ ಕಾರು ಮಾರಾಟ ಮಾಡಿದ್ದು, ಹೊಸ ಟಿಯಾಗೋ ಇವಿ ಕಾರು ಭರ್ಜರಿ ಬೇಡಿಕೆ ತಂದುಕೊಡುತ್ತಿದೆ.
ಟಾಟಾ ಮೋಟಾರ್ಸ್ ಕಂಪನಿಯು ಪ್ರಸ್ತುತ ಮಾರುಕಟ್ಟೆಯಲ್ಲಿ ಟಿಯಾಗೋ ಇವಿ, ಟಿಗೊರ್ ಇವಿ ಮತ್ತು ನೆಕ್ಸಾನ್ ಇವಿ ಕಾರುಗಳನ್ನ ಮಾರಾಟ ಮಾಡುತ್ತಿದ್ದು, ನೆಕ್ಸಾನ್ ಇವಿ ನಂತರ ಇದೀಗ ಟಿಯಾಗೋ ಇವಿ ಕೂಡಾ ದಾಖಲೆ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದೆ. ಹೊಸ ಟಿಯಾಗೋ ಇವಿ ಕಾರು ಬಿಡುಗಡೆಯಾದ ಕೆಲವೇ ತಿಂಗಳಿನಲ್ಲಿ 30 ಸಾವಿರಕ್ಕೂ ಹೆಚ್ಚು ಬುಕಿಂಗ್ ಪಡೆದುಕೊಂಡಿದ್ದು, ಕಳೆದ ತಿಂಗಳ ಇವಿ ಕಾರುಗಳ ಮಾರಾಟ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇದು ಬಜೆಟ್ ಬೆಲೆಯೊಂದಿಗೆ ಹಲವಾರು ಹೊಸ ವೈಶಿಷ್ಟ್ಯತೆಗಳನ್ನ ಪಡೆದುಕೊಂಡಿದ್ದು, ಇದೀಗ ಹೊಸ ಕಾರಿನ ಟಾಟಾ ಕಂಪನಿಯು ಮತ್ತೊಂದು ಗುರಿಸಾಧನೆ ತಲುಪಿದೆ.
ಇದನ್ನೂ ಓದಿ: ಅತ್ಯುತ್ತಮ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡ ಬೆಸ್ಟ್ ಕಾರುಗಳಿವು!
ಬಜೆಟ್ ಇವಿ ಕಾರುಗಳ ಪಟ್ಟಿಯಲ್ಲಿ ಸದ್ಯ ಹೊಸ ಟ್ರೆಂಡ್ ಸೃಷ್ಠಿಸುತ್ತಿರುವ ಟಿಯಾಗೋ ಇವಿ ಕಾರು ಅತ್ಯುತ್ತಮ ಫೀಚರ್ಸ್ ಹೊಂದಿದ್ದು, ಹೊಸ ಕಾರಿನಲ್ಲಿ 19.2 ಕೆವಿಹೆಚ್ ಮತ್ತು 24 ಕೆವಿಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆ ನೀಡಲಾಗಿದೆ. ಇದು ಪ್ರತಿ ಚಾರ್ಜ್ ಗೆ 250 ರಿಂದ 315 ಕಿ.ಮೀ ಮೈಲೇಜ್ ನೀಡಲಿದ್ದು, ಪೆಟ್ರೋಲ್ ಮಾದರಿಗಳಿಂತಲೂ ಅತಿ ಕಡಿಮೆ ನಿರ್ವಹಣಾ ವೆಚ್ಚ ಪಡೆದುಕೊಂಡಿದೆ. ಹೀಗಾಗಿ ಕಂಪನಿಯು ಹೊಸ ಕಾರನ್ನ ಬ್ಯಾಟರಿ ಆಯ್ಕೆಗೆ ಅನುಗುಣವಾಗಿ ಎಕ್ಸ್ ಶೋರೂಂ ಪ್ರಕಾರ ರೂ. 8.69 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 11.99 ಲಕ್ಷ ಬೆಲೆ ಹೊಂದಿದೆ.
ಇದರೊಂದಿಗೆ ಹೊಸ ಕಾರಿನ ಬ್ಯಾಟರಿ ಪ್ಯಾಕ್ ಹಾಗೂ ಇವಿ ಮೋಟಾರ್ ಆಕರ್ಷಕ ವಾರಂಟಿ ನೀಡಲಾಗಿದ್ದು, ಗ್ರಾಹಕರು 1.60 ಲಕ್ಷ ಕಿಲೋ ಮೀಟರ್ ಇಲ್ಲವೇ 8 ವರ್ಷಗಳ ವಾರಂಟಿ ಪಡೆದುಕೊಳ್ಳಬಹುದಾಗಿದೆ. ಜೊತೆಗೆ ಹೊಸ ಕಾರಿನಲ್ಲಿ ಗರಿಷ್ಠ ಸುರಕ್ಷಾ ಸೌಲಭ್ಯಗಳನ್ನ ಸಹ ಜೋಡಣೆ ಮಾಡಿದ್ದು, ಇದು ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.