Tata Nexon facelift: ಪವರ್ ಫುಲ್ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗೆ ಸಿದ್ದವಾಗಿರುವ ಟಾಟಾ ನೆಕ್ಸಾನ್ ಫೇಸ್ ಲಿಫ್ಟ್

ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಫೇಸ್ ಲಿಫ್ಟ್ ಆವೃತ್ತಿಯ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಹೊಸ ನೆಕ್ಸಾನ್ ಕಾರು ಮಾದರಿಯು ಮರುವಿನ್ಯಾಸದೊಂದಿಗೆ ಹಲವಾರು ಹೊಸ ಫೀಚರ್ಸ್ ಹೊಂದಿರಲಿದೆ.

Tata Nexon facelift: ಪವರ್ ಫುಲ್ ಎಂಜಿನ್ ಆಯ್ಕೆಯೊಂದಿಗೆ ಬಿಡುಗಡೆಯಾಗೆ ಸಿದ್ದವಾಗಿರುವ ಟಾಟಾ ನೆಕ್ಸಾನ್ ಫೇಸ್ ಲಿಫ್ಟ್
ಬಿಡುಗಡೆಯಾಗೆ ಸಿದ್ದವಾಗಿರುವ ಟಾಟಾ ನೆಕ್ಸಾನ್ ಫೇಸ್ ಲಿಫ್ಟ್
Follow us
Praveen Sannamani
|

Updated on:Aug 23, 2023 | 8:46 PM

ಸುರಕ್ಷಿತ ಕಾರುಗಳ ಮೂಲಕ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್(Tata Motors) ಕಂಪನಿಯು ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಕಾರುಗಳ ಬಿಡುಗಡೆಗೆ ಸಿದ್ದವಾಗುತ್ತಿದೆ. ಹೊಸ ಕಾರುಗಳಲ್ಲಿ ಫೇಸ್ ಲಿಫ್ಟ್ ಆವೃತ್ತಿಗಳು ಸೇರಿದಂತೆ ವಿವಿಧ ಇವಿ ಕಾರುಗಳು ಸಹ ಬಿಡುಗಡೆಯಾಗುತ್ತಿದ್ದು, ನೆಕ್ಸಾನ್ ಫೇಸ್ ಲಿಫ್ಟ್(Nexon facelift) ಭಾರೀ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಹೌದು, ಟಾಟಾ ಮೋಟಾರ್ಸ್ ಕಂಪನಿಯು ಹೊಸ ನೆಕ್ಸಾನ್ ಆವೃತ್ತಿಯನ್ನು ಬಿಡುಗಡೆ ಮಾಡುವ ಅಂತಿಮ ಹಂತದ ಸಿದ್ದತೆಯಲ್ಲಿದ್ದು, ಹೊಸ ನೆಕ್ಸಾನ್ ಕಾರು ಈ ಬಾರಿ ಭಾರೀ ಬದಲಾವಣೆ ಪಡೆದುಕೊಂಡಿದೆ. ಹೊಸ ನೆಕ್ಸಾನ್ ಕಾರು ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಬದಲಾವಣೆಗಳನ್ನು ಪಡೆದುಕೊಂಡಿದ್ದು, ವಿನ್ಯಾಸ ಮತ್ತು ವೈಶಿಷ್ಟ್ಯತೆಗಳಲ್ಲಿ ಮತ್ತಷ್ಟು ಪ್ರೀಮಿಯಂ ಆಗಿರಲಿದೆ. ಭಾರತದಲ್ಲಿ ಮೊದಲ ಬಾರಿಗೆ 2017ರಲ್ಲಿ ಬಿಡುಗಡೆಯಾಗಿದ್ದ ನೆಕ್ಸಾನ್ ಕಾರು ಇದುವರೆಗೆ ಹಲವಾರು ಬಾರಿ ಉನ್ನತೀಕರಣಗೊಂಡಿದ್ದು, ಇದೀಗ ಸುಧಾರಿತ ತಂತ್ರಜ್ಞಾನ ಪ್ರೇರಿತ ವೈಶಿಷ್ಟ್ಯತೆಗಳೊಂದಿಗೆ ಫೇಸ್ ಲಿಫ್ಟ್ ಆವೃತ್ತಿಯನ್ನು ಪಡೆದುಕೊಳ್ಳುತ್ತಿದೆ.

