Tata Nexon EV: ಭರ್ಜರಿ ಮೈಲೇಜ್ ನೀಡುವ 2023ರ ಟಾಟಾ ನೆಕ್ಸಾನ್ ಇವಿ ಅನಾವರಣ

ಟಾಟಾ ಮೋಟಾರ್ಸ್ ಕಂಪನಿ ನವೀಕರಿಸಿದ ಬ್ಯಾಟರಿ ಪ್ಯಾಕ್ ನೊಂದಿಗೆ 2023ರ ನೆಕ್ಸಾನ್ ಎಲೆಕ್ಟ್ರಿಕ್ ಆವೃತ್ತಿಯನ್ನು ಅನಾವರಣಗೊಳಿಸಿದ್ದು, ಹೊಸ ಕಾರು ಮಾದರಿಯು ಮರುವಿನ್ಯಾಸದೊಂದಿಗೆ ಹಲವಾರು ಹೊಸ ಫೀಚರ್ಸ್ ಗಳೊಂದಿಗೆ ಬಿಡುಗಡೆಗೆ ಸಿದ್ದವಾಗಿದೆ.

Tata Nexon EV: ಭರ್ಜರಿ ಮೈಲೇಜ್ ನೀಡುವ 2023ರ ಟಾಟಾ ನೆಕ್ಸಾನ್ ಇವಿ ಅನಾವರಣ
2023ರ ಟಾಟಾ ನೆಕ್ಸಾನ್ ಇವಿ ಅನಾವರಣ
Follow us
|

Updated on: Sep 08, 2023 | 5:51 PM

ದೇಶಿಯ ಮಾರುಕಟ್ಟೆಯಲ್ಲಿನ ಎಲೆಕ್ಟ್ರಿಕ್ ಕಾರುಗಳ(Electric Cars) ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಟಾಟಾ ಮೋಟಾರ್ಸ್(Tata Motors) ಕಂಪನಿ ಹೊಸ ನೆಕ್ಸಾನ್ ಇವಿ(Nexon EV) ಅನಾವರಣಗೊಳಿಸಿದೆ. ನೆಕ್ಸಾನ್ ಇವಿ ಮೂಲಕ ಈಗಾಗಲೇ ಹಲವಾರು ಮಾರಾಟ ದಾಖಲೆಗಳನ್ನು ನಿರ್ಮಿಸಿರುವ ಟಾಟಾ ಮೋಟಾರ್ಸ್ ಕಂಪನಿ ಇದೀಗ ನವೀಕರಿಸಿದ ಆವೃತ್ತಿಯನ್ನು ಅಭಿವೃದ್ದಿಪಡಿಸಿದೆ. ಹೊಸ ಇವಿ ಕಾರು ಈ ಹಿಂದಿನ ಮಾದರಿಗಿಂತಲೂ ಭಾರೀ ಬದಲಾವಣೆಯೊಂದಿಗೆ ಬಿಡುಗಡೆಯಾಗುತ್ತಿದ್ದು, ಹೆಚ್ಚಿನ ಮೈಲೇಜ್ ನೀಡಲಿದೆ.

ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಅನಾವರಣದೊಂದಿಗೆ ಬುಕಿಂಗ್ ಆರಂಭಿಸಿರುವ ಟಾಟಾ ಮೋಟಾರ್ಸ್ ಕಂಪನಿಯು ಇದೇ ತಿಂಗಳು 14ರಂದು ಅಧಿಕೃತವಾಗಿ ಬಿಡುಗಡೆ ಮಾಡುವ ಸುಳಿವು ನೀಡಿದೆ. ಹೀಗಾಗಿ ಹೊಸ ಇವಿ ಕಾರು ಖರೀದಿ ಬಯಸುವ ಗ್ರಾಹಕರು ಆನ್ ಲೈನ್ ಮೂಲಕ ರೂ. 21 ಸಾವಿರ ಮುಂಗಡ ಪಾವತಿಸಿ ಬುಕಿಂಗ್ ಸಲ್ಲಿಸಬಹುದಾಗಿದ್ದು, ಪ್ರಮುಖ ಎರಡು ಮಾದರಿಗಳಲ್ಲಿ ಖರೀದಿಗೆ ಲಭ್ಯವಿರಲಿದೆ. ಮೈಲೇಜ್ ರೇಂಜ್ ಆಧರಿಸಿ ಹೊಸ ನೆಕ್ಸಾನ್ ಇವಿ ಕಾರು ವಿವಿಧ ವೆರಿಯೆಂಟ್ ಹೊಂದಿರಲಿದ್ದು, ಇದು ಬೆಲೆಯಲ್ಲೂ ಗಮನಸೆಳೆಯಲಿದೆ.

