Tata Nexon facelift: ಆಕರ್ಷಕ ಫೀಚರ್ಸ್ ಗಳೊಂದಿಗೆ ಟಾಟಾ ನೆಕ್ಸಾನ್ ಫೇಸ್ ಲಿಫ್ಟ್ ಅನಾವರಣ

ಟಾಟಾ ಮೋಟಾರ್ಸ್ ಕಂಪನಿಯ ನೆಕ್ಸಾನ್ ಫೇಸ್ ಲಿಫ್ಟ್ ಆವೃತ್ತಿಯನ್ನು ಅನಾವರಣಗೊಳಿಸಿದ್ದು, ಹೊಸ ಕಾರು ಮಾದರಿಯು ಮರುವಿನ್ಯಾಸದೊಂದಿಗೆ ಹಲವಾರು ಹೊಸ ಫೀಚರ್ಸ್ ಗಳೊಂದಿಗೆ ಬಿಡುಗಡೆಗೆ ಸಿದ್ದವಾಗಿದೆ.

Tata Nexon facelift: ಆಕರ್ಷಕ ಫೀಚರ್ಸ್ ಗಳೊಂದಿಗೆ ಟಾಟಾ ನೆಕ್ಸಾನ್ ಫೇಸ್ ಲಿಫ್ಟ್ ಅನಾವರಣ
ಟಾಟಾ ನೆಕ್ಸಾನ್ ಫೇಸ್ ಲಿಫ್ಟ್ ಅನಾವರಣ
Follow us
Praveen Sannamani
|

Updated on: Sep 03, 2023 | 1:02 PM

ಸುರಕ್ಷಿತ ಕಾರುಗಳ ಮೂಲಕ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿರುವ ಟಾಟಾ ಮೋಟಾರ್ಸ್(Tata Motors) ಕಂಪನಿಯು ತನ್ನ ಬಹುನೀರಿಕ್ಷಿತ ನೆಕ್ಸಾನ್ ಫೇಸ್ ಲಿಫ್ಟ್(Nexon facelift) ಅನಾವರಣಗೊಳಿಸಿದೆ. ಹೊಸ ನೆಕ್ಸಾನ್ ಕಾರು ಅನಾವರಣದೊಂದಿಗೆ ಬುಕಿಂಗ್ ಆರಂಭಿಸಿದ್ದು, ಇದೇ ತಿಂಗಳು 14 ರಂದು ಅಧಿಕೃತವಾಗಿ ಬಿಡುಗಡೆಯಾಗಲಿದೆ. ಹೊಸ ನೆಕ್ಸಾನ್ ಕಾರಿನಲ್ಲಿ ಟಾಟಾ ಮೋಟಾರ್ಸ್ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿದೆ.

ಭಾರತದಲ್ಲಿ ಮೊದಲ ಬಾರಿಗೆ 2017ರಲ್ಲಿ ಬಿಡುಗಡೆಯಾಗಿದ್ದ ನೆಕ್ಸಾನ್ ಕಾರು ಇದುವರೆಗೆ ಹಲವಾರು ಬಾರಿ ಉನ್ನತೀಕರಣಗೊಂಡಿದ್ದು, ಇದೀಗ ಸುಧಾರಿತ ತಂತ್ರಜ್ಞಾನ ಪ್ರೇರಿತ ವೈಶಿಷ್ಟ್ಯತೆಗಳೊಂದಿಗೆ ಫೇಸ್ ಲಿಫ್ಟ್ ಆವೃತ್ತಿಯೊಂದಿಗೆ ಬಿಡುಗಡೆಯಾಗುತ್ತಿದೆ. ಹೊಸ ನೆಕ್ಸಾನ್ ಕಾರು ಮಾದರಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಬದಲಾವಣೆಗಳನ್ನು ಪಡೆದುಕೊಂಡಿದ್ದು, ವಿನ್ಯಾಸ ಮತ್ತು ವೈಶಿಷ್ಟ್ಯತೆಗಳಲ್ಲಿ ಮತ್ತಷ್ಟು ಪ್ರೀಮಿಯಂ ಆವೃತ್ತಿಯಾಗಿ ಗಮನಸೆಳೆಯುತ್ತಿದೆ.

Tata Nexon facelift (2)

