Tata Cars: ಟಾಟಾ ಮೋಟಾರ್ಸ್ ಹೊಸ ಕಾರುಗಳ ಖರೀದಿಗೆ ರೂ. 1.40 ಲಕ್ಷದ ತನಕ ಡಿಸ್ಕೌಂಟ್

|

Updated on: Nov 14, 2023 | 2:26 PM

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಕಾರುಗಳ ಖರೀದಿಯ ಮೇಲೆ ಭರ್ಜರಿ ಆಫರ್ ನೀಡುತ್ತಿದ್ದು, ದೀಪಾವಳಿ ಸಂಭ್ರಮದಲ್ಲಿ ಗ್ರಾಹಕರು ಭಾರೀ ಪ್ರಮಾಣದ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದೆ.

Tata Cars: ಟಾಟಾ ಮೋಟಾರ್ಸ್ ಹೊಸ ಕಾರುಗಳ ಖರೀದಿಗೆ ರೂ. 1.40 ಲಕ್ಷದ ತನಕ ಡಿಸ್ಕೌಂಟ್
ಟಾಟಾ ಮೋಟಾರ್ಸ್ ಹೊಸ ಆಫರ್ ಘೋಷಣೆ
Follow us on

ದೇಶದ ಜನಪ್ರಿಯ ಕಾರು ಉತ್ಪಾದನಾ ಕಂಪನಿಯಾಗಿ ಹೊರಹೊಮ್ಮಿರುವ ಟಾಟಾ ಮೋಟಾರ್ಸ್ (Tata Motors) ಕಂಪನಿಯು ತನ್ನ ಪ್ರಮುಖ ಮಾದರಿಗಳ ಮೇಲೆ ದೀಪಾವಳಿ ಪ್ರಯಕ್ತ ಭರ್ಜರಿ ಆಫರ್ ನೀಡುತ್ತಿದ್ದು, ಟಿಯಾಗೋ, ಟಿಗೋರ್, ಪಂಚ್, ಆಲ್ ಟ್ರೊಜ್, ಹ್ಯಾರಿಯರ್ ಮತ್ತು ಸಫಾರಿ ಕಾರುಗಳ ಮೇಲೆ ಆಕರ್ಷಕ ಆಫರ್ ಗಳು ಲಭ್ಯವಿವೆ. ಹೊಸ ಆಫರ್ ಗಳು ಈ ತಿಂಗಳಾಂತ್ಯದ ತನಕ ಲಭ್ಯವಿದ್ದು, ಹೊಸ ಆಫರ್ ಗಳಲ್ಲಿ ಕ್ಯಾಶ್ ಡಿಸ್ಕೌಂಟ್, ಎಕ್ಸ್ ಚೆಂಜ್ ಆಫರ್ ಮತ್ತು ಕಾರ್ಪೊರೇಟ್ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದೆ.

ಟಿಯಾಗೋ ಮತ್ತು ಟಿಗೋರ್

ಟಾಟಾ ಹೊಸ ಆಫರ್ ಗಳಲ್ಲಿ ಟಿಯಾಗೋ ಹ್ಯಾಚ್ ಬ್ಯಾಕ್ ಮತ್ತು ಟಿಗೋರ್ ಕಂಪ್ಯಾಕ್ಟ್ ಸೆಡಾನ್ ಖರೀದಿಸುವ ಗ್ರಾಹಕರಿಗೆ ರೂ. 55 ಸಾವಿರ ತನಕ ಆಫರ್ ನೀಡಲಾಗುತ್ತಿದ್ದು, ಇದರಲ್ಲಿ ರೂ. 35 ಸಾವಿರ ತನಕ ಕ್ಯಾಶ್ ಬ್ಯಾಕ್, ರೂ. 15 ಸಾವಿರ ಎಕ್ಸ್ ಚೆಂಜ್ ಆಫರ್ ಮತ್ತು ರೂ. 5 ಸಾವಿರ ತನಕ ಕಾರ್ಪೊರೇಟ್ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದೆ. ಹಾಗೆಯೇ ಟಿಯಾಗೋ ಮತ್ತು ಟಿಗೋರ್ ಕಾರುಗಳ ಸಿಎನ್ ಜಿ ಆವೃತ್ತಿಯ ಖರೀದಿಯ ಮೇಲೆ ರೂ. 75 ಸಾವಿರ ತನಕ ಆಫರ್ ನೀಡಲಾಗುತ್ತಿದ್ದು, ಇದರಲ್ಲಿ ಬರೋಬ್ಬರಿ ರೂ. 50 ಸಾವಿರ ತನಕ ಕ್ಯಾಶ್ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ: ಕಡಿಮೆ ಬೆಲೆಗೆ ಖರೀದಿಗೆ ಲಭ್ಯವಿರುವ ಅತ್ಯುತ್ತಮ ಟಾಪ್ 5 ಸಿಎನ್ ಜಿ ಕಾರುಗಳಿವು! 

