Tata Punch EV: ಅಚ್ಚರಿಯ ಬೆಲೆಗೆ ಭರ್ಜರಿ ಮೈಲೇಜ್ ನೀಡುವ ಟಾಟಾ ಪಂಚ್ ಎಲೆಕ್ಟ್ರಿಕ್ ಬಿಡುಗಡೆ

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಬಹುನೀರಿಕ್ಷಿತ ಪಂಚ್ ಎಲೆಕ್ಟ್ರಿಕ್ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ಆಕರ್ಷಕ ಬೆಲೆಯೊಂದಿಗೆ ಭರ್ಜರಿ ಮೈಲೇಜ್ ನೀಡುವ ಬ್ಯಾಟರಿ ಪ್ಯಾಕ್ ಆಯ್ಕೆ ಪಡೆದುಕೊಂಡಿದೆ.

Tata Punch EV: ಅಚ್ಚರಿಯ ಬೆಲೆಗೆ ಭರ್ಜರಿ ಮೈಲೇಜ್ ನೀಡುವ ಟಾಟಾ ಪಂಚ್ ಎಲೆಕ್ಟ್ರಿಕ್ ಬಿಡುಗಡೆ
ಟಾಟಾ ಪಂಚ್ ಎಲೆಕ್ಟ್ರಿಕ್ ಬಿಡುಗಡೆ
Follow us
|

Updated on:Jan 17, 2024 | 1:45 PM

ಎಲೆಕ್ಟ್ರಿಕ್ ಕಾರುಗಳ (Electric Cars) ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುವ ಟಾಟಾ ಮೋಟಾರ್ಸ್ (Tata Motors) ಕಂಪನಿಯು ತನ್ನ ಬಹುನೀರಿಕ್ಷಿತ ಪಂಚ್ ಎಲೆಕ್ಟ್ರಿಕ್ (Punch Electric) ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರು ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 10.99 ಲಕ್ಷದಿಂದ ರೂ. 14.49 ಲಕ್ಷ ಬೆಲೆ ಹೊಂದಿದೆ. ಪಂಚ್ ಎಲೆಕ್ಟ್ರಿಕ್ ಆವೃತ್ತಿಯು ತನ್ನ ವಿಭಾಗದಲ್ಲಿಯೇ ಅತಿ ಹೆಚ್ಚು ಫೀಚರ್ಸ್ ಮತ್ತು ಗರಿಷ್ಠ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆ ಹೊಂದಿದ್ದು, ಇದು ನೆಕ್ಸಾನ್ ಇವಿಯಲ್ಲಿರುವಂತೆ ಸ್ಟ್ಯಾಂಡರ್ಡ್ ಮತ್ತು ಲಾಂಗ್ ರೇಂಜ್ ವೆರಿಯೆಂಟ್ ಹೊಂದಿದೆ.

ಪಂಚ್ ಇವಿ ಕಾರಿನ ಸ್ಟ್ಯಾಂಡರ್ಡ್ ಮಾದರಿಯಲ್ಲಿ ಸ್ಮಾರ್ಟ್, ಸ್ಮಾರ್ಟ್ ಪ್ಲಸ್, ಅಡ್ವೆಂಚರ್, ಎಂಪವರ್ಡ್ ಮತ್ತು ಎಂಪರ್ವಡ್ ಪ್ಲಸ್ ವೆರಿಯೆಂಟ್ ಗಳಿದ್ದರೆ ಲಾಂಗ್ ರೇಂಜ್ ಮಾದರಿಗಳಲ್ಲಿ ಅಡ್ವೆಂಚರ್, ಎಂಪವರ್ಡ್ ಮತ್ತು ಎಂಪರ್ವಡ್ ಪ್ಲಸ್ ವೆರಿಯೆಂಟ್ ಗಳನ್ನು ಮಾತ್ರ ನೀಡಲಾಗಿದೆ. ಇದರಲ್ಲಿ ಸ್ಯಾಂಡರ್ಡ್ ವೆರಿಯೆಂಟ್ ಗಳು ಎಕ್ಸ್ ಶೋರೂಂ ಪ್ರಕಾರ ರೂ. 10.99 ಲಕ್ಷದಿಂದ ರೂ. 13.29 ಲಕ್ಷ ಬೆಲೆ ಹೊಂದಿದ್ದರೆ ಲಾಂಗ್ ರೇಂಜ್ ವೆರಿಯೆಂಟ್ ಗಳು ಎಕ್ಸ್ ಶೋರೂಂ ಪ್ರಕಾರ ರೂ. 12.99 ಲಕ್ಷದಿಂದ ರೂ. 14.49 ಲಕ್ಷ ಬೆಲೆ ಹೊಂದಿವೆ.

