Tata Nexon facelift: ಆಕರ್ಷಕ ಬೆಲೆಗೆ ಟಾಟಾ ನೆಕ್ಸಾನ್ ಫೇಸ್ ಲಿಫ್ಟ್ ಬಿಡುಗಡೆ

ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಫೇಸ್ ಲಿಫ್ಟ್ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಹಲವಾರು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.

Tata Nexon facelift: ಆಕರ್ಷಕ ಬೆಲೆಗೆ ಟಾಟಾ ನೆಕ್ಸಾನ್ ಫೇಸ್ ಲಿಫ್ಟ್ ಬಿಡುಗಡೆ
ಟಾಟಾ ನೆಕ್ಸಾನ್ ಫೇಸ್ ಲಿಫ್ಟ್ ಬಿಡುಗಡೆ
Follow us
|

Updated on: Sep 14, 2023 | 3:36 PM

ಕಾರು ಮಾರಾಟದಲ್ಲಿ ಭಾರತದ ಮೂರನೇ ಅತಿ ದೊಡ್ಡ ಕಂಪನಿಯಾಗಿರುವ ಟಾಟಾ ಮೋಟಾರ್ಸ್(Tata Motors) ತನ್ನ ಬಹುನೀರಿಕ್ಷಿತ ನೆಕ್ಸಾನ್ ಫೇಸ್ ಲಿಫ್ಟ್(Nexon facelift) ಬಿಡುಗಡೆ ಮಾಡಿದ್ದು, ಹೊಸ ಕಾರು ಮಾದರಿಯು ಎಕ್ಸ್ ಶೋರೂಂ ಪ್ರಕಾರ ರೂ. 8.10 ಲಕ್ಷ ಆರಂಭಿಕ ಬೆಲೆ ಹೊಂದಿದೆ.

ನೆಕ್ಸಾನ್ ಫೇಸ್ ಲಿಫ್ಟ್ ಕಾರು ಮಾದರಿಯು ಸ್ಮಾರ್ಟ್, ಸ್ಮಾರ್ಟ್ ಪ್ಲಸ್, ಪ್ಯೂರ್, ಪ್ಯೂರ್ ಎಸ್, ಕ್ರಿಯೆಟಿವ್, ಕ್ರಿಯೆಟಿವ್ ಪ್ಲಸ್, ಫಿಯರ್ ಲೆಸ್, ಫಿಯರ್ ಲೆಸ್ ಪ್ಲಸ್ ವೆರಿಯೆಂಟ್ ಗಳಲ್ಲಿ ಖರೀದಿಗೆ ಲಭ್ಯವಿದ್ದು, ಇದರಲ್ಲಿ ಆರಂಭಿಕ ಮಾದರಿಯು ಎಕ್ಸ್ ಶೋರೂಂ ಪ್ರಕಾರ ರೂ. 8.10 ಲಕ್ಷ ಬೆಲೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಯು ರೂ. 12.99 ಲಕ್ಷ ಬೆಲೆ ಹೊಂದಿದೆ.

ಸುಧಾರಿತ ತಂತ್ರಜ್ಞಾನ ಪ್ರೇರಿತ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಿರುವ ನೆಕ್ಸಾನ್ ಫೇಸ್ ಲಿಫ್ಟ್ ಆವೃತ್ತಿಯು ಆಕರ್ಷಕ ವಿನ್ಯಾಸ ಮತ್ತು ಪ್ರೀಮಿಯಂ ವೈಶಿಷ್ಟ್ಯತೆಗಳನ್ನು ಹೊಂದಿದ್ದು, ಪ್ರತಿಸ್ಪರ್ಧಿ ಮಾದರಿಗಳಾದ ಹ್ಯುಂಡೈ ವೆನ್ಯೂ, ಮಾರುತಿ ಸುಜುಕಿ ಬ್ರೆಝಾ ಮತ್ತು ಮಹೀಂದ್ರಾ ಎಕ್ಸ್ ಯುವಿ300 ಕಾರು ಮಾದರಿಗಳಿಗೆ ಮತ್ತಷ್ಟು ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

Tata Nexon facelift (2)

ಇದನ್ನೂ ಓದಿ: ಎಡಿಎಎಸ್ ಫೀಚರ್ಸ್ ಹೊಂದಿರುವ ಟಾಪ್ 5 ಬಜೆಟ್ ಕಾರುಗಳಿವು!