Tata Nexon EV (6)

ಬ್ಯಾಟರಿ ಪ್ಯಾಕ್ ಮತ್ತು ಮೈಲೇಜ್

ಟಾಟಾ ನೆಕ್ಸಾನ್ ಇವಿ ಕಾರಿನ ಲಾಂಗ್ ರೇಂಜ್ ವೆರಿಯೆಂಟ್ ಗಳು 40.5 ಕೆವಿಹೆಚ್ ಬ್ಯಾಟರಿ ಪ್ಯಾಕ್‌ ಅನ್ನು ಹೊಂದಿದ್ದರೆ ಮಿಡ್ ರೇಂಜ್ ವೆರಿಯೆಂಟ್ ಗಳು 30 ಕೆವಿಹೆಚ್ ಬ್ಯಾಟರಿ ಪ್ಯಾಕ್‌ ಜೋಡಣೆ ಹೊಂದಿರಲಿವೆ. ಇದರಲ್ಲಿ ಲಾಂಗ್ ರೇಂಜ್ ವೆರಿಯೆಂಟ್ ಗಳು ಪ್ರತಿ ಚಾರ್ಜ್ ಗೆ ಗರಿಷ್ಠ 465 ಕಿ.ಮೀ ಮೈಲೇಜ್ ನೀಡಲಿದ್ದು, ಇದು 142 ಹಾರ್ಸ್ ಪವರ್ ಮತ್ತು 215 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಹಾಗೆಯೇ ಮಿಡ್ ರೇಂಜ್ ವೆರಿಯೆಂಟ್ ಗಳು ಪ್ರತಿ ಚಾರ್ಜ್ ಗೆ 325 ಕಿ.ಮೀ ಮೈಲೇಜ್ ನೀಡಲಿದ್ದು, ಇವು 127 ಹಾರ್ಸ್ ಪವರ್ ಮತ್ತು 215 ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತವೆ. ಈ ಮೂಲಕ ಹೊಸ ಇವಿ ಕಾರು ಈ ಹಿಂದಿನ ಮಾದರಿಗಿಂತಲೂ ಹೆಚ್ಚುವರಿಯಾಗಿ 12 ಕಿ.ಮೀ ಮೈಲೇಜ್ ನೀಡುವುದರ ಜೊತೆಗೆ ಪರ್ಫಾಮೆನ್ಸ್ ನಲ್ಲೂ ಕೂಡಾ ಸಾಕಷ್ಟು ಸುಧಾರಿಸಿದೆ.

ಇದನ್ನೂ ಓದಿ: ಪ್ರತಿ ಚಾರ್ಜ್ ಗೆ 530 ಕಿ.ಮೀ ಮೈಲೇಜ್ ನೀಡುವ ವೊಲ್ವೊ ಸಿ40 ರೀಚಾರ್ಜ್ ಬಿಡುಗಡೆ

Tata Nexon EV (4)

