ADAS: ಟಾಟಾ ಕಾರುಗಳಲ್ಲಿ ಪರಿಚಯಿಸಲಾಗಿರುವ ಎಡಿಎಎಸ್ ಫೀಚರ್ಸ್ ವಿಶೇಷತೆಗಳೇನು?

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಹೊಸ ಸಫಾರಿ ಮತ್ತು ಹ್ಯಾರಿಯರ್ ಕಾರುಗಳಲ್ಲಿ ಹೊಸದಾಗಿ ಎಡಿಎಎಸ್ ಸೇಫ್ಟಿ ಫೀಚರ್ಸ್ ಪರಿಚಯಿಸಿದ್ದು, ಹೊಸ ಸೇಫ್ಟಿ ಫೀಚರ್ಸ್ ಹಲವಾರು ವಿಶೇಷತೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ.

Follow us
Praveen Sannamani
|

Updated on:Mar 03, 2023 | 9:07 PM

ಹೊಸ ಕಾರುಗಳಲ್ಲಿ ಇದೀಗ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಅದರಲ್ಲೂ ಮಧ್ಯಮ ಕ್ರಮಾಂಕದ ಕಾರುಗಳ ಸುರಕ್ಷತೆಯು ಸಾಕಷ್ಟು ಸುಧಾರಿಸಿದ್ದು, ಅಪಘಾತಗಳನ್ನ ತಗ್ಗಿಸಲು ಹಲವಾರು ಹಲವು ಹೊಸ ಫೀಚರ್ಸ್ ನೀಡಲಾಗುತ್ತಿದೆ. ಅದರಲ್ಲೂ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಸೌಲಭ್ಯಕ್ಕೆ ಇದೀಗ ಭಾರೀ ಬೇಡಿಕೆ ಹರಿದುಬರುತ್ತಿದ್ದು, ಟಾಟಾ ಮೋಟಾರ್ಸ್ ಸಹ ಇದೀಗ ತನ್ನ ಪ್ರಮುಖ ಕಾರುಗಳಲ್ಲಿ ಹೊಸ ಫೀಚರ್ಸ್ ಪರಿಚಯಿಸಿದೆ.

ಭಾರತದಲ್ಲಿ ಮಾರಾಟಗೊಳ್ಳುವ ಹೊಸ ಕಾರುಗಳ ಸುರಕ್ಷತೆ ಸಾಕಷ್ಟು ಸುಧಾರಿಸಿದ್ದು, ಟಾಟಾ ಕಾರುಗಳು ಗ್ರಾಹಕರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿವೆ. ಹೊಸ ಕಾರುಗಳಲ್ಲಿ ಗರಿಷ್ಠ ಸುರಕ್ಷತೆಯ ಮೂಲಕ ಕ್ರ್ಯಾಶ್ ಟೆಸ್ಟಿಂಗ್ ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಳ್ಳುತ್ತಿದ್ದು, ಇದೀಗ ಹೊಸದಾಗಿ ಎಡಿಎಎಸ್ ಅಥವಾ ಅಡ್ವಾನ್ಸ್ ಡ್ರೈವಿಂಗ್ ಅಸಿಸ್ಟೆನ್ಸ್ ಸಿಸ್ಟಂ ಸೌಲಭ್ಯ ನೀಡಿದೆ. 2023ರ ಹ್ಯಾರಿಯರ್ ಮತ್ತು ಸಫಾರಿ ಕಾರುಗಳಲ್ಲಿ ಎಡಿಎಸ್ ನೀಡಲಾಗಿದ್ದು, ಇದು ಸಂಭವನೀಯ ಅಪಘಾತಗಳನ್ನು ತಗ್ಗಿಸಲು ನೆರವಾಗಲಿದೆ.