ಆಲ್ಟ್ರೊಜ್ ಮತ್ತು ಪಂಚ್

ಹೊಸ ಆಫರ್ ಗಳಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಆಲ್ಟ್ರೊಜ್ ಪ್ರೀಮಿಯಂ ಹ್ಯಾಚ್ ಬ್ಯಾಕ್ ಕಾರು ಖರೀದಿಯ ಮೇಲೆ ರೂ. 35 ಸಾವಿರ ಮೌಲ್ಯದ ಆಫರ್ ಗಳನ್ನು ಘೋಷಿಸಿದ್ದು, ಇದರಲ್ಲಿ ರೂ. 20 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ. 10 ಸಾವಿರ ಎಕ್ಸ್ ಚೆಂಜ್ ಆಫರ್ ಮತ್ತು ರೂ. 5 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದೆ. ಹಾಗೆಯೇ ಪಂಚ್ ಮೈಕ್ರೊ ಎಸ್ ಯುವಿ ಕಾರು ಖರೀದಿಯ ಮೇಲೆ ರೂ. 5 ಸಾವಿರದಿಂದ ರೂ. 10 ಸಾವಿರ ತನಕ ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದೆ.

ಹ್ಯಾರಿಯರ್ ಮತ್ತು ಸಫಾರಿ(ಹಳೆಯ ಆವೃತ್ತಿಗಳು)

ಟಾಟಾ ಮೋಟಾರ್ಸ್ ಕಂಪನಿಯು ಇತ್ತೀಚೆಗೆ ಹ್ಯಾರಿಯರ್ ಮತ್ತು ಸಫಾರಿ ಫೇಸ್ ಲಿಫ್ಟ್ ಮಾದರಿಗಳನ್ನು ಬಿಡುಗಡೆ ಮಾಡಿದ್ದು, ಸ್ಟಾಕ್ ನಲ್ಲಿರುವ ಹಳೆಯ ಮಾದರಿಗಳ ಮೇಲೆ ಆಫರ್ ನೀಡಲಾಗುತ್ತಿದೆ. ಹೊಸ ಆಫರ್ ಗಳಲ್ಲಿ ಸಫಾರಿ ಮತ್ತು ಹ್ಯಾರಿಯರ್ ಕಾರು ಖರೀದಿಸುವ ಗ್ರಾಹಕರು ರೂ. 1.40 ಲಕ್ಷದ ತನಕ ಉಳಿತಾಯ ಮಾಡಬಹುದಾಗಿದ್ದು, ಇದರಲ್ಲಿ ರೂ. 75 ಸಾವಿರ ತನಕ ಕ್ಯಾಶ್ ಡಿಸ್ಕೌಂಟ್, ರೂ. 50 ಸಾವಿರ ತನಕ ಎಕ್ಸ್ ಚೆಂಜ್ ಆಫರ್ ಮತ್ತು ರೂ. 15 ಸಾವಿರ ತನಕ ಕಾರ್ಪೊರೇಟ್ ಡಿಸ್ಕೌಂಟ್ ಹೊಂದಿರಲಿದೆ.

ಇದನ್ನೂ ಓದಿ: ರೂ. 10 ಲಕ್ಷಕ್ಕೆ ಭರ್ಜರಿ ಮೈಲೇಜ್ ನೀಡುವ ಅತ್ಯುತ್ತಮ ಕಂಪ್ಯಾಕ್ಟ್ ಎಸ್ ಯುವಿ ಕಾರುಗಳಿವು!

ಹ್ಯಾರಿಯರ್ ಮತ್ತು ಸಫಾರಿ ಕಾರುಗಳ ಮೇಲಿನ ಆಫರ್ ಗಳು ಸ್ಟಾಕ್ ಮುಕ್ತಾಯದ ತನಕ ಮಾತ್ರ ಲಭ್ಯವಿರಲಿದ್ದು, ಫೇಸ್ ಲಿಫ್ಟ್ ಮಾದರಿಯ ಮೇಲೆ ಯಾವುದೇ ಆಫರ್ ನೀಡಲಾಗಿಲ್ಲ. ಸದ್ಯ ಸಫಾರಿ ಮತ್ತು ಹ್ಯಾರಿಯರ್ ಫೇಸ್ ಲಿಫ್ಟ್ ಕಾರುಗಳು ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ದಾಖಲೆ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿವೆ.

Published On - 2:22 pm, Tue, 14 November 23