ವಿನ್ಯಾಸ ಮತ್ತು ವೈಶಿಷ್ಟ್ಯತೆಗಳು

ಪ್ರಸ್ತುತ ಮಾರುಕಟ್ಟೆಯಲ್ಲಿನ ಕಂಪ್ಯಾಕ್ಟ್ ಎಸ್ ಯುವಿ ವಿಭಾಗದಲ್ಲಿ ಅಗ್ರಸ್ಥಾನದಲ್ಲಿರುವ ನೆಕ್ಸಾನ್ ಕಾರು ಪ್ರತಿಸ್ಪರ್ಧಿ ಮಾದರಿಗಳಿಗೆ ಅನುಗುಣವಾಗಿ ಹಲವಾರು ಹೊಸ ಫೀಚರ್ಸ್ ಪಡೆದುಕೊಂಡಿದ್ದು, ಹೊಸ ಕಾರಿನಲ್ಲಿ ಈ ಬಾರಿ ಕರ್ವ್ ಕಾನ್ಸೆಪ್ಟ್ ವಿನ್ಯಾಸ ಪ್ರೇರಿತ ಫ್ರಂಟ್ ಗ್ರಿಲ್, ಸ್ಪೋರ್ಟಿ ಬಂಪರ್, ಹೊಸ ವಿನ್ಯಾಸ ಪ್ರೇರಿತ ಸ್ಪ್ಲೀಟ್ ಹೆಡ್ ಲ್ಯಾಂಪ್ಸ್, ಫ್ಲಕ್ಸ್ ಸ್ಕಿಡ್ ಪ್ಲೇಟ್, ಹಿಂಬದಿಯಲ್ಲಿ ವಿಸ್ತರಿತ ಎಲ್ಇಡಿ ಟೈಲ್ ಲೈಟ್, ಡ್ಯುಯಲ್ ಟೋನ್ ಅಲಾಯ್ ವ್ಹೀಲ್ ಗಳು, ಎಲ್ ಇಡಿ ಡೇಟೈಮ್ ರನ್ನಿಂಗ್ ಲ್ಯಾಂಪ್, ಮರುವಿನ್ಯಾಸಗೊಳಿಸಲಾದ ರೂಫ್ ಮೌಂಟೆಡ್ ಸ್ಪ್ಲಾಯರ್ ಸೇರಿದಂತೆ ಹಲವಾರು ಫೀಚರ್ಸ್ ನೀಡಲಾಗಿದೆ.

ನೆಕ್ಸಾನ್ ಫೇಸ್ ಲಿಫ್ಟ್ ಕಾರಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಹೊರಭಾಗದಂತೆ ಒಳಭಾಗದಲ್ಲೂ ಆಕರ್ಷಕವಾದ ಒಳವಿನ್ಯಾಸ ನೀಡಿದೆ. ಡ್ಯುಯಲ್ ಟೋನ್ ಡ್ಯಾಶ್ ಬೋರ್ಡ್ ಸೇರಿದಂತೆ ಟು ಸ್ಪೋಕ್ ಸ್ಟೀರಿಂಗ್ ವ್ಹೀಲ್, 10.25 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್ ಮೆಂಟ್ ಸಿಸ್ಟಂ, ಸೆಂಟ್ರಲ್ ಕಂಟ್ರೋಲ್ ಪ್ಯಾನೆಲ್, ಫುಲ್ ಡಿಜಿಟಲ್ ಇನ್ ಸ್ಟ್ರುಮೆಂಟ್ ಕ್ಲಸ್ಟರ್, ಫ್ರಂಟ್ ವೆಂಟಿಲೆಟೆಡ್ ಸೀಟುಗಳು, 360 ಡಿಗ್ರಿ ವ್ಯೂ ಕ್ಯಾಮೆರಾ, ವೈರ್ ಲೆಸ್ ಚಾರ್ಜರ್ ಮತ್ತು ಕಾರ್ ಕನೆಕ್ಟ್ ಸೌಲಭ್ಯಗಳಿವೆ.

