ಹೊಸ ವರ್ಷ ಆರಂಭಕ್ಕೂ ಮುನ್ನ ವಿವಿಧ ಕಾರು ಉತ್ಪಾದನಾ ಕಂಪನಿಗಳು ಗ್ರಾಹಕರಿಗೆ ಭರ್ಜರಿ ಆಫರ್ ನೀಡುತ್ತಿದ್ದು, ಇಯರ್ ಎಂಡ್ ಆಫರ್ ಗಳೊಂದಿಗೆ ಹೆಚ್ಚಿನ ಬೇಡಿಕೆ ಪಡೆದುಕೊಳ್ಳುವ ತವಕದಲ್ಲಿವೆ. ಹೀಗಾಗಿ ಟಾಟಾ ಮೋಟಾರ್ಸ್ (Tata Motors) ಕಂಪನಿಯು ಸಹ ತನ್ನ ಪ್ರಮುಖ ಕಾರು ಮಾದರಿಗಳ ಖರೀದಿ ಮೇಲೆ ಆಕರ್ಷಕ ಆಫರ್ ಘೋಷಣೆ ಮಾಡಿದ್ದು, ಹೊಸ ಆಫರ್ ಗಳನ್ನು ಈ ತಿಂಗಳಾಂತ್ಯದ ತನಕ ಪಡೆದುಕೊಳ್ಳಬಹುದಾಗಿದೆ.
ಟಾಟಾ ಮೋಟಾರ್ಸ್ ಹೊಸ ಆಫರ್ ಗಳಲ್ಲಿ ಗ್ರಾಹಕರು ಕ್ಯಾಶ್ ಡಿಸ್ಕೌಂಟ್, ಎಕ್ಸ್ ಚೆಂಜ್ ಆಫರ್ ಮತ್ತು ಕಾರ್ಪೊರೇಟ್ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದ್ದು, ಟಿಯಾಗೋ, ಟಿಗೋರ್, ಆಲ್ ಟ್ರೊಜ್, ಹ್ಯಾರಿಯರ್ ಮತ್ತು ಸಫಾರಿ ಕಾರುಗಳ ಮೇಲೆ ಆಕರ್ಷಕ ಆಫರ್ ಗಳು ಲಭ್ಯವಿವೆ.
ಟಿಯಾಗೋ ಮತ್ತು ಟಿಗೋರ್
ಟಾಟಾ ಮೋಟಾರ್ಸ್ ಕಂಪನಿಯು ಹೊಸ ಆಫರ್ ಗಳಲ್ಲಿ ಟಿಯಾಗೋ ಹ್ಯಾಚ್ ಬ್ಯಾಕ್ ಮತ್ತು ಟಿಗೋರ್ ಕಂಪ್ಯಾಕ್ಟ್ ಸೆಡಾನ್ ಖರೀದಿಸುವ ಗ್ರಾಹಕರಿಗೆ ರೂ. 65 ಸಾವಿರ ತನಕ ಆಫರ್ ನೀಡಲಾಗುತ್ತಿದ್ದು, ಇದರಲ್ಲಿ ಕ್ಯಾಶ್ ಬ್ಯಾಕ್, ಎಕ್ಸ್ ಚೆಂಜ್ ಮತ್ತು ಕಾರ್ಪೊರೇಟ್ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದೆ. ಹಾಗೆಯೇ ಟಿಯಾಗೋ ಮತ್ತು ಟಿಗೋರ್ ಕಾರುಗಳ ಸಿಎನ್ ಜಿ ಆವೃತ್ತಿಗಳ ಖರೀದಿಯ ಮೇಲೂ ಆಫರ್ ನೀಡಲಾಗುತ್ತಿದ್ದು, ಇದರಲ್ಲಿ ಬರೋಬ್ಬರಿ ರೂ. 50 ಸಾವಿರ ತನಕ ಕ್ಯಾಶ್ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಓದಿ: ಭರ್ಜರಿ ಮೈಲೇಜ್ ನೀಡುವ ಟೊಯೊಟಾ ಅರ್ಬನ್ ಎಲೆಕ್ಟ್ರಿಕ್ ಎಸ್‌ಯುವಿ ಅನಾವರಣ
ಹೊಸ ಆಫರ್ ಗಳೊಂದಿಗೆ ಟಿಯಾಗೋ ಮಾದರಿಯು ಮಾರುತಿ ಸುಜುಕಿ ಸ್ವಿಫ್ಟ್, ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ ಕಾರುಗಳಿಗೆ ಪೈಪೋಟಿ ನೀಡಲಿದ್ದರೆ ಟಿಗೋರ್ ಮಾದರಿಯು ಹೋಂಡಾ ಅಮೇಜ್, ಮಾರುತಿ ಡಿಜೈರ್ ಮತ್ತು ಹ್ಯುಂಡೈ ಔರಾ ಕಾರುಗಳಿಗೆ ಪೈಪೋಟಿ ನೀಡಲಿದೆ.