Tata Punch Electric

ಟಾಟಾ ಮೋಟಾರ್ಸ್ ಕಂಪನಿಯ ಹೊಸ ಪಂಚ್ ಇವಿ ಮಾದರಿಯನ್ನು ಎರಡನೇ ತಲೆಮಾರಿನ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಪ್ಲ್ಯಾಟ್ ಫಾರ್ಮ್ ಆಕ್ಟಿ.ಇವಿ (acti.ev) ಅಡಿಯಲ್ಲಿ ನಿರ್ಮಾಣ ಮಾಡಿದ್ದು, ಹೊಸ ಪ್ಲ್ಯಾಟ್ ಫಾರ್ಮ್ ಅಡಿಯಲ್ಲಿ ಮತ್ತಷ್ಟು ಹೊಸ ಇವಿ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ. ಇದೀಗ ಬಿಡುಗಡೆಯಾಗಿರುವ ಪಂಚ್ ಇವಿ ಮಾದರಿಯ ಸಾಮಾನ್ಯ ಕಾರಿನಲ್ಲಿರುವಂತೆ ವಿನ್ಯಾಸ ಹೊಂದಿದ್ದರೂ ವಿನೂತನ ಫೀಚರ್ಸ್ ಗಳು ಹೆಚ್ಚಿನ ಗ್ರಾಹಕರನ್ನು ಸೆಳೆಯಲಿವೆ.

ಇದನ್ನೂ ಓದಿ: ಸಾಮಾನ್ಯ ವಾಹನಗಳಿಂತಲೂ ಎಲೆಕ್ಟ್ರಿಕ್ ವಾಹನಗಳ ಇನ್ಸುರೆನ್ಸ್ ಯಾಕೆ ದುಬಾರಿ ಗೊತ್ತಾ?

ಬ್ಯಾಟರಿ ಪ್ಯಾಕ್ ಮತ್ತು ಮೈಲೇಜ್

ಹೊಸ ಪಂಚ್ ಇವಿ ಕಾರಿನಲ್ಲಿ ಟಾಟಾ ಮೋಟಾರ್ಸ್ ಕಂಪನಿಯು ಸ್ಟ್ಯಾಂಡರ್ಡ್ ವೆರಿಯೆಂಟ್ ಗಳಲ್ಲಿ 25kWh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಿದ್ದರೆ ಲಾಂಗ್ ರೇಂಜ್ ವೆರಿಯೆಂಟ್ ಗಳಲ್ಲಿ 35kWh ಬ್ಯಾಟರಿ ಪ್ಯಾಕ್ ಆಯ್ಕೆ ನೀಡಲಾಗಿದೆ. ಈ ಮೂಲಕ 25kWh ಬ್ಯಾಟರಿ ಪ್ಯಾಕ್ ಜೋಡಣೆಯ ವೆರಿಯೆಂಟ್ ಗಳು ಪ್ರತಿ ಚಾರ್ಜ್ ಗೆ 315 ಕಿ.ಮೀ ಮೈಲೇಜ್ ನೀಡಿದ್ದಲ್ಲಿ 35kWh ಬ್ಯಾಟರಿ ಪ್ಯಾಕ್ ಆಯ್ಕೆ ಹೊಂದಿರುವ ವೆರಿಯೆಂಟ್ ಗಳು ಗರಿಷ್ಠ 421 ಕಿ.ಮೀ ಮೈಲೇಜ್ ನೀಡುತ್ತವೆ.