ಇದನ್ನೂ ಓದಿ: ಹೊಸ ಕಾರುಗಳಿಗೆ ಕಡ್ಡಾಯ ಭಾರತ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್ ಜಾರಿ

ಪ್ರಸ್ತುತ ಮಾರುಕಟ್ಟೆಯಲ್ಲಿನ ಕಂಪ್ಯಾಕ್ಟ್ ಎಸ್ ಯುವಿ ವಿಭಾಗದಲ್ಲಿ ಅಗ್ರಸ್ಥಾನದಲ್ಲಿರುವ ನೆಕ್ಸಾನ್ ಕಾರು ಪ್ರತಿಸ್ಪರ್ಧಿ ಮಾದರಿಗಳಿಗೆ ಅನುಗುಣವಾಗಿ ಕೆಲವು ಹೊಸ ಫೀಚರ್ಸ್ ಹೊಂದಿದೆ. ಹೊಸ ಕಾರಿನಲ್ಲಿ ಈ ಬಾರಿ ಕರ್ವ್ ಕಾನ್ಸೆಪ್ಟ್ ವಿನ್ಯಾಸ ಪ್ರೇರಿತ ಗ್ರಿಲ್, ಸ್ಪೋರ್ಟಿ ಬಂಪರ್, ಹೊಸ ವಿನ್ಯಾಸ ಪ್ರೇರಿತ ಸ್ಪ್ಲಿಟ್ ಹೆಡ್ ಲ್ಯಾಂಪ್ಸ್, ಹಿಂಬದಿಯಲ್ಲಿ ವಿಸ್ತರಿತ ಎಲ್ಇಡಿ ಟೈಲ್ ಲೈಟ್, ಡ್ಯುಯಲ್ ಟೋನ್ ಅಲಾಯ್ ವ್ಹೀಲ್ ಗಳು, ಎಲ್ ಇಡಿ ಡೇಟೈಮ್ ರನ್ನಿಂಗ್ ಲ್ಯಾಂಪ್, ಮರುವಿನ್ಯಾಸಗೊಳಿಸಲಾದ ರೂಫ್ ಮೌಂಟೆಡ್ ಸ್ಪ್ಲಾಯರ್ ಸೇರಿದಂತೆ ಹಲವಾರು ಫೀಚರ್ಸ್ ಗಳಿರಲಿವೆ.

ಹೊಸ ನೆಕ್ಸಾನ್ ಕಾರು ಹೊರಭಾಗದ ಬದಲಾವಣೆಯೆಂತೆ ಆಕರ್ಷಕವಾದ ಒಳವಿನ್ಯಾಸವನ್ನು ಸಹ ಪಡೆದುಕೊಂಡಿದೆ. ಇದು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಆಗಿ ಸಿದ್ದಗೊಂಡಿದ್ದು, ಆಕರ್ಷಕವಾದ ಡ್ಯುಯಲ್ ಟೋನ್ ಡ್ಯಾಶ್ ಬೋರ್ಡ್ ಸೇರಿದಂತೆ ಈ ಹಿಂದಿನ ಮಾದರಿಗಿಂತಲೂ ದೊಡ್ಡದಾದ ಟಚ್ ಸ್ಕ್ರೀನ್, ಸೆಂಟ್ರಲ್ ಕಂಟ್ರೋಲ್ ಪ್ಯಾನೆಲ್, ಹೊಸದಾದ ಡಿಜಿಟಲ್ ಇನ್ ಸ್ಟ್ರುಮೆಂಟ್ ಕ್ಲಸ್ಟರ್, ಹೊಸದಾದ ಬ್ಲ್ಯಾಕ್ ಲಿಟ್, ಟು ಸ್ಪೋಕ್ ಸ್ಟೀರಿಂಗ್ ವ್ಹೀಲ್ ಸೌಲಭ್ಯಗಳಿವೆ.