ವಿನ್ಯಾಸ ಮತ್ತು ವೈಶಿಷ್ಟ್ಯತೆಗಳು

ಪ್ರಸ್ತುತ ಮಾರುಕಟ್ಟೆಯಲ್ಲಿನ ಕಂಪ್ಯಾಕ್ಟ್ ಎಸ್ ಯುವಿ ವಿಭಾಗದಲ್ಲಿ ಅಗ್ರಸ್ಥಾನದಲ್ಲಿರುವ ನೆಕ್ಸಾನ್ ಕಾರು ಪ್ರತಿಸ್ಪರ್ಧಿ ಮಾದರಿಗಳಿಗೆ ಅನುಗುಣವಾಗಿ ಹಲವಾರು ಹೊಸ ಫೀಚರ್ಸ್ ಪಡೆದುಕೊಂಡಿದ್ದು, ಹೊಸ ಕಾರಿನಲ್ಲಿ ಈ ಬಾರಿ ಕರ್ವ್ ಕಾನ್ಸೆಪ್ಟ್ ವಿನ್ಯಾಸ ಪ್ರೇರಿತ ಫ್ರಂಟ್ ಗ್ರಿಲ್, ಸ್ಪೋರ್ಟಿ ಬಂಪರ್, ಹೊಸ ವಿನ್ಯಾಸ ಪ್ರೇರಿತ ಸ್ಪ್ಲೀಟ್ ಹೆಡ್ ಲ್ಯಾಂಪ್ಸ್, ಫ್ಲಕ್ಸ್ ಸ್ಕಿಡ್ ಪ್ಲೇಟ್, ಹಿಂಬದಿಯಲ್ಲಿ ವಿಸ್ತರಿತ ಎಲ್ಇಡಿ ಟೈಲ್ ಲೈಟ್, ಡ್ಯುಯಲ್ ಟೋನ್ ಅಲಾಯ್ ವ್ಹೀಲ್ ಗಳು, ಎಲ್ ಇಡಿ ಡೇಟೈಮ್ ರನ್ನಿಂಗ್ ಲ್ಯಾಂಪ್, ಮರುವಿನ್ಯಾಸಗೊಳಿಸಲಾದ ರೂಫ್ ಮೌಂಟೆಡ್ ಸ್ಪ್ಲಾಯರ್ ಸೇರಿದಂತೆ ಹಲವಾರು ಫೀಚರ್ಸ್ ನೀಡಲಾಗಿದೆ.

ಇದನ್ನೂ ಓದಿ: ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳಿವು!

Tata Nexon facelift (4)

ನೆಕ್ಸಾನ್ ಫೇಸ್ ಲಿಫ್ಟ್ ಕಾರಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಹೊರಭಾಗದಂತೆ ಒಳಭಾಗದಲ್ಲೂ ಆಕರ್ಷಕವಾದ ಒಳವಿನ್ಯಾಸವನ್ನು ಸಹ ಪಡೆದುಕೊಂಡಿದೆ. ಇದು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚು ಪ್ರೀಮಿಯಂ ಆಗಿ ಸಿದ್ದಗೊಂಡಿದ್ದು, ಆಕರ್ಷಕವಾದ ಡ್ಯುಯಲ್ ಟೋನ್ ಡ್ಯಾಶ್ ಬೋರ್ಡ್ ಸೇರಿದಂತೆ ಟು ಸ್ಪೋಕ್ ಸ್ಟೀರಿಂಗ್ ವ್ಹೀಲ್, 10.25 ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್ ಮೆಂಟ್ ಸಿಸ್ಟಂ, ಸೆಂಟ್ರಲ್ ಕಂಟ್ರೋಲ್ ಪ್ಯಾನೆಲ್, ಫುಲ್ ಡಿಜಿಟಲ್ ಇನ್ ಸ್ಟ್ರುಮೆಂಟ್ ಕ್ಲಸ್ಟರ್, ಫ್ರಂಟ್ ವೆಂಟಿಲೆಟೆಡ್ ಸೀಟುಗಳು, 360 ಡಿಗ್ರಿ ವ್ಯೂ ಕ್ಯಾಮೆರಾ, ವೈರ್ ಲೆಸ್ ಚಾರ್ಜರ್ ಮತ್ತು ಕಾರ್ ಕನೆಕ್ಟ್ ಸೌಲಭ್ಯಗಳಿವೆ.

ಎಂಜಿನ್ ಮತ್ತು ಕಾರ್ಯಕ್ಷಮತೆ

ನೆಕ್ಸಾನ್ ಫೇಸ್ ಲಿಫ್ಟ್ ಕಾರು ಈ ಬಾರಿ ವಿವಿಧ ಎಂಜಿನ್ ಆಯ್ಕೆಯೊಂದಿಗೆ ಖರೀದಿಗೆ ಲಭ್ಯವಾಗಲಿದೆ. ಹೊಸ ಕಾರಿನಲ್ಲಿ ಈ ಬಾರಿ 1.2 ಲೀಟರ್ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಲಭ್ಯವಿರಲಿದ್ದು, ಟರ್ಬೊ ಪೆಟ್ರೋಲ್ ಆವೃತ್ತಿ ಈ ಬಾರಿ ಪ್ರಮುಖ ಆಕರ್ಷಣೆಯಾಗಲಿದೆ. 1.2 ಲೀಟರ್ ಸಾಮಾನ್ಯ ಪೆಟ್ರೋಲ್ ಮಾದರಿಯು 5 ಸ್ಪೀಡ್ ಮ್ಯಾನುವಲ್ ಮತ್ತು 6 ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿದ್ದರೆ, 1.2 ಲೀಟರ್ ಟರ್ಬೊ ಪೆಟ್ರೋಲ್ ಮಾದರಿಯು 7 ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿರಲಿದೆ. ಹಾಗೆಯೇ 1.5 ಲೀಟರ್ ಡೀಸೆಲ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಆಯ್ಕೆ ಹೊಂದಿರಲಿದೆ. ಇದರಲ್ಲಿ ಟರ್ಬೊ ಪೆಟ್ರೋಲ್ ಮಾದರಿಯು 120 ಹಾರ್ಸ್ ಪವರ್ ಮತ್ತು 170 ಎನ್ಎಂ ಉತ್ಪಾದನೆಯೊಂದಿಗೆ ಅತ್ಯುತ್ತಮ ಇಂಧನ ದಕ್ಷತೆ ಖಾತ್ರಿಪಡಿಸುತ್ತದೆ.

