ಹ್ಯುಂಡೈ ಎಕ್ಸ್‌ಟರ್‌ಗೆ ಪೈಪೋಟಿಯಾಗಿ ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಪಂಚ್

ಟಾಟಾ ಮೋಟಾರ್ಸ್ ಕಂಪನಿಯು ಪಂಚ್ ಮೈಕ್ರೊ ಎಸ್ ಯುವಿ ಮೂಲಕ ಭರ್ಜರಿ ಪೈಪೋಟಿ ಪಡೆದುಕೊಳ್ಳುತ್ತಿದ್ದು, ಹೊಸ ಕಾರಿನಲ್ಲಿ ಶೀಘ್ರದಲ್ಲಿಯೇ ಮತ್ತೊಂದು ಪ್ರೀಮಿಯಂ ಫೀಚರ್ಸ್ ಸೌಲಭ್ಯವನ್ನು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡುವ ಸುಳಿವು ನೀಡಿದೆ.

ಹ್ಯುಂಡೈ ಎಕ್ಸ್‌ಟರ್‌ಗೆ ಪೈಪೋಟಿಯಾಗಿ ಹೊಸ ಫೀಚರ್ಸ್ ಪಡೆದುಕೊಳ್ಳಲಿದೆ ಟಾಟಾ ಪಂಚ್
ಟಾಟಾ ಪಂಚ್
Follow us
Praveen Sannamani
|

Updated on: Nov 26, 2023 | 8:33 PM

ಆಕರ್ಷಕ ಬೆಲೆ, ಅತ್ಯುತ್ತಮ ಪರ್ಫಾಮೆನ್ಸ್ ಮತ್ತು ಸುರಕ್ಷತೆಯಲ್ಲಿ ಗಮನಸೆಳೆದಿರುವ ಟಾಟಾ ಪಂಚ್ (Tata Punch) ಮೈಕ್ರೊ ಎಸ್ ಯುವಿ ಮಾದರಿಯು ಮುಂಬರುವ ಕೆಲವೇ ದಿನಗಳಲ್ಲಿ ಹೊಸ ಫೀಚರ್ಸ್ ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗುತ್ತಿದ್ದು, ಪ್ರತಿಸ್ಪರ್ಧಿ ಹ್ಯುಂಡೈ ಎಕ್ಸ್‌ಟರ್‌ಗೆ ಪೈಪೋಟಿಯಾಗಿ ಹಲವು ಫೀಚರ್ಸ್ ಗಳನ್ನು ಸ್ಟ್ಯಾಂಡರ್ಡ್ ಆಗಿ ಪಡೆದುಕೊಳ್ಳುತ್ತಿದೆ.

ಹ್ಯುಂಡೈ ಎಕ್ಸ್‌ಟರ್‌ ಮಾದರಿಯು ಇತ್ತೀಚೆಗೆ ಪಂಚ್ ಕಾರಿಗೆ ಪೈಪೋಟಿಯಾಗಿ ಹಲವಾರು ಪ್ರೀಮಿಯಂ ಫೀಚರ್ಸ್ ಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಇದಕ್ಕಾಗಿ ಟಾಟಾ ಮೋಟಾರ್ಸ್ ಕಂಪನಿಯು ಪಂಚ್ ಕಾರಿನ ಟಾಪ್ ಎಂಡ್ ಮಾದರಿಯಲ್ಲಿ ನೀಡಲಾಗುತ್ತಿರುವ ಕೆಲವು ಫೀಚರ್ಸ್ ಗಳನ್ನು ಬೆಸ್ ವೆರಿಯೆಂಟ್ ನಲ್ಲೂ ನೀಡಲು ನಿರ್ಧರಿಸಿದೆ.

Tata Punch (1)

ಮಾಹಿತಿಗಳ ಪ್ರಕಾರ ನವೀಕೃತ ಪಂಚ್ ಕಾರಿನ ಆರಂಭಿಕ ಮಾದರಿಗೂ ಅನ್ವಯಿಸುವಂತೆ ಹೊಸ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ನೀಡಲಾಗುತ್ತಿದ್ದು, ಸದ್ಯ ಈ ಫೀಚರ್ಸ್ ಅನ್ನು ಪಂಚ್ ಕಾರಿನ ಟಾಪ್ ಎಂಡ್ ಮಾದರಿಯಲ್ಲಿ ಮಾತ್ರ ನೀಡಲಾಗುತ್ತಿದೆ. ಇದೀಗ ಹೊಸ ಫೀಚರ್ಸ್ ಅನ್ನು ಪಂಚ್ ಕಾರಿನ ಎಲ್ಲಾ ವೆರಿಯೆಂಟ್ ಗಳಲ್ಲೂ ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡಲಾಗುತ್ತಿದ್ದು, ಇದು ಪಂಚ್ ಕಾರು ಖರೀದಿದಾರರಿಗೆ ಮತ್ತಷ್ಟು ಐಷಾರಾಮಿ ಡ್ರೈವಿಂಗ್ ಅನುಭವ ನೀಡಲಿದೆ.