ಹೊಸ ನೆಕ್ಸಾನ್ ಇವಿ ಕಾರಿನಲ್ಲಿ ಟಾಟಾ ಕಂಪನಿ ಈ ಬಾರಿ ಕಾಂಪ್ಯಾಕ್ಟ್ ಎಲೆಕ್ಟ್ರಿಕ್ ಮೋಟಾರ್ ಜೋಡಣೆ ಮಾಡಿದ್ದು, ಇದು ಹಳೆಯ ಮಾದರಿಗಿಂತಲೂ 20 ಕೆಜಿಯಷ್ಟು ಹಗುರವಾಗಿರುವುದರಿಂದ ಹೆಚ್ಚುವರಿ ಮೈಲೇಜ್ ಮತ್ತು ಪರ್ಫಾಮೆನ್ಸ್ ಸುಧಾರಣೆಗೆ ಸಹಕಾರಿಯಾಗಿದೆ. ಹಾಗೆಯೇ ಹೊಸ ನೆಕ್ಸಾನ್ ಇವಿ ಕಾರಿನಲ್ಲಿ V2V ಮತ್ತು V2L ತಂತ್ರಜ್ಞಾನ ಬಳಕೆ ಮಾಡಲಾಗಿದ್ದು, ಹೊಸ ತಂತ್ರಜ್ಞಾನದೊಂದಿಗೆ ಇತರೆ ಇವಿ ಕಾರುಗಳ ಚಾರ್ಜರ್ ಸೌಲಭ್ಯದಿಂದಲೂ ಚಾರ್ಜ್ ಮಾಡಬಹುದಾಗಿದೆ. ಇದು ತುರ್ತು ಸಂದರ್ಭದಲ್ಲಿ ಚಾರ್ಜರ್ ಸಮಸ್ಯೆ ಬಗೆಹರಿಸಲು ಸಾಧ್ಯವಾಗಲಿದ್ದು, ಇಕೋ, ಸಿಟಿ ಮತ್ತು ಸ್ಪೋರ್ಟ್ ಡ್ರೈವಿಂಗ್ ಮೋಡ್ ಗಳು ಚಾಲನಾ ಆದ್ಯತೆಗೆ ಸಹಕಾರಿಯಾಗಿವೆ.

ವಿನ್ಯಾಸ ಮತ್ತು ವೈಶಿಷ್ಟ್ಯತೆಗಳು

ಟಾಟಾ ಮೋಟಾರ್ಸ್ ಕಂಪನಿಯು ಹೊಸ ನೆಕ್ಸಾನ್ ಇವಿ ಮಾದರಿಯಲ್ಲಿ ಸುಧಾರಿತ ತಂತ್ರಜ್ಞಾನ ಪ್ರೇರಿತ ತಾಂತ್ರಿಕ ಸೌಲಭ್ಯಗಳ ಜೊತೆಗೆ ವಿನ್ಯಾಸ ಮತ್ತು ವೈಶಿಷ್ಟ್ಯತೆಯಲ್ಲೂ ಗಮರ್ನಾಹ ಬದಲಾವಣೆ ತಂದಿದೆ. ಹೊಸ ನೆಕ್ಸಾನ್ ಇವಿ ಸಾಮಾನ್ಯ ನೆಕ್ಸಾನ್ ಮಾದರಿಯಲ್ಲಿರುವಂತೆ ಫ್ರಂಟ್ ಡಿಸೈನ್ ಜೊತೆಗೆ ಕರ್ವ್ ಕಾನ್ಸೆಪ್ಟ್ ಮಾದರಿಯ ವಿನ್ಯಾಸದಿಂದಲೂ ತುಸು ಪ್ರೇರಣೆ ಪಡೆದುಕೊಂಡಿದೆ. ಹೀಗಾಗಿ ಹೊಸ ಕಾರಿನ ಏರೋ ಡೈನಾಮಿಕ್ ವಿನ್ಯಾಸವು ಮತ್ತಷ್ಟು ಸ್ಪೋರ್ಟಿ ಲುಕ್ ನೀಡಲಿದ್ದು, ಇದರಲ್ಲಿ ಎಲ್ಇಡಿ ಹೆಡ್ ಲೈಟ್ಸ್, ಫಂಕ್ಷನಲ್ ಏರ್ ವೆಂಟ್ಸ್ ಹೊಂದಿರುವ ಫ್ರಂಟ್ ಗ್ರಿಲ್, ಫ್ಲಕ್ಸ್ ಸಿಲ್ವರ್ ಸ್ಕಿಡ್ ಪ್ಲೇಟ್ ಮತ್ತು ಎಲ್ ಇಡಿ ಡೇಟೈಮ್ ರನ್ನಿಂಗ್ ಲೈಟ್ಸ್ ಜೋಡಿಸಲಾಗಿದೆ.