Tata Nexon facelift (3)

ಸುರಕ್ಷಾ ಸೌಲಭ್ಯಗಳು

ಹೊಸ ನೆಕ್ಸಾನ್ ಫೇಸ್ ಲಿಫ್ಟ್ ಕಾರು ಸುರಕ್ಷತೆಯಲ್ಲೂ ಗಮನಸೆಳೆಯಲಿದೆ. ಇದು ಪ್ರಸ್ತುತ ಮಾದರಿಗಿಂತಲೂ ಹೆಚ್ಚಿನ ಸಂಖ್ಯೆಯ ಏರ್ ಬ್ಯಾಗ್ ಗಳನ್ನು ಪಡೆದುಕೊಳ್ಳಲಿದ್ದು, ಅಪಘಾತಗಳ ಸಂದರ್ಭದಲ್ಲಿ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ಒದಗಿಸಲಿದೆ. ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಈಗಾಗಲೇ ಫೈವ್ ಸ್ಟಾರ್ ಸೇಫ್ಟಿ ರೇಟಿಂಗ್ಸ್ ಹೊಂದಿರುವ ನೆಕ್ಸಾನ್ ಕಾರು ಇದೀಗ ಮತ್ತಷ್ಟು ಬಲಿಷ್ಠವಾಗಿದ್ದು, ಇದರಲ್ಲಿ 6 ಏರ್ ಬ್ಯಾಗ್ ಗಳೊಂದಿಗೆ ಎಲ್ಲಾ ಆಸನಗಳಲ್ಲೂ ತ್ರಿ ಪಾಯಿಂಟ್ ಸೀಟ್ ಬೆಲ್ಟ್, ಎಮರ್ಜೆನ್ಸಿ ಕಾಲ್ ಅಸಿಸ್ಟ್ ಮತ್ತು ಇಎಸ್ ಸಿ ತಂತ್ರಜ್ಞಾನ ನೀಡಲಾಗಿದೆ.

ಇದನ್ನೂ ಓದಿ: ಭರ್ಜರಿ ಮೈಲೇಜ್ ನೀಡುವ ಟಾಪ್ 5 ಅತ್ಯುತ್ತಮ ಹೈಬ್ರಿಡ್ ಕಾರುಗಳಿವು!

Tata Nexon facelift (5)

ವೆರಿಯೆಂಟ್ ಗಳು ಮತ್ತು ಅಂದಾಜು ಬೆಲೆ

ಸದ್ಯ ಮಾರುಕಟ್ಟೆಯಲ್ಲಿ ನೆಕ್ಸಾನ್ ಕಾರು ವಿವಿಧ ವೆರಿಯೆಂಟ್ ಗಳೊಂದಿಗೆ ಆನ್ ರೋಡ್ ಪ್ರಕಾರ ರೂ. 8.85 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.26 ಲಕ್ಷ ಬೆಲೆ ಹೊಂದಿದ್ದು, ಹೊಸ ಆವೃತ್ತಿಯು ತುಸು ದುಬಾರಿಯಾಗಿರಲಿದೆ. ಜೊತೆಗೆ ಹೊಸ ಕಾರಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ವೆರಿಯೆಂಟ್ ಗಳ ಹೆಸರು ಬದಲಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಎಕ್ಸ್, ಎಕ್ಸ್ ಇ, ಎಕ್ಸ್ಎಂ, ಎಕ್ಸ್ಎಂ ಪ್ಲಸ್ ಮತ್ತು ಎಕ್ಸ್ ಜೆಡ್ ಪ್ಲಸ್ ಲಕ್ಸ್ ಬದಲಾಗಿ ಪಂಚ್ ಕಾರಿನಲ್ಲಿರುವಂತೆ ಸ್ಮಾರ್ಟ್, ಸ್ಮಾರ್ಟ್ ಪ್ಲಸ್, ಪ್ಯೂರ್, ಪ್ಯೂರ್ ಎಸ್, ಕ್ರಿಯೆಟಿವ್, ಕ್ರಿಯೆಟಿವ್ ಪ್ಲಸ್, ಫಿಯರ್ ಲೆಸ್, ಫಿಯರ್ ಲೆಸ್ ಪ್ಲಸ್ ಹೆಸರಿನ ವೆರಿಯೆಂಟ್ ಪಡೆದುಕೊಳ್ಳಲಿದೆ. ಈ ಮೂಲಕ ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಳಿಗೆ ಮತ್ತಷ್ಟು ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