Tata Motors: ಕರ್ವ್ ಕಾರಿನಂತೆ ಹೊಸ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ ಟಾಟಾ ನೆಕ್ಸಾನ್

ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಸ್ಟ್ಯಾಂಡರ್ಡ್ ಆವೃತ್ತಿಯಲ್ಲಿ ಹೊಸ ಫೀಚರ್ಸ್ ಜೋಡಣೆಗೆ ಮುಂದಾಗಿದ್ದು, ಹೊಸ ಆವೃತ್ತಿಯು ಶೀಘ್ರದಲ್ಲಿಯೇ ಮಾರುಕಟ್ಟೆಗೆ ಲಗ್ಗೆಯಿಡಲಿದೆ.

Tata Motors: ಕರ್ವ್ ಕಾರಿನಂತೆ ಹೊಸ ಎಂಜಿನ್ ಆಯ್ಕೆ ಪಡೆದುಕೊಳ್ಳಲಿದೆ ಟಾಟಾ ನೆಕ್ಸಾನ್
ಟಾಟಾ ನೆಕ್ಸಾನ್
Follow us
|

Updated on: Aug 13, 2024 | 5:14 PM

ಹೊಸ ಕಾರುಗಳ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಹೊಸ ಸಂಚನಕ್ಕೆ ಕಾರಣವಾಗಿರುವ ಟಾಟಾ ಮೋಟಾರ್ಸ್ (Tata Motors) ಕಂಪನಿಯು ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಕಾರುಗಳ ಬಿಡುಗಡೆಗೆ ಮುಂದಾಗಿದೆ. ಮಾಹಿತಿಗಳ ಪ್ರಕಾರ ನೆಕ್ಸಾನ್ ಕಾರಿನ ಸ್ಟ್ಯಾಂಡರ್ಡ್ ಮಾದರಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಹೊಸ ಡೀಸೆಲ್ ಎಂಜಿನ್ ಆಯ್ಕೆ ನೀಡುತ್ತಿದ್ದು, ಇದು ಹೊಸದಾಗಿ ಬಿಡುಗಡೆಯಾಗುತ್ತಿರುವ ಕರ್ವ್ ಮಾದರಿಯಲ್ಲೂ ಕೂಡಾ ಜೋಡಣೆ ಮಾಡಲಾಗಿದೆ.

ನೆಕ್ಸಾನ್ ಕಾರಿನಲ್ಲಿ ಹೊಸದಾಗಿ ನೀಡಲಾಗುತ್ತಿರುವ 1.5 ಲೀಟರ್ ಕ್ರೂಜೆಟ್ ಡೀಸೆಲ್ ಎಂಜಿನ್ ಮಾದರಿಯು 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿರಲಿದ್ದು, ಇದು ಸದ್ಯ ಮಾರುಕಟ್ಟೆಯಲ್ಲಿರುವ ರೀವೊಟ್ರೊಕ್ 1.5 ಲೀಟರ್ ಡೀಸೆಲ್ ಗಿಂತಲೂ ಹೆಚ್ಚಿನ ಮಟ್ಟದ ಪರ್ಫಾಮೆನ್ಸ್ ನೊಂದಿಗೆ 118 ಹಾರ್ಸ್ ಪವರ್ ಪವರ್ ಉತ್ಪಾದಿಸುತ್ತದೆ.

ಜೊತೆಗೆ ಹೊಸ ಕಾರು ಆವೃತ್ತಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಡಿಸಿಎ ಆಟೋಮ್ಯಾಟಿಕ್ ಆಯ್ಕೆಯೊಂದಿಗೆ ಹಲವಾರು ಪ್ರೀಮಿಯಂ ಫೀಚರ್ಸ್ ಮತ್ತು ಸೇಫ್ಟಿ ಫೀಚರ್ಸ್ ಗಳನ್ನು ಸ್ಟ್ಯಾಂಡರ್ಡ್ ಪಡೆದುಕೊಂಡಿರಲಿದೆ. ಈ ಮೂಲಕ ಹೊಸ ಮಾದರಿಯು ಇತ್ತೀಚೆಗೆ ಬಿಡಗಡೆಯಾಗಿದ್ದ ಮಹೀಂದ್ರಾ ಎಕ್ಸ್ ಯುವಿ 300 ಮತ್ತು ಕಿಯಾ ನೊನೆಟ್ ಡಿಸಿಎ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದ್ದು, ಇದು ಸಾಮಾನ್ಯ ನೆಕ್ಸಾನ್ ಗಿಂತಲೂ ತುಸು ದುಬಾರಿ ಬೆಲೆ ಪಡೆದುಕೊಂಡಿರಲಿದೆ.