ಎಡಿಎಎಸ್ ಸುರಕ್ಷಾ ಸೌಲಭ್ಯವು ಇತ್ತೀಚಿನ ಆಧುನಿಕ ಕಾರು ಮಾದರಿಗಳಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದೆ. ಇದು ಸಂಭಾವ್ಯ ಅಪಘಾತಗಳನ್ನು ತಗ್ಗಿಸಲು ಸಾಕಷ್ಟು ನೆರವಾಗುತ್ತಿದ್ದು, ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಕಾರುಗಳು ಈ ಸೇಫ್ಟಿ ಫೀಚರ್ಸ್ ಪಡೆದುಕೊಳ್ಳುತ್ತಿವೆ. 2023ರ ಹಲವು ಕಾರು ಮಾದರಿಗಳಲ್ಲಿ ಎಡಿಎಎಸ್ ಜೋಡಿಸಲಾಗುತ್ತಿದ್ದು, ಇದು ಅಪಘಾತಗಳ ಸಂಖ್ಯೆ ತಗ್ಗಿಸಲು ಮಹತ್ವದ ಪಾತ್ರವಹಿಸಲಿದೆ. ಭಾರತದಲ್ಲಿ ಪ್ರಮುಖ ಕಾರುಗಳು ಸದ್ಯಕ್ಕೆ ಲೆವಲ್ 2 ಎಡಿಎಎಸ್ ಫೀಚರ್ಸ್ ಪಡೆದುಕೊಳ್ಳುತ್ತಿದ್ದು, ಸಫಾರಿ ಮತ್ತು ಹ್ಯಾರಿಯರ್ ಕಾರುಗಳು ಹೊಸ ಫೀಚರ್ಸ್ ನೊಂದಿಗೆ ಮಿಂಚುತ್ತಿವೆ.

ಗರಿಷ್ಠ ಸುರಕ್ಷತೆ ಹಿನ್ನಲೆಯಲ್ಲಿ ವಿಶ್ವಾದ್ಯಂತ ಪ್ರಮುಖ ಕಾರು ಉತ್ಪಾದನಾ ಕಂಪನಿಗಳು ಈ ಹೊಸ ಸುರಕ್ಷಾ ಸೌಲಭ್ಯವನ್ನು ತಮ್ಮ ಪ್ರಮುಖ ಕಾರು ಉತ್ಪನ್ನಗಳಲ್ಲಿ ಹಂತ-ಹಂತವಾಗಿ ಜೋಡಣೆ ಮಾಡುತ್ತಿವೆ. ಭಾರತದಲ್ಲೂ ಕೂಡಾ ಹೊಸ ಎಡಿಎಎಸ್ ಸೌಲಭ್ಯ ಹೊಂದಿರುವ ಕಾರುಗಳು ನಿಧಾನವಾಗಿ ರಸ್ತೆಗಿಳಿಯುತ್ತಿದ್ದು, ಮುಂದಿನ ಕೆಲ ವರ್ಷಗಳಲ್ಲಿ ಹೊಸ ಫೀಚರ್ಸ್ ಹೊಂದಿರುವ ಕಾರುಗಳ ಸಂಖ್ಯೆ ದ್ವಿಗುಣಗೊಳ್ಳಲಿದೆ. ಲೆವಲ್ 2 ಎಡಿಎಎಸ್ ನಲ್ಲಿ ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್, ಪೆಡೆಸ್ಟ್ರಿಯನ್ ಡಿಟೆಕ್ಷನ್, ಸರೌಂಡ್ ವ್ಯೂ, ಪಾರ್ಕಿಂಗ್ ಅಸಿಸ್ಟ್, ಲೇನ್ ಕೀಪ್ ಅಸಿಸ್ಟ್, ಫಾರ್ವಡ್ ಕೂಲಿಷನ್ ಅಸಿಸ್ಟ್, ರಿಯರ್ ಕ್ರಾಸ್ ಟ್ರಾಫಿಕ್ ಅಸಿಸ್ಟ್ ಸೌಲಭ್ಯಗಳಿರವಿವೆ.

ಲೆವಲ್ 2 ಎಡಿಎಎಸ್ ಫೀಚರ್ಸ್ ನಲ್ಲಿ ಹಲವಾರು ವಿನೂತನ ವೈಶಿಷ್ಟ್ಯ ಗಳಿವೆ. ಉದಾಹರಣೆ ಹೇಳುವುದಾದರೆ, ಕಾರು ಚಾಲನೆ ಮಾಡುವ ವೇಳೆ ಚಾಲಕ ಒಂದು ವೇಳೆ ನಿದ್ರೆ ಮಂಪರಿನಲ್ಲಿದ್ರೆ ತಕ್ಷಣವೇ ಅದು ಅಲರ್ಟ್ ಮಾಡುತ್ತದೆ. ಚಾಲಕನ ಚಾಲನಾ ಶೈಲಿಯನ್ನು ಆಧರಿಸಿ ನಿದ್ರೆ ಮಂಪರಿನಿಂದ ಎಚ್ಚರಿಸಿ ವಿಶ್ರಾಂತಿಗೆ ಸೂಚಿಸುತ್ತೆ. ಈ ಮೂಲಕ ಅಪಘಾತವನ್ನು ತಡೆಯಲು ಸಹಕಾರಿಯಾಗಲಿದ್ದು, ಇಂತಹ ಹಲವು ವಿಶೇಷತೆಗಳನ್ನ ನೀವು ಇದರಲ್ಲಿ ನೋಡಬಹುದಾಗಿದೆ. ಎಡಿಎಎಸ್ ಸೌಲಭ್ಯವು ಸಂಪೂರ್ಣವಾಗಿ ರಡಾರ್ ಆಧರಿಸಿ ಕಾರ್ಯನಿರ್ವಹಣೆ ಮಾಡಲಿದ್ದು, ಇದು ಭವಿಷ್ಯದ ಆಟೊನೊಮಸ್ ಕಾರುಗಳಲ್ಲೂ ನಿರ್ಣಾಯಕ ಪಾತ್ರವಹಿಸಲಿದೆ.