Tata Nexon EV (2)

ಹೊಸ ನೆಕ್ಸಾನ್ ಇವಿ ಮಾದರಿಯು ಹೊರಭಾಗದಲ್ಲಿರುವಂತೆ ಒಳಭಾಗದಲ್ಲೂ ಹಲವಾರು ಬದಲಾವಣೆಗಳನ್ನು ಪಡೆದುಕೊಂಡಿದೆ. ಆಕರ್ಷಕವಾದ ಪಿಯಾನೋ ಬ್ಲ್ಯಾಕ್ ಡ್ಯಾಶ್ ಬೋರ್ಡ್ ನೊಂದಿಗೆ ಟು ಸ್ಪೋಕ್ ಸ್ಟೀರಿಂಗ್ ವ್ಹೀಲ್, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ ಕನೆಕ್ಟಿವಿಟಿ ಹೊಂದಿರುವ 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ, ಸಿ ಟೈಪ್ ವೈರ್‌ಲೆಸ್ ಮೊಬೈಲ್ ಚಾರ್ಜರ್, ನ್ಯಾವಿಗೇಷನ್ ಹೊಂದಿರುವ 10.25 ಇಂಚಿನ ಡಿಜಿಟಲ್ ಇನ್ ಸ್ಟ್ರುಮೆಂಟ್ ಕ್ಲಸ್ಟರ್, ಸಿಂಗಲ್ ಪೇನ್ ಸನ್ ರೂಫ್, 360 ಡಿಗ್ರಿ ಕ್ಯಾಮೆರಾ, ವಾಯ್ಸ್ ಕಮಾಂಡ್ ಮತ್ತು ಜೆಬಿಎಲ್ ಸೌಂಡ್ ಸಿಸ್ಟಂ ಸೌಲಭ್ಯ ಹೊಂದಿದೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ನೀಡುವ ಟಾಪ್ 5 ಅತ್ಯುತ್ತಮ ಹೈಬ್ರಿಡ್ ಕಾರುಗಳಿವು!

ಸುರಕ್ಷಾ ಸೌಲಭ್ಯಗಳು

ಹೊಸ ನೆಕ್ಸಾನ್ ಇವಿ ಕಾರು ಪ್ರಯಾಣಿಕರ ಸುರಕ್ಷತೆಯಲ್ಲೂ ಗಮನಸೆಳೆಯಲಿದ್ದು, ಇದರಲ್ಲಿ ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ಸ್ಟ್ಯಾಂಡರ್ಡ್ ಆಗಿ ಆರು ಏರ್ ಬ್ಯಾಗ್ ಗಳು, ಎಬಿಎಸ್ ಜೊತೆ ಇಎಸ್ ಸಿ, ಫ್ರಂಟ್ ಪಾರ್ಕಿಂಗ್ ಸೆನ್ಸಾರ್, ಬ್ಲೈಂಡ್ ವ್ಯೂ ಮಾನಿಟರ್, ಎಲ್ಲಾ ಆಸನಗಳಲ್ಲೂ ತ್ರಿ ಪಾಯಿಂಟ್ ಸೀಟ್ ಬೆಲ್ಟ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಹಿಲ್ ಡಿಸ್ಕೆಂಟ್, ಪ್ಯಾನಿಕ್ ಬ್ರೇಕ್ ಮತ್ತು ಬ್ರೇಕ್ ಡೌನ್ ಸಮಸ್ಯೆಗಾಗಿ ಎಮರ್ಜೆನ್ಸಿ ಅಸಿಸ್ಟ್ ಸೌಲಭ್ಯವನ್ನು ನೀಡಲಾಗಿದೆ.

Tata Nexon EV (5)

ಅಂದಾಜು ಬೆಲೆ(ಎಕ್ಸ್ ಶೋರೂಂ ಪ್ರಕಾರ)

ಹೊಸ ನೆಕ್ಸಾನ್ ಇವಿ ಕಾರು ಈ ಹಿಂದಿನ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್ ಹೊಂದಿದ್ದು, ಬೆಲೆಯಲ್ಲೂ ತುಸು ದುಬಾರಿಯಾಗಿರಲಿದೆ. ಸದ್ಯ ಮಾರುಕಟ್ಟೆಯಲ್ಲಿ ನೆಕ್ಸಾನ್ ಇವಿ ಎಕ್ಸ್ ಶೋರೂಂ ಪ್ರಕಾರ ರೂ. 14.49 ಲಕ್ಷದಿಂದ ರೂ. 19.54 ಲಕ್ಷ ಬೆಲೆ ಹೊಂದಿದ್ದು, ಹೊಸ ಆವೃತ್ತಿಯು ರೂ. 1 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳಬಹುದಾಗಿದೆ.

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್