ನೆಕ್ಸಾನ್ ಫೇಸ್ ಲಿಫ್ಟ್ ಕಾರು ಈ ಬಾರಿ ವಿವಿಧ ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಾಗುವುದು ಬಹುತೇಕ ಖಚಿತವಾಗಿದೆ. ಹೊಸ ಕಾರಿನಲ್ಲಿ ಈ ಬಾರಿ 1.2 ಲೀಟರ್ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಲಭ್ಯವಿರಲಿದ್ದು, ಟರ್ಬೊ ಪೆಟ್ರೋಲ್ ಆವೃತ್ತಿ ಈ ಬಾರಿ ಪ್ರಮುಖ ಆಕರ್ಷಣೆಯಾಗಲಿದೆ. 1.2 ಲೀಟರ್ ಸಾಮಾನ್ಯ ಪೆಟ್ರೋಲ್ ಮಾದರಿಯು 6 ಸ್ಪೀಡ್ ಮ್ಯಾನುವಲ್ ಮತ್ತು 6 ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿದ್ದರೆ 1.2 ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು 7 ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿರಲಿದೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ನೀಡುವ ಟಾಟಾ ಪಂಚ್ ಸಿಎನ್‌ಜಿ ಬಿಡುಗಡೆ

ಇನ್ನು ಹೊಸ ನೆಕ್ಸಾನ್ ಫೇಸ್ ಲಿಫ್ಟ್ ಕಾರು ಸುರಕ್ಷತೆಯಲ್ಲೂ ಗಮನಸೆಳೆಯಲಿದೆ. ಇದು ಪ್ರಸ್ತುತ ಮಾದರಿಗಿಂತಲೂ ಹೆಚ್ಚಿನ ಸಂಖ್ಯೆಯ ಏರ್ ಬ್ಯಾಗ್ ಗಳನ್ನು ಪಡೆದುಕೊಳ್ಳಲಿದ್ದು, ಅಪಘಾತಗಳ ಸಂದರ್ಭದಲ್ಲಿ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ಒದಗಿಸಲಿದೆ. ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಈಗಾಗಲೇ ಫೈವ್ ಸ್ಟಾರ್ ಸೇಫ್ಟಿ ರೇಟಿಂಗ್ಸ್ ಹೊಂದಿರುವ ನೆಕ್ಸಾನ್ ಕಾರು ಮುಂಬರುವ ದಿನಗಳಲ್ಲಿ ಮತ್ತಷ್ಟು ಪ್ರೀಮಿಯಂ ಸೇಫ್ಟಿ ಫೀಚರ್ಸ್ ಹೊಂದಿರಲಿದ್ದು, ಇದು ಪ್ರಯಾಣಿಕರಿಗೆ ಐಷಾರಾಮಿ ಚಾಲನಾ ಅನುಭವ ನೀಡಲಿದೆ. ಸದ್ಯ ಮಾರುಕಟ್ಟೆಯಲ್ಲಿ ವಿವಿಧ ವೆರಿಯೆಂಟ್ ಗಳೊಂದಿಗೆ ಆನ್ ರೋಡ್ ಪ್ರಕಾರ ರೂ. 8.85 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.26 ಲಕ್ಷ ಬೆಲೆ ಹೊಂದಿದ್ದು, ಹೊಸ ಆವೃತ್ತಿಯು ತುಸು ದುಬಾರಿಯಾಗಿರಲಿದೆ. ಹೊಸ ಆವೃತ್ತಿಯಲ್ಲಿ ಟರ್ಬೊ ಮಾದರಿಯು ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಿದ್ದು, ಆನ್ ರೋಡ್ ಪ್ರಕಾರ ಆರಂಭಿಕವಾಗಿ ರೂ. 9.50 ಲಕ್ಷದಿಂದ ರೂ. 19 ಲಕ್ಷ ಬೆಲೆ ಪಡೆದುಕೊಳ್ಳುವ ಸಾಧ್ಯತೆಗಳಿವೆ.

Published On - 8:45 pm, Wed, 23 August 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