ಇದನ್ನೂ ಓದಿ: ಬಜೆಟ್ ಬೆಲೆಗೆ ಖರೀದಿಸಬಹುದಾದ ಅತ್ಯುತ್ತಮ 7 ಸೀಟರ್ ಕಾರುಗಳಿವು!

ಹೊಸ ಫೀಚರ್ಸ್ ಜೋಡಣೆ ನಂತರ ಪಂಚ್ ಕಾರಿನ ಬೆಲೆಯಲ್ಲಿ ತುಸು ದುಬಾರಿಯಾಗುವ ಸಾಧ್ಯತೆಗಳಿದ್ದು, ಸದ್ಯಕ್ಕೆ ಇದು ಪ್ರಮುಖ ಐದು ವೆರಿಯೆಂಟ್ ಗಳೊಂದಿಗೆ ದೆಹಲಿ ಎಕ್ಸ್ ಶೋರೂಂ ಪ್ರಕಾರ ರೂ. 6 ಲಕ್ಷದಿಂದ ರೂ. 10.10 ಲಕ್ಷ ಬೆಲೆ ಹೊಂದಿದೆ. ಪಂಚ್ ಕಾರಿನಲ್ಲಿ ಸದ್ಯ ಪೆಟ್ರೋಲ್ ಮತ್ತು ಸಿಎನ್‌ಜಿ ಮಾದರಿಗಳು ಲಭ್ಯವಿದ್ದು, 1.2 ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಜೊತೆಗೆ ವಿಶೇಷ ತಂತ್ರಜ್ಞಾನ ಹೊಂದಿರುವ ಐಸಿಎನ್‌ಜಿ ಕಿಟ್ ಜೋಡಣೆ ಹೊಂದಿದೆ.

ಈ ಮೂಲಕ ಪಂಚ್ ಕಾರು ಪೆಟ್ರೋಲ್ ಮಾದರಿಯಲ್ಲಿ ಪ್ರತಿ ಲೀಟರ್ ಗೆ ಸುಮಾರು 19 ಕಿ.ಮೀ ಮೈಲೇಜ್ ಹೊಂದಿದ್ದರೆ ಕೆಜಿ ಸಿಎನ್‌ಜಿಗೆ ಗರಿಷ್ಠ 26 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಹಲವಾರು ಫೀಚರ್ಸ್ ಗಳನ್ನು ನೀಡಲಾಗಿದೆ. ಇದರೊಂದಿಗೆ ಟಾಟಾ ಕಂಪನಿಯು ಪಂಚ್ ಕಾರಿನಲ್ಲೂ ಇವಿ ಆವೃತ್ತಿ ಬಿಡುಗಡೆ ಮಾಡುವ ಸುಳಿವು ನೀಡಿದ್ದು, ಹೊಸ ಇವಿ ಕಾರು ಬಿಡುಗಡೆಗಾಗಿ ಈಗಾಗಲೇ ಕೊನೆಯ ಹಂತದ ಸಿದ್ದತೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಭಾರತದಲ್ಲಿ ಖರೀದಿಗೆ ಲಭ್ಯವಿರುವ ಟಾಪ್ 5 ಸುರಕ್ಷಿತ ಕಾರುಗಳಿವು!

ಹೊಸ ಪಂಚ್ ಇವಿ ಕಾರಿನಲ್ಲಿ ಟಾಟಾ ಮೋಟಾರ್ಸ್ ಕಂಪನಿ 24 ಕೆವಿಹೆಚ್ ಬ್ಯಾಟರಿ ಪ್ಯಾಕ್ ಜೋಡಣೆ ಮಾಡಬಹುದಾಗಿದ್ದು, ಇದು ಪ್ರತಿ ಚಾರ್ಜ್ ಗೆ 250 ರಿಂದ 280 ಕಿಲೋ ಮೀಟರ್ ಮೈಲೇಜ್ ನೀಡಬಹುದಾಗಿದೆ. ಜೊತೆಗೆ ಹೊಸ ಕಾರನ್ನು ಟಾಟಾ ಕಂಪನಿ ಅಲ್ಫಾ ಕಾರು ಉತ್ಪಾದನಾ ಪ್ಲಾಟ್ ಫಾರ್ಮ್ ಅಡಿ ನಿರ್ಮಾಣ ಮಾಡುತ್ತಿದ್ದು, ಹೊಸ ಪ್ಲ್ಯಾಟ್ ಫಾರ್ಮ್ ನೊಂದಿಗೆ ಅತ್ಯುತ್ತಮ ಬ್ಯಾಟರಿ ಪ್ಯಾಕ್ ಮತ್ತು ಫೀಚರ್ಸ್ ನೀಡಲಾಗುತ್ತಿದೆ. ಹೀಗಾಗಿ ಇದು ಪ್ರಸ್ತುತ ಮಾರುಕಟ್ಟೆಯಲ್ಲಿನ ಟಿಯಾಗೋ ಇವಿ ಗಿಂತಲೂ ಹೆಚ್ಚಿನ ಸ್ಥಾನ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಪ್ರತಿಸ್ಪರ್ಧಿ ಇವಿ ಕಾರುಗಳಿಗೂ ಭರ್ಜರಿ ಪೈಪೋಟಿ ನೀಡಲಿದೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್