ಇದರೊಂದಿಗೆ ಟಾಟಾ ನೆಕ್ಸಾನ್ ಕಾರು ಮಾದರಿಯು ವಿವಿಧ ಎಂಜಿನ್ ಆಯ್ಕೆಗಳೊಂದಿಗೆ ಖರೀದಿಗೆ ಲಭ್ಯವಿರುವ ಏಕೈಕ ಕಾರು ಮಾದರಿಯಾಗಿ ಗುರುತಿಸಿಕೊಳ್ಳಲಿದ್ದು, ಮುಂಬರುವ ದಿನಗಳಲ್ಲಿ ಇದು ಸಿಎನ್ ಜಿ ಆಯ್ಕೆಯಲ್ಲೂ ಖರೀದಿಗೆ ಲಭ್ಯವಿರಲಿದೆ. ಹೊಸ ಡೀಸೆಲ್ ಎಂಜಿನ್ ಆಯ್ಕೆಯ ಹೊರತಾಗಿಯೂ ನೆಕ್ಸಾನ್ ಸಿಎನ್ ಜಿ ಮಾದರಿಯ ಬಿಡುಗಡೆಗಾಗಿ ಟಾಟಾ ಕಂಪನಿಯು ನಿರಂತರ ಪ್ರಯತ್ನಗಳನ್ನು ಮಾಡುತ್ತಿದ್ದು, ಸಿಎನ್ ಜಿ ಮಾದರಿಯು ಕೂಡಾ ಅತ್ಯುತ್ತಮ ತಂತ್ರಜ್ಞಾನ ಸೌಲಭ್ಯದೊಂದಿಗೆ ಬಿಡುಗಡೆಯಾಗಲಿದೆ.

ಇದನ್ನೂ ಓದಿ: ಭಾರತದಲ್ಲಿ ಅತಿ ಹೆಚ್ಚು ಮೈಲೇಜ್ ನೀಡುವ ಟಾಪ್ 10 ಕಾರುಗಳಿವು!

ಟಾಟಾ ಕಂಪನಿಯು ಸದ್ಯ ಸುಧಾರಿತ ಐ ಸಿಎನ್​ಜಿ ತಂತ್ರಜ್ಞಾನದೊಂದಿಗೆ ತನ್ನ ಪ್ರಮುಖ ಕಾರುಗಳಲ್ಲಿ ಅತ್ಯುತ್ತಮ ಇಂಧನ ದಕ್ಷತೆ ಜೊತೆಗೆ ಪರ್ಫಾಮೆನ್ಸ್ ನಲ್ಲಿ ಗಮನಸೆಳೆಯುತ್ತಿದೆ. ನೆಕ್ಸಾನ್ ಕೂಡಾ 1.2 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಜೊತೆಗೆ ಐ ಸಿಎನ್​ಜಿ ಮೂಲಕ ಪ್ರತಿ ಕೆಜಿಗೆ ಗರಿಷ್ಠ 25 ಕಿ.ಮೀ ಮೈಲೇಜ್ ಹಿಂದಿರುಗಿಸುವ ಸಾಧ್ಯತೆಗಳಿವೆ. ಇದರೊಂದಿಗೆ ಟಾಟಾ ಹೊಸ ಸಿಎನ್ ಜಿ ಕಾರುಗಳಲ್ಲಿ ಪರಿಚಯಿಸಲಾಗಿರುವ ಟ್ವಿನ್ ಸಿಲಿಂಡರ್ ಸಿಎನ್ ಜಿ ಟ್ಯಾಂಕ್ ವೈಶಿಷ್ಟ್ಯತೆಯು ಗ್ರಾಹಕರನ್ನು ಸೆಳೆಯುತ್ತಿದೆ. ಹೊಸ ವಿನ್ಯಾಸ ವೈಶಿಷ್ಟ್ಯತೆಯಿಂದಾಗಿ ಬೂಟ್ ಸ್ಪೆಸ್ ಹೆಚ್ಚಳವಾಗಿದ್ದು, ಸಾಮಾನ್ಯ ಕಾರುಗಳಂತೆ ಇದರಲ್ಲೂ ಕೂಡಾ ಹೆಚ್ಚಿನ ಮಟ್ಟದ ಲಗೇಜ್ ಕೊಂಡಯ್ಯಬಹುದಾಗಿದೆ.

‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
CPL 2024: ಕಾರ್ನ್​ವಾಲ್ ಕಮಾಲ್: ರಾಯಲ್ಸ್​ಗೆ ಭರ್ಜರಿ ತಂದುಕೊಟ್ಟ ರಹ್​ಕೀಮ್
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಮಕ್ಕಳು ಸೀನಿದಾಗ ಚಿರಂಜೀವಿ ಚಿರಂಜೀವಿ ಅಂತ ಯಾಕೆ ಅನ್ನಬೇಕು?
ಮಕ್ಕಳು ಸೀನಿದಾಗ ಚಿರಂಜೀವಿ ಚಿರಂಜೀವಿ ಅಂತ ಯಾಕೆ ಅನ್ನಬೇಕು?
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಲಾರಿಯಡಿ ಸಿಲುಕಿದ ಬೈಕ್; ಪವಾಡದಂತೆ ಬಚಾವಾದ ಚಾಲಕ
ಲಾರಿಯಡಿ ಸಿಲುಕಿದ ಬೈಕ್; ಪವಾಡದಂತೆ ಬಚಾವಾದ ಚಾಲಕ