ಆಲ್ಟ್ರೊಜ್
ಹೊಸ ಆಫರ್ ಗಳಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಆಲ್ಟ್ರೊಜ್ ಪ್ರೀಮಿಯಂ ಹ್ಯಾಚ್ ಬ್ಯಾಕ್ ಕಾರು ಖರೀದಿಯ ಮೇಲೆ ರೂ. 45 ಸಾವಿರ ಮೌಲ್ಯದ ಆಫರ್ ಗಳನ್ನು ಘೋಷಿಸಿದ್ದು, ಇದರಲ್ಲಿ ರೂ. 25 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ. 15 ಸಾವಿರ ಎಕ್ಸ್ ಚೆಂಜ್ ಆಫರ್ ಮತ್ತು ರೂ. 5 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ಪಡೆದುಕೊಳ್ಳಬಹುದಾಗಿದೆ. ಇದು ಸದ್ಯ ಮಾರುಕಟ್ಟೆಯಲ್ಲಿ ಮೂರು ಎಂಜಿನ್ ಆಯ್ಕೆಗಳಲ್ಲಿ ಖರೀದಿ ಮಾಡಬಹುದಾಗಿದ್ದು, 1.2 ಲೀಟರ್ ಎನ್ಎ ಪೆಟ್ರೋಲ್, 1.5 ಲೀಟರ್ ಡೀಸೆಲ್ ಮತ್ತು 1.2 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಂಡಿದೆ.
ಹ್ಯಾರಿಯರ್ ಮತ್ತು ಸಫಾರಿ(ಹಳೆಯ ಆವೃತ್ತಿಗಳು)
ಟಾಟಾ ಮೋಟಾರ್ಸ್ ಕಂಪನಿಯು ಇತ್ತೀಚೆಗೆ ಹ್ಯಾರಿಯರ್ ಮತ್ತು ಸಫಾರಿ ಫೇಸ್ ಲಿಫ್ಟ್ ಮಾದರಿಗಳನ್ನು ಬಿಡುಗಡೆ ಮಾಡಿದ್ದರೂ ಸಹ ಸ್ಟಾಕ್ ನಲ್ಲಿರುವ ಹಳೆಯ ಸಫಾರಿ ಮತ್ತು ಹ್ಯಾರಿಯರ್ ಮಾದರಿಗಳ ಮೇಲೆ ಆಫರ್ ನೀಡಲಾಗುತ್ತಿದೆ. ಹೊಸ ಆಫರ್ ಗಳಲ್ಲಿ ಸಫಾರಿ ಮತ್ತು ಹ್ಯಾರಿಯರ್ ಕಾರು ಖರೀದಿಸುವ ಗ್ರಾಹಕರು ರೂ. 1.50 ಲಕ್ಷದ ತನಕ ಉಳಿತಾಯ ಮಾಡಬಹುದಾಗಿದ್ದು, ಇದರಲ್ಲಿ ಕ್ಯಾಶ್ ಡಿಸ್ಕೌಂಟ್, ಎಕ್ಸ್ ಚೆಂಜ್ ಆಫರ್ ಮತ್ತು ಕಾರ್ಪೊರೇಟ್ ಡಿಸ್ಕೌಂಟ್ ಒಳಗೊಂಡಿರಲಿವೆ.
ಇದನ್ನೂ ಓದಿ: ಭಾರತದ ಜನಪ್ರಿಯ ಎಸ್ ಯುವಿ ಕಾರು ಖರೀದಿಸಿದ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗನ ಪುತ್ರಿ
ಹ್ಯಾರಿಯರ್ ಮತ್ತು ಸಫಾರಿ ಕಾರುಗಳ ಮೇಲಿನ ಆಫರ್ ಗಳು ಸ್ಟಾಕ್ ಮುಕ್ತಾಯದ ತನಕ ಮಾತ್ರ ಲಭ್ಯವಿರಲಿದ್ದು, ಹೊಸ ವಿನ್ಯಾಸದ ಫೇಸ್ ಲಿಫ್ಟ್ ಮಾದರಿಗಳ ಮೇಲೆ ಯಾವುದೇ ಆಫರ್ ನೀಡಲಾಗಿಲ್ಲ. ಸದ್ಯ ಸಫಾರಿ ಮತ್ತು ಹ್ಯಾರಿಯರ್ ಫೇಸ್ ಲಿಫ್ಟ್ ಕಾರುಗಳು ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಭಾರೀ ಬೇಡಿಕೆ ಪಡೆದುಕೊಳ್ಳುತ್ತಿವೆ.