ಇದರೊಂದಿಗೆ ಹೊಸ ಪಂಚ್ ಇವಿ ಕಾರು ಮಾದರಿಯಲ್ಲಿ ಟಾಟಾ ಮೋಟಾರ್ಸ್ ಕಂಪನಿಯು 7.2kW ಎಸಿ ಚಾರ್ಜರ್ ನೊಂದಿಗೆ ಡಿಸಿ ಫಾಸ್ಟ್ ಚಾರ್ಜಿಂಗ್ ಸರ್ಪೊಟ್ ಸಹ ನೀಡಿದ್ದು, ಇದು ಟಿಯಾಗೋ ಇವಿ ಮತ್ತು ನೆಕ್ಸಾನ್ ಇವಿ ನಡುವಿನ ಸ್ಥಾನ ಪಡೆದುಕೊಳ್ಳುತ್ತಿದೆ. ಇದರೊಂದಿಗೆ ಹೊಸ ಇವಿ ಕಾರು ನೆಕ್ಸಾನ್ ಇವಿ ಮಾದರಿಯೆಂತೆಯೇ ಸ್ಪೋಟಿಯಾಗಿರುವ ಮುಂಭಾಗದ ವಿನ್ಯಾಸದೊಂದಿಗೆ 16 ಇಂಚಿನ ಅಲಾಯ್ ವ್ಹೀಲ್, ಆಲ್ ವ್ಹೀಲ್ ಡಿಸ್ಕ್ ಬೇಕ್ ಸೇರಿದಂತೆ ಹಲವು ಫೀಚರ್ಸ್ ಗಳನ್ನು ಹೊಂದಿರಲಿದೆ.

ವಿನ್ಯಾಸ ಮತ್ತು ವೈಶಿಷ್ಟ್ಯತೆಗಳು

ಪಂಚ್ ಇವಿ ಕಾರಿನ ಟಾಪ್ ಎಂಡ್ ಮಾದರಿಯಲ್ಲಿ ಕೆಲವು ಹೆಚ್ಚುವರಿ ಫೀಚರ್ಸ್ ನೀಡಲಾಗುತ್ತಿದ್ದು, ಸ್ಟ್ಯಾಂಡರ್ಡ್ ಫೀಚರ್ಸ್ ಗಳೊಂದಿಗೆ 10.25 ಇಂಚಿನ ಇನ್ಪೋಟೈನ್ ಮೆಂಟ್ ಸಿಸ್ಟಂ, 10.25 ಇಂಚಿನ ಡಿಜಿಟಲ್ ಇನ್ ಸ್ಟ್ರುಮೆಂಟ್ ಕ್ಲಸ್ಟರ್, 360 ಡಿಗ್ರಿ ಕ್ಯಾಮೆರಾ, ಲೆದರ್ ಆಸನಗಳು, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಆಟೋ ಹಿಲ್ ಹೋಲ್ಡ್ ಅಸಿಸ್ಟ್, ಕನೆಕ್ಟೆಡ್ ಕಾರ್ ಟೆಕ್, ವೈರ್ ಲೆಸ್ ಚಾರ್ಜರ್, ಮುಂಭಾಗದಲ್ಲಿ ವೆಂಟಿಲೆಟೆಡ್ ಆಸನಗಳು, ಕ್ರೂಸ್ ಕಂಟ್ರೋಲ್ ಮತ್ತು ಆಯ್ಕೆ ರೂಪದಲ್ಲಿ ಸನ್ ರೂಫ್ ಸೌಲಭ್ಯಗಳನ್ನು ನೀಡಲಾಗಿದೆ.

ಇದನ್ನೂ ಓದಿ: ಭರ್ಜರಿ ಫೀಚರ್ಸ್ ಗಳೊಂದಿಗೆ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್‌ ಬಿಡುಗಡೆ

ಸುರಕ್ಷಾ ಸೌಲಭ್ಯಗಳು

ಹೊಸ ಪಂಚ್ ಇವಿ ಕಾರಿನಲ್ಲಿ ಸುರಕ್ಷತೆಗಾಗಿ ಎಲ್ಲಾ ವೆರಿಯೆಂಟ್ ಗಳಿಗೂ ಅನ್ವಯಿಸುವಂತೆ ಆರು ಏರ್ ಬ್ಯಾಗ್ ಗಳು, ಎಬಿಎಸ್ ಜೊತೆ ಇಎಸ್ ಸಿ, ಬ್ಲೈಂಡ್ ವ್ಯೂ ಮಾನಿಟರ್ ಸಿಸ್ಟಂ, ತ್ರಿ ಪಾಯಿಂಟ್ ಸೀಟ್ ಬೆಲ್ಟ್ಸ್ ಮತ್ತು ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್ ನೀಡಲಾಗಿದೆ. ಈ ಮೂಲಕ ಹೊಸ ಕಾರು ಎಕ್ಸ್ ಶೋರೂಂ ಪ್ರಕಾರ ರೂ. 10 ಲಕ್ಷದಿಂದ ರೂ. 14 ಲಕ್ಷ ಬೆಲೆ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಇದು ಸಿಟ್ರನ್ ಇಸಿ3 ಕಾರಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

Published On - 1:22 pm, Wed, 17 January 24

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