Published On - 8:58 pm, Fri, 3 March 23

ಬೆಳ್ಳಿ ಪರದೆ ಮೇಲೆ ‘ತ್ರಿವ್ಯ’ ಜೋಡಿ, ಭವ್ಯಾ ಗೌಡ ಹೇಳಿದ್ದೇನು?
ಬೆಳ್ಳಿ ಪರದೆ ಮೇಲೆ ‘ತ್ರಿವ್ಯ’ ಜೋಡಿ, ಭವ್ಯಾ ಗೌಡ ಹೇಳಿದ್ದೇನು?
ಸಂಪಾದನೆ ಎಷ್ಟೇ ಇರಲಿ ಉಳಿತಾಯ ಮಾಡಲೇಬೇಕು: ಭವ್ಯಾ ಗೌಡ
ಸಂಪಾದನೆ ಎಷ್ಟೇ ಇರಲಿ ಉಳಿತಾಯ ಮಾಡಲೇಬೇಕು: ಭವ್ಯಾ ಗೌಡ
ತ್ರಿವಿಕ್ರಮ ಜೊತೆ ಗೆಳೆತನ ಅಷ್ಟೇ, ಪೊಸ್ಸೆಸ್ಸಿವ್​ನೆಸ್ ಇರಲಿಲ್ಲ: ಭವ್ಯಾ
ತ್ರಿವಿಕ್ರಮ ಜೊತೆ ಗೆಳೆತನ ಅಷ್ಟೇ, ಪೊಸ್ಸೆಸ್ಸಿವ್​ನೆಸ್ ಇರಲಿಲ್ಲ: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
‘ನನ್ನ, ತ್ರಿವಿಕ್ರಮ್ ನಡುವೆ ಏನೂ ಇಲ್ಲ, ಪದೇ ಪದೇ ಇದೇ ಹೇಳೋಕಾಗಲ್ಲ’: ಭವ್ಯಾ
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ವಿಜಯೇಂದ್ರ ವಿರುದ್ಧ ನಡ್ಡಾ ಜೀಗೆ ಪತ್ರ ಬರೆದಿರುವುದು ನಿಜ: ಯತ್ನಾಳ್
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ಹೊಸ ಗೆಟಪ್ ನಲ್ಲಿ ಸಭೆಗೆ ಆಗಮಿಸಿದ ಬಸನಗೌಡ ಪಾಟೀಲ್ ಯತ್ನಾಳ್!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ರೈಲ್ವೆ ಟಿಕೆಟ್ ಕಲೆಕ್ಟರ್ ವೇಗಕ್ಕೆ ಶರಣಾದ ಕ್ರಿಕೆಟ್ ಸಾಮ್ರಾಟ..!
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ
ಪಕ್ಷದ ನಾಯಕರು ಒಂದೆಡೆ ಸೇರಿ ಊಟ ಮಾಡುವುದು ತಪ್ಪಲ್ಲ: ಸಿದ್ದರಾಮಯ್ಯ
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಬಿಜೆಪಿ ಆಂತರಿಕ ಕಚ್ಚಾಟ ನೆಚ್ಚಿಕೊಂಡು ಸರ್ಕಾರ ನಡೆಸುತ್ತಿಲ್ಲ: ಶಿವಕುಮಾರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್
ಎಸ್ಟಿ ಸಮುದಾಯದ ಶ್ರೀಗಳು ಜಾತ್ರೆಗೆ ಆಹ್ವಾನಿಸಲು ಬಂದಿದ್ದರು: ಪರಮೇಶ್ವರ್