ಶೀಘ್ರದಲ್ಲಿಯೇ ಬಿಡುಗಡೆಗೆ ಸಿದ್ದವಾಗಿರುವ ಟಾಟಾ ಮೋಟಾರ್ಸ್ 3 ಹೊಸ ಕಾರುಗಳಿವು!
ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆ ಆಧರಿಸಿ ಮೂರು ಹೊಸ ಕಾರು ಮಾದರಿಗಳ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ಕಾರುಗಳು ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಬೇಡಿಕೆಯ ನೀರಿಕ್ಷೆಯಲ್ಲಿವೆ.
ಹೊಸ ತಂತ್ರಜ್ಞಾನ ಪ್ರೇರಿತ ಕಾರುಗಳ ಮೂಲಕ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ (Tata Motors) ಕಂಪನಿಯು ಶೀಘ್ರದಲ್ಲಿ ಮೂರು ಹೊಸ ಕಾರು ಮಾದರಿಗಳ ಬಿಡುಗಡೆಗೆ ಸಿದ್ದವಾಗುತ್ತಿದೆ. ಹೊಸ ಕಾರುಗಳಲ್ಲಿ ನವೀಕೃತ ಆವೃತ್ತಿಗಳೊಂದಿಗೆ ಸಿಎನ್ ಜಿ ಮಾದರಿಗಳು ಸಹ ಬಿಡುಗಡೆಯಾಗುತ್ತಿದ್ದು, ಹೊಸ ಕಾರುಗಳು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಸೌಲಭ್ಯಗಳು ಮತ್ತು ಗರಿಷ್ಠ ಸುರಕ್ಷಾ ಸೌಲಭ್ಯಗಳೊಂದಿಗೆ ಬಿಡುಗಡೆಯಾಗುತ್ತಿವೆ. ಹಾಗಾದ್ರೆ ಟಾಟಾ ಬಿಡುಗಡೆ ಮಾಡುತ್ತಿರುವ ಆ ಹೊಸ ಕಾರುಗಳು ಯಾವುವು? ಅವುಗಳ ವಿಶೇಷತೆಗಳೇನು? ಈ ಎಲ್ಲಾ ಮಾಹಿತಿ ಇಲ್ಲಿದೆ.
ಆಲ್ಟ್ರೊಜ್ ಫೇಸ್ ಲಿಫ್ಟ್
ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲಿಯೇ ನವೀಕೃತ ವಿನ್ಯಾಸದ ಆಲ್ಟ್ರೊಜ್ ಫೇಸ್ ಲಿಫ್ಟ್ ಬಿಡುಗಡೆ ಮಾಡುವ ಯೋಜನೆಯಲ್ಲಿದೆ. ಹೊಸ ಕಾರಿನಲ್ಲಿ ಈ ಬಾರಿ ಸ್ಟ್ಯಾಂಡರ್ಡ್ ಆವೃತ್ತಿಯ ಜೊತೆಗೆ ರೇಸರ್ ಎಡಿಷನ್ ಸಹ ಬಿಡುಗಡೆ ಮಾಡುತ್ತಿದೆ. ಇದು ಟರ್ಬೊ ಪೆಟ್ರೋಲ್ ಎಂಜಿನ್ ನೊಂದಿಗೆ ಪರ್ಫಾಮೆನ್ಸ್ ಪ್ರಿಯರನ್ನು ಸೆಳೆಯಲಿದ್ದು, ಹೊಸ ಕಾರಿನಲ್ಲಿ ಈ ಬಾರಿ 10.25 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್ಮೆಂಟ್ ಸಿಸ್ಟಂ, 7 ಇಂಚಿನ ಡಿಜಿಟಲ್ ಇನ್ ಸ್ಟ್ರಮೆಂಟ್ ಕ್ಲಸ್ಟರ್, ಫ್ರಂಟ್ ವೆಂಟಿಲೆಷನ್ ಸೀಟುಗಳು ಸೇರಿದಂತೆ ಹಲವಾರು ಪ್ರೀಮಿಯಂ ಫೀಚರ್ಸ್ ನೀಡಲಾಗಿದೆ. ಜೊತೆಗೆ ಸುರಕ್ಷತೆಗಾಗಿ ಆರಂಭಿಕ ವೆರಿಯೆಂಟ್ ನಲ್ಲೂ 6 ಏರ್ ಬ್ಯಾಗ್ ಗಳನ್ನು ಜೋಡಿಸಲಾಗುತ್ತಿದ್ದು, ಹೊಸ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 7 ಲಕ್ಷದಿಂದ ರೂ. 11 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಬಹುದಾಗಿದೆ.
ಇದನ್ನೂ ಓದಿ: ADAS ಫೀಚರ್ಸ್ ನೊಂದಿಗೆ ಎಂಟ್ರಿ ಕೊಡಲಿದೆ ಮಾರುತಿ ಸುಜುಕಿ ಜನಪ್ರಿಯ ಎಸ್‍ಯುವಿ
ನೆಕ್ಸಾನ್ ಸಿಎನ್ ಜಿ
ಸಿಎನ್ಜಿ ಆವೃತ್ತಿಯೊಂದಿಗೆ ನೆಕ್ಸಾನ್ ಕಾರು ಪೆಟ್ರೋಲ್, ಡೀಸೆಲ್, ಎಲೆಕ್ಟ್ರಿಕ್ ಮತ್ತು ಸಿಎನ್ ಜಿ ಆವೃತ್ತಿಯಲ್ಲಿ ಖರೀದಿಗೆ ಲಭ್ಯವಾಗುತ್ತಿರುವ ಮೊದಲ ಕಾರು ಮಾದರಿಯಾಗಲಿದೆ. ಇದು ಕಂಪ್ಯಾಕ್ಟ್ ಎಸ್ ಯುವಿ ಖರೀದಿದಾರರಿಗೆ ಆಯ್ಕೆ ಹೆಚ್ಚಿಸಲಿದ್ದು, ಇದರೊಂದಿಗೆ ಹೊಸ ಕಾರು ಮೈಲೇಜ್ ವಿಚಾರವಾಗಿ ಮಾರುತಿ ಸುಜುಕಿ ಬ್ರೆಝಾ ಮಾದರಿಗೆ ಉತ್ತಮ ಪೈಪೋಟಿ ನೀಡಲಿದೆ. ನೆಕ್ಸಾನ್ ಸಿಎನ್ ಜಿಯಲ್ಲಿ 1.2 ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಐ ಸಿಎನ್ಜಿ ತಂತ್ರಜ್ಞಾನ ನೀಡಲಾಗುತ್ತಿದ್ದು, ಇದು ಪ್ರತಿ ಕೆಜಿಗೆ ಗರಿಷ್ಠ 25 ಕಿ.ಮೀ ಮೈಲೇಜ್ ಹಿಂದಿರುಗಿಸುವ ಸಾಧ್ಯತೆಗಳಿವೆ. ಇದರೊಂದಿಗೆ ಟಾಟಾ ಹೊಸ ಕಾರು ಟ್ವಿನ್ ಸಿಲಿಂಡರ್ ಸಿಎನ್ ಜಿ ಟ್ಯಾಂಕರ್ ವೈಶಿಷ್ಟ್ಯತೆಯು ಮೂಲಕ ಗ್ರಾಹಕರನ್ನು ಸೆಳೆಯಲಿದ್ದು, ಹೊಸ ವಿನ್ಯಾಸ ವೈಶಿಷ್ಟ್ಯತೆಯಿಂದಾಗಿ ಬೂಟ್ ಸ್ಪೆಸ್ ಹೆಚ್ಚಳವಾಗಿರುವುದು ಗ್ರಾಹಕರ ಆಯ್ಕೆಗೆ ಪ್ರಮುಖ ಆಕರ್ಷಕಣೆಯಾಗಲಿದೆ.
ಇದನ್ನೂ ಓದಿ: ಚಿತ್ರದುರ್ಗದಿಂದ ದಾವಣಗೆರೆ ನಡುವಿನ 72 ಕಿ.ಮೀ ಉದ್ದದ ಷಟ್ಪಥ ಹೆದ್ದಾರಿ ವಿಶೇಷತೆಗಳೇನು?
ಕರ್ವ್ ಇವಿ
ನೆಕ್ಸಾನ್ ಉತ್ಪಾದನಾ ಪ್ಲ್ಯಾಟ್ ಫಾರ್ಮ್ ಆಧರಿಸಿರುವ ಹೊಸ ಕರ್ವ್ ಕಾರು ಕೂಪೆ ಎಸ್ ಯುವಿ ವೈಶಿಷ್ಟ್ಯತೆ ಹೊಂದಿದ್ದು, ಇದು ಎಲೆಕ್ಟ್ರಿಕ್ ಆವೃತ್ತಿಯಲ್ಲಿ ಮಾತ್ರವಲ್ಲದೆ ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಗಳಲ್ಲೂ ಮಾರುಕಟ್ಟೆ ಪ್ರವೇಶಿಸಲಿದೆ. ಇದರಲ್ಲಿ ಎಲೆಕ್ಟ್ರಿಕ್ ಮಾದರಿಯು ಮಾತ್ರ ಈ ವರ್ಷಾಂತ್ಯಕ್ಕೆ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳು 2025ರ ಮಧ್ಯಂತರದಲ್ಲಿ ಬಿಡುಗಡೆಯಾಗಬಹುದಾಗಿದೆ. ಹೊಸ ಇವಿ ಆವೃತ್ತಿಯು ಪ್ರತಿಚಾರ್ಜ್ ಗೆ 500 ಕಿ.ಮೀ ಗೂ ಅಧಿಕ ಮೈಲೇಜ್ ಪ್ರೇರಿತ ಬ್ಯಾಟರಿ ಆಯ್ಕೆ ಪಡೆದುಕೊಳ್ಳಲಿದ್ದು, ಇದು ಟಾಟಾ ಕಂಪನಿಯ ಎರಡನೇ ತಲೆಮಾರಿನ ಇವಿ ಉತ್ಪಾದನಾ ಪ್ಲ್ಯಾಟ್ ಫಾರ್ಮ್ ಆಧರಿಸಿ ನಿರ್ಮಾಣವಾಗುತ್ತಿದೆ.