Tata Nexon facelift (4)

ಎಂಜಿನ್ ಮತ್ತು ಕಾರ್ಯಕ್ಷಮತೆ

ನೆಕ್ಸಾನ್ ಫೇಸ್ ಲಿಫ್ಟ್ ಕಾರು ಈ ಬಾರಿ ವಿವಿಧ ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಿದ್ದು,  1.2 ಲೀಟರ್ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಮಾಡಬಹುದಾಗಿದೆ. ಹೊಸ ಕಾರಿನಲ್ಲಿ ಟರ್ಬೊ ಪೆಟ್ರೋಲ್ ಆವೃತ್ತಿಯು ಈ ಬಾರಿ ಪ್ರಮುಖ ಆಕರ್ಷಣೆಯಾಗಿದ್ದು, 1.2 ಲೀಟರ್ ಸಾಮಾನ್ಯ ಪೆಟ್ರೋಲ್ ಮಾದರಿಯು 5 ಸ್ಪೀಡ್ ಮ್ಯಾನುವಲ್ ಮತ್ತು 6 ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿದ್ದರೆ 1.2 ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು 7 ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿದೆ.

ಹಾಗೆಯೇ 1.5 ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿದ್ದು, ಇದರಲ್ಲಿ ಟರ್ಬೊ ಪೆಟ್ರೋಲ್ ಮಾದರಿಯು 120 ಹಾರ್ಸ್ ಪವರ್ ಮತ್ತು 170 ಎನ್ಎಂ ಉತ್ಪಾದನೆಯೊಂದಿಗೆ ಅತ್ಯುತ್ತಮ ಇಂಧನ ದಕ್ಷತೆ ಖಾತ್ರಿಪಡಿಸುತ್ತದೆ.

Tata Nexon facelift (5)

ಇದನ್ನೂ ಓದಿ: ವಿನೂತನ ಫೀಚರ್ಸ್ ಹೊಂದಿರುವ ಹ್ಯುಂಡೈ ಐ20 ಫೇಸ್ ಲಿಫ್ಟ್ ಬಿಡುಗಡೆ

ಸುರಕ್ಷಾ ಸೌಲಭ್ಯಗಳು

ಹೊಸ ನೆಕ್ಸಾನ್ ಫೇಸ್ ಲಿಫ್ಟ್ ಕಾರು ಸುರಕ್ಷತೆಯಲ್ಲೂ ಗಮನಸೆಳೆಯುತ್ತಿದೆ. ಇದು ಪ್ರಸ್ತುತ ಮಾದರಿಗಿಂತಲೂ ಹೆಚ್ಚಿನ ಸಂಖ್ಯೆಯ ಏರ್ ಬ್ಯಾಗ್ ಗಳನ್ನು ಪಡೆದುಕೊಂಡಿದ್ದು, ಅಪಘಾತಗಳ ಸಂದರ್ಭದಲ್ಲಿ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ಒದಗಿಸಲಿದೆ. ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಈಗಾಗಲೇ ಫೈವ್ ಸ್ಟಾರ್ ಸೇಫ್ಟಿ ರೇಟಿಂಗ್ಸ್ ಹೊಂದಿರುವ ನೆಕ್ಸಾನ್ ಕಾರು ಇದೀಗ ಮತ್ತಷ್ಟು ಬಲಿಷ್ಠವಾಗಿದ್ದು, ಇದರಲ್ಲಿ 6 ಏರ್ ಬ್ಯಾಗ್ ಗಳೊಂದಿಗೆ , ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ಎಲ್ಲಾ ಆಸನಗಳಲ್ಲೂ ತ್ರಿ ಪಾಯಿಂಟ್ ಸೀಟ್ ಬೆಲ್ಟ್, ಎಮರ್ಜೆನ್ಸಿ ಕಾಲ್ ಅಸಿಸ್ಟ್ ಮತ್ತು ಇಎಸ್ ಸಿ ತಂತ್ರಜ್ಞಾನ ನೀಡಲಾಗಿದೆ.

ತಾಜಾ ಸುದ್ದಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!